Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 12:38 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

38 ಇದರಿಂದ, ಪ್ರವಾದಿಯಾದ ಯೆಶಾಯನು ನುಡಿದ ಮಾತು ನೆರವೇರಿತು, ಅದೇನೆಂದರೆ, “ಕರ್ತನೇ, ನಮ್ಮ ಉಪದೇಶವನ್ನು ಯಾರು ನಂಬಿದರು? ಕರ್ತನ ಭುಜ ಬಲವು ಯಾರಿಗೆ ಗೋಚರವಾಯಿತು?” ಎಂಬುದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

38 ಹೀಗೆ ಯೆಶಾಯ ಪ್ರವಾದಿಯ ಈ ಮಾತು ನೆರವೇರಿತು: “ಸರ್ವೇಶ್ವರಾ, ನಮ್ಮ ಸಂದೇಶವನ್ನು ನಂಬಿದವರಾರು? ದೇವರ ಶಕ್ತಿಸಾಮರ್ಥ್ಯ ಗೋಚರವಾದುದು ಯಾರಿಗೆ?”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

38 ಇದರಿಂದ ಪ್ರವಾದಿಯಾದ ಯೆಶಾಯನು ನುಡಿದ ಮಾತು ನೆರವೇರಿತು; ಅದೇನಂದರೆ - ಕರ್ತನೇ, ನಮ್ಮ ಉಪದೇಶವನ್ನು ಯಾರು ನಂಬಿದರು? ಕರ್ತನ ಬಾಹುವು ಯಾರಿಗೆ ಗೋಚರವಾಯಿತು? ಎಂಬದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

38 ಇದರಿಂದಾಗಿ, ಪ್ರವಾದಿಯಾದ ಯೆಶಾಯನು ಹೇಳಿದ್ದ ಮಾತುಗಳು ನೆರವೇರಿದವು. ಅದೇನೆಂದರೆ: “ಪ್ರಭುವೇ, ನಾವು ಹೇಳಿದ ಸಂಗತಿಗಳನ್ನು ಯಾರು ನಂಬಿದರು? ಪ್ರಭುವಿನ ಬಾಹುಬಲವು ಯಾರಿಗೆ ಗೋಚರವಾಯಿತು?”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

38 ಇದರಿಂದ, “ಸ್ವಾಮೀ, ನಮ್ಮ ಸುದ್ದಿಯನ್ನು ಯಾರು ನಂಬಿದರು? ಕರ್ತ ಆಗಿರುವವರ ಬಾಹುವು ಯಾರಿಗೆ ಪ್ರಕಟವಾಯಿತು?” ಎಂದು ಪ್ರವಾದಿ ಯೆಶಾಯನು ನುಡಿದದ್ದು ನೆರವೇರಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

38 ಅಶೆ ತೆಂಕಾ ಇಸಾಯಿಯಾ ಪ್ರವಾದ್ಯಾನ್ “ಸರ್ವೆಸ್ವರಾ, ಮಿಯಾ ಸಾಂಗಲ್ಲ್ಯಾ ಖಬ್ರೆ ವರ್ತಿ ಕೊನ್ ವಿಶ್ವಾಸ್ ಕರ್‍ತಾ? ಸರ್ವೆಸ್ವರ್ ಅಪ್ನಾಚಿ ತಾಕತ್ ಕೊನಾಚ್ಯಾ ವರ್ತಿ ದಾಕುನ್ ದಿತಾ” ಮನುನ್ ಸಾಂಗಲ್ಲೆ ಪುರಾ ಹೊಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 12:38
24 ತಿಳಿವುಗಳ ಹೋಲಿಕೆ  

ನಾವು ಕೇಳಿದ ಸಂಗತಿಯನ್ನು ನಮ್ಮಲ್ಲಿ ಯಾರು ನಂಬಿದ್ದರು? ಯೆಹೋವನ ಬಾಹುವು ಯಾರಿಗೆ ಗೋಚರವಾಗಿತ್ತು?


ಆದರೂ ಆ ಶುಭವರ್ತಮಾನಕ್ಕೆ ಎಲ್ಲರೂ ಕಿವಿಗೊಡಲಿಲ್ಲ. ಈ ವಿಷಯದಲ್ಲಿ ಯೆಶಾಯನು, “ಕರ್ತನೇ, ನಾವು ಸಾರಿದ ಸುವಾರ್ತೆಯನ್ನು ಯಾರು ನಂಬಿದರು?” ಎಂದು ನುಡಿಯುತ್ತಾನೆ.


ಇದಲ್ಲದೆ ಯೆಶಾಯನು ಧೈರ್ಯವಾಗಿ ಮಾತನಾಡಿ, “ನನ್ನನ್ನು ಹುಡುಕದವರಿಗೂ ನಾನು ಸಿಕ್ಕಿದೆನು, ನನ್ನನ್ನು ಕೇಳದವರಿಗೆ ನಾನು ಪ್ರತ್ಯಕ್ಷನಾದೆನು,” ಎಂದು ಹೇಳುತ್ತಾನೆ.


ಆದರೆ ದೇವರಿಂದ ಕರಿಸಿಕೊಂಡವರಾದ ಯೆಹೂದ್ಯರಿಗಾಗಲಿ, ಗ್ರೀಕರಿಗಾಗಲಿ ಕ್ರಿಸ್ತನೇ ದೇವರ ಶಕ್ತಿಯೂ ಮತ್ತು ದೇವರ ಜ್ಞಾನವೂ ಆಗಿರುವಾತನೆಂದು ನಾವು ಸಾರುತ್ತೇವೆ.


ತನ್ನ ಮಗನನ್ನು ನನ್ನೊಳಗೆ ಪ್ರಕಟಪಡಿಸುವುದಕ್ಕೆ ಮತ್ತು ಅನ್ಯಜನರಲ್ಲಿ ಆತನನ್ನು ನಾನು ಪ್ರಸಿದ್ಧಿಪಡಿಸುವವನಾಗಬೇಕೆಂದು ಇಚ್ಛಿಸಿದನು. ನಾನು ಕೂಡಲೇ ಮನುಷ್ಯರ ಆಲೋಚನೆಯನ್ನು ಕೇಳದೆ,


ಅದಕ್ಕೆ ಯೇಸು, “ಯೋನನ ಮಗನಾದ ಸೀಮೋನನೇ, ನೀನು ಧನ್ಯನು. ಏಕೆಂದರೆ ಇದು ಮನುಷ್ಯನಿಂದ ನಿನಗೆ ಪ್ರಕಟವಾಗಿಲ್ಲ, ಪರಲೋಕದಲ್ಲಿರುವ ನನ್ನ ತಂದೆಯೇ ಇದನ್ನೂ ನಿನಗೆ ಪ್ರಕಟಪಡಿಸಿರುವನು” ಎಂದು ಹೇಳಿದನು.


ನಮ್ಮ ಪೂರ್ವಿಕರಿಗೆ ಕತ್ತಿಯೇ ಈ ದೇಶವನ್ನು ಸ್ವಾಧೀನಮಾಡಿಕೊಡಲಿಲ್ಲ; ನಿನ್ನ ಭುಜಬಲ, ಬಲಗೈ ಮತ್ತು ಪ್ರಸನ್ನತೆ ಅವರಿಗೆ ಜಯವನ್ನು ಉಂಟುಮಾಡಿದವು; ನಿನ್ನ ಸಹಾಯ ಸದಾಕಾಲ ಅವರಿಗಿತ್ತಲ್ಲಾ.


ಈ ಕಾರಣದಿಂದ ಅರಸನಾದ ಹಿಜ್ಕೀಯನು ಹಾಗು ಆಮೋಚನ ಮಗನಾದ ಯೆಶಾಯನೆಂಬ ಪ್ರವಾದಿಯು ಪರಲೋಕದ ದೇವರಿಗೆ ಮೊರೆಯಿಟ್ಟು ಪ್ರಾರ್ಥಿಸಿದರು.


ಆಮೇಲೆ ಅವರು, “ನಾವು ಇದನ್ನು ಹರಿಯಬಾರದು ಚೀಟು ಹಾಕಿ, ಇದು ಯಾರಿಗೆ ಬರುವುದೋ ನೋಡೋಣ” ಎಂದು ಮಾತನಾಡಿಕೊಂಡರು. ಇದರಿಂದ “ನನ್ನ ಬಟ್ಟೆಗಳನ್ನು ತಮ್ಮಲ್ಲಿ ಪಾಲುಮಾಡಿಕೊಂಡರು. ನನ್ನ ಅಂಗಿಗೋಸ್ಕರ ಚೀಟು ಹಾಕಿದರು” ಎಂಬ ಧರ್ಮಶಾಸ್ತ್ರದ ಮಾತು ನೆರವೇರಿತು. ಸಿಪಾಯಿಗಳು ಇದನ್ನೆಲ್ಲಾ ಮಾಡಿದರು.


ನಾನು ಇವರ ಜೊತೆ ಇದ್ದಾಗ ನೀನು ನನಗೆ ಕೊಟ್ಟ ನಿನ್ನ ಹೆಸರಿನಲ್ಲಿ ಇವರನ್ನು ಕಾಪಾಡಿ ಸಂರಕ್ಷಿಸಿದೆನು. ಧರ್ಮಶಾಸ್ತ್ರದ ಮಾತು ನೆರವೇರುವಂತೆ ನಾಶಕ್ಕಾಗಿ ಹುಟ್ಟಿದವನೇ ಹೊರತು ಇವರಲ್ಲಿ ಒಬ್ಬನೂ ನಾಶವಾಗಲಿಲ್ಲ.


‘ಅವರು ನನ್ನನ್ನು ನಿಷ್ಕಾರಣವಾಗಿ ದ್ವೇಷಿಸಿದರು’ ಎಂದು ಅವರ ಧರ್ಮಶಾಸ್ತ್ರದಲ್ಲಿ ಬರೆದಿರುವ ಮಾತು ನೆರವೇರುವಂತೆ ಹೀಗಾಯಿತು.


ಕಪಟಿಗಳೇ, ನಿಮ್ಮ ಕುರಿತು ಯೆಶಾಯನು ಸರಿಯಾಗಿ ಪ್ರವಾದಿಸಿ, ಅವನು ಹೇಳಿರುವುದೇನೆಂದರೆ,


ಯೆಹೋವನ ಭುಜವೇ, ಎಚ್ಚರಗೊಳ್ಳು, ಎಚ್ಚರಗೊಂಡು, ಬಲವನ್ನು ತಂದುಕೋ! ಪೂರ್ವಕಾಲದಲ್ಲಿ, ತಲಾಂತರಗಳಲ್ಲಿ, ಎಚ್ಚರಗೊಂಡಂತೆ ಈಗಲೂ ಎಚ್ಚೆತ್ತುಕೋ, ರಹಬನ್ನು ಛೇದಿಸಿ ಘಟಸರ್ಪವನ್ನು ತಿವಿದುಬಿಟ್ಟವನು ನೀನಲ್ಲವೋ?


ನನ್ನ ರಕ್ಷಣಾಧರ್ಮದ ಕಾರ್ಯವು ಸಮೀಪಿಸಿದೆ, ನನ್ನ ವಿಮೋಚನಕ್ರಿಯೆಯು ತಲೆದೋರಿದೆ, ನನ್ನ ಹಸ್ತವು ಜನಾಂಗಗಳಿಗೆ ನ್ಯಾಯತೀರಿಸುವುದು, ದ್ವೀಪನಿವಾಸಿಗಳು ನನ್ನನ್ನು ನಿರೀಕ್ಷಿಸಿಕೊಂಡು ನನ್ನ ಹಸ್ತಕಾರ್ಯಕ್ಕೆ ಕಾದಿರುವರು.


ಬಳಿಕ ಅವರು ಆತನನ್ನು ಶಿಲುಬೆಗೆ ಹಾಕಿ ಆತನ ಬಟ್ಟೆಗಳಿಗಾಗಿ ಚೀಟು ಹಾಕಿ ಪಾಲುಮಾಡಿಕೊಂಡರು;


ಯೇಸು ಅನೇಕ ಸೂಚಕಕಾರ್ಯಗಳನ್ನು ಅವರ ಎದುರಿನಲ್ಲಿ ಮಾಡಿದರೂ ಅವರು ಆತನನ್ನು ನಂಬಲಿಲ್ಲ.


ಅವರು ನಂಬಲಾರದೇ ಹೋದುದ್ದಕ್ಕೆ ಯೆಶಾಯನು ಮತ್ತೊಂದು ಮಾತಿನಲ್ಲಿ ಕಾರಣವನ್ನು ಸೂಚಿಸಿದ್ದಾನೆ, ಅದೇನೆಂದರೆ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು