Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 14:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಆ ಸಹಾಯಕನು ಯಾರೆಂದರೆ ಸತ್ಯದ ಆತ್ಮನೇ. ಲೋಕವು ಆತನನ್ನು ನೋಡದೆಯೂ, ತಿಳಿಯದೆಯೂ ಇರುವುದರಿಂದ ಆತನನ್ನು ಸ್ವೀಕರಿಸಲಾರದು. ನೀವು ಆತನನ್ನು ಬಲ್ಲಿರಿ, ಹೇಗೆಂದರೆ ಆತನು ನಿಮ್ಮೊಂದಿಗೆ ವಾಸಮಾಡುತ್ತಾನೆ ಮತ್ತು ನಿಮ್ಮೊಳಗೆ ಇರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಸತ್ಯಸ್ವರೂಪಿಯಾದ ಪವಿತ್ರಾತ್ಮನೇ ಈ ಪೋಷಕ. ಲೋಕವು ಇವರನ್ನು ಬರಮಾಡಿಕೊಳ್ಳದು. ಏಕೆಂದರೆ ಲೋಕ ಇವರನ್ನು ಕಾಣುವುದೂ ಇಲ್ಲ, ಅರಿತುಕೊಳ್ಳುವುದೂ ಇಲ್ಲ. ಆದರೆ ನೀವು ಇವರನ್ನು ಅರಿಯುವಿರಿ. ಕಾರಣ, ಇವರು ನಿಮ್ಮೊಂದಿಗೂ ನಿಮ್ಮಲ್ಲಿಯೂ ನೆಲಸಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಆ ಸಹಾಯಕನು ಯಾರಂದರೆ ಸತ್ಯದ ಆತ್ಮನೇ. ಲೋಕವು ಆತನನ್ನು ನೋಡದೆಯೂ ತಿಳಿಯದೆಯೂ ಇರುವದರಿಂದ ಆತನನ್ನು ಹೊಂದಲಾರದು. ನೀವು ಆತನನ್ನು ಬಲ್ಲಿರಿ; ಹೇಗಂದರೆ ನಿಮ್ಮ ಬಳಿಯಲ್ಲಿ ವಾಸಮಾಡುತ್ತಾನೆ ಮತ್ತು ನಿಮ್ಮೊಳಗೆ ಇರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಸತ್ಯದ ಆತ್ಮನೇ ಈ ಸಹಾಯಕನು. ಈ ಲೋಕವು ಆತನನ್ನು ಸ್ವೀಕರಿಸಿಕೊಳ್ಳಲಾರದು. ಏಕೆಂದರೆ ಲೋಕವು ಆತನನ್ನು ಕಾಣುವುದೂ ಇಲ್ಲ, ತಿಳಿದುಕೊಳ್ಳುವುದೂ ಇಲ್ಲ. ಆದರೆ ನೀವು ಆತನನ್ನು ಬಲ್ಲಿರಿ. ಆತನು ನಿಮ್ಮೊಂದಿಗೆ ಮತ್ತು ನಿಮ್ಮೊಳಗೆ ವಾಸಿಸುವವನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಅವರೇ ಸತ್ಯದ ಆತ್ಮರಾಗಿದ್ದಾರೆ. ಲೋಕವು ಅವರನ್ನು ನೋಡದೆಯೂ ತಿಳಿಯದೆಯೂ ಇರುವುದರಿಂದ ಸತ್ಯದ ಆತ್ಮರಾಗಿರುವ ಅವರನ್ನು ಸ್ವೀಕರಿಸಲಾರದು. ನೀವು ಅವರನ್ನು ಬಲ್ಲಿರಿ. ಏಕೆಂದರೆ ಅವರು ನಿಮ್ಮೊಂದಿಗಿರುವರು ಮತ್ತು ನಿಮ್ಮೊಳಗೂ ನೆಲೆಸಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 ತೊ ಎಕ್ ಆತ್ಮೊ ತೊ ದೆವಾಚ್ಯಾ ವಿಶಯಾತ್ ಖರೆ ದಾಕ್ವುನ್ ದಿತಾ. ಹ್ಯೊ ಜಗ್ ತೆಕಾ ಸ್ವಿಕಾರ್ ಕರಿನಾ, ಕಶ್ಯಾಕ್ ಮಟ್ಲ್ಯಾರ್ ಹ್ಯೊ ಜಗ್ ತೆಕಾ ವಳ್ಕಿನಾ, ತೊ ತೆಕಾ ದಿಸಿನಾ. ಖರೆ ತುಮಿ ತೆಕಾ ವಳಕ್ತ್ಯಾಶಿ, ಕಶ್ಯಾಕ್ ಮಟ್ಲ್ಯಾರ್ ತೊ ತುಮ್ಚ್ಯಾ ವಾಂಗ್ಡಾ ಜಿವನ್ ಕರ್‍ತಾ ಅನಿ ತುಮ್ಚ್ಯಾ ಭುತ್ತುರ್ ರ್‍ಹಾತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 14:17
30 ತಿಳಿವುಗಳ ಹೋಲಿಕೆ  

ನನ್ನ ಆತ್ಮವನ್ನು ನಿಮ್ಮಲ್ಲಿ ನೆಲಸಿರುವಂತೆ ಅನುಗ್ರಹಿಸಿ, ನೀವು ನನ್ನ ನಿಯಮಗಳನ್ನು ಅನುಸರಿಸುವ ಹಾಗೆ ಮಾಡುವೆನು. ನೀವು ನನ್ನ ವಿಧಿಗಳನ್ನು ಕೈಕೊಂಡು ಆಚರಿಸುವಿರಿ.


ಆದರೆ ಸತ್ಯದ ಆತ್ಮನು ಬರುವಾಗ ಆತನು ನಿಮ್ಮನ್ನು ಪೂರ್ಣ ಸತ್ಯದ ಕಡೆಗೆ ನಡೆಸುವನು. ಆತನು ತನ್ನಷ್ಟಕ್ಕೆ ತಾನೇ ಮಾತನಾಡದೆ ಕೇಳಿದ ಮಾತುಗಳನ್ನೇ ಆಡುವನು ಮತ್ತು ಮುಂದೆ ನಡೆಯುವ ಸಂಗತಿಗಳನ್ನು ನಿಮಗೆ ತಿಳಿಸುವನು.


ಆದರೆ ಆತನಿಂದ ನೀವು ಹೊಂದಿದ ಅಭಿಷೇಕವು ನಿಮ್ಮಲ್ಲಿ ನೆಲೆಗೊಂಡಿರುವುದರಿಂದ ಯಾರೂ ನಿಮಗೆ ಬೋಧನೆ ಮಾಡುವುದು ಅಗತ್ಯವಿಲ್ಲ. ಆತನು ನಿಮಗೆ ಮಾಡಿರುವ ಅಭಿಷೇಕವೇ ನಿಮ್ಮನ್ನು ಎಲ್ಲಾ ವಿಷಯಗಳಲ್ಲಿ ಬೋಧನೆ ಮಾಡುವಂಥದ್ದಾಗಿದೆ ಅದು ಸುಳ್ಳಲ್ಲ ಸತ್ಯವಾಗಿದೆ. ಅದು ನಿಮಗೆ ಬೋಧನೆ ಮಾಡಿದ ಪ್ರಕಾರವೇ ಆತನಲ್ಲಿ ನೆಲೆಗೊಂಡಿರುವಿರಿ.


ಆದರೆ ತಂದೆಯ ಬಳಿಯಿಂದ ನಾನು ನಿಮಗೆ ಕಳುಹಿಸಿಕೊಡುವ ಸಹಾಯಕನು, ಎಂದರೆ, ತಂದೆಯ ಬಳಿಯಿಂದ ಹೊರಡುವ ಸತ್ಯದ ಆತ್ಮನು ಬಂದಾಗ, ಆತನೇ ನನ್ನ ವಿಷಯವಾಗಿ ಸಾಕ್ಷಿ ಕೊಡುವನು.


ನಾವಂತೂ ದೇವರಿಗೆ ಸಂಬಂಧಪಟ್ಟವರಾಗಿದ್ದೇವೆ. ದೇವರನ್ನು ಬಲ್ಲವರು ನಮ್ಮ ಮಾತನ್ನು ಕೇಳುತ್ತಾರೆ. ದೇವರಿಗೆ ಸಂಬಂಧಪಡದವರು ನಮ್ಮ ಮಾತನ್ನು ಕೇಳುವುದಿಲ್ಲ. ಇದರಿಂದಲೇ ಸತ್ಯವನ್ನು ಬೋಧಿಸುವ ಆತ್ಮ ಯಾವುದು ಮತ್ತು ಸುಳ್ಳನ್ನು ಬೋಧಿಸುವ ಆತ್ಮ ಯಾವುದು ಎಂದು ನಾವು ತಿಳಿದುಕೊಳ್ಳುತ್ತೇವೆ.


ನೀವು ದೇವರ ಆಲಯವಾಗಿದ್ದೀರೆಂದೂ ದೇವರ ಆತ್ಮನು ನಿಮ್ಮಲ್ಲಿ ವಾಸಮಾಡುತ್ತಾನೆಂದೂ ನಿಮಗೆ ಗೊತ್ತಿಲ್ಲವೋ?


ಪ್ರಾಪಂಚಿಕನಾದವನು ದೇವರಾತ್ಮನ ವಿಷಯಗಳನ್ನು ಬೇಡವೆನ್ನುತ್ತಾನೆ; ಅವು ಅವನಿಗೆ ಹುಚ್ಚುಮಾತನಾಗಿ ತೋರುತ್ತವೆ; ಅವು ಆಧ್ಯಾತ್ಮದ ಮೂಲಕ ತಿಳಿದುಕೊಳ್ಳ ಬೇಕಾಗಿರುವುದರಿಂದ ಅವನು ಅವುಗಳನ್ನು ಗ್ರಹಿಸಲಾರನು.


ನೀವು ನಿಮ್ಮ ಸ್ವಂತ ಸೊತ್ತಲ್ಲವೆಂದು ಮತ್ತು ದೇವರಿಂದ ದಾನವಾಗಿ ಲಭಿಸಿದ ಪವಿತ್ರಾತ್ಮನು ನಿಮ್ಮೊಳಗೆ ನೆಲೆಗೊಂಡಿರುವುದರಿಂದ ನಿಮ್ಮ ದೇಹವು ದೇವರ ಪವಿತ್ರಾಲಯವಾಗಿದೆಂಬುದು ನಿಮಗೆ ತಿಳಿಯದೋ?


ನಿನ್ನ ವಶಕ್ಕೆ ಒಪ್ಪಿಸಿಕೊಟ್ಟಿರುವ ಒಳ್ಳೆಯ ವಿಷಯವನ್ನು ನಮ್ಮಲ್ಲಿ ವಾಸವಾಗಿರುವ ಪವಿತ್ರಾತ್ಮನ ಮೂಲಕವಾಗಿ ಕಾಪಾಡಿಕೋ.


ಆಗ ನಾನು ತಂದೆಯನ್ನು ಕೇಳಿಕೊಳ್ಳುವೆನು, ಆತನು ನಿಮಗೆ ಬೇರೊಬ್ಬ ಸಹಾಯಕನನ್ನು ಸದಾಕಾಲವೂ ನಿಮ್ಮೊಂದಿಗೆ ಇರುವುದಕ್ಕೆ ಕಳುಹಿಸಿ ಕೊಡುವನು.


ಯೇಸು ಅವನಿಗೆ, “ಯಾವನಾದರೂ ನನ್ನನ್ನು ಪ್ರೀತಿಸುವುದಾದರೆ ನನ್ನ ಮಾತಿನಂತೆ ನಡೆಯುವನು. ಅವನನ್ನು ನನ್ನ ತಂದೆಯು ಪ್ರೀತಿಸುವನು ಮತ್ತು ನಾವಿಬ್ಬರೂ ಅವನ ಬಳಿಗೆ ಬಂದು, ಅವನೊಂದಿಗೆ ನೆಲೆಸುವೆವು.


ಸದಮಲನೆನಿಸಿಕೊಂಡು ಶಾಶ್ವತಲೋಕದಲ್ಲಿ ನಿತ್ಯನಿವಾಸಿಯಾದ ಮಹೋನ್ನತನು ಹೀಗೆನ್ನುತ್ತಾನೆ, “ಉನ್ನತಲೋಕವೆಂಬ ಪವಿತ್ರಾಲಯದಲ್ಲಿ ವಾಸಿಸುವ ನಾನು, ಜಜ್ಜಿಹೋದ ದೀನಮನದೊಂದಿಗೆ ಇದ್ದುಕೊಂಡು, ದೀನನ ಆತ್ಮವನ್ನೂ ಜಜ್ಜಿಹೋದವನ ಮನಸ್ಸನ್ನೂ ಉಜ್ಜೀವಿಸುವವನಾಗಿದ್ದೇನೆ.


ಆತನ ಆಜ್ಞೆಗಳನ್ನು ಕೈಕೊಂಡು ನಡೆಯುವವನು ಆತನಲ್ಲಿ ನೆಲೆಗೊಂಡಿರುತ್ತಾನೆ ಮತ್ತು ದೇವರು ಆತನಲ್ಲಿ ನೆಲೆಗೊಂಡಿರುತ್ತಾನೆ. ಆತನು ಅವನಲ್ಲಿ ನೆಲೆಗೊಂಡಿರುತ್ತಾನೆ. ನಮ್ಮಲ್ಲಿ ನೆಲೆಗೊಂಡಿದ್ದಾನೆಂದು ಆತನು ನಮಗೆ ಅನುಗ್ರಹಿಸಿರುವ ಆತ್ಮನಿಂದ ನಾವು ಬಲ್ಲವರಾಗಿದ್ದೇವೆ.


ಪ್ರಿಯಮಕ್ಕಳೇ, ನೀವಂತೂ ದೇವರಿಗೆ ಸೇರಿದವರಾಗಿದ್ದೀರಿ. ಮತ್ತು ಲೋಕದಲ್ಲಿರುವವನಿಗಿಂತ ನಿಮ್ಮಲ್ಲಿರುವಾತನು ಉನ್ನತನಾಗಿರುವುದರಿಂದ ನೀವು ಆ ಸುಳ್ಳು ಪ್ರವಾದಿಗಳ ಆತ್ಮವನ್ನು ಜಯಿಸಿದ್ದೀರಿ.


ಕ್ರಿಸ್ತನು ನಿಮ್ಮ ನಂಬಿಕೆಯ ಮೂಲಕ ನಿಮ್ಮ ಹೃದಯಗಳಲ್ಲಿ ವಾಸಮಾಡುವಂತೆಯೂ, ಆತನು ತನ್ನ ಮಹಿಮಾತಿಶಯದ ಪ್ರಕಾರ ಅನುಗ್ರಹಿಸಲಿ.


ನೀವು ಪುತ್ರರಾಗಿರುವುದರಿಂದ ದೇವರು, “ಅಪ್ಪಾ ತಂದೆಯೇ” ಎಂದು ಕೂಗುವ ತನ್ನ ಮಗನ ಆತ್ಮನನ್ನು ನಮ್ಮ ಹೃದಯಗಳಲ್ಲಿ ಕಳುಹಿಸಿಕೊಟ್ಟನು.


ನೀವು ಕ್ರಿಸ್ತ ನಂಬಿಕೆಯಲ್ಲಿ ಇದ್ದೀರೋ ಇಲ್ಲವೋ ಎಂದು ನಿಮ್ಮನ್ನು ನೀವೇ ಪರೀಕ್ಷಿಸಿಕೊಳ್ಳಿರಿ, ನಿಮ್ಮನ್ನು ನೀವೇ ಪರಿಶೋಧಿಸಿಕೊಳ್ಳಿರಿ. ಯೇಸು ಕ್ರಿಸ್ತನು ನಿಮ್ಮಲ್ಲಿದ್ದಾನೆಂಬುದು ನಿಮಗೆ ತಿಳಿಯುವುದಿಲ್ಲವೋ? ಆತನು ನಿಮ್ಮಲ್ಲಿಲ್ಲದಿದ್ದರೆ ನೀವು ಆಯೋಗ್ಯರೇ.


ಈ ಮರ್ಮದ ಮಹಿಮಾತಿಶಯವು ಎಷ್ಟೆಂಬುದನ್ನು ಅನ್ಯಜನಗಳಿಗೂ ತಿಳಿಸಲಿಕ್ಕೆ ದೇವರು ಇಚ್ಛಿಸಿದನು. ಈ ಮರ್ಮವು ಏನೆಂದರೆ ಮಹಿಮೆಯ ನಿರೀಕ್ಷೆಗೆ ಆಧಾರನಾಗಿರುವ ಕ್ರಿಸ್ತನು ನಿಮ್ಮಲ್ಲಿದ್ದಾನೆಂಬುದೇ.


ಆತನಲ್ಲಿ ನೀವೂ ಸಹ ಪವಿತ್ರಾತ್ಮನ ಮೂಲಕವಾಗಿ ದೇವರಿಗೆ ವಾಸಸ್ಥಾನವಾಗುವುದಕ್ಕೆ ನಮ್ಮ ಜೊತೆಯಲ್ಲಿ ಕಟ್ಟಲ್ಪಡುತ್ತಾ ಇದ್ದೀರಿ.


ಮಾತನಾಡುವವರು ನೀವಲ್ಲ, ನಿಮ್ಮ ತಂದೆಯ ಆತ್ಮನೇ ನಿಮ್ಮ ಮುಖಾಂತರವಾಗಿ ಮಾತನಾಡುವನು.


ದೇವರಾತ್ಮನು ಸಭೆಗಳಿಗೆ ಹೇಳುವುದನ್ನು ಕಿವಿಯುಳ್ಳವನು ಕೇಳಲಿ. ಯಾವನು ಜಯಹೊಂದುತ್ತಾನೋ ಅವನಿಗೆ ಬಚ್ಚಿಟ್ಟಿರುವ ಮನ್ನವೆಂಬ ಆಹಾರವನ್ನು ಕೊಡುವೆನು. ಇದಲ್ಲದೆ ಅವನಿಗೆ ಬಿಳೀಕಲ್ಲನ್ನೂ ಆ ಕಲ್ಲಿನ ಮೇಲೆ ಕೆತ್ತಿದ ಹೊಸ ಹೆಸರನ್ನೂ ಕೊಡುವೆನು. ಆ ಹೆಸರನ್ನು ಹೊಂದಿದವನಿಗೇ ಹೊರತು ಅದು ಮತ್ತಾರಿಗೂ ತಿಳಿಯದು.


ನಾನಂತೂ ಅವರೊಂದಿಗೆ ಈ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು, ನೋಡಿರಿ; “ನಿಮ್ಮಲ್ಲಿ ಪ್ರವೇಶಿಸಿರುವ ನನ್ನ ಆತ್ಮವೂ, ನಿಮ್ಮ ಬಾಯಿಗೆ ನಾನು ಕೊಟ್ಟಿರುವ ಮಾತುಗಳೂ, ನಿಮ್ಮ ಬಾಯಿಂದಾಗಲಿ, ನಿಮ್ಮ ಸಂತತಿಯ ಬಾಯಿಂದಾಗಲಿ ಅಥವಾ ನಿಮ್ಮ ಸಂತತಿಯ ಸಂತಾನದ ಬಾಯಿಂದಾಗಲಿ ಇಂದಿನಿಂದ ಎಂದಿಗೂ ತೊಲಗುವುದಿಲ್ಲ” ಎಂದು ಯೆಹೋವನು ಹೇಳುತ್ತಾನೆ.


ಪ್ರತಿಯೊಬ್ಬನು ತನ್ನ ಹೃದಯದ ವ್ಯಾಕುಲವನ್ನು ತಾನು ಗ್ರಹಿಸಿಕೊಳ್ಳುವನು, ಅವನ ಆನಂದದಲ್ಲಿಯೂ ಬೇರೆಯವರು ಪಾಲುಗಾರರಾಗುವುದಿಲ್ಲ.


ಇದಲ್ಲದೆ ಸಾಕ್ಷಿ ಕೊಡುವವರು ಮೂವರಿದ್ದಾರೆ.


ದೇವ ಮಂದಿರಕ್ಕೂ, ವಿಗ್ರಹಗಳಿಗೂ ಒಪ್ಪಿಗೆಯೇನು? ನಾವು ದೇವರೇ ಹೇಳಿರುವಂತೆ ಜೀವಸ್ವರೂಪನಾದ ದೇವರ ಮಂದಿರವಾಗಿದ್ದೇವಲ್ಲಾ, “ನಾನು ಅವರಲ್ಲಿ ವಾಸಮಾಡುವೆನು, ಅವರ ನಡುವೆಯೇ ನಾ ತಿರುಗಾಡುವೆನು ಅವರಿಗೆ ನಾನೇ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು” ಎಂದು ಹೇಳಿದ್ದಾನೆ.


ಆದ್ದರಿಂದ ನಾನಾದರೋ ಆತ್ಮನಿಂದಲೂ ಪ್ರಾರ್ಥಿಸುವೆನು, ಬುದ್ಧಿಯಿಂದಲೂ ಪ್ರಾರ್ಥಿಸುವೆನು; ಆತ್ಮನಿಂದ ಹಾಡುವೆನು, ಬುದ್ಧಿಯಿಂದಲೂ ಹಾಡುವೆನು.


ಮಗನನ್ನು ನೋಡಿ ತಂದೆಯಲ್ಲಿ ನಂಬಿಕೆಯಿಡುವ ಪ್ರತಿಯೊಬ್ಬನೂ ನಿತ್ಯಜೀವವನ್ನು ಪಡೆಯಬೇಕೆಂಬುದೇ ನನ್ನ ತಂದೆಯ ಚಿತ್ತವಾಗಿದೆ, ಮತ್ತು ನಾನು ಕಡೆ ದಿನದಲ್ಲಿ ಅವನನ್ನು ಎಬ್ಬಿಸುವೆನು” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು