Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 13:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ನೀವು ಇವುಗಳನ್ನು ತಿಳಿದುಕೊಂಡು ಇದರಂತೆ ಮಾಡಿದರೆ ನೀವು ಧನ್ಯರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಇದನ್ನೆಲ್ಲಾ ಅರ್ಥಮಾಡಿಕೊಂಡು ಅದರಂತೆ ನಡೆದರೆ, ನೀವು ಧನ್ಯರು !

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ನೀವು ಇದನ್ನು ತಿಳುಕೊಂಡು ಇದರಂತೆ ಮಾಡಿದರೆ ನೀವು ಧನ್ಯರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ನೀವು ಈ ಸಂಗತಿಗಳನ್ನು ತಿಳಿದುಕೊಂಡು ಇವುಗಳನ್ನು ಕೈಕೊಂಡು ನಡೆದರೆ ಸಂತೋಷದಿಂದಿರುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ನೀವು ಇವುಗಳನ್ನು ತಿಳಿದುಕೊಂಡು ಇದರಂತೆ ಮಾಡಿದರೆ ನೀವು ಧನ್ಯರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 ಖರೆ ಅತ್ತಾ ತುಮ್ಕಾ ಹೆ ಖರೆ ಗೊತ್ತ್ ಹೊಲೆ ಹ್ಯಾಚ್ ಖರೆಪಾನಾತ್ ತುಮಿ ಚಲ್ಲ್ಯಾರ್, ತುಮ್ಚೆ ಕವ್ಡೆ ಬರೆ!

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 13:17
21 ತಿಳಿವುಗಳ ಹೋಲಿಕೆ  

ಅದಕ್ಕೆ ಯೇಸು, “ಹಾಗನ್ನ ಬೇಡ, ದೇವರ ವಾಕ್ಯವನ್ನು ಕೇಳಿ ಅದನ್ನು ಅನುಸರಿಸುವವನು ಹೆಚ್ಚು ಧನ್ಯನು” ಅಂದನು.


ಹೀಗಿರುವುದರಿಂದ ಒಳ್ಳೆಯದನ್ನು ಮಾಡಬೇಕೆಂದು ಗೊತ್ತಿದರೂ ಅದನ್ನು ಮಾಡದೆ ಇರುವವನು ಪಾಪ ಮಾಡುವವನಾಗಿದ್ದಾನೆ.


ಆದರೆ ಬಿಡುಗಡೆಯನ್ನು ಉಂಟುಮಾಡುವ ಪರಿಪೂರ್ಣವಾದ ಧರ್ಮಶಾಸ್ತ್ರವನ್ನು ಲಕ್ಷ್ಯಕೊಟ್ಟು ಓದಿ, ಮನನ ಮಾಡಿ ಅದನ್ನು ಅನುಸರಿಸುವವನು ವಾಕ್ಯವನ್ನು ಕೇಳಿ ಮರೆತು ಹೋಗದೆ ಅದರ ಪ್ರಕಾರ ನಡೆಯುತ್ತಾ ತನ್ನ ನಡತೆಯಿಂದ, ಕ್ರಿಯೆಗಳಿಂದ ಧನ್ಯನಾಗುವನು.


ನನ್ನ ಆತ್ಮವನ್ನು ನಿಮ್ಮಲ್ಲಿ ನೆಲಸಿರುವಂತೆ ಅನುಗ್ರಹಿಸಿ, ನೀವು ನನ್ನ ನಿಯಮಗಳನ್ನು ಅನುಸರಿಸುವ ಹಾಗೆ ಮಾಡುವೆನು. ನೀವು ನನ್ನ ವಿಧಿಗಳನ್ನು ಕೈಕೊಂಡು ಆಚರಿಸುವಿರಿ.


ಯೆಹೋವನು ಆಜ್ಞಾಪಿಸಿದಂತೆಯೇ ಮೋಶೆ ಎಲ್ಲವನ್ನು ಮಾಡಿದನು.


“ತಮ್ಮ ನಿಲುವಂಗಿಗಳನ್ನು ತೊಳೆದುಕೊಂಡು ಶುದ್ಧರಾಗಿರುವವರು ಧನ್ಯರು. ಅವರಿಗೆ ಜೀವವೃಕ್ಷದ ಹಕ್ಕು ಇರುವುದು. ಅವರು ಬಾಗಿಲುಗಳ ಮೂಲಕ ಆ ಪಟ್ಟಣದೊಳಗೆ ಬಂದು ಸೇರುವರು.


ಅವುಗಳ ಮೂಲಕ ನಿನ್ನ ದಾಸನಿಗೆ ವಿವೇಚನೆ ಉಂಟಾಗುತ್ತದೆ; ಅವುಗಳನ್ನು ಕೈಕೊಳ್ಳುವುದರಿಂದ ಬಹಳ ಫಲ ದೊರೆಯುತ್ತದೆ.


ಕ್ರಿಸ್ತ ಯೇಸುವಿನಲ್ಲಿರುವವರಿಗೆ ಸುನ್ನತಿಯಾದರೂ ಆಗದಿದ್ದರೂ ಪ್ರಯೋಜನವಿಲ್ಲ, ಆದರೆ ಅವರಲ್ಲಿ ಪ್ರೀತಿಯಿಂದ ಹೊರಹೊಮ್ಮುವ ನಂಬಿಕೆಯೇ ಪ್ರಯೋಜನವಾಗಿದೆ.


ಪರಲೋಕದಲ್ಲಿರುವ ನನ್ನ ತಂದೆಯ ಚಿತ್ತವನ್ನು ಮಾಡುವವನೇ ನನ್ನ ಸಹೋದರನೂ ಸಹೋದರಿಯೂ ತಾಯಿಯೂ ಆಗಿದ್ದಾರೆ” ಅಂದನು.


ದೇವರು ಅಪ್ಪಣೆಕೊಟ್ಟ ಪ್ರಕಾರವೇ ನೋಹನು ಮಾಡಿದನು.


ನಾನು ನಿಮಗೆ ಕೊಟ್ಟ ಆಜ್ಞೆಗಳ ಪ್ರಕಾರ ನೀವು ನಡೆದರೆ, ನೀವು ನನ್ನ ಸ್ನೇಹಿತರು.


ದೇವದರ್ಶನ ಇಲ್ಲದಿರುವಲ್ಲಿ ಜನರು ನಾಶವಾಗುವರು, ಧರ್ಮೋಪದೇಶವನ್ನು ಕೈಕೊಳ್ಳುವವನೋ ಧನ್ಯನಾಗುವನು.


ಯೆಹೋವನು ನನಗೆ, “ಯೆಹೂದದ ಪಟ್ಟಣಗಳಲ್ಲಿಯೂ, ಯೆರೂಸಲೇಮಿನ ಬೀದಿಗಳಲ್ಲಿಯೂ ಈ ಮಾತುಗಳನ್ನೆಲ್ಲಾ ಸಾರು, ‘ಈ ನಿಬಂಧನ ವಾಕ್ಯಗಳನ್ನೆಲ್ಲಾ ಕೇಳಿ ಕೈಕೊಳ್ಳಿರಿ.


ಧರ್ಮಶಾಸ್ತ್ರವನ್ನು ಕೇಳಿದ ಮಾತ್ರದಿಂದಲೇ ಯಾರೂ ದೇವರ ಸನ್ನಿಧಿಯಲ್ಲಿ ನೀತಿವಂತರಾಗುವುದಿಲ್ಲ; ಅದನ್ನು ಅನುಸರಿಸುವವರೇ ನೀತಿವಂತರೆಂದು ನಿರ್ಣಯಿಸಲ್ಪಡುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು