ಯೋಹಾನ 11:41 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201941 ಆಗ ಅವರು ಕಲ್ಲನ್ನು ತೆಗೆದು ಹಾಕಿದರು. ಯೇಸು ಕಣ್ಣೆತ್ತಿ ಮೇಲಕ್ಕೆ ನೋಡಿ, “ತಂದೆಯೇ ನೀನು ನನಗೆ ಕಿವಿಗೊಟ್ಟಿದ್ದಕ್ಕಾಗಿ ನಿನಗೆ ಕೃತಜ್ಞತೆಯನ್ನು ಸಲ್ಲಿಸುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)41 ಆಗ ಕಲ್ಲನ್ನು ತೆಗೆದುಹಾಕಲಾಯಿತು. ಯೇಸು ಕಣ್ಣೆತ್ತಿ ಮೇಲಕ್ಕೆ ನೋಡಿ, “ಪಿತನೇ , ನನ್ನ ಪ್ರಾರ್ಥನೆಗೆ ನೀವು ಕಿವಿಗೊಡುತ್ತೀರಿ; ಆದುದರಿಂದ ನಾನು ನಿಮಗೆ ಕೃತಜ್ಞತೆಯನ್ನು ಸಲ್ಲಿಸುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)41 ಆಗ ಕಲ್ಲನ್ನು ತೆಗೆದುಹಾಕಿದರು. ಮತ್ತು ಯೇಸು ಕಣ್ಣೆತ್ತಿ ಮೇಲಕ್ಕೆ ನೋಡಿ - ತಂದೆಯೇ, ನೀನು ನನ್ನ ಪ್ರಾರ್ಥನೆಯನ್ನು ಕೇಳಿದ್ದಕ್ಕೆ ನಿನ್ನನ್ನು ಕೊಂಡಾಡುತ್ತೇನೆ; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್41 ಆದ್ದರಿಂದ ಅವರು ಸಮಾಧಿಯ ಬಾಯಿಂದ ಕಲ್ಲನ್ನು ತೆಗೆದುಹಾಕಿದರು. ಆಗ ಯೇಸು ಕಣ್ಣೆತ್ತಿ ಮೇಲಕ್ಕೆ ನೋಡಿ, “ತಂದೆಯೇ, ನನ್ನ ಪ್ರಾರ್ಥನೆಯನ್ನು ಕೇಳಿದರಿಂದ ನಿನ್ನನ್ನು ಕೊಂಡಾಡುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ41 ಆಗ ಕೆಲವರು ಕಲ್ಲನ್ನು ತೆಗೆದುಹಾಕಿದರು. ಯೇಸು ಕಣ್ಣೆತ್ತಿ ಮೇಲೆ ನೋಡಿ, “ತಂದೆಯೇ, ನೀವು ನನಗೆ ಕಿವಿಗೊಟ್ಟಿದ್ದಕ್ಕಾಗಿ ನಿಮಗೆ ಕೃತಜ್ಞತೆಯನ್ನು ಸಲ್ಲಿಸುತ್ತೇನೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್41 ತೆನಿ ತೊ ಗುಂಡೊ ಕಡೆಕ್ ಕಾಡ್ಲ್ಯಾನಿ. ತನ್ನಾ ಜೆಜುನ್ ವೈರ್ ಬಗಟ್ಲ್ಯಾನ್ ಅನಿ, “ಬಾಬಾ ಮಿಯಾ ತುಕಾ ಧನ್ಯವಾದ್ ದಿತಾ ಕಶ್ಯಾಕ್ ಮಟ್ಲ್ಯಾರ್ ತಿಯಾ ಮಾಜೆ ಆಯಿಕ್ತೆ. ಅಧ್ಯಾಯವನ್ನು ನೋಡಿ |
ಅದೇ ಗಳಿಗೆಯಲ್ಲಿ ಆತನು ಪವಿತ್ರಾತ್ಮನನಿಂದ ಉಲ್ಲಾಸಗೊಂಡು ಹೇಳಿದ್ದೇನಂದರೆ, “ತಂದೆಯೇ, ಪರಲೋಕ ಮತ್ತು ಭೂಲೋಕಗಳ ಒಡೆಯನೇ, ನೀನು ಜ್ಞಾನಿಗಳಿಗೂ ಮತ್ತು ವಿವೇಕಿಗಳಿಗೂ ಈ ವಿಷಯಗಳನ್ನು ಮರೆಮಾಡಿ, ಮಕ್ಕಳಿಗೆ ಪ್ರಕಟಮಾಡಿರುವುದರಿಂದ ನಿನ್ನನ್ನು ಕೊಂಡಾಡುತ್ತೇನೆ. ಹೌದು, ತಂದೆಯೇ, ಹೀಗೆ ಮಾಡುವುದೇ ಒಳ್ಳೆಯದೆಂದು ನಿನ್ನ ದೃಷ್ಟಿಗೆ ತೋರಿದ್ದರಿಂದ ನಿನ್ನನ್ನು ಕೊಂಡಾಡುತ್ತೇನೆ.