Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 12:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಖರ್ಜೂರದ ಗರಿಗಳನ್ನು ತೆಗೆದುಕೊಂಡು, ಆತನನ್ನು ಎದುರುಗೊಳ್ಳುವುದಕ್ಕೆ ಊರಿನಿಂದ ಹೊರಗೆ ಬಂದು, “ಹೊಸನ್ನ! ಕರ್ತನ ಹೆಸರಿನಲ್ಲಿ ಬರುವವನಿಗೆ ಆಶೀರ್ವಾದ; ಇಸ್ರಾಯೇಲಿನ ಅರಸನಿಗೆ ಶುಭವಾಗಲಿ” ಎಂದು ಆರ್ಭಟಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಖರ್ಜೂರದ ಗರಿಗಳನ್ನು ಹಿಡಿದುಕೊಂಡು ಅವರು ಯೇಸುವನ್ನು ಎದುರುಗೊಳ್ಳಲು ಹೊರಟರು. ‘ಸರ್ವೇಶ್ವರನ ನಾಮದಲ್ಲಿ ಬರುವಾತನಿಗೆ ಜಯಜಯವಾಗಲಿ ! ಇಸ್ರಯೇಲಿನ ಅರಸನಿಗೆ ಶುಭವಾಗಲಿ !’ ಎಂದು ಘೋಷಿಸುತ್ತಾ ಅವರನ್ನು ಸ್ವಾಗತಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಆತನನ್ನು ಎದುರುಗೊಳ್ಳುವದಕ್ಕೆ ಹೊರಗೆ ಬಂದು - ಜಯ, ಕರ್ತನ ಹೆಸರಿನಲ್ಲಿ ಬರುವವನಿಗೆ ಆಶೀರ್ವಾದ; ಇಸ್ರಾಯೇಲಿನ ಅರಸನಿಗೆ ಆಶೀರ್ವಾದ ಎಂದು ಆರ್ಭಟಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಜನರು ಖರ್ಜೂರದ ಗರಿಗಳನ್ನು ತೆಗೆದುಕೊಂಡು ಯೇಸುವನ್ನು ಎದುರುಗೊಳ್ಳಲು ಹೋದರು. “ಆತನಿಗೆ ಸ್ತೋತ್ರವಾಗಲಿ! ‘ಪ್ರಭುವಿನ ಹೆಸರಿನಲ್ಲಿ ಬರುವಾತನಿಗೆ ದೇವರಾಶೀರ್ವಾದವಾಗಲಿ!’ ಇಸ್ರೇಲ್ ರಾಜನಿಗೆ ದೇವರಾಶೀರ್ವಾದವಾಗಲಿ!” ಎಂದು ಜನರು ಕೂಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಖರ್ಜೂರದ ಗರಿಗಳನ್ನು ತೆಗೆದುಕೊಂಡು ಅವರನ್ನು ಎದುರುಗೊಳ್ಳಲು ಹೊರಗೆ ಬಂದು, “ಹೊಸನ್ನ!” “ಕರ್ತನ ಹೆಸರಿನಲ್ಲಿ ಬರುವವನಿಗೆ ಆಶೀರ್ವಾದ!” “ಇಸ್ರಾಯೇಲಿನ ಅರಸನಿಗೆ ಶುಭವಾಗಲಿ!” ಎಂದು ಕೂಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ತಸೆಮನುನ್ ತ್ಯಾನಿ ಖಜುರಾಚ್ಯಾ ಪಾನಾ ಸರ್ಕಿ ಪಾನಾ ಘೆವ್ನ್, “ಹೊಸಾನ್ನಾ! ಸರ್ವೆಸ್ವರಾಚ್ಯಾ ನಾವಾನ್ ಯೆತಾ ತೊ ದೆವ್ ಆಶಿರ್ವಾದ್ ದಿವ್ನ್ ದಿ! ದೆವಾ ಇಸ್ರಾಯೆಲಾಚೊ ರಾಜಾ ಆಶಿರ್ವಾದ್ ದಿವ್ನ್ ದಿ!” ಮನುನ್ ಬೊಬ್ ಮಾರುನ್ಗೆತ್ ಜೆಜುಕ್ ಭೆಟುಕ್ ಮನುನ್ ಗೆಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 12:13
19 ತಿಳಿವುಗಳ ಹೋಲಿಕೆ  

ಅವರು ದೇವರ ದಾಸನಾದ ಮೋಶೆಯ ಹಾಡನ್ನೂ, ಯಜ್ಞದ ಕುರಿಮರಿಯಾದಾತನ ಹಾಡನ್ನೂ ಹಾಡುತ್ತಾ, “ಕರ್ತನಾದ ದೇವರೇ ಸರ್ವಶಕ್ತನೇ, ನಿನ್ನ ಕೃತ್ಯಗಳು ಮಹತ್ತಾದವುಗಳೂ, ಆಶ್ಚರ್ಯಕರವಾದವುಗಳೂ ಆಗಿವೆ. ಸರ್ವಜನಾಂಗಗಳ ಅರಸನೇ. ನಿನ್ನ ಮಾರ್ಗಗಳು ನ್ಯಾಯವೂ ಸತ್ಯವೂ ಆಗಿವೆ.


ಇದಾದ ನಂತರ ಇಗೋ, ಯಾರಿಂದಲೂ ಎಣಿಸಲಾಗದಂಥ ಮಹಾ ಜನಸಮೂಹವು ಸಿಂಹಾಸನದ ಮುಂದೆಯೂ ಯಜ್ಞದ ಕುರಿಮರಿಯಾದಾತನ ಮುಂದೆಯೂ ನಿಂತಿರುವುದನ್ನು ಕಂಡೆನು. ಅವರು ಸಕಲ ಜನಾಂಗ, ಕುಲ, ಜಾತಿಗಳವರೂ ಸಕಲ ಭಾಷೆಗಳನ್ನಾಡುವವರೂ ಆಗಿದ್ದರು. ಅವರು ಬಿಳೀ ನಿಲುವಂಗಿಗಳನ್ನು ತೊಟ್ಟುಕೊಂಡು ತಮ್ಮ ಕೈಗಳಲ್ಲಿ ಖರ್ಜೂರದ ಗರಿಗಳನ್ನು ಹಿಡಿದುಕೊಂಡಿದ್ದರು.


ಅದಕ್ಕೆ ನತಾನಯೇಲನು, “ಗುರುವೇ, ನೀನು ದೇವಕುಮಾರನು! ನೀನೇ ಇಸ್ರಾಯೇಲಿನ ಅರಸನು” ಎಂದನು.


ಈಗಿಂದ, ‘ಕರ್ತನ ಹೆಸರಿನಲ್ಲಿ ಬರುವವನು ಧನ್ಯನು ಎಂದು ನೀವಾಗಿ ನೀವು ಹೇಳುವ ತನಕ ನೀವು ನನ್ನನ್ನು ನೋಡುವುದೇ ಇಲ್ಲವೆಂದು ನಿಮಗೆ ಹೇಳುತ್ತೇನೆ’” ಅಂದನು.


ಅನಂತರ ಅವರು ತಮ್ಮ ದೇವರಾದ ಯೆಹೋವನನ್ನೂ ಮತ್ತು ತಮ್ಮ ರಾಜನಾದ ದಾವೀದನನ್ನೂ ಪುನಃ ಆಶ್ರಯಿಸುವರು. ಹೌದು, ಅಂತ್ಯಕಾಲದಲ್ಲಿ ಯೆಹೋವನನ್ನೂ, ಆತನ ದಯೆಯನ್ನೂ ಭಯಭಕ್ತಿಯಿಂದ ಪಡೆಯುವರು.


ಅದಕ್ಕೆ ಅವರು, “ಅವನನ್ನು ಕೊಲ್ಲಿಸು, ಕೊಲ್ಲಿಸು, ಶಿಲುಬೆಗೆ ಹಾಕಿಸು” ಎಂದು ಕೂಗಿದರು. ಅದಕ್ಕೆ ಪಿಲಾತನು, “ನಿಮ್ಮ ಅರಸನನ್ನು ಶಿಲುಬೆಗೆ ಹಾಕಿಸಲೋ?” ಎಂದು ಹೇಳಿದಕ್ಕೆ, ಮುಖ್ಯಯಾಜಕರು, “ಕೈಸರನೇ, ಹೊರತು ನಮಗೆ ಬೇರೆ ಅರಸನಿಲ್ಲ” ಎಂದು ಉತ್ತರ ಕೊಟ್ಟರು.


ನಿನಗೆ ವಿಧಿಸಿದ ದಂಡನೆಯನ್ನು ಯೆಹೋವನು ತಪ್ಪಿಸಿದ್ದಾನೆ, ನಿನ್ನ ಶತ್ರುವನ್ನು ತಳ್ಳಿಬಿಟ್ಟಿದ್ದಾನೆ; ಇಸ್ರಾಯೇಲಿನ ಅರಸನಾದ ಯೆಹೋವನು ನಿನ್ನ ಮಧ್ಯದಲ್ಲಿದ್ದಾನೆ; ಇನ್ನು ಕೇಡಿಗೆ ಅಂಜದಿರುವಿ.


ಆತನ ವಸ್ತ್ರದ ಮೇಲೂ, ತೊಡೆಯ ಮೇಲೂ “ರಾಜಾಧಿರಾಜನೂ ಕರ್ತಾಧಿ ಕರ್ತನೂ” ಎಂಬ ಹೆಸರು ಬರೆದಿದೆ.


ಇಸ್ರಾಯೇಲರ ಅರಸನೂ, ವಿಮೋಚಕನೂ ಆಗಿರುವ ಸೇನಾಧೀಶ್ವರನಾದ ಯೆಹೋವನು ಹೀಗೆನ್ನುತ್ತಾನೆ, “ನಾನೇ ಆದಿಯೂ, ನಾನೇ ಅಂತ್ಯವೂ. ನನ್ನ ಹೊರತು ಬೇರೆ ಯಾವ ದೇವರೂ ಇಲ್ಲ.


ಮೊದಲನೆಯ ದಿನದಲ್ಲಿ ಶ್ರೇಷ್ಠವೃಕ್ಷದ ಹಣ್ಣುಗಳನ್ನು, ಖರ್ಜೂರ ಮರದ ಗರಿಗಳನ್ನು, ಎಲೆಗಳು ದಟ್ಟವಾಗಿರುವ ಮರಗಳ ಕೊಂಬೆಗಳನ್ನು ಮತ್ತು ನೀರಿನ ಕಾಲುವೆಗಳ ಬಳಿಯಲ್ಲಿ ಬೆಳೆಯುವ ನೀರವಂಜಿ ಚಿಗುರುಗಳನ್ನು ತೆಗೆದುಕೊಂಡು ಯೆಹೋವನ ಸನ್ನಿಧಿಯಲ್ಲಿ ಏಳು ದಿನಗಳ ವರೆಗೆ ಸಂಭ್ರಮವಾಗಿರಬೇಕು.


ಹೀಗೆ, “ಚೀಯೋನ್ ನಗರಿಯೇ, ಹೆದರಬೇಡ ಇಗೋ, ನಿನ್ನ ಅರಸನು ಕತ್ತೆಮರಿಯ ಮೇಲೆ ಕುಳಿತುಕೊಂಡು ಬರುತ್ತಿದ್ದಾನೆ” ಎಂಬ ಧರ್ಮಶಾಸ್ತ್ರದ ಮಾತು ನೆರವೇರಿತು.


ಅವನು ಇಸ್ರಾಯೇಲಿನ ಅರಸನಲ್ಲವೇ. ಈಗ ಶಿಲುಬೆಯಿಂದ ಇಳಿದು ಬರಲಿ, ಇಳಿದು ಬಂದರೆ ಅವನಲ್ಲಿ ನಂಬಿಕೆಯಿಡುತ್ತೇವೆ ಅಂದರು.


ಯೇಸು ದಾರಿಯಲ್ಲಿ ಪ್ರಾಯದ ಕತ್ತೆಯೊಂದನ್ನು ಕಂಡು ಅದರ ಮೇಲೆ ಕುಳಿತುಕೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು