Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 12:39 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

39 ಅವರು ನಂಬಲಾರದೇ ಹೋದುದ್ದಕ್ಕೆ ಯೆಶಾಯನು ಮತ್ತೊಂದು ಮಾತಿನಲ್ಲಿ ಕಾರಣವನ್ನು ಸೂಚಿಸಿದ್ದಾನೆ, ಅದೇನೆಂದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

39 ಜನರು ವಿಶ್ವಾಸಿಸದೆ ಹೋದುದಕ್ಕೆ ಯೆಶಾಯನು ಮತ್ತೊಂದು ವಚನದಲ್ಲಿ ಕಾರಣವನ್ನು ಸೂಚಿಸಿದ್ದಾನೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

39 ಅವರು ನಂಬಲಾರದೆ ಹೋದದ್ದಕ್ಕೆ ಯೆಶಾಯನು ಮತ್ತೊಂದು ಮಾತಿನಲ್ಲಿ ಕಾರಣವನ್ನು ಸೂಚಿಸಿದ್ದಾನೆ; ಅದೇನಂದರೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

39 ಆದಕಾರಣವೇ ಜನರು ನಂಬಲಾಗಲಿಲ್ಲ. ಏಕೆಂದರೆ ಯೆಶಾಯನು ಮತ್ತೊಂದು ಕಡೆಯಲ್ಲಿ ಹೀಗೆ ಹೇಳಿದ್ದಾನೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

39 ಅವರು ನಂಬಲಾರದೆ ಹೋದದ್ದರಿಂದ ಯೆಶಾಯನು ಮತ್ತೊಂದು ಕಡೆ ಹೇಳಿದ್ದೇನೆಂದರೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

39 ಅಶೆಚ್ ತೆನಿಬಿ ವಿಶ್ವಾಸ್ ಕರುಕ್ನಾತ್ ಕಶ್ಯಾಕ್ ಮಟ್ಲ್ಯಾರ್ ಇಸಾಯಿಯಾ ಪ್ರವಾದ್ಯಾನ್,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 12:39
8 ತಿಳಿವುಗಳ ಹೋಲಿಕೆ  

ಇವರು ವ್ಯಭಿಚಾರಿಣಿಯನ್ನು ಕಂಡು ಆನಂದಿಸುವವರೂ, ಪಾಪವನ್ನು ಕಂಡು ತೃಪ್ತಿಹೊಂದದ ಕಣ್ಣುಳ್ಳವರೂ, ಚಂಚಲತೆ ಮನಸ್ಸುವುಳ್ಳವರನ್ನು ಮರುಳುಗೊಳಿಸುವವರೂ, ಹಣದಾಸೆಯಲ್ಲಿ ಪರಿಣಿತಿ ಪಡೆದ ಹೃದಯವುಳ್ಳವರೂ, ಶಾಪಗ್ರಸ್ತ ಮಕ್ಕಳೂ ಆಗಿದ್ದಾರೆ.


ನಾನು ಮಾಡಿದ್ದರಿಂದ ನೀವು ನನ್ನನ್ನು ನಂಬದೆ ಇದ್ದರೂ, ಈ ಕಾರ್ಯಗಳನ್ನಾದರೂ ನಂಬಿರಿ. ಆಗ ನನ್ನಲ್ಲಿ ತಂದೆಯು ಇದ್ದಾನೆಂತಲೂ, ತಂದೆಯಲ್ಲಿ ನಾನು ಇದ್ದೇನೆಂತಲೂ ನಿಮಗೆ ತಿಳಿಯುವುದು ಮತ್ತು ಮನದಟ್ಟಾಗುವುದು” ಎಂದನು.


ಒಬ್ಬನೇ ದೇವರಿಂದ ಬರುವ ಮಹಿಮೆಯನ್ನು ಅಪೇಕ್ಷಿಸದೇ ನಿಮ್ಮ ನಿಮ್ಮೊಳಗೇ ಪ್ರಶಂಸೆಯನ್ನು ಸ್ವೀಕರಿಸುವವರಾದ ನೀವು ಅದನ್ನು ನಂಬಲು ಹೇಗೆ ಸಾಧ್ಯ?


“ನನ್ನನ್ನು ಕಳುಹಿಸಿಕೊಟ್ಟಂಥ ತಂದೆಯು ಸೆಳೆಯದ ಹೊರತು, ಯಾವನೂ ನನ್ನ ಬಳಿಗೆ ಬರಲಾರನು, ಮತ್ತು ನಾನು ಅವನನ್ನು ಕಡೆ ದಿನದಲ್ಲಿ ಎಬ್ಬಿಸುವೆನು.


ಇದರಿಂದ, ಪ್ರವಾದಿಯಾದ ಯೆಶಾಯನು ನುಡಿದ ಮಾತು ನೆರವೇರಿತು, ಅದೇನೆಂದರೆ, “ಕರ್ತನೇ, ನಮ್ಮ ಉಪದೇಶವನ್ನು ಯಾರು ನಂಬಿದರು? ಕರ್ತನ ಭುಜ ಬಲವು ಯಾರಿಗೆ ಗೋಚರವಾಯಿತು?” ಎಂಬುದೇ.


“ಅವರು ಕಣ್ಣಿನಿಂದ ಕಾಣದೆ, ಹೃದಯದಿಂದ ಗ್ರಹಿಸದೆ ಮತ್ತು ತಿರುಗಿಕೊಂಡು ನನ್ನಿಂದ ಹೇಗೂ ಸ್ವಸ್ಥತೆಯನ್ನು ಹೊಂದದೆ ಇರುವಂತೆ, ಆತನು ಅವರ ಕಣ್ಣುಗಳನ್ನು ಕುರುಡುಮಾಡಿ ಅವರ ಹೃದಯವನ್ನು ಕಠಿಣಮಾಡಿದನು” ಎಂಬುದೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು