Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 11:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಇದನ್ನು ಹೇಳಿದ ಮೇಲೆ ಆತನು ಅವರಿಗೆ, “ನಮ್ಮ ಮಿತ್ರನಾದ ಲಾಜರನು ನಿದ್ರೆ ಮಾಡುತ್ತಿದ್ದಾನೆ, ಆದುದರಿಂದ ನಾನು ಹೋಗಿ ಅವನನ್ನು ನಿದ್ರೆಯಿಂದ ಎಬ್ಬಿಸಬೇಕಾಗಿದೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಬಳಿಕ ಯೇಸು, “ನಮ್ಮ ಮಿತ್ರನಾದ ಲಾಸರನು ನಿದ್ರೆಮಾಡುತ್ತಿದ್ದಾನೆ, ಅವನನ್ನು ಎಬ್ಬಿಸಲು ನಾನು ಹೋಗಬೇಕು,” ಎಂದು ನುಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಈ ಮಾತುಗಳನ್ನು ಹೇಳಿದ ಮೇಲೆ ಅವರಿಗೆ - ನಮ್ಮ ವಿುತ್ರನಾದ ಲಾಜರನು ನಿದ್ರೆಮಾಡುತ್ತಾನೆ; ನಾನು ಅವನನ್ನು ನಿದ್ರೆಯಿಂದ ಎಬ್ಬಿಸುವದಕ್ಕಾಗಿ ಹೋಗುತ್ತೇನೆ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಯೇಸು ಈ ಸಂಗತಿಗಳನ್ನು ಹೇಳಿದ ಮೇಲೆ, “ನಮ್ಮ ಸ್ನೇಹಿತನಾದ ಲಾಜರನು ಈಗ ನಿದ್ರಿಸುತ್ತಿದ್ದಾನೆ. ಅವನನ್ನು ಎಬ್ಬಿಸಲು ನಾನು ಅಲ್ಲಿಗೆ ಹೋಗುತ್ತಿದ್ದೇನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಇದನ್ನು ಹೇಳಿದ ತರುವಾಯ ಯೇಸು ಅವರಿಗೆ, “ನಮ್ಮ ಸ್ನೇಹಿತ ಲಾಜರನು ನಿದ್ರೆ ಮಾಡುತ್ತಿದ್ದಾನೆ. ಆದರೆ ನಾನು ಹೋಗಿ ಅವನನ್ನು ಎಬ್ಬಿಸಬೇಕು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ಹೆ ಸಾಂಗುನ್ ಹೊಲ್ಲ್ಯಾ ಮಾನಾ ಜೆಜುನ್, ಅಮ್ಚೊ ದೊಸ್ತ್ ಲಾಜರ್ ನಿದ್ಲಾ, ಖರೆ ಮಿಯಾ ಜಾವ್ನ್ ತೆಕಾ ವೈರ್ ಉಟ್ವುತಾ ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 11:11
25 ತಿಳಿವುಗಳ ಹೋಲಿಕೆ  

ಸತ್ತು ಧೂಳಿನ ನೆಲದೊಳಗೆ ದೀರ್ಘ ನಿದ್ರೆಮಾಡುವವರಲ್ಲಿ ಅನೇಕರು ಎಚ್ಚೆತ್ತು ಕೆಲವರು ನಿತ್ಯಜೀವವನ್ನು, ಕೆಲವರು ನಿಂದನೆ ಮತ್ತು ನಿತ್ಯತಿರಸ್ಕಾರಗಳನ್ನು ಅನುಭವಿಸುವರು.


ಯೇಸು ಅವನ ಮರಣವನ್ನು ಕುರಿತು ಅದನ್ನು ಹೇಳಿದ್ದನು, ಆದರೆ ಅವರು ವಿಶ್ರಾಂತಿಗಾಗಿ ಮಲಗಿದ್ದಾನೆಂಬುದಾಗಿ ಹೇಳಿದನೆಂದು ಯೋಚಿಸಿದರು.


ನಾವು ಎಚ್ಚರವಾಗಿದ್ದರೂ ಸರಿಯೇ ಅಥವಾ ನಿದ್ರೆಯಲ್ಲಿದ್ದರೂ ಸರಿಯೇ, ತನ್ನ ಜೊತೆಯಲ್ಲಿಯೇ ಜೀವಿಸಬೇಕೆಂದು ಯೇಸು ನಮಗೋಸ್ಕರ ತನ್ನ ಪ್ರಾಣವನ್ನು ಕೊಟ್ಟನು.


ನೋಡಿರಿ! ಇದುವರೆಗೆ ಗುಪ್ತವಾಗಿದ್ದ ಸಂಗತಿಯನ್ನು ನಾನು ನಿಮಗೆ ತಿಳಿಸುತ್ತೇನೆ, ನಾವೆಲ್ಲರೂ ಸಾಯುವುದಿಲ್ಲ, ಮಾರ್ಪಡುವೆವು.


ಮೊಣಕಾಲೂರಿ, “ಕರ್ತನೇ, ಈ ಪಾಪವನ್ನು ಅವರ ಮೇಲೆ ಹೊರಿಸಬೇಡವೆಂದು” ಮಹಾಶಬ್ದದಿಂದ ಕೂಗಿದನು. ಇದನ್ನು ಹೇಳಿ ನಿದ್ರೆಹೋದನು.


ಬಂಡೆಗಳು ಸೀಳಿಹೋದವು; ಸಮಾಧಿಗಳು ತೆರೆದವು; ನಿದ್ರೆಹೋಗಿದ್ದ ಅನೇಕ ಭಕ್ತರ ದೇಹಗಳು ಜೀವದಿಂದ ಎದ್ದವು;


ಆದ್ದರಿಂದ, “ನಿದ್ರೆ ಮಾಡುವವನೇ, ಎಚ್ಚರವಾಗು! ಸತ್ತವರನ್ನು ಬಿಟ್ಟು ಏಳು! ಆಗ ಕ್ರಿಸ್ತನು ನಿನ್ನಲ್ಲಿ ಪ್ರಕಾಶಿಸುವನು” ಎಂದು ಹೇಳಿಯದೆಯಲ್ಲಾ.


ಆತನು ಒಳಕ್ಕೆ ಹೋಗಿ, “ನೀವು ಗದ್ದಲ ಮಾಡುವುದೂ ಅಳುವುದೂ ಯಾಕೆ? ಹುಡುಗಿ ಸತ್ತಿಲ್ಲ; ಅವಳು ನಿದ್ದೆಮಾಡುತ್ತಿದ್ದಾಳೆ” ಅನ್ನಲು,


“ಹೊರಗೆ ಹೋಗಿರಿ; ಹುಡುಗಿ ಸತ್ತಿಲ್ಲ ನಿದ್ರಿಸುತ್ತಿದ್ದಾಳೆ” ಅಂದನು. ಅದಕ್ಕೆ ಅವರು ಆತನನ್ನು ಪರಿಹಾಸ್ಯ ಮಾಡಿದರು.


ಮನುಷ್ಯರೊಳಗೆ ಒಬ್ಬನೂ ತನ್ನ ಸ್ನೇಹಿತನೊಡನೆ ಹೇಗೆ ಮಾತನಾಡುವನೋ ಹಾಗೆಯೇ ಯೆಹೋವನು ಮೋಶೆಯ ಸಂಗಡ ಮುಖಾಮುಖಿಯಾಗಿ ಮಾತನಾಡುತ್ತಿದ್ದನು. ಆನಂತರ ಮೋಶೆಯು ಪಾಳೆಯಕ್ಕೆ ಹಿಂತಿರುಗಿ ಬರುವನು. ಆದರೆ ನೂನನ ಮಗನಾದ ಯೆಹೋಶುವನೆಂಬ ಯೌವನಸ್ಥನಾದ ಅವನ ಶಿಷ್ಯನು ಆ ಗುಡಾರದಲ್ಲಿಯೇ ಇರುತ್ತಿದ್ದನು, ಅದರ ಬಳಿಯಿಂದ ದೂರ ಸರಿಯುತ್ತಿರಲಿಲ್ಲ.


“ಅಬ್ರಹಾಮನು ದೇವರನ್ನು ನಂಬಿದನು ಮತ್ತು ಆ ನಂಬಿಕೆ ಅವನ ಲೆಕ್ಕಕ್ಕೆ ನೀತಿಯೆಂದು ಎಣಿಸಲ್ಪಟ್ಟಿತು” ಎಂಬ ಧರ್ಮಶಾಸ್ತ್ರದ ಮಾತು ಹೀಗೆ ನೆರವೇರಿತು. ಆದ್ದರಿಂದ ಅಬ್ರಹಾಮನು ದೇವರ ಸ್ನೇಹಿತನೆಂದು ಕರೆಯಲ್ಪಟ್ಟನು.


ಗಂಭೀರವಾಗಿ ಯೋಚಿಸಿರಿ! ನೀತಿವಂತರಾಗಿ ಎಚ್ಚರದಿಂದಿರಿ. ಪಾಪಮಾಡಬೇಡಿರಿ. ಕೆಲವರಿಗೆ ದೇವರ ಕುರಿತಾಗಿ ಜ್ಞಾನವೇ ಇಲ್ಲ; ನಿಮಗೆ ನಾಚಿಕೆ ಆಗಲೆಂದೇ ಇದನ್ನು ಹೇಳುತ್ತಿದ್ದೇನೆ.


ಇದು ಮಾತ್ರವಲ್ಲದೆ ಕ್ರಿಸ್ತನಲ್ಲಿ ನಿದ್ರೆಹೋದವರು ನಾಶವಾದರು ಎಂದರ್ಥ.


ಹೀಗಿರಲಾಗಿ ಅವನ ಸಹೋದರಿಯರು, “ಕರ್ತನೇ ಇಗೋ, ನೀನು ಪ್ರೀತಿಸುವವನು ಅಸ್ವಸ್ಥನಾಗಿದ್ದಾನೆ” ಎಂಬುದಾಗಿ ಯೇಸುವಿನ ಬಳಿಗೆ ಹೇಳಿ ಕಳುಹಿಸಿದರು.


ಮದಲಗಿತ್ತಿಯುಳ್ಳವನೇ ಮದಲಿಂಗನು. ಆದರೂ ಮದಲಿಂಗನ ಗೆಳೆಯನು ಅವನ ಹತ್ತಿರ ನಿಂತುಕೊಂಡು ಅವನ ಮಾತುಗಳನ್ನು ಕೇಳಿ ಮದಲಿಂಗನ ಧ್ವನಿಗೆ ಬಹು ಸಂತೋಷಪಡುತ್ತಾನಲ್ಲವೇ. ಆದಕಾರಣ ಈ ನನ್ನ ಸಂತೋಷವು ಪರಿಪೂರ್ಣವಾಯಿತು.


ನನ್ನ ಸೇವಕನಾದ ಇಸ್ರಾಯೇಲೇ, ನಾನು ಆರಿಸಿಕೊಂಡ ಯಾಕೋಬೇ, ನನ್ನ ಸ್ನೇಹಿತನಾದ ಅಬ್ರಹಾಮನ ಸಂತತಿಯೇ,


ನಮ್ಮ ದೇವರಾದ ನೀನು ನಿನ್ನ ಪ್ರಜೆಗಳಾದ ಇಸ್ರಾಯೇಲರ ಎದುರಿನಿಂದ ಈ ದೇಶದ ನಿವಾಸಿಗಳನ್ನು ಓಡಿಸಿ, ದೇಶವನ್ನು ನಿನ್ನ ಸ್ನೇಹಿತನಾದ ಅಬ್ರಹಾಮನ ಸಂತಾನದವರಿಗೆ ಶಾಶ್ವತ ಸ್ವತ್ತಾಗಿ ಕೊಟ್ಟಿರುವೆಯಲ್ಲಾ?.


ಯೆಹೋವನು ಮೋಶೆಗೆ, “ನೀನು ಪೂರ್ವಿಕರಲ್ಲಿ ಸೇರಿದ ಮೇಲೆ ಈ ಜನರು ನನ್ನನ್ನು ಬಿಟ್ಟು ನಾನು ಅವರೊಡನೆ ಮಾಡಿಕೊಂಡ ಒಡಂಬಡಿಕೆಯನ್ನು ಮೀರಿ ದೇವದ್ರೋಹಿಗಳಾಗಿ ತಾವು ಹೋಗುವ ದೇಶದಲ್ಲಿರುವ ಅನ್ಯದೇವತೆಗಳನ್ನು ಪೂಜಿಸುವರು.


ಅವರ ಮುಂದಾಗಿ ಹೋದ ಗೇಹಜಿಯು ಕೋಲನ್ನು ಹುಡುಗನ ಮುಖದ ಮೇಲಿಟ್ಟರೂ ಹುಡುಗನು ಮಾತನಾಡಲಿಲ್ಲ, ಎಚ್ಚರಗೊಳ್ಳಲೂ ಇಲ್ಲ. ಆದುದರಿಂದ ಅವನು ಹಿಂದಿರುಗಿ ಹೋಗಿ ಎಲೀಷನನ್ನು ಎದುರುಗೊಂಡು ಅವನಿಗೆ, “ಹುಡುಗನು ಎಚ್ಚರವಾಗಲಿಲ್ಲ” ಎಂದನು.


ರಾತ್ರಿಯಲ್ಲಿ ನಡೆದರೆ ತನ್ನಲ್ಲಿ ಬೆಳಕಿಲ್ಲದ್ದರಿಂದ ಅವನು ಎಡವುತ್ತಾನೆ” ಎಂದು ಉತ್ತರಕೊಟ್ಟನು.


ಅದಕ್ಕೆ ಶಿಷ್ಯರು, “ಅವನು ನಿದ್ರೆ ಮಾಡುತ್ತಿದ್ದರೆ ಸ್ವಸ್ಥನಾಗುವನು” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು