Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 15:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ನಾನು ನಿಮಗೆ ಕೊಟ್ಟ ಆಜ್ಞೆಗಳ ಪ್ರಕಾರ ನೀವು ನಡೆದರೆ, ನೀವು ನನ್ನ ಸ್ನೇಹಿತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ನಾನು ಆಜ್ಞಾಪಿಸಿದಂತೆ ನಡೆದರೆ ನೀವು ನನ್ನ ಗೆಳೆಯರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ನಾನು ನಿಮಗೆ ಕೊಟ್ಟ ಆಜ್ಞೆಗಳಿಗೆ ಸರಿಯಾಗಿ ನೀವು ನಡೆದರೆ ನೀವು ನನ್ನ ಸ್ನೇಹಿತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ನಾನು ಹೇಳುವ ಕಾರ್ಯಗಳನ್ನು ನೀವು ಮಾಡಿದರೆ, ನೀವು ನನ್ನ ಸ್ನೇಹಿತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ನಾನು ನಿಮಗೆ ಆಜ್ಞಾಪಿಸಿದ್ದನ್ನು ಪಾಲಿಸಿದರೆ ನೀವು ನನ್ನ ಸ್ನೇಹಿತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ಮಿಯಾ ತುಮ್ಕಾ ದಿಲ್ಲ್ಯಾ ಖಾಯ್ದೊ ಸಾಂಗಟಲ್ಲೆ ಕರ್ಲ್ಯಾಶಿ ತರ್ ತುಮಿ ಮಾಜಿ ದೊಸ್ತಾ .

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 15:14
19 ತಿಳಿವುಗಳ ಹೋಲಿಕೆ  

ಪರಲೋಕದಲ್ಲಿರುವ ನನ್ನ ತಂದೆಯ ಚಿತ್ತವನ್ನು ಮಾಡುವವನೇ ನನ್ನ ಸಹೋದರನೂ ಸಹೋದರಿಯೂ ತಾಯಿಯೂ ಆಗಿದ್ದಾರೆ” ಅಂದನು.


ದೇವರ ಮೇಲಿನ ಪ್ರೀತಿ ಏನೆಂದರೆ ಆತನ ಆಜ್ಞೆಗಳನ್ನು ಕೈಕೊಂಡು ನಡೆಯುವುದೇ. ಆತನ ಆಜ್ಞೆಗಳು ಕಷ್ಟಕರವಾದವುಗಳಲ್ಲ.


“ಅಬ್ರಹಾಮನು ದೇವರನ್ನು ನಂಬಿದನು ಮತ್ತು ಆ ನಂಬಿಕೆ ಅವನ ಲೆಕ್ಕಕ್ಕೆ ನೀತಿಯೆಂದು ಎಣಿಸಲ್ಪಟ್ಟಿತು” ಎಂಬ ಧರ್ಮಶಾಸ್ತ್ರದ ಮಾತು ಹೀಗೆ ನೆರವೇರಿತು. ಆದ್ದರಿಂದ ಅಬ್ರಹಾಮನು ದೇವರ ಸ್ನೇಹಿತನೆಂದು ಕರೆಯಲ್ಪಟ್ಟನು.


ನನ್ನ ಆಜ್ಞೆಗಳನ್ನು ಹೊಂದಿ ಅವುಗಳನ್ನು ಕೈಕೊಂಡು ನಡೆಯುವವನೇ ನನ್ನನ್ನು ಪ್ರೀತಿಸುವವನು. ನನ್ನನ್ನು ಪ್ರೀತಿಸುವವನು ನನ್ನ ತಂದೆಗೆ ಪ್ರಿಯನಾಗಿರುವನು. ನಾನೂ ಅವನನ್ನು ಪ್ರೀತಿಸಿ ಅವನಿಗೆ ನನ್ನನ್ನು ಪ್ರಕಟಪಡಿಸಿ ತೋರಿಸುವೆನು” ಎಂದು ಹೇಳಿದನು.


“ನೀವು ನನ್ನನ್ನು ಪ್ರೀತಿಸುವವರಾದರೆ ನನ್ನ ಆಜ್ಞೆಗಳನ್ನು ಕೈಕೊಂಡು ನಡೆಯುವಿರಿ.


“ನನ್ನ ಸ್ನೇಹಿತರಾದ ನಿಮಗೆ ಹೇಳುತ್ತೇನೆ, ದೇಹವನ್ನು ಕೊಲ್ಲುವವರಿಗೆ ಭಯಪಡಬೇಡಿ. ಕೊಂದು ಹಾಕಿದ ಮೇಲೆ ಹೆಚ್ಚೇನು ಮಾಡಲು ಅವರಿಂದಾಗದು.


ನೀವು ಇವುಗಳನ್ನು ತಿಳಿದುಕೊಂಡು ಇದರಂತೆ ಮಾಡಿದರೆ ನೀವು ಧನ್ಯರು.


ನನ್ನ ಸೇವಕನಾದ ಇಸ್ರಾಯೇಲೇ, ನಾನು ಆರಿಸಿಕೊಂಡ ಯಾಕೋಬೇ, ನನ್ನ ಸ್ನೇಹಿತನಾದ ಅಬ್ರಹಾಮನ ಸಂತತಿಯೇ,


ಆತನ ತಾಯಿಯು ಸೇವಕರಿಗೆ “ಆತನು ನಿಮಗೆ ಏನು ಹೇಳುತ್ತಾನೋ ಅದನ್ನು ಮಾಡಿರಿ” ಎಂದಳು.


ನಾನು ಹೋಗಿ ಪುನಃ ನಿಮ್ಮ ಬಳಿಗೆ ಬರುತ್ತೇನೆ ಎಂದು ನಿಮಗೆ ಹೇಳಿದ್ದನ್ನು ಕೇಳಿದ್ದೀರಿ. ನೀವು ನನ್ನನ್ನು ಪ್ರೀತಿಸುವವರಾಗಿದ್ದರೆ ನಾನು ತಂದೆಯ ಬಳಿಗೆ ಹೋಗುತ್ತೇನೆಂದು ಹೇಳಿದ್ದಕ್ಕೆ ಸಂತೋಷಪಡುತ್ತಿದ್ದೀರಿ, ಏಕೆಂದರೆ ತಂದೆಯು ನನಗಿಂತಲೂ ದೊಡ್ಡವನು.


ನಮ್ಮ ದೇವರಾದ ನೀನು ನಿನ್ನ ಪ್ರಜೆಗಳಾದ ಇಸ್ರಾಯೇಲರ ಎದುರಿನಿಂದ ಈ ದೇಶದ ನಿವಾಸಿಗಳನ್ನು ಓಡಿಸಿ, ದೇಶವನ್ನು ನಿನ್ನ ಸ್ನೇಹಿತನಾದ ಅಬ್ರಹಾಮನ ಸಂತಾನದವರಿಗೆ ಶಾಶ್ವತ ಸ್ವತ್ತಾಗಿ ಕೊಟ್ಟಿರುವೆಯಲ್ಲಾ?.


ಪ್ರಿಯಳೇ, ವಧುವೇ, ಇಗೋ ನಾ ಬಂದಿರುವೆ ನನ್ನ ತೋಟದೊಳಗೆ, ನನ್ನ ರಕ್ತಬೋಳ ಸುಗಂಧದ್ರವ್ಯಗಳನ್ನು ಕೂಡಿಸಿರುವೆ, ನನ್ನ ಜೇನುಗೂಡನ್ನೂ ಜೇನುತುಪ್ಪವನ್ನೂ ತಿಂದಿರುವೆ, ನನ್ನ ದ್ರಾಕ್ಷಾರಸವನ್ನೂ ಹಾಲನ್ನೂ ಕುಡಿದಿರುವೆ. ಮಿತ್ರರೇ, ತಿನ್ನಿರಿ. ಪ್ರಿಯರೇ ಕುಡಿಯಿರಿ, ಬೇಕಾದಷ್ಟು ಪಾನಮಾಡಿರಿ.


ಬಹಳ ಗೆಳೆಯರನ್ನು ಸೇರಿಸಿಕೊಂಡವನಿಗೆ ನಾಶನ, ಸಹೋದರನಿಗಿಂತಲೂ ಹತ್ತಿರ ಹೊಂದಿಕೊಳ್ಳುವ ಮಿತ್ರನುಂಟು.


ಯೆಹೋವನ ಆಜ್ಞೆಯಂತೆಯೇ ಮೋಶೆ ಮತ್ತು ಆರೋನರು ಮಾಡಿದರು.


ಅತ್ತೆಯ ಆಜ್ಞೆಯಂತೆಯೇ ಕಣಕ್ಕೆ ಹೋಗಿ,


ನಾತಾನನ ಮಗನಾದ ಅಜರ್ಯನು ದೇಶಾಧಿಪತಿಗಳ ಮುಖ್ಯಸ್ಥನು. ನಾತಾನನ ಮಗನಾದ ಜಾಬೂದನು ಯಾಜಕನೂ ಹಾಗು ಅರಸನ ಮಿತ್ರನೂ ಆಗಿದ್ದನು.


ಇದಲ್ಲದೆ, ಇವನು ಯೆಹೋವನನ್ನೇ ಆಶ್ರಯಿಸಿಕೊಂಡು ಆತನನ್ನು ಬಿಡದೆ ಹಿಂಬಾಲಿಸಿ, ಮೋಶೆಯ ಮುಖಾಂತರವಾಗಿ ಅನುಗ್ರಹಿಸಿದ ಆಜ್ಞೆಗಳನ್ನು ಕೈಕೊಂಡು ನಡೆದನು.


ಅವರು ಅದನ್ನು ಸೇರಿ ಅನುಭವಿಸಿದರೂ ನಿನ್ನ ಮಾತಿಗೆ ಕಿವಿಗೊಡಲಿಲ್ಲ, ನಿನ್ನ ಧರ್ಮಾನುಸಾರ ನಡೆಯಲಿಲ್ಲ; ನೀನು ಆಜ್ಞಾಪಿಸಿದವುಗಳಲ್ಲೆಲ್ಲಾ ಒಂದನ್ನೂ ಮಾಡಲಿಲ್ಲ. ಆದಕಾರಣ ನೀನು ಈ ಕೇಡನ್ನೆಲ್ಲಾ ಅವರ ಮೇಲೆ ಬರಮಾಡಿದ್ದಿ.


ಆಗ ನಾನು ನನಗಾದ ಅಪ್ಪಣೆಯನ್ನು ನೆರವೇರಿಸಿದೆನು; ಹಗಲಿನಲ್ಲಿ ನನ್ನ ಸಾಮಗ್ರಿಗಳನ್ನು, ವಲಸೆಯ ಸಾಮಗ್ರಿಯನ್ನೋ ಎಂಬಂತೆ ಮನೆಯೊಳಗಿಂದ ಆಚೆಗೆ ಹಾಕಿ, ಸಾಯಂಕಾಲ ನನ್ನ ಕೈಯಿಂದಲೇ ಗೋಡೆಯಲ್ಲಿ ಕಿಂಡಿಯನ್ನು ಮಾಡಿ, ಕತ್ತಲಲ್ಲಿ ಆ ಸಾಮಾನನ್ನು ಆಚೆಗೆ ಸಾಗಿಸಿ, ಅವರ ಕಣ್ಣ ಮುಂದೆ ಹೆಗಲ ಮೇಲೆ ಹೊತ್ತುಕೊಂಡು ಹೋದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು