Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 14:31 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಆದರೂ ನಾನು ತಂದೆಯನ್ನು ಪ್ರೀತಿಸುತ್ತೇನೆಂದು ಲೋಕಕ್ಕೆ ತಿಳಿಯಬೇಕೆಂದು ತಂದೆ ನನಗೆ ಆಜ್ಞಾಪಿಸಿದಂತೆಯೇ ನಾನು ಮಾಡುತ್ತೇನೆ. ಏಳಿರಿ, ನಾವು ಇಲ್ಲಿಂದ ಹೋಗೋಣ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ಆದರೆ ನಾನು ಪಿತನನ್ನು ಪ್ರೀತಿಸುತ್ತೇನೆಂಬುದನ್ನೂ ಅವರು ವಿಧಿಸಿದಂತೆಯೇ ಮಾಡುತ್ತೇನೆ ಎಂಬುದನ್ನೂ ಲೋಕವು ತಿಳಿಯಬೇಕು. ಏಳಿ, ಇಲ್ಲಿಂದ ಹೋಗೋಣ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಆದರೂ ನಾನು ತಂದೆಯನ್ನು ಪ್ರೀತಿಸುತ್ತೇನೆಂಬದು ಲೋಕಕ್ಕೆ ತಿಳಿದಿರಬೇಕೆಂದು ತಂದೆಯು ನನಗೆ ಕೊಟ್ಟ ಆಜ್ಞೆಯ ಮೇರೆಗೆ ಇದನ್ನು ಮಾಡುತ್ತೇನೆ. ಏಳಿರಿ, ಇಲ್ಲಿಂದ ಹೋಗೋಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ಆದರೆ ನಾನು ತಂದೆಯನ್ನು ಪ್ರೀತಿಸುತ್ತೇನೆ ಎಂಬುದನ್ನು ಈ ಲೋಕವು ತಿಳಿದುಕೊಳ್ಳಬೇಕು. ಆದ್ದರಿಂದ ತಂದೆಯು ನನಗೆ ಹೇಳಿರುವುದನ್ನೇ ನಾನು ಮಾಡುತ್ತೇನೆ. “ಬನ್ನಿ, ನಾವು ಇಲ್ಲಿಂದ ಹೋಗೋಣ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ಆದರೆ ನಾನು ತಂದೆಯನ್ನು ಪ್ರೀತಿಸುತ್ತೇನೆಂದು ಲೋಕವು ತಿಳಿಯುವಂತೆ ತಂದೆ ನನಗೆ ಆಜ್ಞಾಪಿಸಿದಂತೆಯೇ ನಾನು ಮಾಡುತ್ತೇನೆ. “ಏಳಿರಿ, ನಾವು ಇಲ್ಲಿಂದ ಹೋಗೋಣ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

31 ಮಿಯಾ ಬಾಬಾಚೊ ಕವ್ಡೊ ಪ್ರೆಮ್ ಕರ್‍ತಾ ಖರೆ ಹ್ಯಾ ಜಗಾಕ್ ಕಳುಕ್ ಪಾಜೆ; ತೆಚೆಸಾಟ್ನಿ ಮಿಯಾ ತೆನಿ ಮಾಕಾ ಕಾಯ್ ಸಾಂಗ್ಲ್ಯಾನಾಯ್ ತೆ ಸಗ್ಳೆ ಕರುಲಾಲಾ. ಚಲಾ ಅಮಿ ಹಿತ್ನಾ ಜಾಂವ್ವಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 14:31
17 ತಿಳಿವುಗಳ ಹೋಲಿಕೆ  

ನನ್ನ ಪ್ರಾಣವನ್ನು ಯಾರೂ ನನ್ನಿಂದ ತೆಗೆದುಕೊಳ್ಳುವುದಿಲ್ಲ. ಆದರೆ ನನ್ನಷ್ಟಕ್ಕೆ ನಾನೇ ಅದನ್ನು ಕೊಡುತ್ತೇನೆ. ಅದನ್ನು ಕೊಡುವುದಕ್ಕೆ ನನಗೆ ಅಧಿಕಾರ ಉಂಟು. ಅದನ್ನು ಪುನಃ ಪಡೆದುಕೊಳ್ಳುವುದಕ್ಕೂ ನನಗೆ ಅಧಿಕಾರವಿದೆ. ಈ ಆಜ್ಞೆಯನ್ನು ನಾನು ನನ್ನ ತಂದೆಯಿಂದ ಹೊಂದಿದ್ದೇನೆ” ಎಂದನು.


ಆತನು ತನ್ನನ್ನು ತಗ್ಗಿಸಿಕೊಂಡು ಮರಣವನ್ನು ಅಂದರೆ ಶಿಲುಬೆಯ ಮರಣವನ್ನಾದರೂ ಹೊಂದುವಷ್ಟು ವಿಧೇಯನಾದನು.


ಏಕೆಂದರೆ ಇದನ್ನು ನನ್ನಷ್ಟಕ್ಕೆ ನಾನೇ ಮಾತನಾಡುತ್ತಿಲ್ಲ. ನನ್ನನ್ನು ಕಳುಹಿಸಿ ಕೊಟ್ಟ ತಂದೆಯೇ, ನಾನು ಏನು ಹೇಳಬೇಕು ಮತ್ತು ಹೇಗೆ ಮಾತನಾಡಬೇಕು, ಎಂಬುದಾಗಿ ನನಗೆ ಆಜ್ಞಾಪಿಸಿದ್ದಾನೆ.


ಯೇಸು ಅವರಿಗೆ “ನನ್ನನ್ನು ಕಳುಹಿಸಿದಾತನ ಚಿತ್ತವನ್ನು ಮಾಡಿ ಆತನ ಕೆಲಸವನ್ನು ಪೂರೈಸುವುದೇ ನನ್ನ ಆಹಾರ.


ಆದರೆ ನಾನು ಹೊಂದತಕ್ಕ ದೀಕ್ಷಾಸ್ನಾನ ಒಂದುಂಟು, ಅದು ನೆರವೇರುವ ತನಕ ನನಗೆ ನೆಮ್ಮದಿಯಿಲ್ಲ.


“ತಂದೆ ನನ್ನನ್ನು ಪ್ರೀತಿಸಿದ ಹಾಗೆಯೇ ನಾನೂ ನಿಮ್ಮನ್ನು ಪ್ರೀತಿಸಿದ್ದೇನೆ. ನೀವು ನನ್ನ ಪ್ರೀತಿಯಲ್ಲಿ ನೆಲೆಗೊಂಡಿರಿ.


ನನ್ನ ದೇವರೇ, ನಿನ್ನ ಚಿತ್ತವನ್ನು ಅನುಸರಿಸುವುದೇ ನನ್ನ ಸಂತೋಷವು; ನಿನ್ನ ಧರ್ಮೋಪದೇಶವು ನನ್ನ ಅಂತರಂಗದಲ್ಲಿದೆ” ಅಂದೆನು.


ಆಗ ಯೇಸು ಪೇತ್ರನಿಗೆ, “ಕತ್ತಿಯನ್ನು ಒರೆಯಲ್ಲಿ ಹಾಕು. ತಂದೆಯು ನನಗೆ ಕೊಟ್ಟಿರುವ ಪಾತ್ರೆಯಲ್ಲಿ ನಾನು ಕುಡಿಯಬಾರದೋ?” ಎಂದು ಹೇಳಿದನು.


ಈಗ ನನ್ನ ಪ್ರಾಣವು ತತ್ತರಿಸುತ್ತಿದೆ. ನಾನೇನು ಹೇಳಲಿ? ‘ತಂದೆಯೇ, ಈ ಗಳಿಗೆಯಿಂದ ನನ್ನನ್ನು ತಪ್ಪಿಸು.’ ಆದರೆ ಈ ಕಾರಣಕ್ಕಾಗಿಯೇ ಈ ಗಳಿಗೆಗೆ ಬಂದಿದ್ದೇನಲ್ಲಾ?


ಆತನು ಸ್ವಲ್ಪ ಮುಂದೆ ಹೋಗಿ ಬೋರಲು ಬಿದ್ದು, “ನನ್ನ ತಂದೆಯೇ, ಸಾಧ್ಯವಾದರೆ ಈ ಪಾನಪಾತ್ರೆಯು ನನ್ನನ್ನು ಬಿಟ್ಟುಹೋಗಲಿ; ಆದರೂ ನನ್ನ ಚಿತ್ತದಂತಾಗದೆ ನಿನ್ನ ಚಿತ್ತದಂತೆಯೇ ಆಗಲಿ” ಎಂದು ದೇವರನ್ನು ಪ್ರಾರ್ಥಿಸಿದನು.


ಏಳಿರಿ, ಹೋಗೋಣ; ನನ್ನನ್ನು ಹಿಡಿದುಕೊಡುವವನು ಹತ್ತಿರಕ್ಕೆ ಬಂದಿದ್ದಾನೆ ನೋಡಿರಿ” ಎಂದು ಹೇಳಿದನು.


ಕರ್ತನಾದ ಯೆಹೋವನು ನನ್ನ ಕಿವಿಯನ್ನು ತೆರೆದಿದ್ದಾನೆ. ನಾನು ಎದುರು ಬೀಳಲಿಲ್ಲ, ವಿಮುಖನಾಗಲೂ ಇಲ್ಲ.


ಪಸ್ಕಹಬ್ಬದ ಹಿಂದಿನ ದಿನ ಯೇಸು, ತಾನು ಈ ಲೋಕವನ್ನು ಬಿಟ್ಟು ತಂದೆಯ ಬಳಿಗೆ ಹೋಗಬೇಕಾದ ತನ್ನ ಗಳಿಗೆ ಬಂದಿತೆಂದು ತಿಳಿದುಕೊಂಡು, ಈ ಲೋಕದಲ್ಲಿರುವ ತನ್ನವರನ್ನು ಪ್ರೀತಿಸಿ, ಅವರನ್ನು ಕೊನೆಯವರೆಗೂ ಪ್ರೀತಿಸುತ್ತಾ ಬಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು