Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 13:27 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಅವನು ಆ ರೊಟ್ಟಿಯ ತುಂಡನ್ನು ತೆಗೆದುಕೊಂಡ ಕೂಡಲೇ, ಸೈತಾನನು ಅವನೊಳಗೆ ಪ್ರವೇಶಿಸಿದನು. ಆಗ ಯೇಸು ಅವನಿಗೆ, “ನೀನು ಮಾಡುವುದನ್ನು ಬೇಗನೇ ಮಾಡು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಯೂದನು ಅದನ್ನು ತೆಗೆದುಕೊಂಡದ್ದೇ ತಡ, ಸೈತಾನನು ಅವನನ್ನು ಹೊಕ್ಕನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಅವನು ಆ ತುತ್ತನ್ನು ತೆಗೆದುಕೊಂಡ ಕೂಡಲೆ ಸೈತಾನನು ಅವನೊಳಗೆ ಹೊಕ್ಕನು. ಆಗ ಯೇಸು ಅವನಿಗೆ - ನೀನು ಮಾಡುವದನ್ನು ಬೇಗನೆ ಮಾಡಿಬಿಡು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಯೂದನು ಆ ರೊಟ್ಟಿಯನ್ನು ತೆಗೆದುಕೊಂಡಾಗ ಸೈತಾನನು ಅವನೊಳಗೆ ಪ್ರವೇಶಿಸಿದನು. ಯೇಸು ಯೂದನಿಗೆ, “ನೀನು ಮಾಡುವ ಕೆಲಸವನ್ನು ಬೇಗನೆ ಮಾಡು!” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಅವನು ರೊಟ್ಟಿಯ ತುಂಡನ್ನು ತೆಗೆದುಕೊಂಡು ತಿಂದನು. ಅನಂತರ ಸೈತಾನನು ಅವನೊಳಗೆ ಪ್ರವೇಶಿಸಿದನು. ಆಗ ಯೇಸು ಅವನಿಗೆ, “ನೀನು ಮಾಡುವುದನ್ನು ಬೇಗನೆ ಮಾಡು,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

27 ಜೆಜುನ್ ದಿಲ್ಲೊ ಭಾಕ್ರಿಚೊ ತುಕ್ಡೊ ಘೆಟಲ್ಲ್ಯಾ ತನ್ನಾಚ್ ಜುದಾಸಾಚ್ಯಾ ಮನಾತ್ ಸೈತಾನ್ ಗುಸ್ಲೊ, ತನ್ನಾ ಜೆಜುನ್ ತೆಕಾ “ತಿಯಾ ಕಾಯ್ ಕರ್‍ತಲೆ ಹಾಯ್ ತೆ ಲಗ್ಗುಲಗ್ಗುನಾ ಕರ್!” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 13:27
16 ತಿಳಿವುಗಳ ಹೋಲಿಕೆ  

ಆಗ ಸೈತಾನನು ಹನ್ನೆರಡು ಮಂದಿ ಶಿಷ್ಯರಲ್ಲಿ ಒಬ್ಬನಾದ ಇಸ್ಕರಿಯೋತನೆಂಬ ಯೂದನಲ್ಲಿ ಪ್ರವೇಶಿಸಲು,


ಅವರು ಭೋಜನಕ್ಕೆ ಕುಳಿತುಕೊಂಡಿದ್ದರು, ಅಷ್ಟರೊಳಗೆ ಸೈತಾನನು ಸೀಮೋನನ ಮಗನಾದ ಇಸ್ಕರಿಯೋತ ಯೂದನ ಹೃದಯದಲ್ಲಿ ಯೇಸುವನ್ನು ಹಿಡಿದುಕೊಡಬೇಕೆಂಬ ಆಲೋಚನೆಯನ್ನು ಹುಟ್ಟಿಸಿದನು.


ಆಗ ಪೇತ್ರನು; “ಅನನೀಯನೇ, ನೀನು ಆ ಹೊಲದ ಕ್ರಯದಲ್ಲಿ ಒಂದು ಭಾಗವನ್ನು ಬಚ್ಚಿಟ್ಟುಕೊಂಡು ಪವಿತ್ರಾತ್ಮನನ್ನು ವಂಚಿಸುವಂತೆ ಸೈತಾನನು ನಿನ್ನ ಹೃದಯದಲ್ಲಿ ಏಕೆ ತುಂಬಿಸಿಕೊಂಡಿ?


ತರುವಾಯ ಹೊರಟುಹೋಗಿ ತನಗಿಂತ ಕೆಟ್ಟವುಗಳಾದ ಬೇರೆ ಏಳು ದೆವ್ವಗಳನ್ನು ತನ್ನೊಂದಿಗೆ ಕರೆದುಕೊಂಡು ಬರುವುದು. ಅವು ಒಳ ನುಗ್ಗಿ ಅಲ್ಲಿ ವಾಸ ಮಾಡುವವು. ಆಗ ಆ ಮನುಷ್ಯನ ಅಂತ್ಯಸ್ಥಿತಿಯು ಮೊದಲಿಗಿಂತ ಕೆಟ್ಟದಾಗುವುದು. ಇದರಂತೆಯೇ ಈ ದುಷ್ಟ ಸಂತತಿಗೆ ಆಗುವುದು” ಅಂದನು.


ಈ ಲೋಕದಲ್ಲಿ ನಡೆಯುವ ಎಲ್ಲಾ ಸಂಗತಿಗಳಿಗೂ ಕೆಟ್ಟ ಪ್ರತಿಫಲ ಉಂಟು ಮತ್ತು ಎಲ್ಲರಿಗೂ ಒಂದೇ ಗತಿಯಾಗುವುದು. ಇದಲ್ಲದೆ ಮನುಷ್ಯರ ಹೃದಯದಲ್ಲಿ ಕೆಟ್ಟತನವು ತುಂಬಿದೆ. ಅವರು ಬದುಕಿರುವ ತನಕ ಹುಚ್ಚುತನವು ಅವರ ಮನಸ್ಸನ್ನು ಹಿಡಿದಿರುವುದು. ಅನಂತರ ಅವರು ಸಾಯುತ್ತಾರೆ.


ಅವರ ಕಾಲುಗಳು ಕೇಡನ್ನು ಹಿಂಬಾಲಿಸಿ ಓಡುವವು, ಅವರು ರಕ್ತವನ್ನು ಸುರಿಸಲು ಆತುರಪಡುವರು.


“ಈ ರಾಜಾಜ್ಞೆಯು ಏಕೆ ಇಷ್ಟು ಉಗ್ರವಾಗಿದೆ?” ಎಂದು ಕೇಳಲು ಅರ್ಯೋಕನು ನಡೆದ ಸಂಗತಿಯನ್ನು ದಾನಿಯೇಲನಿಗೆ ತಿಳಿಸಿದನು.


ಕೂಡಲೆ ಅವಳು ಅರಸನ ಬಳಿಗೆ ಅವಸರದಿಂದ ಬಂದು, “ಈ ಕ್ಷಣದಲ್ಲೇ ಸ್ನಾನಿಕನಾದ ಯೋಹಾನನ ತಲೆಯನ್ನು ಪರಾತಿನಲ್ಲಿ ನನಗೆ ತರಿಸಿಕೊಡಬೇಕು, ಇದೇ ನನ್ನ ಬೇಡಿಕೆ” ಎಂದು ಕೇಳಿಕೊಂಡಳು.


ದುಷ್ಟ ಅಧಿಕಾರಿಯನ್ನು ಅವರ ಮೇಲೆ ನೇಮಿಸು; ತಪ್ಪು ಹೊರಿಸುವವನನ್ನು ಅವನ ಬಲಗಡೆಯಲ್ಲಿ ನಿಲ್ಲಿಸು.


ಮಧ್ಯಾಹ್ನವಾದನಂತರ ಎಲೀಯನು ಅವರನ್ನು ಪರಿಹಾಸ್ಯ ಮಾಡಿ, “ಗಟ್ಟಿಯಾಗಿ ಕೂಗಿರಿ, ಅವನು ದೇವರಾಗಿರುತ್ತಾನಲ್ಲಾ. ಈಗ ಒಂದು ವೇಳೆ ಅವನು ಧ್ಯಾನದಲ್ಲಿರಬಹುದು, ಇಲ್ಲವೇ ಯಾವುದೋ ಕೆಲಸದಲ್ಲಿ ಅಥವಾ ಪ್ರಯಾಣದಲ್ಲಿ ಇರಬೇಕು. ಅದೂ ಇಲ್ಲದಿದ್ದರೆ ನಿದ್ರೆಮಾಡುತ್ತಿದ್ದಾನು, ಎಚ್ಚರವಾಗಬೇಕು” ಎಂದು ಹೇಳಿದನು.


ಯೇಸು ಅವನಿಗೆ, “ಸೈತಾನನೇ, ನೀನು ತೊಲಗಿ ಹೋಗು. ‘ನಿನ್ನ ದೇವರಾಗಿರುವ ಕರ್ತನನ್ನು ಮಾತ್ರ ಆರಾಧಿಸಬೇಕು ಆತನೊಬ್ಬನನ್ನೇ ಸೇವಿಸಬೇಕು’ ಎಂಬುದಾಗಿ ಬರೆದಿದೆಯಲ್ಲಾ” ಎಂದು ಹೇಳಿದನು.


ಅದಕ್ಕೆ ಯೇಸು “ಹನ್ನೆರಡು ಮಂದಿಯಾದ ನಿಮ್ಮನ್ನು ನಾನು ಆರಿಸಿ ತೆಗೆದುಕೊಂಡೆನಲ್ಲವೇ? ಆದರೂ ನಿಮ್ಮಲ್ಲಿಯೂ ಒಬ್ಬನು ಸೈತಾನನಿದ್ದಾನೆ” ಎಂದನು.


ಆದರೆ ಆತನು ಅವನಿಗೆ ಇದನ್ನು ಏಕೆ ಹೇಳಿದನೆಂದು ಊಟದ ಮೇಜಿನಲ್ಲಿ ಕುಳಿತವರಲ್ಲಿ ಯಾರಿಗೂ ತಿಳಿಯಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು