ಯೋಹಾನ 13:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಪಸ್ಕಹಬ್ಬದ ಹಿಂದಿನ ದಿನ ಯೇಸು, ತಾನು ಈ ಲೋಕವನ್ನು ಬಿಟ್ಟು ತಂದೆಯ ಬಳಿಗೆ ಹೋಗಬೇಕಾದ ತನ್ನ ಗಳಿಗೆ ಬಂದಿತೆಂದು ತಿಳಿದುಕೊಂಡು, ಈ ಲೋಕದಲ್ಲಿರುವ ತನ್ನವರನ್ನು ಪ್ರೀತಿಸಿ, ಅವರನ್ನು ಕೊನೆಯವರೆಗೂ ಪ್ರೀತಿಸುತ್ತಾ ಬಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಅಂದು ಪಾಸ್ಕಹಬ್ಬದ ಹಿಂದಿನ ದಿನ. ತಾವು ಈ ಲೋಕವನ್ನು ಬಿಟ್ಟು ಪಿತನ ಬಳಿಗೆ ಹೋಗಬೇಕಾದ ಗಳಿಗೆ ಬಂದಿರುವುದು ಎಂದು ಯೇಸು ಸ್ವಾಮಿಗೆ ತಿಳಿದಿತ್ತು. ಈ ಲೋಕದಲ್ಲಿದ್ದ ತಮ್ಮವರನ್ನು ಯಾವಾಗಲೂ ಪ್ರೀತಿಸುತ್ತಿದ್ದ ಅವರು ಆ ಪ್ರೀತಿಯ ಪರಮಾವಧಿಯನ್ನು ಈಗ ತೋರಿಸಲಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಪಸ್ಕಹಬ್ಬದ ಮುಂದೆ ಯೇಸು ತಾನು ಈ ಲೋಕವನ್ನು ಬಿಟ್ಟು ತಂದೆಯ ಬಳಿಗೆ ಹೋಗಬೇಕಾದ ಕಾಲ ಬಂತೆಂದು ತಿಳುಕೊಂಡು ಲೋಕದಲ್ಲಿರುವ ತನ್ನವರನ್ನು ಪ್ರೀತಿಸಿ ಪರಿಪೂರ್ಣವಾಗಿ ಅವರನ್ನು ಪ್ರೀತಿಸುತ್ತಾ ಬಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಯೆಹೂದ್ಯರ ಪಸ್ಕಹಬ್ಬವು ಬಹು ಸಮೀಪವಾಗಿತ್ತು. ತಾನು ಈ ಲೋಕವನ್ನು ಬಿಟ್ಟು ತಂದೆಯ ಬಳಿಗೆ ಹೋಗುವ ಸಮಯ ಬಂದಿರುವುದಾಗಿ ಯೇಸುವಿಗೆ ತಿಳಿದಿತ್ತು. ಈ ಲೋಕದಲ್ಲಿದ್ದ ತನ್ನವರನ್ನು ಆತನು ಯಾವಾಗಲೂ ಪ್ರೀತಿಸುತ್ತಿದ್ದನು. ಈಗಲಾದರೋ ಅವರ ಮೇಲೆ ತನಗಿರುವ ಅಪಾರ ಪ್ರೀತಿಯನ್ನು ತೋರಿಸುವ ಕಾಲ ಆತನಿಗೆ ಬಂದಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಅಂದು ಪಸ್ಕಹಬ್ಬದ ಹಿಂದಿನ ದಿನವಾಗಿತ್ತು. ಯೇಸು ತಾವು ಈ ಲೋಕವನ್ನು ಬಿಟ್ಟು ತಂದೆಯ ಬಳಿಗೆ ಹೋಗಬೇಕಾದ ಸಮಯ ಬಂತೆಂದು ತಿಳಿದು, ಈ ಲೋಕದಲ್ಲಿದ್ದ ತಮ್ಮವರನ್ನು ಪ್ರೀತಿಸುತ್ತಿದ್ದ ಆ ಪ್ರೀತಿಯ ಪರಿಪೂರ್ಣತೆಯನ್ನು ಈಗ ತೋರಿಸಲಿದ್ದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್1 ಪಾಸ್ಕಾಚ್ಯಾ ಸನಾಚ್ಯಾ ಅದ್ಲೊ ದಿಸ್ ತೊ, ಜೆಜುಕ್ ಅನಿ ಜುವಾಂವ್ ಅಪ್ನಿ ಹ್ಯೊ ಜಗ್ ಸೊಡುನ್ ಬಾಬಾಕ್ಡೆ ಜಾತಲೊ ಎಳ್ ಯೆಲೊ ಮನುನ್ ಗೊತ್ತ್ ಹೊತ್ತೆ, ಹ್ಯಾ ಜಗಾತ್ ಅಪ್ನಾಚೆ ಸ್ವತಾಚೆ ಮನುನ್ ಹೊತ್ತ್ಯಾಂಚೊ ತೆನಿ ಲೈ ಪ್ರೆಮ್ ಕರ್‍ತಲೊ ತೆನಿ ಸೊಡುಕ್ನಾ. ಅಧ್ಯಾಯವನ್ನು ನೋಡಿ |