Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 11:26 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಮತ್ತು ಜೀವಿಸುವ ಪ್ರತಿಯೊಬ್ಬನು ನನ್ನಲ್ಲಿ ನಂಬಿಕೆಯಿಟ್ಟರೆ, ಅವನು ಎಂದಿಗೂ ಸಾಯುವುದಿಲ್ಲ. ಇದನ್ನು ನೀನು ನಂಬುತ್ತೀಯೋ?” ಎಂದು ಕೇಳಿದಕ್ಕೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಜೀವಿಸುವ ಪ್ರತಿಯೊಬ್ಬನೂ ನನ್ನಲ್ಲಿ ವಿಶ್ವಾಸವಿಟ್ಟನೆಂದರೆ ಅವನೆಂದಿಗೂ ಸಾಯನು. ಇದನ್ನು ನೀವು ವಿಶ್ವಾಸಿಸುತ್ತೀಯಾ?” ಎಂದು ಕೇಳಲು ಅವಳು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಮತ್ತು ಬದುಕುತ್ತಾ ನನ್ನನ್ನು ನಂಬುವ ಪ್ರತಿಯೊಬ್ಬನು ಎಂದಿಗೂ ಸಾಯುವದಿಲ್ಲ; ಇದನ್ನು ನಂಬುತ್ತೀಯಾ? ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಮತ್ತು ಬದುಕುತ್ತಾ ನನ್ನನ್ನು ನಂಬುವವನು ಎಂದಿಗೂ ಸಾಯುವುದಿಲ್ಲ. ಮಾರ್ಥಳೇ, ನೀನು ಇದನ್ನು ನಂಬುವಿಯಾ?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಜೀವಿಸುವ ಪ್ರತಿಯೊಬ್ಬರೂ ನನ್ನಲ್ಲಿ ನಂಬಿಕೆಯಿಟ್ಟರೆ, ಅವರು ಎಂದಿಗೂ ಸಾಯುವುದಿಲ್ಲ. ಇದನ್ನು ನೀನು ನಂಬುತ್ತೀಯಾ?” ಎಂದು ಕೇಳಿದ್ದಕ್ಕೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

26 ಅನಿ ಜೊ ಕೊನ್ ಝಿತ್ತೊ ರ್‍ಹಾತಾ ಅನಿ ಮಾಜೆವರ್ತಿ ವಿಶ್ವಾಸ್ ಕರ್‍ತಾ ತೊ ಕನ್ನಾಚ್ ಹೆ ತಿಯಾ ವಿಶ್ವಾಸ್ ಕರ್‍ತೆ ಕಾಯ್?” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 11:26
15 ತಿಳಿವುಗಳ ಹೋಲಿಕೆ  

ನಾನು ಅವುಗಳಿಗೆ ನಿತ್ಯಜೀವವನ್ನು ಕೊಡುತ್ತೇನೆ. ಅವು ಎಂದೆಂದಿಗೂ ನಾಶವಾಗುವುದೇ ಇಲ್ಲ. ಅವುಗಳನ್ನು ಯಾರೂ ನನ್ನ ಕೈಯಿಂದ ಕಸಿದುಕೊಳ್ಳಲಾರರು.


ನೀವು ಶರೀರಭಾವವನ್ನು ಅನುಸರಿಸಿ ಬದುಕಿದರೆ ಸಾಯುವುದು ನಿಶ್ಚಯ; ನೀವು ಪವಿತ್ರಾತ್ಮನಿಂದ ದೇಹದ ದುರಭ್ಯಾಸಗಳನ್ನು ನಾಶ ಮಾಡುವುದಾದರೆ ಜೀವಿಸುವಿರಿ.


ನಿಮಗೆ ನಿಜನಿಜವಾಗಿ ಹೇಳುತ್ತೇನೆ ನನ್ನ ವಾಕ್ಯವನ್ನು ಕೇಳಿ ನನ್ನನ್ನು ಕಳುಹಿಸಿದಾತನನ್ನು ನಂಬುವವನು ನಿತ್ಯ ಜೀವವನ್ನು ಹೊಂದಿದ್ದಾನೆ, ಅವನು ಖಂಡನೆಗೆ ಗುರಿಯಾಗುವುದಿಲ್ಲ, ಮರಣದಿಂದ ಪಾರಾಗಿ ಜೀವದಲ್ಲಿ ಸೇರಿದ್ದಾನೆ.


ನಾನು ತಂದೆಯಲ್ಲಿ ಇದ್ದೇನೆ ಮತ್ತು ತಂದೆಯು ನನ್ನಲ್ಲಿ ಇದ್ದಾನೆ ಎಂಬುದನ್ನು ನೀನು ನಂಬುವುದಿಲ್ಲವೋ? ನಾನು ನಿಮಗೆ ಹೇಳುವ ಮಾತುಗಳನ್ನು ನನ್ನಷ್ಟಕ್ಕೆ ನಾನೇ ಆಡುವುದಿಲ್ಲ; ತಂದೆಯು ನನ್ನಲ್ಲಿ ಇದ್ದುಕೊಂಡು ತನ್ನ ಕಾರ್ಯಗಳನ್ನು ಮಾಡುತ್ತಾನೆ.


ಆದರೆ, ನಾನು ಕೊಡುವ ನೀರನ್ನು ಕುಡಿದವನಿಗೆ ಎಂದಿಗೂ ನೀರಡಿಕೆಯಾಗುವುದಿಲ್ಲ. ನಾನು ಅವನಿಗೆ ಕೊಡುವ ನೀರು ಅವನಲ್ಲಿ ಉಕ್ಕುವ ನೀರಿನ ಬುಗ್ಗೆಗಳಾಗಿದ್ದು ನಿತ್ಯ ಜೀವವನ್ನು ಉಂಟುಮಾಡುವುದು” ಎಂದು ಹೇಳಿದನು.


ಯೇಸು ಮನೆಗೆ ಬಂದಾಗ ಆ ಕುರುಡರು ಆತನ ಬಳಿಗೆ ಬಂದರು. ಯೇಸು ಅವರನ್ನು, “ನಾನು ಇದನ್ನು ಮಾಡಬಲ್ಲೆನೆಂಬುದನ್ನು ನೀವು ನಂಬುತ್ತೀರೋ” ಎಂದು ಕೇಳಿದ್ದಕ್ಕೆ, ಅವರು “ಹೌದು, ಕರ್ತನೇ, ನಂಬುತ್ತೇವೆ” ಅಂದರು.


ಅವನನ್ನು ಹೊರಗೆ ಹಾಕಿದರೆಂದು ಯೇಸು ಕೇಳಿ ಅವನನ್ನು ಕಂಡುಕೊಂಡು, “ನೀನು ಮನುಷ್ಯಕುಮಾರನನ್ನು ನಂಬುತ್ತೀಯೋ?” ಎಂದು ಕೇಳಿದನು.


ಯೇಸು ಅವನಿಗೆ, “‘ನಿನ್ನ ಕೈಯಲ್ಲಿ ಆಗುವ ಹಾಗಿದ್ದರೆ ಅನ್ನುತ್ತೀಯೋ’? ನಂಬುವವನಿಗೆ ಎಲ್ಲವೂ ಸಾಧ್ಯ!” ಎಂದು ಹೇಳಿದನು.


ನಾನು ನನ್ನ ತಂದೆಯನ್ನು ಬೇಡಿಕೊಳ್ಳಲಾರೆನೆ, ಬೇಡಿಕೊಂಡರೆ ಆತನು ನನಗೆ ಈಗಲೇ ಹನ್ನೆರಡು ಗಣಗಳಿಗಿಂತ ಹೆಚ್ಚು ಮಂದಿ ದೇವದೂತರನ್ನು ಕಳುಹಿಸಿಕೊಡುವುದಿಲ್ಲವೆಂದು ಭಾವಿಸುತ್ತೀಯೋ?


ನಂಬುವವನು ನಿತ್ಯಜೀವವನ್ನು ಹೊಂದಿದ್ದಾನೆಂದು ನಿಮಗೆ ನಿಜನಿಜವಾಗಿ ಹೇಳುತ್ತೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು