Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 14:24 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ನನ್ನನ್ನು ಪ್ರೀತಿಸದವನು, ನನ್ನ ಮಾತುಗಳನ್ನು ಕೈಕೊಂಡು ನಡೆಯುವುದಿಲ್ಲ. ನೀವು ಕೇಳಿದ ಮಾತು ನನ್ನದಲ್ಲ. ನನ್ನನ್ನು ಕಳುಹಿಸಿದ ತಂದೆಯದೇ ಆಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ನನ್ನನ್ನು ಪ್ರೀತಿಸದೆ ಇರುವವನು ನನ್ನ ಮಾತನ್ನು ಕೈಗೊಂಡು ನಡೆಯುವುದಿಲ್ಲ. ನೀವು ಕೇಳುತ್ತಿರುವ ಮಾತು ನನ್ನದಲ್ಲ, ನನ್ನನ್ನು ಕಳುಹಿಸಿದ ಪಿತನದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ನನ್ನನ್ನು ಪ್ರೀತಿಸದೆ ಇರುವವನು ನನ್ನ ಮಾತುಗಳನ್ನು ಕೈಕೊಂಡು ನಡೆಯುವದಿಲ್ಲ; ನೀವು ಆಲಿಸುವ ಮಾತು ನನ್ನದಲ್ಲ, ನನ್ನನ್ನು ಕಳುಹಿಸಿದ ತಂದೆಯ ಮಾತೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಆದರೆ ನನ್ನನ್ನು ಪ್ರೀತಿಸದವನು, ನನ್ನ ಉಪದೇಶಕ್ಕೆ ವಿಧೇಯನಾಗುವುದಿಲ್ಲ. ನೀವು ಕೇಳುತ್ತಿರುವ ಈ ಉಪದೇಶವು ನಿಜವಾಗಿಯೂ ನನ್ನದಲ್ಲ, ನನ್ನನ್ನು ಕಳುಹಿಸಿರುವ ನನ್ನ ತಂದೆಯದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ನನ್ನನ್ನು ಪ್ರೀತಿಸದವನು ನನ್ನ ವಾಕ್ಯಗಳನ್ನು ಕೈಗೊಳ್ಳುವುದಿಲ್ಲ. ನೀವು ಕೇಳಿದ ವಾಕ್ಯವು ನನ್ನ ವಾಕ್ಯಗಳಲ್ಲ. ಅವು ನನ್ನನ್ನು ಕಳುಹಿಸಿದ ನನ್ನ ತಂದೆಯ ವಾಕ್ಯಗಳಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

24 ಜೆ ಕೊನ್ ಮಿಯಾ ಶಿಕ್ವಲ್ಲೆ ಶಿಕಾಪ್ ಮಾನುನ್ ಘೆಯ್‍ನ್ಯಾತ್, ತೆನಿ ಮಾಜೊ ಪ್ರೆಮ್ ಕರಿನ್ಯಾತ್, ತುಮಿ ಆಯ್ಕುಲ್ಯಾಶಿ ಹಿ ಶಿಕಾಪಾ ಮಾಜಿ ಸ್ವತಾಚಿ ನ್ಹಯ್, ಮಾಕಾ ಧಾಡುನ್ ದಿಲ್ಲ್ಯಾ ಬಾಬಾಚಿ”.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 14:24
19 ತಿಳಿವುಗಳ ಹೋಲಿಕೆ  

ಅದಕ್ಕೆ ಯೇಸು “ನಾನು ಹೇಳುವ ಬೋಧನೆಯು ನನ್ನದಲ್ಲ. ನನ್ನನ್ನು ಕಳುಹಿಸಿದಾತನದೇ.


ನಾನು ತಂದೆಯಲ್ಲಿ ಇದ್ದೇನೆ ಮತ್ತು ತಂದೆಯು ನನ್ನಲ್ಲಿ ಇದ್ದಾನೆ ಎಂಬುದನ್ನು ನೀನು ನಂಬುವುದಿಲ್ಲವೋ? ನಾನು ನಿಮಗೆ ಹೇಳುವ ಮಾತುಗಳನ್ನು ನನ್ನಷ್ಟಕ್ಕೆ ನಾನೇ ಆಡುವುದಿಲ್ಲ; ತಂದೆಯು ನನ್ನಲ್ಲಿ ಇದ್ದುಕೊಂಡು ತನ್ನ ಕಾರ್ಯಗಳನ್ನು ಮಾಡುತ್ತಾನೆ.


ಯೇಸು ಅವರಿಗೆ, “ದೇವರು ನಿಮಗೆ ತಂದೆಯಾಗಿದ್ದರೆ, ನೀವು ನನ್ನನ್ನು ಪ್ರೀತಿಸುತ್ತಿದ್ದಿರಿ, ಏಕೆಂದರೆ ನಾನು ದೇವರಿಂದಲೇ ಹೊರಟು ಲೋಕಕ್ಕೆ ಬಂದವನಾಗಿದ್ದೇನೆ. ನನ್ನಷ್ಟಕ್ಕೆ ನಾನೇ ಬರಲಿಲ್ಲ, ಆದರೆ ದೇವರೇ ನನ್ನನ್ನು ಕಳುಹಿಸಿದ್ದಾನೆ.


ಯೇಸು ಅವರಿಗೆ, “ನಿಮಗೆ ನಿಜನಿಜವಾಗಿ ಹೇಳುತ್ತೇನೆ, ತಂದೆಯು ಮಾಡುವುದನ್ನು ಕಂಡು ಮಗನು ಮಾಡುತ್ತಾನೆಯೇ, ಹೊರತು ತನ್ನಷ್ಟಕ್ಕೆ ತಾನೇ ಏನೂ ಮಾಡಲಾರನು. ಏಕೆಂದರೆ ಆತನು ಯಾವುದನ್ನೆಲ್ಲಾ ಮಾಡುವನೋ ಹಾಗೆಯೇ ಮಗನೂ ಮಾಡುತ್ತಾನೆ.


ಹೇಗೆಂದರೆ ದೇವರು ಯಾರನ್ನು ಕಳುಹಿಸಿದ್ದಾನೋ ಆತನಿಗೆ ಆತ್ಮ ವರವನ್ನು ಅಳತೆಮಾಡದೆ ಧಾರಾಳವಾಗಿ ಅನುಗ್ರಹಿಸುವುದರಿಂದ ಆತನು ದೇವರ ಮಾತುಗಳನ್ನೇ ಆಡುತ್ತಾನೆ.


“ನೀವು ನನ್ನನ್ನು ಪ್ರೀತಿಸುವವರಾದರೆ ನನ್ನ ಆಜ್ಞೆಗಳನ್ನು ಕೈಕೊಂಡು ನಡೆಯುವಿರಿ.


ಆತನ ವಾಕ್ಯವು ನಿಮ್ಮಲ್ಲಿ ನೆಲೆಗೊಂಡಿಲ್ಲ. ಏಕೆಂದರೆ ಆತನು ಕಳುಹಿಸಿದಾತನನ್ನು ನೀವು ನಂಬದೇ ಇದ್ದೀರಿ.


ನಾನು ತಂದೆಯ ಬಳಿಯಲ್ಲಿ ನೋಡಿದ್ದನ್ನೇ ಮಾತನಾಡುತ್ತೇನೆ, ನೀವು ತಂದೆಯಿಂದ ಕೇಳಿದ್ದನ್ನೇ ಮಾಡಿರಿ” ಎಂದನು.


ನಿಮ್ಮ ವಿಷಯವಾಗಿ ಮಾತನಾಡುವುದಕ್ಕೂ, ನಿಮ್ಮ ಮೇಲೆ ತೀರ್ಪು ಮಾಡುವುದಕ್ಕೂ ಅನೇಕ ಸಂಗತಿಗಳು ನನಗುಂಟು. ಆದರೆ ನನ್ನನ್ನು ಕಳುಹಿಸಿ ಕೊಟ್ಟಾತನು ಸತ್ಯವಂತನು. ಆತನಿಂದ ನಾನು ಕೇಳಿದವುಗಳನ್ನೇ ಲೋಕಕ್ಕೆ ಹೇಳುತ್ತೇನೆ” ಎಂದನು.


ಹೀಗಿರಲಾಗಿ ಯೇಸು ಅವರಿಗೆ, “ನೀವು ಮನುಷ್ಯಕುಮಾರನನ್ನು ಮೇಲಕ್ಕೆತ್ತಿದಾಗ, ನಾನೇ ಆತನೆಂದೂ, ನನ್ನಷ್ಟಕ್ಕೆ ನಾನೇ ಏನೂ ಮಾಡಲಾರೆನೆಂದು ನೀವು ತಿಳಿದುಕೊಳ್ಳುವಿರಿ. ಆದರೆ ನನ್ನ ತಂದೆಯು ನನಗೆ ಬೋಧಿಸಿದ ಸಂಗತಿಗಳನ್ನೇ ಮಾತನಾಡುತ್ತೇನೆ.


ಯೇಸುವು ಇದನ್ನು ತಿಳಿದು ದೇವಾಲಯದಲ್ಲಿ ಉಪದೇಶ ಮಾಡುವಾಗ, “ನೀವು ನನ್ನನ್ನು ಬಲ್ಲಿರಿ, ನಾನು ಎಲ್ಲಿಂದ ಬಂದವನೆಂದೂ ನೀವು ಬಲ್ಲಿರಿ, ಆದರೂ ನಾನು ನನ್ನಷ್ಟಕ್ಕೆ ನಾನೇ ಬಂದವನಲ್ಲ. ನನ್ನನ್ನು ಕಳುಹಿಸಿದಾತನು ಸತ್ಯವಂತನು. ನೀವು ಆತನನ್ನು ಅರಿತವರಲ್ಲ.


ಯೇಸು ಅವನಿಗೆ, “ನೀನು ಪೂರ್ಣನಾಗುವುದಕ್ಕೆ ಬಯಸುವುದಾದರೆ, ಹೋಗಿ ನಿನಗಿರುವುದನ್ನೆಲ್ಲಾ ಮಾರಿ, ಬಡವರಿಗೆ ಕೊಡು, ಆಗ ನಿನಗೆ ಪರಲೋಕದಲ್ಲಿ ಸಂಪತ್ತಿರುವುದು. ಅನಂತರ ನೀನು ಬಂದು ನನ್ನನ್ನು ಹಿಂಬಾಲಿಸು” ಎಂದು ಹೇಳಿದನು.


ನಿನಗೆ ನಿಜನಿಜವಾಗಿ ಹೇಳುತ್ತೇನೆ, ನಾವು ತಿಳಿದಿರುವುದನ್ನು ಮಾತನಾಡುತ್ತೇವೆ ಮತ್ತು ನೋಡಿದ್ದಕ್ಕೆ ಸಾಕ್ಷಿ ಕೊಡುತ್ತೇವೆ. ಆದರೂ ನೀವು ನಮ್ಮ ಸಾಕ್ಷಿಯನ್ನು ಸ್ವೀಕರಿಸುವುದಿಲ್ಲ.


“ಈ ಮಾತುಗಳನ್ನು ನಾನು ಇನ್ನೂ ನಿಮ್ಮ ಬಳಿಯಲ್ಲಿರುವಾಗಲೇ ಹೇಳಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು