Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 12:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಅವನು ಬಡವರ ಮೇಲಿನ ಕನಿಕರದಿಂದ ಹೀಗೆ ಹೇಳಲಿಲ್ಲ. ಆದರೆ ಅವನು ಕಳ್ಳನಾಗಿದ್ದು ಹಣದ ಚೀಲವನ್ನು ತನ್ನ ಬಳಿಯಲ್ಲಿ ಇಟ್ಟುಕೊಂಡಿರಲಾಗಿ ಅದರಲ್ಲಿ ಹಾಕಿದ್ದನ್ನು ತನ್ನ ಸ್ವಂತ ಉಪಯೋಗಕ್ಕಾಗಿ ತೆಗೆದುಕೊಳ್ಳುತ್ತಿದ್ದನು, ಆದುದರಿಂದಲೇ ಹೀಗೆ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಬಡವರ ಹಿತಚಿಂತನೆಯಿಂದೇನೂ ಅವನು ಹೀಗೆ ಹೇಳಲಿಲ್ಲ. ತನ್ನ ವಶದಲ್ಲಿ ಇಡಲಾಗಿದ್ದ ಹಣದ ಚೀಲದಿಂದ ಸ್ವಂತ ಉಪಯೋಗಕ್ಕಾಗಿ ಬಳಸುತ್ತಿದ್ದ ಕಳ್ಳ ಅವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಅವನು ಬಡವರಿಗೋಸ್ಕರ ಚಿಂತಿಸಿ ಇದನ್ನು ಹೇಳಲಿಲ್ಲ; ಅವನು ಕಳ್ಳನಾಗಿದ್ದು ತನ್ನ ವಶದಲ್ಲಿದ್ದ ಅವರ ಹಣದ ಚೀಲದಲ್ಲಿ ಹಾಕಿದ್ದನ್ನು ತಕ್ಕೊಳ್ಳುವವನಾಗಿದ್ದದರಿಂದಲೇ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಆದರೆ ಯೂದನಿಗೆ ಬಡವರ ಬಗ್ಗೆ ನಿಜವಾಗಿಯೂ ಚಿಂತೆಯಿರಲಿಲ್ಲ. ಅವನು ಕಳ್ಳನಾಗಿದ್ದುದರಿಂದ ಹಾಗೆ ಹೇಳಿದನು. ಶಿಷ್ಯಸಮುದಾಯಕ್ಕೋಸ್ಕರವಿದ್ದ ಹಣದ ಪೆಟ್ಟಿಗೆಯು ಅವನ ವಶದಲ್ಲಿತ್ತು. ಅವನು ಆಗಾಗ್ಗೆ ಆ ಪೆಟ್ಟಿಗೆಯಿಂದ ಹಣವನ್ನು ಕದ್ದುಕೊಳ್ಳುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಅವನು ಬಡವರ ಹಿತಚಿಂತನೆಯಿಂದ ಹೀಗೆ ಹೇಳಲಿಲ್ಲ. ಆದರೆ ಅವನು ಕಳ್ಳನಾಗಿದ್ದು, ಹಣದ ಚೀಲವನ್ನು ಇಟ್ಟುಕೊಂಡು ಅದರಲ್ಲಿ ಹಾಕಿದ್ದನ್ನು ಕದ್ದುಕೊಳ್ಳುತ್ತಿದ್ದನು. ಆದ್ದರಿಂದಲೇ ಇದನ್ನು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ತೆಕಾ ಗರಿಬಾಂಚಿ ಕಾಳ್ಜಿ ಹೊತ್ತಿ ಮನುನ್ ತೆನಿ ಅಶೆಚ್ ಸಾಂಗುಕ್ನಾ, ಕಶ್ಯಾಕ್ ಮಟ್ಲ್ಯಾರ್ ತೊ ಎಕ್ ಚೊರ್ ಹೊತ್ತೊ. ತೆಚೆಕ್ಡೆ ಪೈಶಾಂಚಿ ಪಿಶ್ವಿ ಹೊತ್ತಿ ಅನಿ ತ್ಯಾತುರ್‍ಲೆ ಪೈಸೆ ತೊ ಅಪ್ನಾಚ್ಯಾ ಸ್ವತಾಚ್ಯಾ ಕಾಮಾಸಾಟ್ನಿ ವಾಪ್ರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 12:6
19 ತಿಳಿವುಗಳ ಹೋಲಿಕೆ  

ಅವರಲ್ಲಿ ಕೆಲವರು, ಯೂದನ ವಶದಲ್ಲಿ ಹಣದ ಚೀಲವಿದ್ದುದರಿಂದ ಯೇಸು ಅವನಿಗೆ “ಹಬ್ಬಕ್ಕೆ ನಮಗೆ ಅಗತ್ಯವಾದವುಗಳನ್ನು ಕೊಂಡುಕೋ ಎಂದೋ, ಅಥವಾ ಬಡವರಿಗೆ ಏನಾದರೂ ಕೊಡು ಎಂದೋ, ಯೇಸು ಅವನಿಗೆ ಹೇಳುತ್ತಾನೆ” ಎಂದು ಅಂದುಕೊಂಡರು.


ನೀವಾದರೋ ಬಡವರನ್ನು ಅವಮಾನಪಡಿಸಿದ್ದೀರಿ. ನಿಮ್ಮನ್ನು ಬಾಧಿಸಿ ನ್ಯಾಯಸ್ಥಾನದ ಮುಂದೆ ಎಳೆದುಕೊಂಡು ಹೋಗುವವರು ಐಶ್ವರ್ಯವಂತರಲ್ಲವೋ?


ಹೇಗೆಂದರೆ ಒಬ್ಬ ಮನುಷ್ಯನು ಚಿನ್ನದ ಉಂಗುರಗಳನ್ನು ಮತ್ತು ಉತ್ತಮವಾದ ವಸ್ತ್ರಗಳನ್ನೂ ಹಾಕಿಕೊಂಡು ನಿಮ್ಮ ಸಭೆಯೊಳಗೆ ಬಂದಾಗ ಮತ್ತು ಒಬ್ಬ ಬಡ ಮನುಷ್ಯನು ಕೊಳಕು ಬಟ್ಟೆಗಳನ್ನು ಧರಿಸಿಕೊಂಡು ಬಂದಾಗ,


ಸಕಲವಿಧವಾದ ಕೆಟ್ಟತನಕ್ಕೆ ದೂರವಾಗಿರಿ.


ಆದರೆ ನೀವು ನಮ್ಮಲ್ಲಿರುವ ಬಡವರನ್ನು ಮರೆಯಬಾರದೆಂಬ ಒಂದೇ ಸಂಗತಿಯನ್ನು ಬೇಡಿಕೊಂಡರು, ಹಾಗೆ ಮಾಡುವುದರಲ್ಲಿ ನಾನೂ ಆಸಕ್ತನಾಗಿದ್ದೆನು.


ಲೋಭಿಗಳು, ಕುಡುಕರು, ಜಗಳಮಾಡುವವರು, ಸುಲುಕೊಳ್ಳುವವರು ಇವರೊಳಗೆ ಒಬ್ಬರಾದರೂ ದೇವರ ರಾಜ್ಯಕ್ಕೆ ಬಾಧ್ಯರಾಗುವುದಿಲ್ಲ.


ಅವನು ಕೇವಲ ಕೂಲಿಯಾಳಾಗಿರುವುದರಿಂದ, ಕುರಿಗಳ ಚಿಂತೆ ಅವನಿಗಿಲ್ಲದೆ ಓಡಿ ಹೋಗುತ್ತಾನೆ.


ಆತನು ಅವರಿಗೆ, “‘ನನ್ನ ಮನೆಯು ಪ್ರಾರ್ಥನಾಲಯವಾಗಿದೆ’ ಎಂದು ಬರೆದಿದೆ; ಆದರೆ ನೀವು ಅದನ್ನು ಕಳ್ಳರ ಗವಿ ಮಾಡುತ್ತಿದ್ದೀರಿ” ಎಂದು ಹೇಳಿದನು.


ಶ್ರದ್ಧೆ ಇರುವ ನನ್ನ ಭಕ್ತರಂತೆ ಅವರು ನಿನ್ನ ಬಳಿಗೆ ಬಂದು, ನಿನ್ನ ಮುಂದೆ ಕುಳಿತುಕೊಂಡು ನಿನ್ನ ಮಾತುಗಳನ್ನು ಕೇಳುತ್ತಾರೆ, ಆದರೆ ಕೈಗೊಳ್ಳುವುದಿಲ್ಲ; ಬಾಯಿಂದ ಬಹುಪ್ರೀತಿಯನ್ನು ತೋರಿಸುತ್ತಾರೆ. ಅವರ ಮನಸ್ಸೋ ತಾವು ದೋಚಿಕೊಂಡದರ ಮೇಲೆ ಇರುತ್ತದೆ.


ಶಿಷ್ಟನು ಬಡವರ ನ್ಯಾಯವನ್ನು ತಿಳಿದಿರುವನು, ದುಷ್ಟನಿಗೆ ಅದನ್ನು ಗ್ರಹಿಸುವಷ್ಟು ವಿವೇಕವಿಲ್ಲ.


ದುರ್ಮತಿಗಳು ತಮ್ಮ ಮನಸ್ಸಿನಲ್ಲಿ, “ದೇವರೇ ಇಲ್ಲ” ಎಂದು ಅಂದುಕೊಳ್ಳುತ್ತಾರೆ; ಅವರು ಕೆಟ್ಟುಹೋದವರು; ಹೇಯವಾದ ಅಕ್ರಮಗಳನ್ನು ನಡೆಸುತ್ತಾರೆ. ಅವರಲ್ಲಿ ಒಳ್ಳೆಯದನ್ನು ಮಾಡುವವರೇ ಇಲ್ಲ.


ಹೆರೋದನ ಮನೆಯ ಮೇಲ್ವಿಚಾರಕನಾಗಿದ್ದ ಕೂಜನ ಹೆಂಡತಿ ಯೋಹಾನಳು, ಸುಸನ್ನಳು, ಇನ್ನು ಬೇರೆ ಅನೇಕರು. ಇವರು ತಮ್ಮ ಸ್ವಂತ ಆಸ್ತಿಯಿಂದ ಅವರಿಗೆ ಉಪಚಾರಮಾಡುತ್ತಿದ್ದರು.


“ಈ ತೈಲವನ್ನು ಮುನ್ನೂರು ಬೆಳ್ಳಿನಾಣ್ಯಕ್ಕೆ ಮಾರಿ ಬಡವರಿಗೆ ಕೊಡಬಹುದಿತ್ತಲ್ಲಾ?” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು