Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 14:20 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ನಾನು ನನ್ನ ತಂದೆಯಲ್ಲಿಯೂ, ನೀವು ನನ್ನಲ್ಲಿಯೂ ಮತ್ತು ನಾನು ನಿಮ್ಮಲ್ಲಿಯೂ ಇರುವುದನ್ನು ನೀವು ಆ ದಿನದಲ್ಲಿ ತಿಳಿದುಕೊಳ್ಳುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ನಾನು ನನ್ನ ಪಿತನಲ್ಲಿ ಇರುವೆನು; ನೀವು ನನ್ನಲ್ಲಿ ಇರುವಿರಿ ಮತ್ತು ನಾನು ನಿಮ್ಮಲ್ಲಿ ಇರುವೆನು. ಇದನ್ನು ಆ ದಿನದಂದು ನೀವು ಅರಿತುಕೊಳ್ಳುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ನಾನು ನನ್ನ ತಂದೆಯಲ್ಲಿಯೂ ನೀವು ನನ್ನಲ್ಲಿಯೂ ನಾನು ನಿಮ್ಮಲ್ಲಿಯೂ ಇರುವದನ್ನು ನೀವು ಆ ದಿನದಲ್ಲಿ ತಿಳಿದುಕೊಳ್ಳುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ನಾನು ನನ್ನ ತಂದೆಯಲ್ಲಿರುವುದನ್ನು ನೀವು ಆ ದಿನದಂದು ತಿಳಿದುಕೊಳ್ಳುವಿರಿ. ನೀವು ನನ್ನಲ್ಲಿರುವುದನ್ನೂ ನಾನು ನಿಮ್ಮಲ್ಲಿರುವುದನ್ನೂ ತಿಳಿದುಕೊಳ್ಳುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ನಾನು ನನ್ನ ತಂದೆಯಲ್ಲಿಯೂ ನೀವು ನನ್ನಲ್ಲಿಯೂ ನಾನು ನಿಮ್ಮಲ್ಲಿಯೂ ಇರುವುದನ್ನು ನೀವು ಆ ದಿನದಲ್ಲಿ ತಿಳಿದುಕೊಳ್ಳುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

20 ತೊ ದಿಸ್ ಯೆಲ್ಲ್ಯಾ ತನ್ನಾ ಕಶೆ ಅತ್ತಾ ಮಿಯಾ ಬಾಬಾಚ್ಯಾ ಭುತ್ತುರ್ ಹಾಂವ್ ಅನಿ ತುಮಿ ಮಾಜ್ಯಾ ಭುತ್ತುರ್ ಹಾಶಿ, ಮನುನ್ ತುಮ್ಕಾ ಕಳ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 14:20
24 ತಿಳಿವುಗಳ ಹೋಲಿಕೆ  

ನಾನು ಅವರಿಗೆ ನಿನ್ನ ಹೆಸರನ್ನು ತಿಳಿಸಿದ್ದೇನೆ. ಇನ್ನೂ ತಿಳಿಸುವೆನು. ಏಕೆಂದರೆ, ನೀನು ನನ್ನನ್ನು ಪ್ರೀತಿಸಿದಂಥ ಪ್ರೀತಿಯು ಇವರಲ್ಲಿ ಇರಬೇಕೆಂತಲೂ ಮತ್ತು ನಾನೂ ಅವರಲ್ಲಿ ಇರಬೇಕೆಂದೂ ಪ್ರಾರ್ಥಿಸುತ್ತೇನೆ” ಎಂದನು.


ನಾನು ಸಹ ಕ್ರಿಸ್ತನೊಂದಿಗೆ ಶಿಲುಬೆಗೆ ಹಾಕಿಸಿಕೊಂಡವನಾಗಿದ್ದೇನೆ, ಇನ್ನು ಜೀವಿಸುವವನು ನಾನಲ್ಲ, ಕ್ರಿಸ್ತನು ನನ್ನಲ್ಲಿ ಜೀವಿಸುತ್ತಾನೆ. ಈಗ ಶರೀರದಲ್ಲಿರುವ ನಾನು ಜೀವಿಸುವುದು ಹೇಗೆಂದರೆ ದೇವಕುಮಾರನ ಮೇಲಣ ನಂಬಿಕೆಯಿಂದಲೇ. ಆತನು ನನ್ನನ್ನು ಪ್ರೀತಿಸಿ ನನಗಾಗಿ ತನ್ನನ್ನು ಒಪ್ಪಿಸಿಕೊಟ್ಟನು.


ದೇವರನ್ನು ಯಾರೂ ಎಂದೂ ನೋಡಿಲ್ಲ. ನಾವು ಒಬ್ಬರನ್ನೊಬ್ಬರು ಪ್ರೀತಿಸಿದರೆ ದೇವರು ನಮ್ಮಲ್ಲಿ ನೆಲೆಗೊಂಡಿದ್ದಾನೆ, ಮತ್ತು ಆತನ ಪ್ರೀತಿಯು ನಮ್ಮಲ್ಲಿ ಪರಿಪೂರ್ಣಗೊಂಡಿರುತ್ತದೆ.


ನಾನು ತಂದೆಯಲ್ಲಿ ಇದ್ದೇನೆ ಮತ್ತು ತಂದೆಯು ನನ್ನಲ್ಲಿ ಇದ್ದಾನೆ ಎಂಬುದನ್ನು ನೀನು ನಂಬುವುದಿಲ್ಲವೋ? ನಾನು ನಿಮಗೆ ಹೇಳುವ ಮಾತುಗಳನ್ನು ನನ್ನಷ್ಟಕ್ಕೆ ನಾನೇ ಆಡುವುದಿಲ್ಲ; ತಂದೆಯು ನನ್ನಲ್ಲಿ ಇದ್ದುಕೊಂಡು ತನ್ನ ಕಾರ್ಯಗಳನ್ನು ಮಾಡುತ್ತಾನೆ.


ಆದ್ದರಿಂದ ಈಗ ಕ್ರಿಸ್ತ ಯೇಸುವಿನಲ್ಲಿರುವವರಿಗೆ ಯಾವ ಅಪರಾಧ ನಿರ್ಣಯವೂ ಇಲ್ಲ,


ನಾನು ಮಾಡಿದ್ದರಿಂದ ನೀವು ನನ್ನನ್ನು ನಂಬದೆ ಇದ್ದರೂ, ಈ ಕಾರ್ಯಗಳನ್ನಾದರೂ ನಂಬಿರಿ. ಆಗ ನನ್ನಲ್ಲಿ ತಂದೆಯು ಇದ್ದಾನೆಂತಲೂ, ತಂದೆಯಲ್ಲಿ ನಾನು ಇದ್ದೇನೆಂತಲೂ ನಿಮಗೆ ತಿಳಿಯುವುದು ಮತ್ತು ಮನದಟ್ಟಾಗುವುದು” ಎಂದನು.


ನೀವು ಕ್ರಿಸ್ತ ನಂಬಿಕೆಯಲ್ಲಿ ಇದ್ದೀರೋ ಇಲ್ಲವೋ ಎಂದು ನಿಮ್ಮನ್ನು ನೀವೇ ಪರೀಕ್ಷಿಸಿಕೊಳ್ಳಿರಿ, ನಿಮ್ಮನ್ನು ನೀವೇ ಪರಿಶೋಧಿಸಿಕೊಳ್ಳಿರಿ. ಯೇಸು ಕ್ರಿಸ್ತನು ನಿಮ್ಮಲ್ಲಿದ್ದಾನೆಂಬುದು ನಿಮಗೆ ತಿಳಿಯುವುದಿಲ್ಲವೋ? ಆತನು ನಿಮ್ಮಲ್ಲಿಲ್ಲದಿದ್ದರೆ ನೀವು ಆಯೋಗ್ಯರೇ.


ಈ ಮರ್ಮದ ಮಹಿಮಾತಿಶಯವು ಎಷ್ಟೆಂಬುದನ್ನು ಅನ್ಯಜನಗಳಿಗೂ ತಿಳಿಸಲಿಕ್ಕೆ ದೇವರು ಇಚ್ಛಿಸಿದನು. ಈ ಮರ್ಮವು ಏನೆಂದರೆ ಮಹಿಮೆಯ ನಿರೀಕ್ಷೆಗೆ ಆಧಾರನಾಗಿರುವ ಕ್ರಿಸ್ತನು ನಿಮ್ಮಲ್ಲಿದ್ದಾನೆಂಬುದೇ.


ಆ ದಿನದಲ್ಲಿ ನೀವು ನನ್ನ ಹೆಸರಿನಲ್ಲಿ ಕೇಳಿಕೊಳ್ಳುವಿರಿ, ನಿಮ್ಮ ಪರವಾಗಿ ನಾನು ತಂದೆಯನ್ನು ಬೇಡಿಕೊಳ್ಳುವೆನೆಂದು ನಾನು ನಿಮಗೆ ಹೇಳುವುದಿಲ್ಲ.


ದೇವರ ಸರ್ವಸಂಪೂರ್ಣತೆಯು ಕ್ರಿಸ್ತನ ದೇಹದಲ್ಲಿ ವಾಸಮಾಡುತ್ತಿದೆ,


ಏಕೆಂದರೆ ಆತನಲ್ಲಿಯೇ ತನ್ನ ಸರ್ವಸಂಪೂರ್ಣತೆಯು ವಾಸವಾಗಿರಬೇಕೆಂತಲೂ,


ಯಾರು ನನ್ನ ದೇಹವನ್ನು ತಿಂದು, ನನ್ನ ರಕ್ತವನ್ನು ಕುಡಿದಿದ್ದಾನೋ ಅವನು ನನ್ನಲ್ಲಿ ನೆಲೆಸಿರುತ್ತಾನೆ; ನಾನು ಅವನಲ್ಲಿ ನೆಲೆಸಿರುತ್ತೇನೆ.


ಆದ್ದರಿಂದ ಯಾವನಾದರೂ ಕ್ರಿಸ್ತನಲ್ಲಿದ್ದರೆ ಅವನು ನೂತನ ಸೃಷ್ಟಿಯಾಗಿದ್ದಾನೆ. ಇಗೋ, ಪೂರ್ವಸ್ಥಿತಿ ಹೋಗಿ ಎಲ್ಲಾ ನೂತನವಾಯಿತು.


ಇನ್ನು ಮೇಲೆ ನಾನು ಲೋಕದಲ್ಲಿ ಇರುವುದಿಲ್ಲ, ಇವರಾದರೋ ಲೋಕದಲ್ಲಿ ಇರುತ್ತಾರೆ. ನಾನು ನಿನ್ನ ಬಳಿಗೆ ಬರುತ್ತೇನೆ. ಪರಿಶುದ್ಧನಾದ ತಂದೆಯೇ, ನಾವು ಒಂದಾಗಿರುವ ಹಾಗೆ ಇವರೂ ಒಂದಾಗಿರಬೇಕೆಂದು, ನೀನು ನನಗೆ ಕೊಟ್ಟ ನಿನ್ನ ಹೆಸರಿನಲ್ಲಿ ಇವರನ್ನು ಕಾಪಾಡು.


ಆ ದಿನದಲ್ಲಿ ನೀವು ನನ್ನನ್ನು ಏನೂ ಕೇಳುವುದಿಲ್ಲ. ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ನೀವು ನನ್ನ ಹೆಸರಿನಲ್ಲಿ ತಂದೆಯನ್ನು ಏನು ಕೇಳಿಕೊಂಡರೂ ಅದನ್ನು ಆತನು ನಿಮಗೆ ಕೊಡುವನು.


ನಾವಾದರೋ ದೇವರ ಕಲಾಕೃತಿಯಾಗಿದ್ದೇವೆ, ದೇವರು ಮೊದಲೇ ನಮಗಾಗಿ ಸಂಕಲ್ಪಿಸಿದ್ದ ಸತ್ಕಾರ್ಯಗಳನ್ನು ಮಾಡುವವರಾಗಿ ಬದುಕಬೇಕೆಂದು ಯೇಸು ಕ್ರಿಸ್ತನಲ್ಲಿ ಸೃಷ್ಟಿಸಲ್ಪಟ್ಟಿದ್ದೇವೆ.


ದೇವರು ಈ ರೀತಿ ಮಾಡಿದ್ದರಿಂದಲೇ ಈಗ ನೀವು ಕ್ರಿಸ್ತ ಯೇಸುವಿನಲ್ಲಿದ್ದೀರಿ. ಕ್ರಿಸ್ತ ಯೇಸು ದೇವರ ಕಡೆಯಿಂದ ನಮಗೆ ಜ್ಞಾನವೂ, ನೀತಿಯೂ, ಶುದ್ಧಿಯೂ, ಮತ್ತು ವಿಮೋಚನೆಯು ಆಗಿದ್ದಾನೆ.


ನೀನು ನನಗೆ ಕೊಟ್ಟದ್ದೆಲ್ಲವೂ ನಿನ್ನಿಂದಲೇ ಬಂದಿದೆ ಎಂದು ಈಗ ಇವರು ತಿಳಿದುಕೊಂಡಿದ್ದಾರೆ.


ಕ್ರಿಸ್ತನಲ್ಲಿದ್ದ ಒಬ್ಬ ಮನುಷ್ಯನನ್ನು ಬಲ್ಲೆನು. ಅವನು ಹದಿನಾಲ್ಕು ವರ್ಷಗಳ ಹಿಂದೆ ಮೂರನೆಯ ಸ್ವರ್ಗಕ್ಕೆ ಒಯ್ಯಲ್ಪಟ್ಟನು. ಅವನು ದೇಹಸಹಿತನಾಗಿ ಒಯ್ಯಲ್ಪಟ್ಟನೋ, ಅಥವಾ ದೇಹರಹಿತನಾಗಿ ಒಯ್ಯಲ್ಪಟ್ಟನೋ ನಾನರಿಯೆನು, ದೇವರೇ ಬಲ್ಲನು.


ಹೇಗೆಂದರೆ, ಕ್ರಿಸ್ತನಲ್ಲಿ ದೇವರು ಜಗತ್ತನ್ನು ತನ್ನೊಡನೆ ಸಂಧಾನಮಾಡಿಕೊಳ್ಳುತ್ತಿದ್ದಾನೆ; ಮನುಷ್ಯರ ಅಪರಾಧಗಳನ್ನು ಅವರ ಲೆಕ್ಕಕ್ಕೆ ಹಾಕದೇ, ಈ ಸಂಧಾನದ ಸಂದೇಶವನ್ನು ಎಲ್ಲರಿಗೂ ಸಾರುವಂತೆ ಅದನ್ನು ನಮ್ಮ ಮೇಲೆ ಹೊರಿಸಿದ್ದಾನೆ.


ನನ್ನ ಸ್ವಜನರೂ ಹಾಗೂ ಜೊತೆ ಸೆರೆಯವರೂ ಆಗಿರುವ ಅಂದ್ರೋನಿಕನಿಗೂ, ಯೂನ್ಯನಿಗೂ ವಂದನೆ; ಅವರು ಅಪೊಸ್ತಲರಲ್ಲಿ ಪ್ರಸಿದ್ಧರಾಗಿದ್ದಾರಲ್ಲದೆ, ನನಗಿಂತ ಮೊದಲೇ ಕ್ರಿಸ್ತನನ್ನು ನಂಬಿದವರೂ ಆಗಿದ್ದರು.


ನಾನು ತಂದೆಯಲ್ಲಿಯೂ, ತಂದೆಯು ನನ್ನಲ್ಲಿಯೂ ಇದ್ದಾನೆಂದು ತಿಳಿದು ನೀವು ನನ್ನನ್ನು ನಂಬಿರಿ. ಇಲ್ಲವೇ ನಾನು ಮಾಡಿದ ಕಾರ್ಯಗಳ ನಿಮಿತ್ತದಿಂದಾದರೂ ನೀವು ನನ್ನನ್ನು ನಂಬಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು