Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 14:26 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಆದರೆ ಆ ಸಹಾಯಕನು, ಅಂದರೆ ನನ್ನ ಹೆಸರಿನಲ್ಲಿ ತಂದೆಯು ಕಳುಹಿಸಿಕೊಡುವ ಪವಿತ್ರಾತ್ಮನೇ ನಿಮಗೆ ಎಲ್ಲವನ್ನು ಉಪದೇಶಿಸಿ ನಾನು ನಿಮಗೆ ಹೇಳಿದ್ದನೆಲ್ಲಾ ನಿಮ್ಮ ನೆನಪಿಗೆ ತಂದುಕೊಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಆದರೆ ಪಿತನು ನನ್ನ ಹೆಸರಿನಲ್ಲಿ ಕಳುಹಿಸಿಕೊಡುವ ಪೋಷಕರಾದ ಪವಿತ್ರಾತ್ಮ ನಿಮಗೆ ಎಲ್ಲವನ್ನೂ ಬೋಧಿಸಿ ನಾನು ಹೇಳಿರುವುದನ್ನೆಲ್ಲಾ ನಿಮ್ಮ ನೆನಪಿಗೆ ತರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಆದರೆ ಆ ಸಹಾಯಕನು ಅಂದರೆ ನನ್ನ ಹೆಸರಿನಲ್ಲಿ ತಂದೆಯು ಕಳುಹಿಸಿಕೊಡುವ ಪವಿತ್ರಾತ್ಮನೇ ನಿಮಗೆ ಎಲ್ಲವನ್ನು ಉಪದೇಶಿಸಿ ನಾನು ನಿಮಗೆ ಹೇಳಿದ್ದನ್ನೆಲ್ಲಾ ನಿಮ್ಮ ನೆನಪಿಗೆ ತರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಆದರೆ ಆ ಸಹಾಯಕನು ನಿಮಗೆ ಪ್ರತಿಯೊಂದನ್ನೂ ಉಪದೇಶಿಸುವನು. ನಾನು ನಿಮಗೆ ಹೇಳಿದ ಸಂಗತಿಗಳನ್ನೆಲ್ಲಾ ಆ ಸಹಾಯಕನು ನಿಮ್ಮ ನೆನಪಿಗೆ ತರುವನು. ತಂದೆಯು ನನ್ನ ಹೆಸರಿನಲ್ಲಿ ಕಳುಹಿಸಿಕೊಡುವ ಪವಿತ್ರಾತ್ಮನೇ ಆ ಸಹಾಯಕನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ತಂದೆಯು ನನ್ನ ಹೆಸರಿನಲ್ಲಿ ಕಳುಹಿಸಿಕೊಡುವ ಸಹಾಯಕ ‘ಪವಿತ್ರಾತ್ಮರು’ ಎಲ್ಲವನ್ನೂ ನಿಮಗೆ ಬೋಧಿಸಿ ನಾನು ನಿಮಗೆ ಹೇಳಿದ್ದನ್ನೆಲ್ಲಾ ನಿಮ್ಮ ನೆನಪಿಗೆ ತರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

26 ಮಾಜ್ಯಾ ನಾವಾನ್ ಬಾಬಾನ್ ಧಾಡುನ್ ದಿಲ್ಲೊ ಮಜತ್ ಕರ್‍ತಲೊ ಪವಿತ್ರ್ ಆತ್ಮೊ ಮಿಯಾ ತುಮ್ಕಾ ಸಾಂಗಲ್ಲೆ ಸಗ್ಳೆ ಯಾದ್ ಕರುನ್ ದಿತಾ ಅನಿ ತುಮ್ಕಾ ಸಗ್ಳೆ ಶಿಕ್ವುತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 14:26
75 ತಿಳಿವುಗಳ ಹೋಲಿಕೆ  

ಆದರೆ ತಂದೆಯ ಬಳಿಯಿಂದ ನಾನು ನಿಮಗೆ ಕಳುಹಿಸಿಕೊಡುವ ಸಹಾಯಕನು, ಎಂದರೆ, ತಂದೆಯ ಬಳಿಯಿಂದ ಹೊರಡುವ ಸತ್ಯದ ಆತ್ಮನು ಬಂದಾಗ, ಆತನೇ ನನ್ನ ವಿಷಯವಾಗಿ ಸಾಕ್ಷಿ ಕೊಡುವನು.


ಆಗ ನಾನು ತಂದೆಯನ್ನು ಕೇಳಿಕೊಳ್ಳುವೆನು, ಆತನು ನಿಮಗೆ ಬೇರೊಬ್ಬ ಸಹಾಯಕನನ್ನು ಸದಾಕಾಲವೂ ನಿಮ್ಮೊಂದಿಗೆ ಇರುವುದಕ್ಕೆ ಕಳುಹಿಸಿ ಕೊಡುವನು.


ಆದರೆ ಆತನಿಂದ ನೀವು ಹೊಂದಿದ ಅಭಿಷೇಕವು ನಿಮ್ಮಲ್ಲಿ ನೆಲೆಗೊಂಡಿರುವುದರಿಂದ ಯಾರೂ ನಿಮಗೆ ಬೋಧನೆ ಮಾಡುವುದು ಅಗತ್ಯವಿಲ್ಲ. ಆತನು ನಿಮಗೆ ಮಾಡಿರುವ ಅಭಿಷೇಕವೇ ನಿಮ್ಮನ್ನು ಎಲ್ಲಾ ವಿಷಯಗಳಲ್ಲಿ ಬೋಧನೆ ಮಾಡುವಂಥದ್ದಾಗಿದೆ ಅದು ಸುಳ್ಳಲ್ಲ ಸತ್ಯವಾಗಿದೆ. ಅದು ನಿಮಗೆ ಬೋಧನೆ ಮಾಡಿದ ಪ್ರಕಾರವೇ ಆತನಲ್ಲಿ ನೆಲೆಗೊಂಡಿರುವಿರಿ.


ಆದರೂ ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ, ನಾನು ಹೋಗುವುದು ನಿಮಗೆ ಒಳ್ಳೆಯದು, ಹೇಗೆಂದರೆ ನಾನು ಹೋಗದಿದ್ದರೆ ಆ ಸಹಾಯಕನು ನಿಮ್ಮ ಬಳಿಗೆ ಬರುವುದಿಲ್ಲ. ನಾನು ಹೋದರೆ ಆತನನ್ನು ನಿಮ್ಮ ಬಳಿಗೆ ಕಳುಹಿಸಿಕೊಡುತ್ತೇನೆ.


ಆದರೆ ನೀವು ಪವಿತ್ರನಾಗಿರುವಾತನಿಂದ ಅಭಿಷೇಕವನ್ನು ಹೊಂದಿದವರಾಗಿದ್ದೀರಿ ಎಂಬ ಸತ್ಯವನ್ನೂ ತಿಳಿದವರಾಗಿದ್ದೀರಿ.


ನೀವು ನಿಮ್ಮ ಸ್ವಂತ ಸೊತ್ತಲ್ಲವೆಂದು ಮತ್ತು ದೇವರಿಂದ ದಾನವಾಗಿ ಲಭಿಸಿದ ಪವಿತ್ರಾತ್ಮನು ನಿಮ್ಮೊಳಗೆ ನೆಲೆಗೊಂಡಿರುವುದರಿಂದ ನಿಮ್ಮ ದೇಹವು ದೇವರ ಪವಿತ್ರಾಲಯವಾಗಿದೆಂಬುದು ನಿಮಗೆ ತಿಳಿಯದೋ?


ಆತನು ದೇವರ ಬಲಗೈಯಿಂದ ಉನ್ನತಸ್ಥಾನಕ್ಕೆ ಏರಿಸಲ್ಪಟ್ಟು, ವಾಗ್ದಾನವಾಗಿದ್ದ ಪವಿತ್ರಾತ್ಮವರವನ್ನು ತಂದೆಯಿಂದ ಹೊಂದಿ ನೀವು ನೋಡಿ ಕೇಳುವುದನ್ನು ಸುರಿಸಿದ್ದಾನೆ.


ನಮ್ಮ ಕರ್ತನಾದ ಯೇಸು ಕ್ರಿಸ್ತನ ದೇವರೂ ಮಹಿಮಾಸ್ವರೂಪನಾದ ತಂದೆಯೂ ಆಗಿರುವಾತನು ತನ್ನ ವಿಷಯವಾಗಿ ಪೂರ್ಣವಾದ ತಿಳಿವಳಿಕೆಯನ್ನು ಕೊಟ್ಟು, ಜ್ಞಾನ ಮತ್ತು ಪ್ರಕಟಣೆಗಳ ಆತ್ಮವನ್ನು ನಿಮಗೆ ದಯಪಾಲಿಸಬೇಕೆಂದು ಪ್ರಾರ್ಥಿಸುತ್ತೇನೆ.


ನಿರೀಕ್ಷೆಯನ್ನು ಕೊಡುವ ದೇವರು ಪವಿತ್ರಾತ್ಮನ ಶಕ್ತಿಯಿಂದ ಸಮೃದ್ಧವಾದ ನಿರೀಕ್ಷೆಯುಳ್ಳವರಾಗಿ ನಂಬುವುದರಿಂದ ಉಂಟಾಗುವ ಸಂತೋಷವನ್ನೂ ಮನಶ್ಯಾಂತಿಯನ್ನೂ ನಿಮಗೆ ಪರಿಪೂರ್ಣವಾಗಿ ದಯಪಾಲಿಸಲ್ಲಿ, ನೀವು ಪವಿತ್ರಾತ್ಮನಲ್ಲಿ ಬಲಗೊಂಡವರಾಗಿ ನಿರೀಕ್ಷೆಯಲ್ಲಿ ಅಭಿವೃದ್ಧಿಯನ್ನು ಹೊಂದುವಂತೆ ಅನುಗ್ರಹಿಸಲಿ.


ಆಗ ಅವರೆಲ್ಲರೂ ಪವಿತ್ರಾತ್ಮಭರಿತರಾದರು, ಅವರಿಗೆ ಆ ಪವಿತ್ರಾತ್ಮನು ನೀಡಿದ ಶಕ್ತಿಯ ಪ್ರಕಾರ ಬೇರೆಬೇರೆ ಭಾಷೆಗಳಲ್ಲಿ ಮಾತನಾಡುವುದಕ್ಕೆ ಪ್ರಾರಂಭಿಸಿದರು.


ಆದುದರಿಂದ ಆತನು ಸತ್ತವರೊಳಗಿಂದ ಎದ್ದ ಮೇಲೆ ಈ ಮಾತು ಆತನ ಶಿಷ್ಯರ ನೆನಪಿಗೆ ಬಂದು ಧರ್ಮಶಾಸ್ತ್ರದಲ್ಲಿ ಬರೆದಿರುವುದನ್ನೂ, ಮತ್ತು ಯೇಸು ತಮಗೆ ಹೇಳಿದ ಮಾತನ್ನೂ ಅವರು ನಂಬಿದರು.


ನಿನ್ನ ಮಕ್ಕಳೆಲ್ಲರೂ ಯೆಹೋವನಿಂದ ಶಿಕ್ಷಿತರಾಗಿರುವರು, ಅವರಿಗೆ ಅಧಿಕ ಸುಕ್ಷೇಮವಾಗುವುದು.


ಇವರು ಕರ್ತನನ್ನು ಆರಾಧಿಸುತ್ತಾ, ಉಪವಾಸಮಾಡುತ್ತಾ ಇದ್ದಾಗ ಪವಿತ್ರಾತ್ಮನು; “ನಾನು ಬಾರ್ನಬ ಮತ್ತು ಸೌಲರನ್ನು ಕರೆದ ಸೇವೆಗಾಗಿ ಅವರನ್ನು ಬೇರ್ಪಡಿಸಿರಿ” ಎಂದು ಹೇಳಿದನು.


ಆದರೆ ಈ ಸಂಗತಿಗಳನ್ನು ಮುಂತಿಳಿಸುವುದರಲ್ಲಿ ತಮಗೋಸ್ಕರವಲ್ಲ ನಿಮಗೋಸ್ಕರವೇ ಸೇವೆ ಮಾಡುವವರಾಗಿದ್ದಾರೆಂಬುದು ಅವರಿಗೆ ಪ್ರಕಟವಾಯಿತು. ಅವರು ಮುಂದಾಗಿ ಹೇಳಿದ ಸಂಗತಿಗಳೇ ಈಗ ಸಂಭವಿಸಲ್ಪಡುತ್ತಿವೆ ಎಂಬ ವರ್ತಮಾನವು ಪರಲೋಕದಿಂದ ಕಳುಹಿಸಲ್ಪಟ್ಟ ಪವಿತ್ರಾತ್ಮನ ಬಲದಿಂದ ನಿಮಗೆ ಸುವಾರ್ತೆಯನ್ನು ಸಾರಿದವರ ಮೂಲಕ ನಿಮಗೆ ಪ್ರಸಿದ್ಧಿಮಾಡಲ್ಪಟ್ಟಿದೆ. ದೇವದೂತರೂ ಈ ಸಂಗತಿಗಳನ್ನು ಲಕ್ಷ್ಯವಿಟ್ಟು ನೋಡಬೇಕೆಂದು ಬಯಸುತ್ತಿದ್ದಾರೆ.


ಇದಲ್ಲದೆ ಸಾಕ್ಷಿ ಕೊಡುವವರು ಮೂವರಿದ್ದಾರೆ.


ನಾವು ಮಾಡಿದ ಪುಣ್ಯಕಾರ್ಯಗಳ ನಿಮಿತ್ತದಿಂದಲ್ಲ ಪುನರ್ಜನ್ಮವನ್ನು ಸೂಚಿಸುವ ದೀಕ್ಷಾಸ್ನಾನದ ಮೂಲಕವಾಗಿಯೂ, ಪವಿತ್ರಾತ್ಮನ ನವೀಕರಣದ ಮೂಲಕವಾಗಿಯೂ ಆತನು ತನ್ನ ಕರುಣೆಯಿಂದಲೇ ನಮ್ಮನ್ನು ರಕ್ಷಿಸಿದನು.


ಇಗೋ ನನ್ನ ತಂದೆಯು ವಾಗ್ದಾನ ಮಾಡಿದ ಶಕ್ತಿಯನ್ನು ನಿಮಗೆ ಕಳುಹಿಸಿಕೊಡುತ್ತೇನೆ. ದೇವರು ಮೇಲಣ ಲೋಕದಿಂದ ನಿಮಗೆ ಶಕ್ತಿಯನ್ನು ಕೊಡುವ ತನಕ ಈ ಪಟ್ಟಣದಲ್ಲೇ ಕಾದುಕೊಂಡಿರಿ” ಎಂದು ಹೇಳಿದನು.


ಪ್ರಿಯರೇ, ನೀವಾದರೋ ನಿಮಗಿರುವ ಅತಿ ಪರಿಶುದ್ಧವಾದ ಕ್ರಿಸ್ತ ನಂಬಿಕೆಯನ್ನು ಆಧಾರವಾಗಿಟ್ಟುಕೊಂಡು ಅಭಿವೃದ್ಧಿಹೊಂದುತ್ತಾ, ಪವಿತ್ರಾತ್ಮಪ್ರೇರಿತರಾಗಿ ಪ್ರಾರ್ಥನೆ ಮಾಡಿರಿ.


ಈ ಗುಡಾರದ ಮೊದಲನೆಯ ಭಾಗವು ಇನ್ನೂ ಇರುವ ತನಕ ಅತಿ ಪರಿಶುದ್ಧ ಸ್ಥಳಕ್ಕೆ ಹೋಗುವ ಮಾರ್ಗವು ಇದುವರೆಗೂ ಪ್ರಕಟವಾಗಲಿಲ್ಲ ಎಂಬುದನ್ನು ಪವಿತ್ರಾತ್ಮನು ವ್ಯಕ್ತಪಡಿಸುತ್ತಾನೆ.


ಆದ್ದರಿಂದ ಪವಿತ್ರಾತ್ಮನು ಹೇಳುವ ಪ್ರಕಾರ, “ನೀವು ಈ ದಿನ ದೇವರ ಸ್ವರಕ್ಕೆ ಕಿವಿಗೊಡುವುದಾದರೆ,


ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯೂ, ದೇವರ ಪ್ರೀತಿಯೂ, ಪವಿತ್ರಾತ್ಮನ ಅನ್ಯೋನ್ಯತೆಯೂ ನಿಮ್ಮೆಲ್ಲರ ಸಂಗಡವಿರಲಿ.


ಹೀಗಿರಲು ಈ ಮಾತನ್ನು ತಿರಸ್ಕರಿಸುವವನು ಮನುಷ್ಯರನ್ನು ಮಾತ್ರವಲ್ಲದೆ, ನಿಮಗೆ ಪವಿತ್ರಾತ್ಮವರವನ್ನು ದಯಪಾಲಿಸುವ ದೇವರನ್ನೂ ತಿರಸ್ಕರಿಸುವವನಾಗಿದ್ದಾನೆ.


ಹೀಗಿರುವುದರಿಂದ ನಾನು ನಿಮಗೆ ತಿಳಿಸುವುದನ್ನು ಕೇಳಿರಿ. ದೇವರಾತ್ಮನ ಪ್ರೇರಣೆಯಿಂದ ಮಾತನಾಡುವ ಯಾವ ಮನುಷ್ಯನಾದರೂ “ಯೇಸುವನ್ನು ಶಾಪಗ್ರಸ್ತನೆಂದು” ಹೇಳುವುದಿಲ್ಲ. ಮತ್ತು ಪವಿತ್ರಾತ್ಮನ ಪ್ರೇರಣೆಯಿಂದಲೇ ಹೊರತು ಯಾವ ಮನುಷ್ಯನಾದರೂ “ಯೇಸುವನ್ನು ಕರ್ತನೆಂದು” ಹೇಳಲಾರನು.


ಏಕೆಂದರೆ ಯಾವ ಪ್ರವಾದನೆಯೂ ಎಂದೂ ಮನುಷ್ಯರ ಚಿತ್ತದಿಂದ ಉಂಟಾಗಲಿಲ್ಲ. ಆದರೆ ಮನುಷ್ಯರು ಪವಿತ್ರಾತ್ಮಪ್ರೇರಿತರಾಗಿ ದೇವರಿಂದ ಹೊಂದಿದ್ದನ್ನೇ ಮಾತನಾಡಿರುವುದು.


ಕೆಟ್ಟವರಾದ ನೀವು ನಿಮ್ಮ ಮಕ್ಕಳಿಗೆ ಒಳ್ಳೆಯ ಪದಾರ್ಥಗಳನ್ನು ಕೊಡಬಲ್ಲವರಾದರೆ ಪರಲೋಕದಲ್ಲಿರುವ ನಿಮ್ಮ ತಂದೆಯು ತನ್ನನ್ನು ಬೇಡಿಕೊಳ್ಳುವವರಿಗೆ ಎಷ್ಟೋ ಹೆಚ್ಚಾಗಿ ಪವಿತ್ರಾತ್ಮವನ್ನೇ ಕೊಡುವನಲ್ಲವೇ?” ಅಂದನು.


ನಿನ್ನ ಸನ್ನಿಧಿಯಿಂದ ನನ್ನನ್ನು ತಳ್ಳಬೇಡ; ನಿನ್ನ ಪರಿಶುದ್ಧಾತ್ಮವನ್ನು ನನ್ನಿಂದ ತೆಗೆಯಬೇಡ.


ಎಲಿಸಬೇತಳು ಮರಿಯಳ ವಂದನೆಯನ್ನು ಕೇಳುತ್ತಲೇ ಆಕೆಯ ಗರ್ಭದಲ್ಲಿದ್ದ ಕೂಸು ಕುಣಿದಾಡಿತು ಮತ್ತು ಎಲಿಸಬೇತಳು ಪವಿತ್ರಾತ್ಮಭರಿತಳಾದಳು.


ನಾನಂತೂ ಮಾನಸಾಂತರಕ್ಕಾಗಿ ನಿಮಗೆ ನೀರಿನಲ್ಲಿ ದೀಕ್ಷಾಸ್ನಾನ ಮಾಡಿಸುತ್ತೇನೆ. ಆದರೆ ನನ್ನ ನಂತರ ಬರುವವನು ನನಗಿಂತ ಶಕ್ತನು; ಆತನ ಪಾದರಕ್ಷೆಗಳನ್ನು ಹೊರಲಿಕ್ಕೂ ನಾನು ಯೋಗ್ಯನಲ್ಲ; ಆತನು ಪವಿತ್ರಾತ್ಮನಲ್ಲಿಯೂ ಬೆಂಕಿಯಲ್ಲಿಯೂ ನಿಮಗೆ ದೀಕ್ಷಾಸ್ನಾನಮಾಡಿಸುವನು.


ಸೂಚಕ ಕಾರ್ಯಗಳಿಂದಲೂ, ಅದ್ಭುತಕಾರ್ಯಗಳಿಂದಲೂ, ನಾನಾ ವಿಧವಾದ ಮಹತ್ಕಾರ್ಯಗಳಿಂದಲೂ ಮತ್ತು ತನ್ನಿಚ್ಛೆಯಂತೆ ಪವಿತ್ರಾತ್ಮವರಗಳನ್ನು ನೀಡುವುದರ ಮೂಲಕವೂ ದೇವರು ತಾನೇ ಅದನ್ನು ಸಾಕ್ಷಿಕರಿಸಿದನು.


ನಿನ್ನ ವಶಕ್ಕೆ ಒಪ್ಪಿಸಿಕೊಟ್ಟಿರುವ ಒಳ್ಳೆಯ ವಿಷಯವನ್ನು ನಮ್ಮಲ್ಲಿ ವಾಸವಾಗಿರುವ ಪವಿತ್ರಾತ್ಮನ ಮೂಲಕವಾಗಿ ಕಾಪಾಡಿಕೋ.


ದೇವರ ಪವಿತ್ರಾತ್ಮನನ್ನು ದುಃಖಪಡಿಸಬೇಡಿರಿ. ಆತನಲ್ಲಿಯೇ ವಿಮೋಚನೆಯ ದಿನಕ್ಕಾಗಿ ಮುದ್ರೆ ಹೊಂದಿದ್ದೀರಲ್ಲಾ.


ಯಾಕೆಂದರೆ ತಿನ್ನುವುದೂ, ಕುಡಿಯುವುದೂ ದೇವರ ರಾಜ್ಯವಲ್ಲ ನೀತಿಯೂ, ಸಮಾಧಾನವೂ, ಪವಿತ್ರಾತ್ಮನಿಂದಾಗುವ ಆನಂದವೂ ಆಗಿದೆ.


ಈ ನಿರೀಕ್ಷೆಯು ನಮ್ಮನ್ನು ಆಶಾಭಂಗಪಡಿಸುವುದಿಲ್ಲ, ಏಕೆಂದರೆ, ನಮಗೆ ಕೊಟ್ಟಿರುವ ಪವಿತ್ರಾತ್ಮನ ಮೂಲಕವಾಗಿ ದೇವರ ಪ್ರೀತಿಯು ನಮ್ಮ ಹೃದಯಗಳಲ್ಲಿ ಸುರಿಸಿದ್ದಾನೆ.


ಕರ್ತನು ತನ್ನ ಸ್ವಂತ ರಕ್ತದಿಂದ ಸಂಪಾದಿಸಿಕೊಂಡ ದೇವರ ಸಭೆಯನ್ನು ಪರಿಪಾಲಿಸುವುದಕ್ಕಾಗಿ ಪವಿತ್ರಾತ್ಮನು ನಿಮ್ಮನ್ನೇ ಆ ಗುಂಪಿನಲ್ಲಿ ಅಧ್ಯಕ್ಷರನ್ನಾಗಿ ಇಟ್ಟಿರುವುದರಿಂದ ನಿಮ್ಮ ವಿಷಯದಲ್ಲಿಯೂ, ಎಲ್ಲಾ ಹಿಂಡಿನ ವಿಷಯದಲ್ಲಿಯೂ ಎಚ್ಚರಿಕೆಯಾಗಿರಿ.


ಆಗ; “ಯೋಹಾನನಾದರೋ ನೀರಿನಿಂದ ದೀಕ್ಷಾಸ್ನಾನಮಾಡಿಸಿದನು; ನಿಮಗಾದರೋ ಪವಿತ್ರಾತ್ಮನಲ್ಲಿ ಸ್ನಾನವಾಗುವುದು” ಎಂದು ಕರ್ತನು ಹೇಳಿದ ಮಾತುಗಳು ನನ್ನ ನೆನಪಿಗೆ ಬಂದಿತು.


ಆದರೆ ಪವಿತ್ರಾತ್ಮನು ನಿಮ್ಮ ಮೇಲೆ ಬರಲು ನೀವು ಶಕ್ತಿಯನ್ನು ಹೊಂದಿದವರಾಗಿ ಯೆರೂಸಲೇಮಿನಲ್ಲಿಯೂ, ಯೂದಾಯದ ಎಲ್ಲಾ ಸ್ಥಳದಲ್ಲಿಯು, ಸಮಾರ್ಯ ಸೀಮೆಗಳಲ್ಲಿಯೂ, ಭೂಲೋಕದ ಕಟ್ಟಕಡೆಯವರೆಗೂ ನನಗೆ ಸಾಕ್ಷಿಗಳಾಗಿರುವಿರಿ” ಅಂದನು.


ಆತನು ಇದನ್ನು ಹೇಳಿ ಅವರ ಮೇಲೆ ಉಸಿರೂದಿ ಅವರಿಗೆ, “ನೀವು ಪವಿತ್ರಾತ್ಮನನ್ನು ಪಡೆದುಕೊಳ್ಳಿರಿ.


‘ಅವರೆಲ್ಲರೂ ದೇವರಿಂದಲೇ ಬೋಧಿಸಲ್ಪಡುವರು’ ಎಂದು ಪ್ರವಾದಿಗಳ ಗ್ರಂಥದಲ್ಲಿ ಬರೆದಿದೆ. ತಂದೆಯಿಂದ ಕೇಳಿ ಕಲಿತ ಪ್ರತಿಯೊಬ್ಬನೂ ನನ್ನ ಬಳಿಗೆ ಬರುತ್ತಾರೆ.


“ನಿಮ್ಮನ್ನು ಹಿಡಿದುಕೊಂಡು ಹೋಗಿ ಒಪ್ಪಿಸುವಾಗ ಏನು ಹೇಳಬೇಕು ಎಂದು ಮುಂಚಿತವಾಗಿಯೇ ಚಿಂತಿಸಬೇಡಿರಿ, ನೀವು ಏನು ಹೇಳಬೇಕೋ ಅದು ನಿಮಗೆ ಆ ಗಳಿಗೆಯಲ್ಲಿ ಕೊಡಲ್ಪಡುವುದು, ಏಕೆಂದರೆ ಮಾತನಾಡುವವರು ನೀವಲ್ಲ, ಆದರೆ ಪವಿತ್ರಾತ್ಮನೇ ನಿಮ್ಮ ಮೂಲಕವಾಗಿ ಮಾತನಾಡುವನು,


ಅವನು ಇದನ್ನು ಕುರಿತು ಆಲೋಚಿಸುತ್ತಿರುವಾಗ, ದೇವದೂತನು ಅವನಿಗೆ ಕನಸಿನಲ್ಲಿ ಕಾಣಿಸಿಕೊಂಡು, “ದಾವೀದನ ಮಗನಾದ ಯೋಸೇಫನೇ, ನೀನು ಮರಿಯಳನ್ನು ಹೆಂಡತಿಯಾಗಿ ಸೇರಿಸಿಕೊಳ್ಳುವುದಕ್ಕೆ ಅಂಜಬೇಡ. ಆಕೆ ಗರ್ಭವತಿಯಾದದ್ದು ಪವಿತ್ರಾತ್ಮನಿಂದಲೇ.


ಪವಿತ್ರಾತ್ಮನು ಸಹ ನಮಗೆ ಸಾಕ್ಷಿಕೊಡುವಾತನಾಗಿ,


ಇದು ಆತನ ಶಿಷ್ಯರಿಗೆ ಮೊದಲು ತಿಳಿಯಲಿಲ್ಲ. ಆದರೆ ಯೇಸು ತನ್ನ ಮಹಿಮೆಯನ್ನು ಹೊಂದಿದ ಮೇಲೆ ಇದು ಆತನ ವಿಷಯವಾಗಿ ಬರೆದಿರುವಂತೆಯೇ, ಇವುಗಳನ್ನು ಆತನಿಗೆ ಮಾಡಿದೆವೆಂದೂ ನೆನಪು ಮಾಡಿಕೊಂಡರು.


“‘ನಾನು ನಿನ್ನ ಶತ್ರುಗಳನ್ನು ನಿನ್ನ ಪಾದದಡಿ ಹಾಕುವ ತನಕ ನೀನು ನನ್ನ ಬಲಗಡೆಯಲ್ಲಿ ಕುಳಿತುಕೊಂಡಿರು ಎಂದು ಕರ್ತನು ನನ್ನ ಒಡೆಯನಿಗೆ ನುಡಿದನು’ ಎಂಬುದಾಗಿ ದಾವೀದನೇ ಪವಿತ್ರಾತ್ಮನ ಪ್ರೇರಣೆಯಿಂದ ಹೇಳಿದ್ದಾನೆ.


ದೇವರಾತ್ಮನು ಸಭೆಗಳಿಗೆ ಹೇಳುವುದನ್ನು ಕಿವಿಯುಳ್ಳವನು ಕೇಳಲಿ. ಜಯಹೊಂದುವವನಿಗೆ ಎರಡನೆಯ ಮರಣದಿಂದ ಕೇಡಾಗುವುದೇ ಇಲ್ಲ.


ನೀವು ಸಹ ನಿಮ್ಮ ರಕ್ಷಣಾ ಸುವಾರ್ತೆಯ ಸತ್ಯವಾಕ್ಯವನ್ನು ಕೇಳಿ, ಕ್ರಿಸ್ತನಲ್ಲಿ ನಂಬಿಕೆಯಿಟ್ಟು, ವಾಗ್ದಾನಮಾಡಲ್ಪಟ್ಟ ಪವಿತ್ರಾತ್ಮನಿಂದ ಮುದ್ರೆಯನ್ನು ಹೊಂದಿದ್ದೀರಿ.


ಶುದ್ಧಮನಸ್ಸು, ಜ್ಞಾನ, ದೀರ್ಘಶಾಂತಿ, ದಯೆ, ಪವಿತ್ರಾತ್ಮ, ನಿಷ್ಕಪಟವಾದ ಪ್ರೀತಿ,


ಎಲ್ಲಾ ವಿಷಯಗಳಲ್ಲಿ ನಾನು ನಿಮಗೆ ಮಾದರಿ ತೋರಿಸಿದ್ದೇನೆ. ನೀವು ಹಾಗೆಯೇ ದುಡಿದು ಬಲವಿಲ್ಲದವರಿಗೆ ಉಪಕಾರಮಾಡಬೇಕು; ಮತ್ತು; ‘ತೆಗೆದುಕೊಳ್ಳುವುದಕ್ಕಿಂತ ಕೊಡುವುದೇ ಹೆಚ್ಚಿನ ಭಾಗ್ಯವೆಂಬುದಾಗಿ’ ಕರ್ತನಾದ ಯೇಸು ತಾನೇ ಹೇಳಿದ ಮಾತುಗಳನ್ನು ನೆನಪಿನಲ್ಲಿಟ್ಟುಕೊಂಡಿರಬೇಕು” ಅಂದನು.


ಮತ್ತು ಹೃದಯವನ್ನು ಬಲ್ಲವನಾಗಿರುವ ದೇವರು ಹೇಗೆ ಪವಿತ್ರಾತ್ಮವರವನ್ನು ನಮಗೆ ದಯಪಾಲಿಸಿದನೋ ಹಾಗೆಯೇ ಅವರಿಗೂ ದಯಪಾಲಿಸಿ ಸಾಕ್ಷಿಕೊಟ್ಟನು.


“ಹಠಮಾರಿಗಳೇ, ಮನಶುದ್ಧಿಯೂ, ಕರ್ಣಶುದ್ಧಿಯೂ ಇಲ್ಲದವರೇ, ನಿಮ್ಮ ಪೂರ್ವಿಕರು ಹೇಗೋ ಹಾಗೆಯೇ ನೀವೂ ಯಾವಾಗಲೂ ಪವಿತ್ರಾತ್ಮನಿಗೆ ಎದುರಾಗಿ ನಡೆಯುವವರಾಗಿದ್ದೀರಿ.


ಒಮ್ಮೆ ಅವರೆಲ್ಲರೂ ಒಂದುಗೂಡಿದ್ದ ಸಂದರ್ಭದಲ್ಲಿ, “ನೀವು ಯೆರೂಸಲೇಮನ್ನು ಬಿಟ್ಟುಹೋಗದೆ, ನನ್ನಿಂದ ಕೇಳಿದಂಥ ಮತ್ತು ತಂದೆಯು ಮಾಡಿದ ವಾಗ್ದಾನಗಳಿಗಾಗಿ ಇಲ್ಲೇ ಕಾದುಕೊಂಡಿರಿ,


ಆತನು ಸ್ವರ್ಗಾರೋಹಣವಾದ ದಿನದವರೆಗೆ ಆತನು ಮಾಡಿದ ಎಲ್ಲಾ ಕಾರ್ಯಗಳನ್ನೂ, ಉಪದೇಶಿಸಿದ ಎಲ್ಲಾ ಬೋಧನೆಗಳನ್ನೂ ಬರೆದಿದ್ದೇನೆ.


ಆದರೆ ಯೇಸು ತನ್ನನ್ನು ನಂಬುವವರು ಹೊಂದಲಿರುವ ಪವಿತ್ರಾತ್ಮವರವನ್ನು ಕುರಿತು ಹೀಗೆ ಹೇಳಿದನು. ಯೇಸು ಇನ್ನೂ ಮಹಿಮೆಯನ್ನು ಹೊಂದಿರಲಿಲ್ಲವಾದ ಕಾರಣ ಪವಿತ್ರಾತ್ಮವರವು ಇನ್ನೂ ಕೊಡಲ್ಪಟ್ಟಿರಲಿಲ್ಲ.


ಮತ್ತು ಪವಿತ್ರಾತ್ಮನು ದೇಹಾಕಾರನಾಗಿ ಪಾರಿವಾಳದ ಹಾಗೆ ಆತನ ಮೇಲೆ ಇಳಿದನು. ಆಗ, “ನೀನು ಪ್ರಿಯನಾಗಿರುವ ನನ್ನ ಮಗನು, ನಿನ್ನನ್ನು ನಾನು ಮೆಚ್ಚಿದ್ದೇನೆ” ಎಂಬ ವಾಣಿಯು ಪರಲೋಕದಿಂದ ಬಂದಿತು.


ಇದಲ್ಲದೆ ಆ ಮಗುವಿನ ತಂದೆಯಾದ ಜಕರೀಯನು ಪವಿತ್ರಾತ್ಮಭರಿತನಾಗಿ ನುಡಿದ ಪ್ರವಾದನೆ ಏನೆಂದರೆ,


ಅದಕ್ಕೆ ದೂತನು, “ಪವಿತ್ರಾತ್ಮನು ನಿನ್ನ ಮೇಲೆ ಬರುವನು; ಪರಾತ್ಪರನಾದ ದೇವರ ಶಕ್ತಿಯು ನಿನ್ನನ್ನು ಅವರಿಸುವುದು; ಆದುದರಿಂದ ನಿನಗೆ ಹುಟ್ಟುವ ಆ ಪವಿತ್ರ ಶಿಶು ದೇವರ ಮಗನೆನಿಸಿಕೊಳ್ಳುವನು.


ಅವನು ಕರ್ತನ ದೃಷ್ಟಿಯಲ್ಲಿ ಮಹಾಪುರುಷನಾಗಿರುವನು; ದ್ರಾಕ್ಷಾರಸವನ್ನಾಗಲಿ, ಯಾವ ಮದ್ಯವನ್ನಾಗಲಿ ಕುಡಿಯಬಾರದು; ಅವನು ಹುಟ್ಟಿದಂದಿನಿಂದಲೇ ಪವಿತ್ರಾತ್ಮಭರಿತನಾಗಿರುವನು.


ಆದುದರಿಂದ ನೀವು ಹೊರಟುಹೋಗಿ ಎಲ್ಲಾ ಜನಾಂಗಗಳನ್ನು ಶಿಷ್ಯರನ್ನಾಗಿ ಮಾಡಿ; ಅವರಿಗೆ ತಂದೆ, ಮಗ, ಪವಿತ್ರಾತ್ಮನ ಹೆಸರಿನಲ್ಲಿ ದೀಕ್ಷಾಸ್ನಾನ ಮಾಡಿಸಿರಿ.


ಅವರಾದರೋ ಎದುರುಬಿದ್ದು ಆತನ ಪವಿತ್ರಾತ್ಮವನ್ನು ದುಃಖಪಡಿಸಿದರು; ಆದುದರಿಂದ ಆತನು ಮಾರ್ಪಟ್ಟು ಅವರಿಗೆ ಶತ್ರುವಾಗಿ ತಾನೇ ಅವರೊಡನೆ ಹೋರಾಡಿದನು.


ಅವರು ಒಮ್ಮತವಿಲ್ಲದೆ ಇರುವಾಗ ಪೌಲನು ಅವರಿಗೆ; “ಪವಿತ್ರಾತ್ಮನು ಪ್ರವಾದಿಯಾದ ಯೆಶಾಯನ ಬಾಯಿಂದ


ಆಸ್ಯಸೀಮೆಯಲ್ಲಿ ವಾಕ್ಯವನ್ನು ಹೇಳಬಾರದೆಂದು ಪವಿತ್ರಾತ್ಮನು ತಡೆದ್ದುದರಿಂದ ಅವರು ಫ್ರುಗ್ಯ, ಗಲಾತ್ಯ ಸೀಮೆಯನ್ನು ಹಾದುಹೋಗಿ,


ಅವು ಯಾವುವೆಂದರೆ, ವಿಗ್ರಹಕ್ಕೆ ನೈವೇದ್ಯಮಾಡಿದ್ದನ್ನೂ, ರಕ್ತವನ್ನೂ, ಕುತ್ತಿಗೆ ಹಿಸುಕಿ ಕೊಂದದ್ದನ್ನೂ, ಅನೈತಿಕತೆಯನ್ನೂ ವಿಸರ್ಜಿಸುವುದು ಅಗತ್ಯವಾಗಿದೆ.


ಹೀಗೆ ಅವರು ಪವಿತ್ರಾತ್ಮನಿಂದ ಕಳುಹಿಸಲ್ಪಟ್ಟವರಾಗಿ ಸೆಲ್ಯೂಕ್ಯಕ್ಕೆ ಬಂದರು; ಅಲ್ಲಿಂದ ಸಮುದ್ರದಲ್ಲಿ ಪ್ರಯಾಣವಾಗಿ ಕುಪ್ರದ್ವೀಪಕ್ಕೆ ಹೋದರು.


ಆದರೆ ಅವನು ಪವಿತ್ರಾತ್ಮಭರಿತನಾಗಿ ಆಕಾಶದ ಕಡೆಗೆ ದೃಷ್ಟಿಸಿ ನೋಡಿ, ದೇವರ ಮಹಿಮೆಯನ್ನೂ, ದೇವರ ಬಲಗಡೆಯಲ್ಲಿ ನಿಂತಿದ್ದ ಯೇಸುವನ್ನೂ ಕಂಡು;


ಆಗ ಪೇತ್ರನು; “ಅನನೀಯನೇ, ನೀನು ಆ ಹೊಲದ ಕ್ರಯದಲ್ಲಿ ಒಂದು ಭಾಗವನ್ನು ಬಚ್ಚಿಟ್ಟುಕೊಂಡು ಪವಿತ್ರಾತ್ಮನನ್ನು ವಂಚಿಸುವಂತೆ ಸೈತಾನನು ನಿನ್ನ ಹೃದಯದಲ್ಲಿ ಏಕೆ ತುಂಬಿಸಿಕೊಂಡಿ?


ಆ ಕಾಲದಲ್ಲಿ ಯೆರೂಸಲೇಮಿನಲ್ಲಿ ಸಿಮೆಯೋನನೆಂಬ ಒಬ್ಬ ಮನುಷ್ಯನಿದ್ದನು. ಈ ಮನುಷ್ಯನು ನೀತಿವಂತನೂ ದೇವಭಕ್ತನೂ ಆಗಿದ್ದನು. ಇಸ್ರಾಯೇಲರನ್ನು ಸಂತೈಸುವವನು ಯಾವಾಗ ಬರುವನೋ ಎಂದು ನಿರೀಕ್ಷಿಸುತ್ತಾ ಇದ್ದನು ಮತ್ತು ಆತನು ಪವಿತ್ರಾತ್ಮಭರಿತನಾಗಿದ್ದನು.


ಯೇಸು ಕ್ರಿಸ್ತನ ಜನನವು ಹೇಗಾಯಿತಂದರೆ, ಆತನ ತಾಯಿಯಾದ ಮರಿಯಳಿಗೂ ಯೋಸೇಫನಿಗೂ ನಿಶ್ಚಿತಾರ್ಥವಾಗಿತ್ತು. ಅವರಿಬ್ಬರೂ ಮದುವೆಯಾಗಿ ಕೂಡಿಬಾಳುವುದಕ್ಕಿಂತ ಮೊದಲೇ ಮರಿಯಳು ಪವಿತ್ರಾತ್ಮನ ಶಕ್ತಿಯಿಂದ ಗರ್ಭಧರಿಸಿದ್ದು ತಿಳಿದುಬಂತು.


ನನಗೂ ಆತನು ಯಾರೆಂಬುದು ತಿಳಿದಿರಲಿಲ್ಲ. ಆದರೆ ನೀರಿನಲ್ಲಿ ದೀಕ್ಷಾಸ್ನಾನ ಮಾಡಿಸುವುದಕ್ಕೆ ನನ್ನನ್ನು ಕಳುಹಿಸಿದಾತನು ‘ಯಾರ ಮೇಲೆ ಆತ್ಮನು ಇಳಿದುಬಂದು ನೆಲೆಯಾಗಿರುವುದನ್ನು ನೀನು ನೋಡುವಿಯೋ ಆತನೇ ಪವಿತ್ರಾತ್ಮನಿಂದ ದೀಕ್ಷಾಸ್ನಾನ ಕೊಡುವಾತನು’ ಎಂದು ತಾನೇ ನನಗೆ ಹೇಳಿದನು.


“ಈ ಮಾತುಗಳನ್ನು ನಾನು ಇನ್ನೂ ನಿಮ್ಮ ಬಳಿಯಲ್ಲಿರುವಾಗಲೇ ಹೇಳಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು