Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 11:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಆಗ ದಿದುಮನೆಂಬ ತೋಮನು ತನ್ನ ಜೊತೆ ಶಿಷ್ಯರಿಗೆ, “ನಾವು ಸಹ ಯೇಸುವಿನೊಂದಿಗೆ ಸಾಯುವುದಕ್ಕೆ ಹೋಗೋಣ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಆಗ ದಿದುಮನೆಂಬ ತೋಮನು ತನ್ನ ಜೊತೆ ಶಿಷ್ಯರಿಗೆ, “ನಾವು ಕೂಡ ಪ್ರಭುವಿನೊಡನೆ ಹೋಗಿ ಸಾಯೋಣ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಆಗ ದಿದುಮನೆಂಬ ತೋಮನು ಜೊತೇ ಶಿಷ್ಯರಿಗೆ - ನಾವು ಸಹ ಹೋಗಿ ಆತನೊಡನೆ ಸಾಯೋಣ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಆಗ ದಿದುಮನೆಂಬ ತೋಮನು ತನ್ನ ಜೊತೆ ಶಿಷ್ಯರಿಗೆ, “ನಾವು ಸಹ ಯೇಸುವಿನೊಂದಿಗೆ ಹೋಗಿ ಜುದೇಯದಲ್ಲಿ ಸಾಯೋಣ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ದಿದುಮನೆಂಬ ತೋಮನು ತನ್ನ ಜೊತೆ ಶಿಷ್ಯರಿಗೆ, “ನಾವು ಸಹ ಗುರುವಿನೊಂದಿಗೆ ಸಾಯುವುದಕ್ಕೆ ಹೋಗೋಣ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

16 ತನ್ನಾ ದಿದಿಮೊಸ್ ಮನ್ತಲೊ ಥೊಮಸಾನ್ ಅಪ್ನಾಚ್ಯಾ ವಾಂಗುಡ್ಚ್ಯಾ ಶಿಸಾಕ್ನಿ, “ಅಮಿ ಸಗ್ಳಿ ಲೊಕಾಬಿ ಗುರುಜಿಚ್ಯಾ ವಾಂಗ್ಡಾ ಥೈ ಜಾಂವ್ವಾ, ಅಶೆಚ್ ಅಮಿಬಿ ತೆಚ್ಯಾ ವಾಂಗ್ಡಾ ಮರುಕ್ ಹೊತಾ” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 11:16
12 ತಿಳಿವುಗಳ ಹೋಲಿಕೆ  

ಸೀಮೋನ್ ಪೇತ್ರನೂ, ದಿದುಮನೆಂಬ ತೋಮನೂ, ಗಲಿಲಾಯದ ಕಾನಾ ಊರಿನ ನತಾನಯೇಲನೂ, ಜೆಬೆದಾಯನ ಮಕ್ಕಳೂ ಮತ್ತು ಆತನ ಶಿಷ್ಯರಲ್ಲಿ ಇನ್ನಿಬ್ಬರೂ ಕೂಡಿಬಂದಿದ್ದರು.


ಪೇತ್ರನು ಆತನಿಗೆ, “ಕರ್ತನೇ, ನಾನು ಈಗ ನಿನ್ನನ್ನು ಏಕೆ ಹಿಂಬಾಲಿಸಲಾರೆನು? ನಿನಗಾಗಿ ನನ್ನ ಪ್ರಾಣವನ್ನೇ ಕೊಡುವೆನು” ಎಂದು ಹೇಳಿದನು.


ಫಿಲಿಪ್ಪ, ಬಾರ್ತೊಲೊಮಾಯ, ತೋಮ, ಸುಂಕ ವಸೂಲಿಗಾರನಾದ ಮತ್ತಾಯ, ಅಲ್ಫಾಯನ ಮಗ ಯಾಕೋಬ, ತದ್ದಾಯ,


ಮತ್ತಾಯ, ತೋಮ, ಅಲ್ಫಾಯನ ಮಗನಾದ ಯಾಕೋಬ, ಮತಾಭಿಮಾನಿ ಅನ್ನಿಸಿಕೊಂಡ ಸೀಮೋನ,


ಅಂದ್ರೆಯ, ಫಿಲಿಪ್ಪ, ಬಾರ್ತೊಲೊಮಾಯ, ಮತ್ತಾಯ, ತೋಮ, ಅಲ್ಫಾಯನ ಮಗನಾದ ಯಾಕೋಬ, ತದ್ದಾಯ, ಮತಾಭಿಮಾನಿ ಎಂದು ಹೆಸರುಗೊಂಡ ಸೀಮೋನ,


ಪೇತ್ರನು ಆತನಿಗೆ, “ನಾನು ನಿನ್ನ ಸಂಗಡ ಸಾಯಬೇಕಾಗಿಬಂದರೂ ನಿನ್ನನ್ನು ನಿರಾಕರಿಸುವುದಿಲ್ಲ” ಎಂದು ಹೇಳಿದನು. ಅದರಂತೆ ಶಿಷ್ಯರೆಲ್ಲರೂ ಹೇಳಿದರು.


ಅವರು ಅಲ್ಲಿಗೆ ಬಂದು ತಾವು ವಾಸಮಾಡುತ್ತಿದ್ದ ಮೇಲಂತಸ್ತಿಗೆ ಹೋದರು; ಅವರು ಯಾರಾರೆಂದರೆ, ಪೇತ್ರ, ಯೋಹಾನ, ಯಾಕೋಬ, ಅಂದ್ರೆಯ, ಫಿಲಿಪ್ಪ, ತೋಮ, ಬಾರ್ತೊಲೊಮಾಯ, ಮತ್ತಾಯ, ಅಲ್ಫಾಯನ ಮಗ ಯಾಕೋಬ, ಮತಾಭಿಮಾನಿ ಎನಿಸಿಕೊಂಡ ಸೀಮೋನ, ಯಾಕೋಬನ ಸಹೋದರನಾದ ಯೂದ, ಇವರೇ.


ತೋಮನು ಆತನಿಗೆ, “ಕರ್ತನೇ, ನೀನು ಎಲ್ಲಿಗೆ ಹೋಗುತ್ತೀ ಎಂಬುದೇ ನಮಗೆ ತಿಳಿಯದು, ಮತ್ತೆ ಮಾರ್ಗವು ಹೇಗೆ ತಿಳಿದೀತು?” ಎಂದು ಕೇಳಲು,


ಆತನ ಶಿಷ್ಯರು ಆತನಿಗೆ, “ಗುರುವೇ, ಆಗಲೇ ಯೆಹೂದ್ಯರು ನಿನ್ನ ಮೇಲೆ ಕಲ್ಲೆಸೆಯಬೇಕೆಂದು ಹುಡುಕುತ್ತಿದ್ದಾರೆ, ಪುನಃ ನೀನು ಅಲ್ಲಿಗೆ ಹೋಗಬೇಕೆಂದಿರುವಿಯಾ?” ಎಂದರು.


ಆದರೆ ಅವನು, “ಕರ್ತನೇ, ನಿನ್ನ ಸಂಗಡ ಸೆರೆಮನೆಗೆ ಹೋಗುವುದಕ್ಕೂ ಸಾಯುವುದಕ್ಕೂ ನಾನು ಸಿದ್ಧನಾಗಿದ್ದೇನೆ” ಅನ್ನಲು,


ನಾನು ಅಲ್ಲಿ ಇಲ್ಲದೆ ಹೋದದ್ದು ಒಳ್ಳೆಯದೇ, ನಿಮಗೆ ನನ್ನಲ್ಲಿ ನಂಬಿಕೆ ಬರುವಂತೆ ಇದೆಲ್ಲಾ ನಡೆದಿದೆ. ಬನ್ನಿ, ನಾವು ಅವನ ಬಳಿಗೆ ಹೋಗೋಣ” ಎಂದು ಹೇಳಿದನು


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು