Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 13:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಯೇಸು ಅವನಿಗೆ, “ಸ್ನಾನಮಾಡಿಕೊಂಡವನಿಗೆ ತನ್ನ ಪಾದಗಳನ್ನು ಮಾತ್ರ ತೊಳೆದುಕೊಂಡರೆ ಸಾಕು, ಅವನು ಸಂಪೂರ್ಣವಾಗಿ ಶುದ್ಧನಾಗಿದ್ದಾನೆ. ನೀವೂ ಶುದ್ಧರಾಗಿದ್ದೀರಿ. ಆದರೆ ನಿಮ್ಮಲ್ಲಿ ಎಲ್ಲರೂ ಶುದ್ಧರಲ್ಲ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಯೇಸು, “ಸ್ನಾನಮಾಡಿಕೊಂಡವನು ಕಾಲುಗಳನ್ನು ತೊಳೆದುಕೊಂಡರೆ ಸಾಕು, ಅವನ ಮೈಯೆಲ್ಲಾ ಶುದ್ಧವಾಗಿರುತ್ತದೆ. ನೀವೂ ಕೂಡ ಶುದ್ಧರಾಗಿದ್ದೀರಿ. ಆದರೆ ನಿಮ್ಮಲ್ಲಿ ಎಲ್ಲರೂ ಶುದ್ಧರಲ್ಲ,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಯೇಸು ಅವನಿಗೆ - ಸ್ನಾನಮಾಡಿಕೊಂಡವನ ಕಾಲುಗಳನ್ನು ತೊಳೆಯುವದಲ್ಲದೆ ಬೇರೇನೂ ತೊಳೆಯಬೇಕಾಗಿರುವದಿಲ್ಲ, ಅವನ ಮೈಯೆಲ್ಲಾ ಶುದ್ಧವಾಗಿದೆ. ನೀವೂ ಶುದ್ಧರಾಗಿದ್ದೀರಿ; ಆದರೆ ನಿಮ್ಮಲ್ಲಿ ಎಲ್ಲರೂ ಶುದ್ಧರಲ್ಲವೆಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಯೇಸು, “ಸ್ನಾನಮಾಡಿಕೊಂಡವನ ದೇಹವೆಲ್ಲಾ ಶುದ್ಧವಾಗಿರುತ್ತದೆ. ಅವನು ತನ್ನ ಪಾದಗಳನ್ನು ತೊಳೆದುಕೊಂಡರೆ ಸಾಕು. ನೀವು ಸಹ ಶುದ್ಧರಾಗಿದ್ದೀರಿ, ಆದರೆ ನಿಮ್ಮಲ್ಲಿ ಪ್ರತಿಯೊಬ್ಬನೂ ಶುದ್ಧನಲ್ಲ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಯೇಸು ಅವನಿಗೆ, “ಸ್ನಾನಮಾಡಿಕೊಂಡವರು ತಮ್ಮ ಪಾದಗಳನ್ನು ಮಾತ್ರ ತೊಳೆದುಕೊಂಡರೆ ಸಾಕು. ಅವರು ಸಂಪೂರ್ಣವಾಗಿ ಶುದ್ಧರಾಗಿದ್ದಾರೆ. ನೀವು ಸಹ ಶುದ್ಧರಾಗಿದ್ದೀರಿ. ನಿಮ್ಮಲ್ಲಿ ಎಲ್ಲರೂ ಶುದ್ಧರಲ್ಲ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ತನ್ನಾ ಜೆಜುನ್ “ಪಾನಿ ನ್ಹಲ್ಲೆ ಪವಿತ್ರ್ ಹಾತ್ ತೆಂಚೆ ಪಾಯ್ ಎವ್ಡೆಚ್ ಧುಲ್ಯಾರ್ ಫಿರೆ ಸಗ್ಳೆ ಆಂಗುಚ್ ಧುತಲಿ ಗರಜ್ ನಾ. ಎಕ್ಲ್ಯಾಕ್ ಸೊಡುನ್ ತುಮಿ ಸಗ್ಳೆ ಜಾನಾ ಪವಿತ್ರ್ ಹಾಸಿ” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 13:10
23 ತಿಳಿವುಗಳ ಹೋಲಿಕೆ  

ನಾನು ನಿಮಗೆ ಹೇಳಿದ ವಾಕ್ಯದ ದೆಸೆಯಿಂದ ಈಗ ನೀವು ಶುದ್ಧರಾಗಿದ್ದೀರಿ.


ಆದ್ದರಿಂದ ಯಾವನಾದರೂ ಕ್ರಿಸ್ತನಲ್ಲಿದ್ದರೆ ಅವನು ನೂತನ ಸೃಷ್ಟಿಯಾಗಿದ್ದಾನೆ. ಇಗೋ, ಪೂರ್ವಸ್ಥಿತಿ ಹೋಗಿ ಎಲ್ಲಾ ನೂತನವಾಯಿತು.


ಪ್ರಿಯರೇ, ಈ ವಾಗ್ದಾನಗಳು ನಮಗಿರುವುದರಿಂದ, ನಾವು ದೇಹಾತ್ಮಗಳ ಕಲ್ಮಷವನ್ನು ತೊಲಗಿಸಿ ನಮ್ಮನ್ನು ಶುಚಿಮಾಡಿಕೊಂಡು ದೇವರ ಭಯದಿಂದ ಕೂಡಿದವರಾಗಿ ಪವಿತ್ರತೆಯ ಸಂಪೂರ್ಣತೆಗೆ ಪ್ರಯತ್ನಿಸೋಣ.


ಪಾಪವನ್ನೇ ಅರಿಯದ ಕ್ರಿಸ್ತ ಯೇಸುವನ್ನು ದೇವರು ನಮಗೋಸ್ಕರ ಪಾಪಸ್ವರೂಪಿಯನ್ನಾಗಿಸಿದರು. ಕ್ರಿಸ್ತ ಯೇಸುವಿನಲ್ಲಿ ನಾವು ನೀತಿವಂತರಾಗಬೇಕೆಂದು ದೇವರು ಹೀಗೆ ಮಾಡಿದರು.


ಅವುಗಳನ್ನು ಸುಟ್ಟವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಿಯೇ ಪಾಳೆಯದೊಳಗೆ ಬರಬೇಕು.


“ಅಜಾಜೇಲನಿಗೆ ಹೋತವನ್ನು ಬಿಟ್ಟುಬಂದವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಿಯೇ ಪಾಳೆಯಕ್ಕೆ ಬರಬೇಕು.


ಅನೇಕ ವಿಷಯಗಳಲ್ಲಿ ನಾವೆಲ್ಲರೂ ತಪ್ಪುಮಾಡುವವರಾಗಿದ್ದಾರೆ. ಒಬ್ಬನು ಮಾತಿನಲ್ಲಿ ತಪ್ಪಿ ನಡೆಯದಿದ್ದರೆ ಅವನು ಸರ್ವಸುಗುಣವುಳ್ಳವನೂ ತನ್ನ ಇಡೀ ದೇಹವನ್ನೆಲ್ಲಾ ಸ್ವಾಧೀನಪಡಿಸಿಕೊಳ್ಳುವುದಕ್ಕೆ ಸಮರ್ಥನೂ ಆಗಿದ್ದಾನೆ.


ಅವು ಅನ್ನಪಾನಗಳೂ ಮತ್ತು ವಿವಿಧ ಆಚರಣೆಗಳಿಗೂ ಒಳಪಟ್ಟಿರುವ ಸ್ನಾನಗಳು ಸಹಿತವಾಗಿ ದೇಹಕ್ಕೆ ಮಾತ್ರ ಸಂಬಂಧಪಟ್ಟ ನಿಯಮಗಳಾಗಿದ್ದು. ಇವು ಸುಧಾರಣೆಯ ಕಾಲದವರೆಗೆ ಮಾತ್ರ ನೇಮಕವಾಗಿದ್ದವು.


ಶಾಂತಿದಾಯಕನಾದ ದೇವರು ತಾನೇ ನಿಮ್ಮನ್ನು ಪರಿಪೂರ್ಣವಾಗಿ ಶುದ್ಧೀಕರಿಸಲಿ. ನಮ್ಮ ಕರ್ತನಾದ ಯೇಸು ಕ್ರಿಸ್ತನು ಹಿಂತಿರುಗಿ ಬರುವಾಗ ನಿಮ್ಮ ಆತ್ಮ, ಪ್ರಾಣ ಮತ್ತು ಶರೀರಗಳು ದೋಷವಿಲ್ಲದೆ ಪರಿಪೂರ್ಣವಾಗಿ ಕಾಣಿಸಿಕೊಳ್ಳುವಂತೆ ಕಾಪಾಡಲ್ಪಡಲಿ.


ನಮಗೆ ತಪ್ಪು ಮಾಡಿದವರನ್ನು ನಾವು ಕ್ಷಮಿಸಿದಂತೆ ನಮ್ಮ ತಪ್ಪುಗಳನ್ನು ಕ್ಷಮಿಸು.


ಆ ದಿನಗಳಲ್ಲಿ, ಆ ಕಾಲದಲ್ಲಿ ಇಸ್ರಾಯೇಲಿನ ಅಧರ್ಮವನ್ನು ಎಲ್ಲಿ ಹುಡುಕಿದರೂ ಇರುವುದೇ ಇಲ್ಲ; ಯೆಹೂದದ ಪಾಪವನ್ನು ಎಲ್ಲಿ ಹುಡುಕಿದರೂ ಸಿಕ್ಕುವುದೇ ಇಲ್ಲ; ನಾನು ಉಳಿಸುವ ಜನಶೇಷವನ್ನು ಕ್ಷಮಿಸುವೆನಲ್ಲವೆ. ಇದು ಯೆಹೋವನ ನುಡಿ.”


ನನ್ನ ಪ್ರಿಯಳೇ, ನೀನು ಸರ್ವಾಂಗಸುಂದರಿ, ನಿನ್ನಲ್ಲಿ ಯಾವ ಕೊರತೆಯೂ ಇಲ್ಲ.


ಪಾಪಮಾಡದೇ ಧರ್ಮವನ್ನೇ ಆಚರಿಸುತ್ತಿರುವ ಸತ್ಪುರುಷರು ಲೋಕದಲ್ಲಿ ಇಲ್ಲವೇ ಇಲ್ಲ.


ಸೀಮೋನ ಪೇತ್ರನು, “ಕರ್ತನೇ, ನನ್ನ ಪಾದಗಳನ್ನು ಮಾತ್ರವಲ್ಲದೆ, ಕೈಗಳನ್ನೂ, ತಲೆಯನ್ನೂ ಸಹ ತೊಳೆ” ಎಂದನು.


ನಾನು ನಿಮ್ಮೆಲ್ಲರನ್ನು ಕುರಿತು ಈ ಮಾತನ್ನು ಹೇಳಲಿಲ್ಲ. ನಾನು ಆರಿಸಿಕೊಂಡವರೆಲ್ಲರನ್ನು ನಾನು ಬಲ್ಲೆನು. ಆದರೆ ನನ್ನ ಜೊತೆಯಲ್ಲಿ ಊಟಮಾಡುವವನೇ, ನನಗೆ ದ್ರೋಹ ಬಗೆದನು, ಎಂಬ ಶಾಸ್ತ್ರದ ಮಾತು ನೆರವೇರಬೇಕಾಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು