Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 12:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಆಗ ಮರಿಯಳು ಬಹು ಬೆಲೆಯುಳ್ಳ ಸ್ವಚ್ಛ ಜಟಮಾಂಸಿ ತೈಲವನ್ನು ಒಂದು ಸೇರಷ್ಟು ತಂದು ಯೇಸುವಿನ ಪಾದಕ್ಕೆ ಹಚ್ಚಿ ತನ್ನ ತಲೆ ಕೂದಲಿನಿಂದ ಆತನ ಪಾದಗಳನ್ನು ಒರಸಿದಳು. ಆ ತೈಲದ ಪರಿಮಳವು ಮನೆಯಲ್ಲೆಲ್ಲಾ ತುಂಬಿಕೊಂಡಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಆಗ ಮರಿಯಳು ಸುಮಾರು ಅರ್ಧ ಲೀಟರಿನಷ್ಟು, ಅತ್ಯಂತ ಬೆಲೆಬಾಳುವ ಅಚ್ಚ ಜಟಾಮಾಂಸಿ ಸುಗಂಧ ತೈಲವನ್ನು ತಂದು ಯೇಸುವಿನ ಪಾದಗಳಿಗೆ ಹಚ್ಚಿ, ತನ್ನ ತಲೆಗೂದಲಿನಿಂದ ಆ ಪಾದಗಳನ್ನು ಒರಸಿದಳು. ತೈಲದ ಸುವಾಸನೆ ಮನೆಯಲ್ಲೆಲ್ಲಾ ಹರಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಆಗ ಮರಿಯಳು ಬಹು ಬೆಲೆಯುಳ್ಳ ಅಚ್ಚ ಜಟಾಮಾಂಸಿ ತೈಲವನ್ನು ಒಂದು ಸೇರಷ್ಟು ತಂದು ಯೇಸುವಿನ ಪಾದಕ್ಕೆ ಹಚ್ಚಿ ತನ್ನ ತಲೇಕೂದಲಿನಿಂದ ಆತನ ಪಾದಗಳನ್ನು ಒರಸಿದಳು. ಆ ತೈಲದ ಪರಿಮಳವು ಮನೆಯಲ್ಲೆಲ್ಲಾ ತುಂಬಿಕೊಂಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಆಗ ಮರಿಯಳು, ಬಹು ಬೆಲೆಬಾಳುವ ಸುಗಂಧತೈಲವನ್ನು ಅರ್ಧ ಲೀಟರಿನಷ್ಟು ತೆಗೆದುಕೊಂಡು ಬಂದು, ಯೇಸುವಿನ ಪಾದಗಳಿಗೆ ಹಚ್ಚಿದಳು. ಬಳಿಕ ತನ್ನ ತಲೆ ಕೂದಲಿನಿಂದ ಆತನ ಪಾದಗಳನ್ನು ಒರೆಸಿದಳು. ಆ ಪರಿಮಳದ್ರವ್ಯದ ಸುವಾಸನೆಯು ಇಡೀ ಮನೆಯನ್ನೇ ತುಂಬಿಕೊಂಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಆಗ ಮರಿಯಳು ಬಹು ಬೆಲೆಯುಳ್ಳ ಅಚ್ಚ ಜಟಾಮಾಂಸಿ ಮೂಲಿಕೆಯ ತೈಲವನ್ನು ಸುಮಾರು ಅರ್ಧ ಲೀಟರಿನಷ್ಟು ತಂದು ಯೇಸುವಿನ ಪಾದಕ್ಕೆ ಸುರಿದು ತನ್ನ ತಲೆಯ ಕೂದಲಿನಿಂದ ಅವರ ಪಾದಗಳನ್ನು ಒರೆಸಿದಳು. ಆ ತೈಲದ ಪರಿಮಳವು ಮನೆಯಲ್ಲೆಲ್ಲಾ ತುಂಬಿಕೊಂಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ತನ್ನಾ ಮರಿನ್ ಜಟಮಾಂಸಾನ್ ತಯಾರ್ ಹೊಲ್ಲೆ ಲೈ ಮ್ಹಾಗ್ರೆ ತೆಲ್ ಜೆಜುಚ್ಯಾ ಪಾಯಾ ವೈನಿ ವೊತ್ಲಿನ್ ,ಅನಿ ಅಪ್ನಾಚ್ಯಾ ಕೆಸಾನಿ ತೆಚಿ ಪಾಯಾ ಪುಸ್ಲಿನ್. ತನ್ನಾ ಘರ್ ಸಗ್ಳೆ ತ್ಯಾ ತೆಲಾಚ್ಯಾ ವಾಸೆನ್ ಭರುನ್ ಗೆಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 12:3
16 ತಿಳಿವುಗಳ ಹೋಲಿಕೆ  

ಈ ಮರಿಯಳು ಕರ್ತನಿಗೆ ತೈಲವನ್ನು ಹಚ್ಚಿ ಆತನ ಪಾದಗಳನ್ನು ತನ್ನ ತಲೆ ಕೂದಲಿನಿಂದ ಒರಸಿದವಳು. ಈಕೆಯ ಸಹೋದರನಾದ ಲಾಜರನೇ ಅಸ್ವಸ್ಥನಾಗಿದ್ದನು.


ಮರಿಯಳು ಯೇಸು ಇದ್ದಲ್ಲಿಗೆ ಬಂದು ಆತನನ್ನು ಕಂಡು ಆತನ ಪಾದಗಳಿಗೆ ಅಡ್ಡಬಿದ್ದು ಆತನಿಗೆ, “ಕರ್ತನೇ, ನೀನು ಇಲ್ಲಿ ಇದ್ದಿದ್ದರೆ ನನ್ನ ಸಹೋದರನು ಸಾಯುತ್ತಿರಲಿಲ್ಲ” ಎಂದಳು.


ನೀನು ನನ್ನ ತಲೆಗೆ ಎಣ್ಣೆ ಹಚ್ಚಲಿಲ್ಲ; ಇವಳಾದರೋ ಸುಗಂಧ ತೈಲವನ್ನು ಕಾಲಿಗೆ ಹಚ್ಚಿದಳು.


ಇದನ್ನು ಹೇಳಿ ಆಕೆ ಹೋಗಿ ತನ್ನ ತಂಗಿಯಾದ ಮರಿಯಳನ್ನು ಗುಪ್ತವಾಗಿ ಕರೆದು, “ಗುರುವು ಬಂದಿದ್ದಾರೆ, ನಿನ್ನನ್ನು ಕರೆಯುತ್ತಿದ್ದಾರೆ” ಎಂದಳು.


ನಿನ್ನ ತೈಲವು ಸುಗಂಧ; ನಿನ್ನ ಹೆಸರು ಸುರಿದ ತೈಲದ ಸುಗಂಧದಂತೆ ವ್ಯಾಪಿಸಿರುವುದರಿಂದ, ತರುಣಿಯರು ನಿನ್ನನ್ನು ಪ್ರೀತಿಸುವರು.


ರಾಜನು ಔತಣದಲ್ಲಿದ್ದಾಗ ಇತ್ತ ನನ್ನ ಸುಗಂಧತೈಲವು ಪರಿಮಳವನ್ನು ಬೀರುತ್ತಿತ್ತು.


ಯಾಕೋಬನ ಶೂರನಾದ ಯೆಹೋವನಿಗಾಗಿ ಒಂದು ವಾಸಸ್ಥಾನವನ್ನು ಏರ್ಪಡಿಸುವ ತನಕ,


ಪ್ರಿಯಳೇ, ವಧುವೇ, ನಿನ್ನ ಪ್ರೀತಿ ಅದೆಷ್ಟೋ ರಮ್ಯ! ನಿನ್ನ ಪ್ರೇಮ ದ್ರಾಕ್ಷಾರಸಕ್ಕಿಂತ ಎಷ್ಟೋ ಉತ್ತಮ! ನಿನ್ನ ತೈಲದ ಪರಿಮಳ ಸಕಲಸುಗಂಧ ದ್ರವ್ಯಗಳಿಗಿಂತ ಎಷ್ಟೋ ಮನೋಹರ!


ಆದರೆ ಅಗತ್ಯವಾದದ್ದು ಒಂದೇ, ಮರಿಯಳು ಆ ಉತ್ತಮ ಭಾಗವನ್ನು ಆರಿಸಿಕೊಂಡಿದ್ದಾಳೆ, ಅದು ಆಕೆಯಿಂದ ತೆಗೆಯಲ್ಪಡುವುದಿಲ್ಲ” ಎಂದು ಉತ್ತರಕೊಟ್ಟನು.


ಇದಲ್ಲದೆ ಮೊದಲು ಒಂದು ಸಾರಿ ರಾತ್ರಿ ವೇಳೆಯಲ್ಲಿ ಯೇಸುವಿನ ಬಳಿಗೆ ಬಂದಿದ್ದ ನಿಕೊದೇಮನು ಸಹ ರಕ್ತಬೋಳ ಅಗರುಗಳನ್ನು ಕಲಸಿದ ಚೂರ್ಣವನ್ನು ನೂರು ಸೇರಿನಷ್ಟು ತೆಗೆದುಕೊಂಡು ಅಲ್ಲಿಗೆ ಬಂದನು.


ಅವಳನ್ನು ಅಡಗಿಸುವವನು ಗಾಳಿಯನ್ನು ಅಡಗಿಸುವನು, ಅವಳನ್ನು ಹಿಡಿಯುವ ಬಲಗೈ ಜಿಡ್ಡಿನ ವಸ್ತುವನ್ನು ಹಿಡಿಯುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು