Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 13:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಅನಂತರ ಬೋಗುಣಿಯಲ್ಲಿ ನೀರು ಹಾಕಿಕೊಂಡು ಶಿಷ್ಯರ ಪಾದಗಳನ್ನು ತೊಳೆಯುತ್ತಾ, ತಾನು ಸೊಂಟಕ್ಕೆ ಕಟ್ಟಿಕೊಂಡ ಅಂಗವಸ್ತ್ರದಿಂದ ಪಾದಗಳನ್ನು ಒರಸುವುದಕ್ಕೂ ಪ್ರಾರಂಭಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಅನಂತರ ಒಂದು ಬೋಗುಣಿಗೆ ನೀರು ಸುರಿದುಕೊಂಡು ತಮ್ಮ ಶಿಷ್ಯರ ಕಾಲುಗಳನ್ನು ತೊಳೆಯುತ್ತಾ ತಾವು ಕಟ್ಟಿಕೊಂಡಿದ್ದ ಅಂಗವಸ್ತ್ರದಿಂದ ಒರಸತೊಡಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಆಗ ಬೋಗುಣಿಯಲ್ಲಿ ನೀರು ಹಾಕಿಕೊಂಡು ಶಿಷ್ಯರ ಕಾಲುಗಳನ್ನು ತೊಳೆಯುವದಕ್ಕೂ ನಡುವಿಗೆ ಕಟ್ಟಿಕೊಂಡಿದ್ದ ಕೈಪಾವುಡದಿಂದ ಒರಸುವದಕ್ಕೂ ಪ್ರಾರಂಭಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಅನಂತರ ಒಂದು ಬೋಗುಣಿಗೆ ನೀರು ಸುರಿದುಕೊಂಡು ಶಿಷ್ಯರ ಕಾಲುಗಳನ್ನು ತೊಳೆದು ತಾನು ಕಟ್ಟಿಕೊಂಡಿದ್ದ ಅಂಗವಸ್ತ್ರದಿಂದ ಅವರ ಪಾದಗಳನ್ನು ಒರಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಅನಂತರ ಅವರು ಬೋಗುಣಿಯಲ್ಲಿ ನೀರು ಹಾಕಿಕೊಂಡು ಶಿಷ್ಯರ ಪಾದಗಳನ್ನು ತೊಳೆಯುವುದಕ್ಕೂ ತಾವು ಸೊಂಟಕ್ಕೆ ಕಟ್ಟಿಕೊಂಡ ಅಂಗವಸ್ತ್ರದಿಂದ ಪಾದಗಳನ್ನು ಒರೆಸುವುದಕ್ಕೂ ಪ್ರಾರಂಭಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ಮಾನಾ ಎಕ್ ಮೊಟ್ಯಾ ಅಯ್ದಾನಾತ್ ಪಾನಿ ವೊತುನ್ ಭರುನ್ ಘೆಟ್ಲ್ಯಾನ್. ಅನಿ ಅಪ್ನಾಚ್ಯಾ ಶಿಸಾಂಚೆ ಪಾಂಯೆ ಧುವ್ಕ್ ಚಾಲು ಕರ್ಲ್ಯಾನ್, ಅನಿ ಅಪ್ನಾಚ್ಯಾ ಕಂಬ್ರೆಕ್ ಭಾಂದುನ್ ಘೆಟಲ್ಲ್ಯಾ ಟಿವಾಲಾನಿ ತೆಂಚೆ ಪಾಂಯೆ ಪುಸ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 13:5
30 ತಿಳಿವುಗಳ ಹೋಲಿಕೆ  

ಆ ಹೆಂಗಸಿನ ಕಡೆಗೆ ತಿರುಗಿಕೊಂಡು ಸೀಮೋನನಿಗೆ ಹೇಳಿದ್ದೇನಂದರೆ, “ಈ ಹೆಂಗಸನ್ನು ನೋಡಿದ್ದಿಯಾ? ನಾನು ನಿನ್ನ ಮನೆಗೆ ಬಂದಾಗ ನೀನು ನನ್ನ ಕಾಲಿಗೆ ನೀರು ಕೊಡಲಿಲ್ಲ; ಇವಳಾದರೋ ನನ್ನ ಕಾಲುಗಳನ್ನು ಕಣ್ಣೀರಿನಿಂದ ನೆನಸಿ ತನ್ನ ತಲೆಯಕೂದಲಿನಿಂದ ಒರಸಿದಳು.


ನನ್ನ ಪಾಪವನ್ನು ಸಂಪೂರ್ಣವಾಗಿ ತೊಳೆದುಬಿಡು; ನನ್ನ ದೋಷವನ್ನು ಪರಿಹರಿಸಿ, ನನ್ನನ್ನು ಶುದ್ಧಿಗೊಳಿಸು.


“ಸ್ವಾಮಿಗಳೇ, ನಿಮ್ಮ ದಾಸನ ಮನೆಗೆ ಬಂದು ಇಳಿದುಕೊಂಡು ಕಾಲುಗಳನ್ನು ತೊಳೆದುಕೊಳ್ಳಿರಿ; ಬೆಳಿಗ್ಗೆ ನಿಮ್ಮ ಮಾರ್ಗ ಹಿಡಿದುಕೊಂಡು ಹೋಗಬಹುದು” ಅಂದನು. ಅವರು, “ಹಾಗಲ್ಲ, ಬೀದಿಯಲ್ಲೇ ರಾತ್ರಿ ಕಳೆಯುತ್ತೇವೆ” ಎನ್ನಲು


ಸತ್ಕ್ರಿಯೆಗಳನ್ನು ಮಾಡುವವಳೆಂದು ಹೆಸರುಗೊಂಡವಳೂ ಆಗಿದ್ದಲ್ಲಿ, ಅವರು ಮಕ್ಕಳನ್ನು ಸಾಕಿಕೊಂಡು, ಅತಿಥಿಸತ್ಕಾರವನ್ನು ಮಾಡುತ್ತಾ, ದೇವಜನರಿಗೆ ಉಪಚಾರಮಾಡಿದವಳಾಗಲಿ, ಸಂಕಟದಲ್ಲಿ ಬಿದ್ದವರಿಗೆ ಸಹಾಯಮಾಡುತ್ತಾ ಎಲ್ಲಾ ಸತ್ಕಾರ್ಯಗಳಲ್ಲಿ ಆಸಕ್ತಿಯುಳ್ಳವಳಾಗಿರಲಿ.


ನೀರು ತರಿಸಿಕೊಡುತ್ತೇನೆ; ನಿಮ್ಮ ಕಾಲುಗಳನ್ನು ತೊಳೆದುಕೊಂಡು ಮರದ ನೆರಳಿನಲ್ಲಿ ವಿಶ್ರಮಿಸಿಕೊಳ್ಳಿರಿ.


ಅವನು ನನಗೆ, “ಇವರು ಆ ಮಹಾಸಂಕಟದಿಂದ ಹೊರಬಂದವರು, ಯಜ್ಞದ ಕುರಿಮರಿಯಾದಾತನ ರಕ್ತದಲ್ಲಿ ತಮ್ಮ ನಿಲುವಂಗಿಗಳನ್ನು ತೊಳೆದು ಶುಭ್ರಮಾಡಿಕೊಂಡಿದ್ದಾರೆ.


ಆದಕಾರಣ ಕೆಟ್ಟ ಮನಸ್ಸಾಕ್ಷಿಯನ್ನು ಪ್ರೋಕ್ಷಿಸಿ ಶುದ್ಧೀಕರಿಸಿಕೊಂಡು, ತಿಳಿನೀರಿನಿಂದ ತೊಳೆದ ದೇಹದಿಂದಲೂ, ಯಥಾರ್ಥಹೃದಯದಿಂದಲೂ, ನಂಬಿಕೆಯ ಪೂರ್ಣನಿಶ್ಚಯದಿಂದಲೂ ದೇವರ ಸಮೀಪಕ್ಕೆ ಬರೋಣ.


ಆತನು ಅದನ್ನು ಪಾವನಗೊಳಿಸುವುದಕ್ಕಾಗಿ ತನ್ನನ್ನು ತಾನೇ ಒಪ್ಪಿಸಿಕೊಟ್ಟನು.


ನಿಮ್ಮಲ್ಲಿ ಕೆಲವರು ಅಂಥವರಾಗಿದ್ದೀರಿ. ಆದರೆ ನೀವು ಕರ್ತನಾದ ಯೇಸು ಕ್ರಿಸ್ತನ ಹೆಸರಿನಿಂದಲೂ ಮತ್ತು ನಮ್ಮ ದೇವರ ಆತ್ಮದಿಂದಲೂ ತೊಳೆಯಲ್ಪಟ್ಟು, ಶುದ್ಧೀಕರಿಸಲ್ಪಟ್ಟಿದ್ದೀರಿ, ದೇವರಿಂದ ನೀತಿವಂತರೆಂಬ ನಿರ್ಣಯವನ್ನು ಹೊಂದಿದ್ದೀರಿ.


ಈಗ ನೀನೇಕೆ ತಡಮಾಡುತ್ತೀ? ಎದ್ದು ಕರ್ತನ ಹೆಸರನ್ನು ಹೇಳಿಕೊಳ್ಳುವವನಾಗಿ, ದೀಕ್ಷಾಸ್ನಾನ ಮಾಡಿಸಿಕೊಂಡು ನಿನ್ನ ಪಾಪಗಳನ್ನು ತೊಳೆದುಕೋ’ ಅಂದನು.


ಆದರೆ ಯೆಹೋಷಾಫಾಟನು, “ಯೆಹೋವನ ಸನ್ನಿಧಿಯಲ್ಲಿ ನಮಗೋಸ್ಕರ ವಿಚಾರಿಸಬಲ್ಲವನಾದ ಒಬ್ಬ ಪ್ರವಾದಿಯು ಇಲ್ಲಿ ಇಲ್ಲವೇ?” ಎಂದು ಕೇಳಿದನು. ಆಗ ಇಸ್ರಾಯೇಲರ ಅರಸನ ಸೇವಕರಲ್ಲೊಬ್ಬನು ಅವನಿಗೆ, “ಶಾಫಾಟನ ಮಗನು, ಎಲೀಯನ ಕೈಗೆ ನೀರು ಕೊಡುತ್ತಿದ್ದವನೂ ಆದ ಎಲೀಷನೆಂಬ ಪ್ರವಾದಿಯು ಇಲ್ಲಿರುತ್ತಾನೆ” ಎಂದು ಉತ್ತರಕೊಟ್ಟನು.


ಆಕೆ ಎದ್ದು ನಮಸ್ಕಾರಮಾಡಿ ಸೇವಕರಿಗೆ, “ನಿನ್ನ ದಾಸಿಯಾದ ನಾನು ನನ್ನ ಸ್ವಾಮಿಯ ಸೇವಕರ ಪಾದಗಳನ್ನು ತೊಳೆಯುವ ಸೇವಕಿಯಾಗುವುದಕ್ಕೆ ಸಿದ್ಧಳಾಗಿದ್ದೇನೆ” ಎಂದು ಉತ್ತರಕೊಟ್ಟು,


ಆಗ ಶುದ್ಧಮಾಡಿಸಿಕೊಳ್ಳುವವನು ತನ್ನ ಬಟ್ಟೆಗಳನ್ನು ಒಗೆದುಕೊಂಡು, ಸರ್ವಾಂಗಕ್ಷೌರ ಮಾಡಿಸಿಕೊಂಡು ಸ್ನಾನಮಾಡಿದ ಮೇಲೆ ಶುದ್ಧನಾಗುವನು; ತರುವಾಯ ಅವನು ಪಾಳೆಯದೊಳಗೆ ಬರಬಹುದು; ಆದರೂ ಏಳು ದಿನಗಳ ತನಕ ತನ್ನ ಡೇರೆಯ ಹೊರಗೆ ಇರಬೇಕು.


ಈತನು ಅಂದರೆ ಯೇಸು ಕ್ರಿಸ್ತನು ನೀರಿನಿಂದಲೂ, ರಕ್ತದಿಂದಲೂ ಬಂದಾತನು. ನೀರಿನಿಂದ ಮಾತ್ರವಲ್ಲದೆ ನೀರಿನಿಂದಲೂ, ರಕ್ತದಿಂದಲೂ ಸಾಕ್ಷಿ ಹೊಂದಿದವನಾಗಿದ್ದಾನೆ. ಆತ್ಮವು ಸಾಕ್ಷಿಯನ್ನು ಕೊಡುತ್ತದೆ. ಏಕೆಂದರೆ ಆತ್ಮನು ಸತ್ಯಸ್ವರೂಪನೇ.


ಆದರೆ ಆತನು ಬೆಳಕಿನಲ್ಲಿರುವಂತೆಯೇ ನಾವೂ ಬೆಳಕಿನಲ್ಲಿ ನಡೆದರೆ ನಾವು ಒಬ್ಬರ ಸಂಗಡಲ್ಲೊಬ್ಬರು ಅನ್ಯೋನ್ಯತೆಯಲ್ಲಿರುತ್ತೇವೆ. ಆತನ ಒಬ್ಬನೇ ಕುಮಾರನಾದ ಯೇಸುವಿನ ರಕ್ತವು ನಮ್ಮನ್ನು ಸಕಲ ಪಾಪದಿಂದ ಬಿಡಿಸಿ ಶುದ್ಧೀಕರಿಸುತ್ತದೆ.


ಆದರೆ ಸಿಪಾಯಿಗಳಲ್ಲಿ ಒಬ್ಬನು ಈಟಿಯಿಂದ ಆತನ ಪಕ್ಕೆಯನ್ನು ತಿವಿದನು. ಕೂಡಲೆ ರಕ್ತವೂ ನೀರೂ ಹೊರಗೆ ಬಂದವು.


ಯೇಸುವಿನ ಹಿಂದೆ ಪಾದಗಳ ಬಳಿಯಲ್ಲಿ ನಿಂತುಕೊಂಡು ಅಳುತ್ತಾ ತನ್ನ ಕಣ್ಣೀರಿನಿಂದ ಆತನ ಪಾದಗಳನ್ನು ನೆನಸುತ್ತಾ ತನ್ನ ತಲೆ ಕೂದಲಿನಿಂದ ಒರಸಿ, ಪಾದಗಳಿಗೆ ಮುದ್ದಿಟ್ಟು ಆ ತೈಲವನ್ನು ಹಚ್ಚಿದಳು.


ಆ ದಿನದಲ್ಲಿ ಪಾಪವನ್ನೂ, ಅಶುಚಿಯನ್ನೂ ಪರಿಹರಿಸತಕ್ಕ ಒಂದು ಬುಗ್ಗೆಯು ದಾವೀದ ವಂಶದವರಿಗೂ, ಯೆರೂಸಲೇಮಿನವರಿಗೂ ತೆರೆದಿರುವುದು.


ಆಮೇಲೆ ನಾನು ನಿಮ್ಮ ಮೇಲೆ ಶುದ್ಧವಾದ ನೀರನ್ನು ಪ್ರೋಕ್ಷಿಸಲು ನೀವು ನಿರ್ಮಲರಾಗುವಿರಿ; ನಿಮ್ಮ ಸಮಸ್ತ ವಿಗ್ರಹಗಳಿಂದಲೂ, ಸಕಲ ವಿಧವಾದ ಹೊಲಸಿನಿಂದಲೂ ನಿಮ್ಮನ್ನು ಶುದ್ಧಿಮಾಡುವೆನು.


ಮತ್ತು ನಂಬಿಗಸ್ತ ಸಾಕ್ಷಿಯೂ, ಸತ್ತವರೊಳಗಿಂದ ಮೊದಲು ಎದ್ದುಬಂದಾತನೂ ಮತ್ತು ಭೂರಾಜರ ಅಧಿಪತಿಯೂ ಆಗಿರುವ ಯೇಸು ಕ್ರಿಸ್ತನಿಂದ ನಿಮಗೆ ಕೃಪೆಯೂ ಶಾಂತಿಯೂ ಆಗಲಿ. ನಮ್ಮನ್ನು ಪ್ರೀತಿಸುವಾತನೂ ತನ್ನ ಪವಿತ್ರವಾದ ರಕ್ತದ ಮೂಲಕ ನಮ್ಮನ್ನು ಪಾಪಗಳಿಂದ ಬಿಡಿಸಿದಾತನೂ,


ನಿಮ್ಮನ್ನು ತೊಳೆದು ಶುದ್ಧರಾಗಿ, ನನ್ನ ಕಣ್ಣೆದುರಿನಿಂದ ನಿಮ್ಮ ದುಷ್ಕೃತ್ಯಗಳನ್ನು ತೊಲಗಿಸಿರಿ, ದುರಾಚಾರವನ್ನು ಬಿಡಿ,


ಆಗ ಆರೋನನನ್ನೂ ಮತ್ತು ಅವನ ಮಕ್ಕಳನ್ನೂ ದೇವದರ್ಶನದ ಗುಡಾರದ ಬಾಗಿಲಿಗೆ ಕರೆದುಕೊಂಡು ಬಂದು ನೀರಿನಲ್ಲಿ ಸ್ನಾನಮಾಡಿಸಬೇಕು.


ಯೇಸು ಅವನಿಗೆ, “ಸ್ನಾನಮಾಡಿಕೊಂಡವನಿಗೆ ತನ್ನ ಪಾದಗಳನ್ನು ಮಾತ್ರ ತೊಳೆದುಕೊಂಡರೆ ಸಾಕು, ಅವನು ಸಂಪೂರ್ಣವಾಗಿ ಶುದ್ಧನಾಗಿದ್ದಾನೆ. ನೀವೂ ಶುದ್ಧರಾಗಿದ್ದೀರಿ. ಆದರೆ ನಿಮ್ಮಲ್ಲಿ ಎಲ್ಲರೂ ಶುದ್ಧರಲ್ಲ” ಎಂದು ಹೇಳಿದನು.


ಪೇತ್ರನು ಆತನಿಗೆ, “ನೀನು ನನ್ನ ಪಾದಗಳನ್ನು ಎಂದಿಗೂ ತೊಳೆಯಬಾರದು” ಎಂದು ಹೇಳಿದ್ದಕ್ಕೆ, ಯೇಸು, “ನಾನು ನಿನ್ನನ್ನು ತೊಳೆಯದಿದ್ದರೆ ನನ್ನೊಂದಿಗೆ ನಿನಗೆ ಪಾಲು ಇರುವುದಿಲ್ಲ” ಎಂದನು.


ಅವರೆಲ್ಲರನ್ನೂ ಯೋಸೇಫನ ಮನೆಯೊಳಗೆ ಕರೆದುಕೊಂಡು ಬಂದನು. ಕಾಲುಗಳನ್ನು ತೊಳೆಯುವುದಕ್ಕೆ ನೀರನ್ನು ಕೊಡಿಸಿ, ಅವರ ಕತ್ತೆಗಳಿಗೂ ಮೇವು ಹಾಕಿಸಿದನು.


ಈ ರಾತ್ರಿಯನ್ನು ಬೀದಿಯಲ್ಲಿ ಕಳೆಯಬೇಡ, ನನ್ನ ಮನೆಗೆ ಬಾ” ಎಂದು ಹೇಳಿ ಅವನನ್ನು ಕರೆದುಕೊಂಡು ಹೋಗಿ ಅವನ ಕತ್ತೆಗಳಿಗೆ ಮೇವು ಕೊಟ್ಟನು. ಅವರು ತಮ್ಮ ಕೈಕಾಲುಗಳನ್ನು ತೊಳೆದುಕೊಂಡು ಅಲ್ಲಿ ಅನ್ನಪಾನಗಳನ್ನು ತೆಗೆದುಕೊಂಡರು.


ಹೀಗೆ ಆತನು ಸೀಮೋನ ಪೇತ್ರನ ಬಳಿಗೆ ಬಂದಾಗ ಅವನು ಆತನಿಗೆ, “ಕರ್ತನೇ, ನೀನು ನನ್ನ ಪಾದಗಳನ್ನು ತೊಳೆಯುತ್ತೀಯೋ?” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು