Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 14:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ನಾನು ಹೋಗಿ ನಿಮಗಾಗಿ ಸ್ಥಳವನ್ನು ಸಿದ್ಧಪಡಿಸಿದ ಮೇಲೆ, ಪುನಃ ಬಂದು ನಿಮ್ಮನ್ನು ನನ್ನ ಬಳಿಗೆ ಸೇರಿಸಿಕೊಳ್ಳುವೆನು. ಏಕೆಂದರೆ, ನಾನಿರುವಲ್ಲಿ ನೀವು ಸಹ ಇರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಅಣಿಗೊಳಿಸಿದ ಬಳಿಕ ಹಿಂದಿರುಗಿ ಬಂದು ನಿಮ್ಮನ್ನು ಕರೆದೊಯ್ಯುತ್ತೇನೆ. ನಾನಿರುವೆಡೆಯಲ್ಲಿಯೇ ನೀವೂ ಇರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ನಾನು ಹೋಗಿ ನಿಮಗೆ ಸ್ಥಳವನ್ನು ಸಿದ್ಧಮಾಡಿದ ಮೇಲೆ ತಿರಿಗಿ ಬಂದು ನಿಮ್ಮನ್ನು ಕರಕೊಂಡು ಹೋಗಿ ನನ್ನ ಬಳಿಗೆ ಸೇರಿಸಿಕೊಳ್ಳುವೆನು; ಯಾಕಂದರೆ ನಾನಿರುವ ಸ್ಥಳದಲ್ಲಿ ನೀವು ಸಹ ಇರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ನಾನು ಹೋಗಿ ನಿಮಗೋಸ್ಕರ ಸ್ಥಳವನ್ನು ಸಿದ್ಧಪಡಿಸಿದ ಮೇಲೆ ಹಿಂತಿರುಗಿ ಬಂದು, ನಿಮ್ಮನ್ನು ನನ್ನೊಂದಿಗೆ ಕರೆದುಕೊಂಡು ಹೋಗುವೆನು. ಏಕೆಂದರೆ ನಾನಿರುವಲ್ಲಿ ನೀವೂ ಇರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ನಾನು ಹೋಗಿ ನಿಮಗಾಗಿ ಸ್ಥಳವನ್ನು ಸಿದ್ಧಮಾಡಿದ ಮೇಲೆ ಪುನಃ ಬಂದು ನಿಮ್ಮನ್ನು ನನ್ನ ಬಳಿಗೆ ಸೇರಿಸಿಕೊಳ್ಳುವೆನು. ಆಗ ನಾನಿರುವಲ್ಲಿ ನೀವು ಸಹ ಇರುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ಮಿಯಾ ಜಾವ್ನ್ ಜಾಗೊ ತಯಾರ್ ಕರುನ್ ಹೊಲ್ಲ್ಯಾ ಮಾನಾ, ಮಿಯಾ ಪರ್ತುನ್ ಯೆತಾ ಅನಿ ತುಮ್ಕಾ ಮಾಜ್ಯಾ ವಾಂಗ್ಡಾ ಘೆವ್ನ್ ಜಾತಾ. ಅಶೆ ಮಿಯಾ ಖೈ ರ್‍ಹಾತಾ ಥೈಚ್ ತುಮಿಬಿ ರ್‍ಹಾತ್ಯಾಶಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 14:3
20 ತಿಳಿವುಗಳ ಹೋಲಿಕೆ  

ಯಾರಾದರೂ ನನ್ನ ಸೇವೆಯನ್ನು ಮಾಡುವವನಾದರೆ ನನ್ನನ್ನು ಹಿಂಬಾಲಿಸಲಿ, ಮತ್ತು ಎಲ್ಲಿ ನಾನು ಇರುತ್ತೇನೋ ಅಲ್ಲಿ ನನ್ನ ಸೇವಕನೂ ಸಹ ಇರುವನು. ಯಾರಾದರೂ ನನ್ನ ಸೇವೆಯನ್ನು ಮಾಡುವವನಾದರೆ ನನ್ನ ತಂದೆಯು ಅವನನ್ನು ಸನ್ಮಾನಿಸುವನು.


ಸಹಿಸಿಕೊಳ್ಳುವವರಾಗಿದ್ದರೆ ಆತನೊಡನೆ ಆಳುವೆವು. ನಾವು ಯೇಸುವಿನವರಲ್ಲವೆಂದು ಹೇಳಿದರೆ ಆತನು ನಮ್ಮನ್ನು ತನ್ನವರಲ್ಲವೆಂದು ಹೇಳುವನು.


“ಗಲಿಲಾಯದವರೇ, ನೀವು ಏಕೆ ಹೀಗೆ ಆಕಾಶದ ಕಡೆಗೆ ನೋಡುತ್ತಾ ನಿಂತಿದ್ದೀರಿ? ನಿಮ್ಮ ಬಳಿಯಿಂದ ಆಕಾಶದೊಳಗೆ ಸೇರಿಸಲ್ಪಟ್ಟಿರುವ ಈ ಯೇಸುವು ಯಾವ ರೀತಿಯಲ್ಲಿ ಆಕಾಶದೊಳಗೆ ಹೋಗಿರುವುದನ್ನು ನೀವು ಕಂಡಿರೋ ಹಾಗೆಯೇ ಆತನು ಹಿಂತಿರುಗಿ ಬರುವನು” ಎಂದು ಹೇಳಿದರು.


ಹಾಗೆಯೇ ಕ್ರಿಸ್ತನು ಸಹ ಬಹು ಜನರ ಪಾಪಗಳನ್ನು ಹೊತ್ತು ಕೊಳ್ಳುವುದಕ್ಕೊಸ್ಕರ ಒಂದೇ ಸಾರಿ ಸಮರ್ಪಿತನಾದನು. ಆತನು ಎರಡನೆಯ ಸಾರಿ ಪ್ರತ್ಯಕ್ಷನಾಗುವಂಥದ್ದು ಪಾಪವನ್ನು ಪರಿಹರಿಸುವುದಕ್ಕಾಗಿಯಲ್ಲ ತನ್ನನ್ನು ನಿರೀಕ್ಷಿಸಿಕೊಂಡಿರುವವರಿಗೆ ರಕ್ಷಣೆಯನ್ನು ಉಂಟುಮಾಡುವುದಕ್ಕಾಗಿಯೇ.


ಮಕ್ಕಳಾಗಿದ್ದರೆ ಬಾಧ್ಯಸ್ಥರೂ ಆಗಿದ್ದೇವೆ; ದೇವರಿಗೆ ಬಾಧ್ಯಸ್ಥರೂ ಹಾಗೂ ಕ್ರಿಸ್ತನೊಂದಿಗೆ ಸಹಾ ಬಾಧ್ಯರು ಆಗಿದ್ದೇವೆ. ಹೇಗೆಂದರೆ ಕ್ರಿಸ್ತನ ಕಷ್ಟಗಳಲ್ಲಿ ನಾವು ಪಾಲುಗಾರರಾಗುವುದಾದರೆ ಆತನ ಮಹಿಮೆಯಲ್ಲಿಯೂ ಪಾಲುಗಾರರಾಗುವೆವು.


ನಾನು ಹೋಗಿ ಪುನಃ ನಿಮ್ಮ ಬಳಿಗೆ ಬರುತ್ತೇನೆ ಎಂದು ನಿಮಗೆ ಹೇಳಿದ್ದನ್ನು ಕೇಳಿದ್ದೀರಿ. ನೀವು ನನ್ನನ್ನು ಪ್ರೀತಿಸುವವರಾಗಿದ್ದರೆ ನಾನು ತಂದೆಯ ಬಳಿಗೆ ಹೋಗುತ್ತೇನೆಂದು ಹೇಳಿದ್ದಕ್ಕೆ ಸಂತೋಷಪಡುತ್ತಿದ್ದೀರಿ, ಏಕೆಂದರೆ ತಂದೆಯು ನನಗಿಂತಲೂ ದೊಡ್ಡವನು.


ತಂದೆಯೇ, ನೀನು ನನಗೆ ಕೊಟ್ಟವರು, ನಾನಿರುವ ಸ್ಥಳದಲ್ಲಿ ನನ್ನೊಂದಿಗೆ ಇದ್ದುಕೊಂಡು, ಜಗದುತ್ಪತ್ತಿಗೂ ಮೊದಲೇ ನೀನು ನನ್ನನ್ನು ಪ್ರೀತಿಸಿ ನನಗೆ ಕೊಟ್ಟಿರುವ ಮಹಿಮೆಯನ್ನು ಇವರು ನೋಡಬೇಕೆಂದು, ನಾನು ಆಶಿಸುತ್ತೇನೆ.


ಹೀಗಿರಲಾಗಿ ನಮ್ಮ ದೇವರು ಮತ್ತು ಕರ್ತನಾದ ಯೇಸು ಕ್ರಿಸ್ತನ ಕೃಪೆಗೆ ಅನುಸಾರವಾಗಿ ನಮ್ಮ ಕರ್ತನಾದ ಯೇಸುಕ್ರಿಸ್ತನ ಹೆಸರು ನಿಮ್ಮಲ್ಲಿ ಮಹಿಮೆ ಹೊಂದುವುದು ನೀವೂ ಆತನಲ್ಲಿ ಮಹಿಮೆ ಹೊಂದುವಿರಿ.


ನಾನು ಜಯಹೊಂದಿ ನನ್ನ ತಂದೆಯೊಡನೆ ಸಿಂಹಾಸನದಲ್ಲಿ ಕುಳಿತುಕೊಂಡ ಹಾಗೆಯೇ ಜಯಶಾಲಿಯಾದವನಿಗೆ ನನ್ನೊಡನೆ ಸಿಂಹಾಸನದಲ್ಲಿ ಕುಳಿತುಕೊಳ್ಳುವ ಹಕ್ಕನ್ನು ನಾನು ಕೊಡುತ್ತೇನೆ.


ಈ ಎರಡರ ನಡುವೆ ಸಿಕ್ಕಿಕೊಂಡಿದ್ದೇನೆ, ಇಲ್ಲಿಂದ ಹೊರಟು ಕ್ರಿಸ್ತನ ಜೊತೆಯಲ್ಲಿರಬೇಕೆಂಬುದೇ ನನ್ನ ಅಭಿಲಾಷೆ, ಅದು ಅತ್ಯುತ್ತಮವಾಗಿದೆ.


ನಾನು ಹೋಗುವ ಸ್ಥಳದ ಮಾರ್ಗವು ನಿಮಗೆ ತಿಳಿದಿದೆ” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು