Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 11:40 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

40 ಯೇಸು ಆಕೆಗೆ, “ನೀನು ನಂಬಿದರೆ ದೇವರ ಮಹಿಮೆಯನ್ನು ಕಾಣುವಿ ಎಂದು ನಾನು ನಿನಗೆ ಹೇಳಲಿಲ್ಲವೇ?” ಎಂದು ಉತ್ತರ ಕೊಟ್ಟನು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

40 “ನಿನಗೆ ವಿಶ್ವಾಸವಿದ್ದಲ್ಲಿ ದೇವರ ಮಹಿಮೆಯನ್ನು ಕಾಣುವೆ ಎಂದು ನಾನು ಹೇಳಲಿಲ್ಲವೇ?” ಎಂದು ಮರು ನುಡಿದರು ಯೇಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

40 ಯೇಸು ಆಕೆಗೆ - ನೀನು ನಂಬಿದರೆ ದೇವರ ಮಹಿಮೆಯನ್ನು ಕಾಣುವಿ ಎಂದು ನಾನು ನಿನಗೆ ಹೇಳಲಿಲ್ಲವೇ ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

40 ಯೇಸು ಮಾರ್ಥಳಿಗೆ, “ನಾನು ನಿನಗೆ ಹೇಳಿದ್ದನ್ನು ಜ್ಞಾಪಿಸಿಕೊಳ್ಳುವಿಯಾ? ನೀನು ನಂಬಿದರೆ ದೇವರ ಮಹಿಮೆಯನ್ನು ಕಾಣುವೆ ಎಂದು ನಾನು ನಿನಗೆ ಹೇಳಿದೆನು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

40 ಯೇಸು ಆಕೆಗೆ, “ನೀನು ನಂಬಿದರೆ ದೇವರ ಮಹಿಮೆಯನ್ನು ಕಾಣುವೆ ಎಂದು ನಾನು ನಿನಗೆ ಹೇಳಲಿಲ್ಲವೇ?” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

40 ತನ್ನಾ ಜೆಜುನ್ ತಿಕಾ, “ಮಿಯಾ ತುಕಾ ಸಾಂಗುಕ್ನಾ ಕಾಯ್?” ತಿಯಾ ವಿಶ್ವಾಸ್ ಕರ್ಲ್ಯಾರ್ ತುಕಾ ದೆವಾಚಿ ಮಹಿಮಾ ಬಗುಕ್ ಗಾವ್ತಾ ಮನುನ್ ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 11:40
15 ತಿಳಿವುಗಳ ಹೋಲಿಕೆ  

ಯೇಸು ಇದನ್ನು ಕೇಳಿ, “ಈ ರೋಗವು ಮರಣಕ್ಕಾಗಿ ಬಂದದ್ದಲ್ಲ; ಇದರಿಂದ ದೇವಕುಮಾರನಿಗೆ ಮಹಿಮೆ ಉಂಟಾಗುವಂತೆ ದೇವರ ಮಹಿಮೆಗೋಸ್ಕರ ಬಂದದ್ದು” ಎಂದು ಹೇಳಿದನು.


ನಿನ್ನ ಮಂದಿರದಲ್ಲಿ ನಾನು ನಿನ್ನ ಮಹತ್ತನ್ನೂ, ಪ್ರಭಾವವನ್ನೂ ಕಂಡ ಪ್ರಕಾರ, ಈಗಲೂ ಕಾಣಬೇಕೆಂದು ಅಪೇಕ್ಷಿಸುತ್ತೇನೆ.


ಆ ವಾಕ್ಯವೆಂಬುವವನು ಮನುಷ್ಯನಾಗಿ ನಮ್ಮ ಮಧ್ಯದಲ್ಲಿ ವಾಸಮಾಡಿದನು. ನಾವು ಆತನ ಮಹಿಮೆಯನ್ನು ನೋಡಿದೆವು. ಆ ಮಹಿಮೆಯು ತಂದೆಯ ಬಳಿಯಿಂದ ಬಂದ ಒಬ್ಬನೇ ಮಗನಿಗೆ ಇರತಕ್ಕ ಮಹಿಮೆ. ಆತನು ಕೃಪೆಯಿಂದಲೂ, ಸತ್ಯದಿಂದಲೂ ತುಂಬಿದವನಾಗಿದ್ದನು.


ಅವರು ಮರುದಿನ ಬೆಳಿಗ್ಗೆ ಎದ್ದು ತೆಕೋವ ಅರಣ್ಯಕ್ಕೆ ಹೊರಟರು. ಹೊರಡುವಾಗ, ಯೆಹೋಷಾಫಾಟನು ಅವರಿಗೆ, “ಯೆಹೂದ್ಯರೇ, ಯೆರೂಸಲೇಮಿನವರೇ, ನನ್ನ ಮಾತನ್ನು ಕೇಳಿರಿ, ಯೆಹೋವನಲ್ಲಿ ಭರವಸವಿಡಿರಿ, ಆಗ ನೀವು ಸುರಕ್ಷಿತರಾಗಿರುವಿರಿ; ಆತನ ಪ್ರವಾದಿಗಳನ್ನು ನಂಬಿರಿ, ಆಗ ನೀವು ಸಫಲರಾಗುವಿರಿ” ಎಂದು ಹೇಳಿದನು.


ನಾವೆಲ್ಲರೂ ಮುಸುಕು ತೆಗೆದಿರುವ ಮುಖದಿಂದ ಕರ್ತನ ಪ್ರಭಾವವನ್ನು ದರ್ಪಣದಲ್ಲಿ ಕಾಣಿಸುತ್ತದೋ ಎಂಬಂತೆ ದೃಷ್ಟಿಸುವವರಾಗಿದ್ದು ನಾವೆಲ್ಲರೂ ಕರ್ತನ ದಾನವಾಗಿರುವ ಆತ್ಮದ ಮಹಿಮೆಯಿಂದ ಅಧಿಕ ಮಹಿಮೆಗೆ ಹೋಗುತ್ತಾ, ಆ ಮಹಿಮೆಯ ಸಾರೂಪ್ಯವುಳ್ಳವರೇ ಆಗುತ್ತೇವೆ. ಇದು ಆತ್ಮನಾಗಿರುವ ಕರ್ತನ ಕಾರ್ಯವೇ ಸರಿ.


ಯಾಕೆಂದರೆ “ಕತ್ತಲೆಯೊಳಗಿನಿಂದ ಬೆಳಕು ಪ್ರಕಾಶಿಸಲಿ” ಎಂದು ಹೇಳಿದ ದೇವರು ತಾನೇ ಯೇಸು ಕ್ರಿಸ್ತನ ಮುಖದಲ್ಲಿ ತೋರುವ ದೇವಮಹಿಮೆಯ ಜ್ಞಾನವೆಂಬ ಪ್ರಕಾಶವು ಅನೇಕರಿಗೆ ಉಂಟಾಗುವುದಕ್ಕಾಗಿ ನಮ್ಮ ಹೃದಯಗಳಲ್ಲಿ ಪ್ರಕಾಶಿಸಿದನು.


ನಿನ್ನ ಸೇವಕರಿಗೆ ನಿನ್ನ ರಕ್ಷಣಾ ಕಾರ್ಯವೂ, ಅವರ ಮಕ್ಕಳಿಗೋಸ್ಕರ ನಿನ್ನ ಮಹತ್ತೂ ಪ್ರಕಟವಾಗಲಿ.


ಯೇಸು, “ಇವನಾಗಲಿ ಇವನ ತಂದೆತಾಯಿಗಳಾಗಲಿ ಪಾಪ ಮಾಡಲಿಲ್ಲ. ಆದರೆ ದೇವರ ಕ್ರಿಯೆಗಳು ಇವನಲ್ಲಿ ತೋರಿಬರುವುದಕ್ಕಾಗಿ ಹೀಗಾಯಿತು.


ಯೆಶಾಯನು ಯೇಸುವಿನ ಮಹಿಮೆಯನ್ನು ನೋಡಿದ್ದರಿಂದ ಆತನ ವಿಷಯವಾಗಿ ಈ ಮಾತನ್ನು ಹೇಳಿದನು.


ಮುಂಜಾನೆಯಲ್ಲಿ ಯೆಹೋವನ ಮಹಿಮೆಯು ನಿಮಗೆ ಕಾಣಿಸುವುದು, ಏಕೆಂದರೆ ನೀವು ಯೆಹೋವನಿಗೆ ವಿರೋಧವಾಗಿ ಗುಣುಗುಟ್ಟಿದ್ದನ್ನು ಆತನು ಕೇಳಿದ್ದಾನೆ. ನಮ್ಮ ಮೇಲೆ ನೀವು ಗುಣುಗುಟ್ಟುವುದೇನು? ನಾವು ಎಷ್ಟು ಮಾತ್ರದವರು?” ಎಂದು ಹೇಳಿದರು.


ಆತನು ಅವರಿಗೆ, “ನಿಮ್ಮ ಅಪನಂಬಿಕೆಯಿಂದಲೇ ಆಗಲಿಲ್ಲ. ಸಾಸಿವೇ ಕಾಳಿನಷ್ಟು ನಂಬಿಕೆ ನಿಮಗೆ ಇರುವುದಾದರೆ,


ಯೇಸು ಅವನಿಗೆ, “‘ನಿನ್ನ ಕೈಯಲ್ಲಿ ಆಗುವ ಹಾಗಿದ್ದರೆ ಅನ್ನುತ್ತೀಯೋ’? ನಂಬುವವನಿಗೆ ಎಲ್ಲವೂ ಸಾಧ್ಯ!” ಎಂದು ಹೇಳಿದನು.


ಹೀಗಿರಲಾಗಿ ನಾವು ದೀಕ್ಷಾಸ್ನಾನ ಮಾಡಿಸಿಕೊಂಡಾಗ ಆತನ ಮರಣದಲ್ಲಿ ಪಾಲುಗಾರರಾಗಿ ಆತನೊಂದಿಗೆ ಹೂಣಲ್ಪಟ್ಟೆವು. ಆದ್ದರಿಂದ ಕ್ರಿಸ್ತನು ಸತ್ತು ತಂದೆಯ ಮಹಿಮೆಯಿಂದ ಜೀವಿತನಾಗಿ ಎಬ್ಬಿಸಲ್ಪಟ್ಟಂತೆಯೇ ನಾವು ಕೂಡ ಜೀವದಿಂದೆದ್ದು ನೂತನ ಜೀವದಲ್ಲಿ ನಡೆದುಕೊಳ್ಳಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು