Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 14:27 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 “ನಾನು ನನ್ನ ಸಮಾಧಾನವನ್ನು ನಿಮಗೆ ಕೊಟ್ಟು ಹೋಗುತ್ತಿದ್ದೇನೆ. ನನ್ನಲ್ಲಿರುವಂಥ ಸಮಾಧಾನವನ್ನು ನಾನು ನಿಮಗೆ ಕೊಡುತ್ತೇನೆ. ಲೋಕವು ಕೊಡುವಂತೆ ನಾನು ನಿಮಗೆ ಕೊಡುವುದಿಲ್ಲ. ನಿಮ್ಮ ಹೃದಯವು ಕಳವಳಗೊಳ್ಳದಿರಲಿ, ಹೆದರದಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ನಾನು ಶಾಂತಿಸಮಾಧಾನವನ್ನು ನಿಮಗೆ ಬಿಟ್ಟುಹೋಗುತ್ತೇನೆ; ನನ್ನ ಶಾಂತಿಸಮಾಧಾನವನ್ನು ನಿಮಗೆ ಕೊಡುತ್ತೇನೆ. ಈ ಲೋಕವು ಕೊಡುವ ರೀತಿಯಲ್ಲಿ ನಾನದನ್ನು ನಿಮಗೆ ಕೊಡುವುದಿಲ್ಲ. ನೀವು ಹೃದಯದಲ್ಲಿ ಕಳವಳಗೊಳ್ಳದಿರಿ, ಭಯಪಡಬೇಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಶಾಂತಿಯನ್ನು ನಿಮಗೆ ಬಿಟ್ಟುಹೋಗುತ್ತೇನೆ, ನನ್ನಲ್ಲಿರುವಂಥ ಶಾಂತಿಯನ್ನು ನಿಮಗೆ ಕೊಡುತ್ತೇನೆ; ಲೋಕವು ಕೊಡುವ ರೀತಿಯಿಂದ ನಾನು ನಿಮಗೆ ಕೊಡುವದಿಲ್ಲ. ನಿಮ್ಮ ಹೃದಯವು ಕಳವಳಗೊಳ್ಳದಿರಲಿ, ಹೆದರದಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 “ನಾನು ನಿಮಗೆ ಶಾಂತಿಯನ್ನು ನೀಡುತ್ತೇನೆ. ಈ ಲೋಕವು ಕೊಡುವುದಕ್ಕಿಂತ ಭಿನ್ನವಾದ ರೀತಿಯಲ್ಲಿ ನಾನು ನಿಮಗೆ ಶಾಂತಿಯನ್ನು ಕೊಡುತ್ತೇನೆ. ಆದ್ದರಿಂದ ನಿಮ್ಮ ಹೃದಯವು ಕಳವಳಗೊಳ್ಳದಿರಲಿ. ಭಯಪಡಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ನಾನು ಸಮಾಧಾನವನ್ನು ನಿಮಗೆ ಬಿಟ್ಟು ಹೋಗುತ್ತೇನೆ. ನನ್ನ ಸಮಾಧಾನವನ್ನು ನಾನು ನಿಮಗೆ ಕೊಡುತ್ತೇನೆ. ಲೋಕವು ಕೊಡುವಂತೆ ನಾನು ನಿಮಗೆ ಕೊಡುವುದಿಲ್ಲ. ನಿಮ್ಮ ಹೃದಯವು ಕಳವಳಗೊಳ್ಳದಿರಲಿ, ಅಂಜದಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

27 ಶಾಂತಿ ತುಮ್ಚ್ಯಾ ಮದ್ದಿ ಮಿಯಾ ಸೊಡುನ್ ಜಾತಾ, ಹಿ ಮಾಜಿ ಸ್ವತಾಚಿ ಶಾಂತಿ ಮಿಯಾ ತುಮ್ಕಾ ದಿತಾ. ಹ್ಯಾ ಜಗಾನ್ ದಿಲ್ಲ್ಯಾ ಸರ್ಕೆ ಮಿಯಾ ತಿ ತುಮ್ಕಾ ದಿ ನಾ. ಚಿಂತಾ ಕರುನಕಾಶಿ ಅನಿ ತುಮ್ಚಿ ಮನಾ ತಳ್ಮಳಿ ನಸ್ತಾನಾ ರ್‍ಹಾಂವ್ದಿ ಅನಿ ಭಿಂವ್ನಕಾಶಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 14:27
65 ತಿಳಿವುಗಳ ಹೋಲಿಕೆ  

ಆಗ ಎಲ್ಲಾ ಗ್ರಹಿಕೆಯನ್ನು ಮೀರುವ ದೇವರ ಶಾಂತಿಯು ನಿಮ್ಮ ಹೃದಯಗಳನ್ನೂ, ಯೋಚನೆಗಳನ್ನೂ ಕ್ರಿಸ್ತ ಯೇಸುವಿನಲ್ಲಿ ಕಾಪಾಡುವುದು.


ನೀವು ನನ್ನಲ್ಲಿದ್ದು ಸಮಾಧಾನವನ್ನು ಹೊಂದಿದವರಾಗಿರಬೇಕೆಂದು ಇದನ್ನೆಲ್ಲಾ ನಿಮ್ಮೊಂದಿಗೆ ಹೇಳಿದ್ದೇನೆ. ಲೋಕದಲ್ಲಿ ನಿಮಗೆ ಸಂಕಟಗಳುಂಟು. ಆದರೆ ಧೈರ್ಯವಾಗಿರಿ, ನಾನು ಲೋಕವನ್ನು ಜಯಿಸಿದ್ದೇನೆ” ಎಂದು ಹೇಳಿದನು.


ನೀನಂತು ಹೆದರಬೇಡ, ನಾನೇ ನಿನ್ನೊಂದಿಗಿದ್ದೇನೆ, ದಿಗ್ಭ್ರಮೆಗೊಳ್ಳದಿರು, ನಾನೇ ನಿನ್ನ ದೇವರು. ನಾನು ನಿನ್ನನ್ನು ಬಲಪಡಿಸುತ್ತೇನೆ. ಹೌದು, ನಿನಗೆ ಸಹಾಯಮಾಡುತ್ತೇನೆ. ನನ್ನ ಧರ್ಮದ ಬಲಗೈಯನ್ನು ನಿನಗೆ ಆಧಾರಮಾಡುತ್ತೇನೆ.


ಶಾಂತಿದಾಯಕನಾದ ಕರ್ತನು ತಾನೇ ಸದಾಕಾಲದಲ್ಲಿಯೂ ಸಕಲವಿಧದಲ್ಲಿಯೂ ನಿಮಗೆ ಶಾಂತಿಯನ್ನು ದಯಪಾಲಿಸಲಿ. ಕರ್ತನು ನಿಮ್ಮೆಲ್ಲರೊಂದಿಗಿರಲಿ.


ಕ್ರಿಸ್ತನ ಸಮಾಧಾನವು ನಿಮ್ಮ ಹೃದಯಗಳಲ್ಲಿ ಆಳಲಿ. ಇದೇ ಸಮಾಧಾನದಲ್ಲಿ ಏಕ ದೇಹವಾಗಿರುವಂತೆ ನೀವು ಕರೆಯಲ್ಪಟ್ಟಿರುವಿರಿ ಇದಲ್ಲದೆ ಕೃತಜ್ಞತೆಯುಳ್ಳವರಾಗಿರಿ.


ದೇವರು ನಮಗೆ ಕೊಟ್ಟಿರುವ ಆತ್ಮವು ಬಲ, ಪ್ರೀತಿ, ಸಂಯಮಗಳ ಆತ್ಮವೇ ಹೊರತು ಹೇಡಿತನದ ಆತ್ಮವಲ್ಲ.


ನಿರೀಕ್ಷೆಯನ್ನು ಕೊಡುವ ದೇವರು ಪವಿತ್ರಾತ್ಮನ ಶಕ್ತಿಯಿಂದ ಸಮೃದ್ಧವಾದ ನಿರೀಕ್ಷೆಯುಳ್ಳವರಾಗಿ ನಂಬುವುದರಿಂದ ಉಂಟಾಗುವ ಸಂತೋಷವನ್ನೂ ಮನಶ್ಯಾಂತಿಯನ್ನೂ ನಿಮಗೆ ಪರಿಪೂರ್ಣವಾಗಿ ದಯಪಾಲಿಸಲ್ಲಿ, ನೀವು ಪವಿತ್ರಾತ್ಮನಲ್ಲಿ ಬಲಗೊಂಡವರಾಗಿ ನಿರೀಕ್ಷೆಯಲ್ಲಿ ಅಭಿವೃದ್ಧಿಯನ್ನು ಹೊಂದುವಂತೆ ಅನುಗ್ರಹಿಸಲಿ.


ಯೆಹೋವನು ನಿಮ್ಮ ಮೇಲೆ ಕೃಪಾಕಟಾಕ್ಷವಿಟ್ಟು ಶಾಂತಿಯನ್ನು ಅನುಗ್ರಹಿಸಲಿ’ ಎಂಬುದೇ.


ಶರೀರಭಾವದ ವಿಷಯಗಳ ಮೇಲೆ ಮನಸ್ಸಿಡುವುದು ಮರಣ; ಪವಿತ್ರಾತ್ಮನ ವಿಷಯಗಳ ಮೇಲೆ ಮನಸ್ಸಿಡುವುದು ನಿತ್ಯಜೀವವೂ ಮತ್ತು ಮನಶಾಂತಿಯೂ ಆಗಿದೆ.


ಅವರಿಗೆ ಅಂಜಬೇಡ; ನಿನ್ನನ್ನು ಉದ್ಧರಿಸಲು ನಾನೇ ನಿನ್ನೊಂದಿಗಿರುವೆನು, ಇದು ಯೆಹೋವನಾದ ನನ್ನ ಮಾತು” ಎಂದು ಹೇಳಿದನು.


ತಂದೆಯಾದ ದೇವರಿಂದಲೂ ನಮ್ಮ ಕರ್ತನಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯೂ ಶಾಂತಿಯೂ ಆಗಲಿ.


ಆದರೆ ದೇವರಾತ್ಮನಿಂದ ಉಂಟಾಗುವ ಫಲವೇನಂದರೆ, ಪ್ರೀತಿ, ಸಂತೋಷ, ಸಮಾಧಾನ, ದೀರ್ಘಶಾಂತಿ, ದಯೆ, ಪರೋಪಕಾರ, ನಂಬಿಕೆ,


ಯೆಹೋವನು ತನ್ನ ಜನರಿಗೆ ಬಲವನ್ನು ಅನುಗ್ರಹಿಸುವನು; ಆತನು ತನ್ನ ಪ್ರಜೆಗೆ ಸುಕ್ಷೇಮವನ್ನು ದಯಪಾಲಿಸುವನು.


ಹೀಗಿರಲಾಗಿ ನಾವು ನಂಬಿಕೆಯಿಂದ ನೀತಿವಂತರಾದ ಕಾರಣ ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ದೇವರೊಂದಿಗೆ ನಮಗೆ ಸಮಾಧಾನವುಂಟು.


“ನಿಮ್ಮ ಹೃದಯವು ಕಳವಳಗೊಳ್ಳದಿರಲಿ. ನೀವು ದೇವರನ್ನು ನಂಬಿರಿ, ನನ್ನನ್ನೂ ನಂಬಿರಿ.


ಒಂದು ಮಗು ನಮಗಾಗಿ ಹುಟ್ಟಿದೆಯಷ್ಟೆ, ವರದ ಮಗನು ನಮಗೆ ದೊರೆತನು; ಆಡಳಿತವು ಅವನ ಬಾಹುವಿನ ಮೇಲಿರುವುದು; ಅದ್ಭುತ ಸ್ವರೂಪನು, ಆಲೋಚನಾ ಕರ್ತನು, ಪರಾಕ್ರಮಿಯಾದ ದೇವರೂ, ನಿತ್ಯನಾದ ತಂದೆ, ಸಮಾಧಾನದ ಪ್ರಭು ಎಂಬುದು ಆತನ ಹೆಸರು.


ಅವನಿಗೆ ಕೆಟ್ಟ ಸುದ್ದಿಯ ಭಯವಿರುವುದಿಲ್ಲ; ಯೆಹೋವನಲ್ಲಿ ಭರವಸವಿಟ್ಟಿರುವುದರಿಂದ, ಅವನ ಮನಸ್ಸು ಸ್ಥಿರವಾಗಿರುವುದು.


ನಾವು ದೇವರಿಗೆ ಶತ್ರುಗಳಾಗಿದ್ದಾಗಲೇ ನಮಗೆ ಆತನ ಮಗನ ಮರಣದ ಮೂಲಕ ಆತನೊಂದಿಗೆ ಸಂಧಾನವಾಯಿತು ಆತನ ಕೂಡ ಸಂಧಾನವಾದ ನಮಗೆ ಮಗನ ಜೀವದಿಂದ ರಕ್ಷಣೆಯಾಗುವುದು ಅಷ್ಟೇ ನಿಶ್ಚಯವಲ್ಲವೇ?


ಯೇಸು ಅವರಿಗೆ, “ನಿಮಗೆ ಸಮಾಧಾನವಾಗಲಿ” ಎಂದು ಪುನಃ ಹೇಳಿ, “ತಂದೆಯು ನನ್ನನ್ನು ಕಳುಹಿಸಿಕೊಟ್ಟ ಹಾಗೆಯೇ ನಾನೂ ನಿಮ್ಮನ್ನು ಕಳುಹಿಸಿಕೊಡುತ್ತೇನೆ” ಎಂದನು.


ದೇವರನ್ನು ನಂಬಿ ನಿರ್ಭಯದಿಂದಿರುವೆನು; ನರಪ್ರಾಣಿಗಳು ನನಗೆ ಏನು ಮಾಡಾರು?


ರಾತ್ರಿಯಲ್ಲಿ ಭಯಹುಟ್ಟಿಸುವ ಯಾವುದಕ್ಕೂ, ಹಗಲಲ್ಲಿ ಹಾರಿಬರುವ ಬಾಣಕ್ಕೂ,


ಮತ್ತು ಆತನು ಶಿಲುಬೆಯ ಮೇಲೆ ಸುರಿಸಿದ ರಕ್ತದಿಂದ ತಾನು ಸಮಾಧಾನವನ್ನುಂಟುಮಾಡಿ, ಭೂಪರಲೋಕಗಳಲ್ಲಿರುವ ಸಮಸ್ತವನ್ನೂ ತನ್ನ ಕುಮಾರನ ಮೂಲಕ ತನಗೆ ಸಂಧಾನಪಡಿಸಿಕೊಳ್ಳಬೇಕೆಂತಲೂ ತಂದೆಯಾದ ದೇವರು ಇಚ್ಛಿಸಿದನು.


ಆತನ ಹೆಸರಿನ ಪ್ರಸಿದ್ಧಿಗಾಗಿ ನಂಬಿಕೆಯೆಂಬ ವಿಧೇಯತ್ವವು ಉಂಟಾಗುವುದಕ್ಕೋಸ್ಕರ ನಾವು ಆತನ ಮೂಲಕವಾಗಿ ಕೃಪೆಯನ್ನೂ ಮತ್ತು ಅಪೊಸ್ತಲತನವನ್ನೂ ಹೊಂದಿದೆವು.


ನಿನ್ನ ಮಕ್ಕಳೆಲ್ಲರೂ ಯೆಹೋವನಿಂದ ಶಿಕ್ಷಿತರಾಗಿರುವರು, ಅವರಿಗೆ ಅಧಿಕ ಸುಕ್ಷೇಮವಾಗುವುದು.


ಆತನ ಶಾಶ್ವತ ಪ್ರೀತಿ ಮತ್ತು ನಂಬಿಗಸ್ತಿಕೆ ಒಂದನ್ನೊಂದು ಕೂಡಿರುವವು; ನೀತಿಯು, ಸಮಾಧಾನವು ಮುದ್ದಿಟ್ಟುಕೊಳ್ಳುವವು.


ನಮ್ಮ ತಂದೆಯಾಗಿರುವ ದೇವರಿಂದಲೂ ಹಾಗೂ ಕರ್ತನಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯೂ, ಶಾಂತಿಯೂ ಉಂಟಾಗಲಿ.


ನನಗೆ ಹೆದರಿಕೆಯುಂಟಾದಾಗ ನಿನ್ನನ್ನೇ ಆಶ್ರಯಿಸಿಕೊಳ್ಳುವೆನು.


ಅದೇ ದಿನ ಎಂದರೆ ವಾರದ ಮೊದಲನೆಯ ದಿನದ ಸಂಜೆಯಲ್ಲಿ ಶಿಷ್ಯರು ಯೆಹೂದ್ಯರ ಭಯದಿಂದ ತಾವು ಇದ್ದ ಮನೆಯ ಬಾಗಿಲುಗಳನ್ನು ಮುಚ್ಚಿಕೊಂಡಿರಲು, ಆಗ ಯೇಸು ಬಂದು ಅವರ ನಡುವೆ ನಿಂತು, “ನಿಮಗೆ ಸಮಾಧಾನವಾಗಲಿ” ಎಂದನು.


ತಂದೆಯಾದ ದೇವರಿಂದಲೂ ಕರ್ತನಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯೂ ಶಾಂತಿಯೂ ಲಭಿಸಲಿ.


ಎಲ್ಲಾ ಜನರಿಗೂ ಕರ್ತನಾಗಿರುವ ಯೇಸು ಕ್ರಿಸ್ತನ ಮೂಲಕ ದೇವರು ಸಮಾಧಾನದ ಶುಭಸಮಾಚಾರವನ್ನು ಪ್ರಕಟಿಸುತ್ತಾ ಇಸ್ರಾಯೇಲ್ ಜನರಿಗೆ ಅನುಗ್ರಹಿಸಿದ ವಾಕ್ಯವು ನಿಮಗೇ ತಿಳಿದಿದೆ.


ಅದು ಕತ್ತಲಲ್ಲಿಯೂ, ಮರಣಾಂಧಕಾರದಲ್ಲಿಯೂ ವಾಸಿಸುತ್ತಿದ್ದ ನಮಗೆ ಬೆಳಕನ್ನು ಕೊಟ್ಟು ನಮ್ಮ ಕಾಲುಗಳನ್ನು ಸಮಾಧಾನದ ಮಾರ್ಗದಲ್ಲಿ ಸೇರಿಸಿ ನಡಿಸುವುದು.”


ನಿತ್ಯವಾದ ಒಡಂಬಡಿಕೆಯನ್ನು, ರಕ್ತದಿಂದ ನಿಶ್ಚಯಪಡಿಸುವುದಕ್ಕಾಗಿ, ಸಭೆಯೆಂಬ ಹಿಂಡಿಗೆ ಮಹಾಪಾಲಕನಾಗಿರುವ ನಮ್ಮ ಕರ್ತನಾದ ಯೇಸುವನ್ನು ಸತ್ತವರೊಳಗಿಂದ ಬರಮಾಡಿದ, ಶಾಂತಿದಾಯಕನಾದ ದೇವರು, ನೀವು ಆತನ ಚಿತ್ತವನ್ನು ನೆರವೇರಿಸುವ ಹಾಗೆ ಸಕಲ ಸತ್ಕಾರ್ಯಗಳಿಗೆ ಬೇಕಾದ ಅನುಕೂಲತೆಗಳನ್ನು ನಿಮಗೆ ದಯಪಾಲಿಸಿ, ಆತನು ಯೇಸು ಕ್ರಿಸ್ತನ ಮೂಲಕ ತನಗೆ ಮೆಚ್ಚಿಕೆಯಾದದ್ದನ್ನು ನಮ್ಮಲ್ಲಿ ನೆರವೇರಿಸಲಿ. ಯುಗಯುಗಾಂತರಗಳಲ್ಲಿಯೂ ಆತನಿಗೆ ಮಹಿಮೆ ಉಂಟಾಗಲಿ. ಆಮೆನ್.


ಇದಲ್ಲದೆ ಕರ್ತನು ರಾತ್ರಿ ಪೌಲನಿಗೆ ದರ್ಶನ ಕೊಟ್ಟು; “ನೀನು ಹೆದರಬೇಡ; ಆದರೆ ಸುಮ್ಮನಿರದೆ ಸುವಾರ್ತೆಯನ್ನು ಸಾರುತ್ತಲೇ ಇರು,


ಆದರೂ ಅವರಿಗೆ ಹೆದರಬೇಡಿರಿ. ಮರೆಯಾಗಿರುವ ಯಾವುದೂ ವ್ಯಕ್ತವಾಗದೆ ಇರುವುದಿಲ್ಲ; ಬೆಳಕಿಗೆ ಬಾರದ ರಹಸ್ಯವು ಇಲ್ಲ.


ನೀವು ಆನಂದಭರಿತರಾಗಿ ಹೊರಡುವಿರಿ, ಸಮಾಧಾನದಿಂದ ಮೆರವಣಿಗೆಯಾಗಿ ಬರುವಿರಿ; ಬೆಟ್ಟ ಗುಡ್ಡಗಳು ನಿಮ್ಮ ಮುಂದೆ ಜಯಘೋಷ ಮಾಡುವವು.


ಯೆಹೋವನು ನನಗೆ ಬೆಳಕೂ, ರಕ್ಷಕನೂ ಆಗಿದ್ದಾನೆ; ನಾನು ಯಾರಿಗೆ ಭಯಪಟ್ಟೆನು? ಯೆಹೋವನು ನನ್ನ ಪ್ರಾಣದ ಆಧಾರವು; ನಾನು ಯಾರಿಗೆ ಹೆದರೇನು?


ನಿನಗೆ ಸಂಭವಿಸಬಹುದಾದ ಬಾಧೆಗಳಿಗೆ ಹೆದರಬೇಡ. ಇಗೋ, ನಿಮ್ಮನ್ನು ಪರೀಕ್ಷಿಸಲು ಸೈತಾನನು ನಿಮ್ಮಲ್ಲಿ ಕೆಲವರನ್ನು ಸೆರೆಮನೆಯೊಳಗೆ ಹಾಕುವುದಕ್ಕಿದ್ದಾನೆ ಮತ್ತು ಹತ್ತು ದಿನಗಳ ತನಕ ನಿಮಗೆ ಸಂಕಟವಿರುವುದು. ನೀನು ಸಾಯುವ ತನಕ ನಂಬಿಗಸ್ತನಾಗಿರು, ನಾನು ನಿನಗೆ ಜೀವದ ಕಿರೀಟವನ್ನು ಕೊಡುವೆನು.


ಆಸ್ಯಸೀಮೆಯಲ್ಲಿರುವ ಏಳು ಸಭೆಗಳಿಗೆ ಯೋಹಾನನು ಬರೆಯುವುದೇನಂದರೆ; ಇರುವಾತನೂ, ಇದ್ದಾತನೂ, ಬರುವಾತನೂ ಆಗಿರುವಾತನಿಂದ ಮತ್ತು ಆತನ ಸಿಂಹಾಸನದ ಮುಂದಿರುವ ಏಳು ಆತ್ಮಗಳಿಂದ


ಅವನಿಗೆ ಅಬ್ರಹಾಮನು ತಾನು ಜಯಿಸಿಕೊಂಡು ಬಂದಿದ್ದ ಎಲ್ಲಾ ವಸ್ತುಗಳಲ್ಲಿ ಹತ್ತನೆಯ ಒಂದು ಭಾಗವನ್ನು ಕೊಟ್ಟನು. “ಮೆಲ್ಕಿಜೆದೇಕ್”, ಎಂಬ ಹೆಸರಿಗೆ ಮೊದಲು “ನೀತಿಯ ರಾಜ” ಎಂದೂ, ಅನಂತರ “ಸಾಲೇಮಿನ ರಾಜ” ಎಂದರೆ “ಸಮಾಧಾನದ ರಾಜ” ಎಂದೂ ಅರ್ಥ.


ಎಂಟು ದಿನಗಳಾದ ಮೇಲೆ ಆತನ ಶಿಷ್ಯರು ಪುನಃ ಒಳಗಿದ್ದಾಗ ತೋಮನೂ ಅವರ ಜೊತೆ ಇದ್ದನು. ಬಾಗಿಲುಗಳು ಮುಚ್ಚಿದ್ದವು ಆಗ ಯೇಸು ಬಂದು ನಡುವೆ ನಿಂತು ನಿಮಗೆ “ಸಮಾಧಾನವಾಗಲಿ ಎಂದನು”


“ನರಪುತ್ರನೇ, ನೀನು ಮುಳ್ಳುಪೊದೆಗಳಲ್ಲಿ ಸಿಕ್ಕಿಕೊಂಡು, ಚೇಳುಗಳ ನಡುವೆ ವಾಸಿಸುವಂತೆ ಅವರ ಮಧ್ಯದಲ್ಲಿದ್ದರೂ ಅವರಿಗೆ ಭಯಪಡಬೇಡ, ಅವರ ಗದರಿಕೆಗೆ ಹೆದರದಿರು; ಅವರು ತಿರುಗಿ ಬೀಳುವ ವಂಶದವರು; ಅವರ ಬಿರುನುಡಿಗೆ ಭಯಪಡಬೇಡ, ಅವರ ಬಿರುನೋಟಕ್ಕೆ ಹೆದರದಿರು.


ನೀನು ದುಷ್ಟರೊಡನೆಯೂ, ದುರ್ಜನಗಳ ಸಂಗಡಲೂ ನನ್ನನ್ನೂ ಎಳೆದುಕೊಂಡು ಹೋಗಬೇಡ. ಅವರು ಹೊರಗೆ ಒಳ್ಳೆಯದಾಗಲಿ ಎಂದು ಹೇಳಿದರೂ, ಒಳಗೆ ಕೇಡಾಗಲಿ ಎಂದು ಯೋಚಿಸುವವರು.


ಲೋಕದಲ್ಲೆಲ್ಲಾ ವಾಸಿಸುವ ಸಕಲ ಜನಾಂಗ, ಕುಲ ಭಾಷೆಗಳವರಿಗೆ ರಾಜನಾದ ನೆಬೂಕದ್ನೆಚ್ಚರನ ಪ್ರಕಟನೆ, “ನಿಮಗೆ ಸುಖವು ಹೆಚ್ಚೆಚ್ಚಾಗಲಿ!


ಪಕ್ಕನೆ ಬರುವ ಅಪಾಯಕ್ಕಾಗಲಿ ಅಥವಾ ದುಷ್ಟರಿಗೆ ಸಂಭವಿಸುವ ನಾಶನಕ್ಕಾಗಲಿ ನೀನು ಅಂಜುವುದೇ ಇಲ್ಲ.


ಆದರೆ ಹೇಡಿಗಳು, ನಂಬಿಕೆಯಿಲ್ಲದವರು, ಅಸಹ್ಯವಾದದ್ದರಲ್ಲಿ ಪಾಳುಗಾರರಾಗಿರುವವರು, ಕೊಲೆಗಾರರು, ಜಾರರು, ಮಾಟಗಾರರು, ವಿಗ್ರಹಾರಾಧಕರು, ಎಲ್ಲಾ ಸುಳ್ಳುಗಾರರು ಇವರಿಗೆ ಸಿಕ್ಕುವ ಪಾಲು ಬೆಂಕಿ ಗಂಧಕಗಳುರಿಯುವ ಕೆರೆಯೇ, ಅದು ಎರಡನೆಯ ಮರಣವು” ಎಂದು ನನಗೆ ಹೇಳಿದನು.


ಈ ನಿಯಮಗಳನ್ನು ಸರಿಯಾಗಿ ನಡೆಯುವವರೆಲ್ಲರಿಗೂ ಮತ್ತು ದೇವರ ಇಸ್ರಾಯೇಲ್ಯರಿಗೆ ಶಾಂತಿಯೂ, ಕರುಣೆಯೂ ಉಂಟಾಗಲಿ.


ಇದಲ್ಲದೆ ನೀವು ಯಾವ ಮನೆಯೊಳಗೆ ಹೋದರೂ, ‘ಈ ಮನೆಗೆ ಸಮಾಧಾನವಾಗಲಿ’ ಎಂದು ಮೊದಲು ಹೇಳಿರಿ.


ಹೌದು, ಅವನೇ ಯೆಹೋವನ ಆಲಯವನ್ನು ಕಟ್ಟಿಸಿ ರಾಜವೈಭವವನ್ನು ಹೊಂದಿಕೊಂಡು ತನ್ನ ಸಿಂಹಾಸನದಲ್ಲಿ ಆಸೀನನಾಗಿ ಆಳುವನು. ಮತ್ತು ಯಾಜಕರು ತನ್ನ ಸಿಂಹಾಸನದಲ್ಲಿ ಕುಳಿತಿರುವರು. ಅವರಿಬ್ಬರೂ ಸಮ್ಮತಿ ಸಮಾಧಾನದಿಂದ ಇರುವರು.


ಯೆಹೋವನು ಮನುಷ್ಯರ ಬಾಯಿಯ ಯೋಗ್ಯಫಲವಾಗಿರುವ ಸ್ತೋತ್ರವನ್ನು ಉಂಟುಮಾಡುವವನಾಗಿ, “ದೂರದವನಿಗೂ ಸಮೀಪದವನಿಗೂ ಕ್ಷೇಮವಿರಲಿ, ಸುಕ್ಷೇಮವಿರಲಿ, ನಾನು ಅವರನ್ನು ಸ್ವಸ್ಥಮಾಡುವೆನು” ಎಂದು ಹೇಳುತ್ತಾನೆ.


ಅವನ ದಿನಗಳಲ್ಲಿ ನೀತಿಯು ವೃದ್ಧಿಯಾಗಲಿ; ಚಂದ್ರನಿರುವವರೆಗೂ ಪರಿಪೂರ್ಣ ಸೌಭಾಗ್ಯವಿರಲಿ.


ಕೊಲೊಸ್ಸೆಯಲ್ಲಿರುವ ದೇವಜನರಿಗೆ ಹಾಗು ಕ್ರಿಸ್ತನಲ್ಲಿ ನಂಬಿಗಸ್ತರಾದ ಸಹೋದರರಿಗೆ ಬರೆಯುವುದೇನೆಂದರೆ, ನಮ್ಮ ತಂದೆಯಾದ ದೇವರಿಂದ ನಿಮಗೆ ಕೃಪೆಯೂ ಮತ್ತು ಶಾಂತಿಯೂ ಉಂಟಾಗಲಿ.


“ನನ್ನ ಸ್ನೇಹಿತರಾದ ನಿಮಗೆ ಹೇಳುತ್ತೇನೆ, ದೇಹವನ್ನು ಕೊಲ್ಲುವವರಿಗೆ ಭಯಪಡಬೇಡಿ. ಕೊಂದು ಹಾಕಿದ ಮೇಲೆ ಹೆಚ್ಚೇನು ಮಾಡಲು ಅವರಿಂದಾಗದು.


ಕ್ರಿಮಿಪ್ರಾಯದವನಾದ ಯಾಕೋಬೇ, ಇಸ್ರಾಯೇಲ್ ಜನವೇ, ಭಯಪಡಬೇಡ, ನಾನೇ ನಿನಗೆ ಸಹಾಯಕನು, ಇಸ್ರಾಯೇಲಿನ ಸದಮಲಸ್ವಾಮಿಯು ನಿನಗೆ ವಿಮೋಚಕನು” ಎಂದು ಯೆಹೋವನು ಹೇಳುತ್ತಾನೆ.


ಆಗ ರಾಜನಾದ ದಾರ್ಯಾವೆಷನು ಲೋಕದಲ್ಲೆಲ್ಲಾ ವಾಸಿಸುವ ಸಕಲ ಜನಾಂಗ, ಕುಲ, ಭಾಷೆಗಳವರಿಗೆ ಈ ಪ್ರಸಿದ್ಧ ಪತ್ರವನ್ನು ಬರೆಯಿಸಿ, ಅದನ್ನು ಅನುಸರಿಸಿ ನಡೆಯಲು ಆಜ್ಞೆಮಾಡಿದನು. ದಾನಿಯೇಲನ ದೇವರ ದಯೆಯಿಂದ ನಿಮಗೆ ಸುಖವು ಹೆಚ್ಚೆಚ್ಚಾಗಲಿ!


ಇಗೋ, ದೇವರೇ ನನಗೆ ರಕ್ಷಣೆ, ನಾನು ಹೆದರದೆ ಭರವಸವಿಡುವೆನು; ಯೆಹೋವನೇ ನನ್ನ ಬಲವೂ, ಕೀರ್ತನೆಯೂ ಆತನೇ, ನನಗೆ ರಕ್ಷಣೆಯೂ ಆಗಿದ್ದಾನೆ.”


ನಾನು ಯೆಹೋವನನ್ನು ಆಶ್ರಯಿಸಿಕೊಂಡಿದ್ದೇನೆ. ನೀವು, “ಪಕ್ಷಿಗಳಂತೆ ನಿಮ್ಮ ಬೆಟ್ಟಗಳಿಗೆ ಓಡಿಹೋಗಿರಿ” ಎಂದು ಹೇಳುವುದೇಕೆ?


ಆತನು ನೆಮ್ಮದಿಯನ್ನು ದಯಪಾಲಿಸಿದರೆ ತಪ್ಪುಹೊರಿಸುವವರು ಯಾರು? ವಿಮುಖನಾದರೆ ಆತನ ದರ್ಶನ ಮಾಡುವವರಾರು? ಆತನು ಜನಾಂಗಕ್ಕಾಗಲಿ, ಮನುಷ್ಯನಿಗಾಗಲಿ ಮಾಡುವುದೆಲ್ಲಾ ಹೀಗೆಯೇ.


ನನ್ನನ್ನು ತಳ್ಳಿಹಾಕಿ ಸಮಾಧಾನಕ್ಕೆ ದೂರಮಾಡಿದ್ದಾನೆ; ನಾನು ಸಂತೋಷವನ್ನು ಮರೆಯುವಂತೆ ಮಾಡಿದ್ದಾನೆ.


ಅವನು ನಿನ್ನ ಜನರಿಗೆ ನೀತಿಯಿಂದಲೂ, ಕುಗ್ಗಿಹೋದ ನಿನ್ನವರಿಗೆ ನ್ಯಾಯವಾಗಿಯೂ ತೀರ್ಪುಕೊಡಲಿ.


ಹೀಗೆ ದೇವರ ಅನುಗ್ರಹದಿಂದ ಸುತ್ತಮುತ್ತಲಿನ ವೈರಿಗಳು ಭಯಭೀತರಾದರು. ಯೆಹೋಷಾಫಾಟನ ರಾಜ್ಯಕ್ಕೆ ಶತ್ರುಗಳ ಭಯತಪ್ಪಿ ಸಮಾಧಾನ ಉಂಟಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು