ಯೋಹಾನ 15:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಇನ್ನು ಮೇಲೆ ನಾನು ನಿಮ್ಮನ್ನು ಆಳುಗಳೆಂದು ಕರೆಯುವುದಿಲ್ಲ, ಏಕೆಂದರೆ, ಯಜಮಾನನು ಮಾಡುವಂಥದ್ದು ಆಳಿಗೆ ತಿಳಿಯುವುದಿಲ್ಲ. ನಿಮ್ಮನ್ನು ಸ್ನೇಹಿತರೆಂದು ಕರೆದಿದ್ದೇನೆ, ಏಕೆಂದರೆ ತಂದೆಯ ಕಡೆಯಿಂದ ನಾನು ಕೇಳಿದ್ದನ್ನೆಲ್ಲಾ ನಾನು ನಿಮಗೆ ತಿಳಿಸಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ನಾನಿನ್ನು ನಿಮ್ಮನ್ನು ದಾಸರೆಂದು ಕರೆಯುವುದಿಲ್ಲ. ಧಣಿಯ ಕೆಲಸಕಾರ್ಯಗಳು ದಾಸನಿಗೆ ತಿಳಿಯವು. ನಾನಾದರೋ ಪಿತನಿಂದ ಕೇಳಿಸಿಕೊಂಡದ್ದನ್ನೆಲ್ಲಾ ನಿಮಗೆ ತಿಳಿಸಿದ್ದೇನೆ. ಈ ಕಾರಣ ನಿಮ್ಮನ್ನು ಗೆಳೆಯರೆಂದು ಕರೆದಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಇನ್ನು ಮೇಲೆ ನಾನು ನಿಮ್ಮನ್ನು ಆಳುಗಳನ್ನುವದಿಲ್ಲ; ಯಜಮಾನನು ಮಾಡುವಂಥದು ಆಳಿಗೆ ತಿಳಿಯುವದಿಲ್ಲ. ನಿಮ್ಮನ್ನು ಸ್ನೇಹಿತರೆಂದು ಹೇಳಿದ್ದೇನೆ; ತಂದೆಯ ಕಡೆಯಿಂದ ನಾನು ಕೇಳಿದ್ದನ್ನೆಲ್ಲಾ ನಿಮಗೆ ತಿಳಿಸಿದ್ದೇನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಈಗ ನಾನು ನಿಮ್ಮನ್ನು ನನ್ನ ಸೇವಕರುಗಳೆಂದು ಕರೆಯುವುದಿಲ್ಲ. ಯಜಮಾನನ ಕೆಲಸಕಾರ್ಯಗಳು ಸೇವಕನಿಗೆ ತಿಳಿದಿರುವುದಿಲ್ಲ. ಆದರೆ ಈಗ ನಾನು ನಿಮ್ಮನ್ನು ನನ್ನ ಗೆಳೆಯರೆಂದು ಕರೆಯುತ್ತೇನೆ. ಏಕೆಂದರೆ ನನ್ನ ತಂದೆಯಿಂದ ಕೇಳಿದ ಪ್ರತಿಯೊಂದನ್ನೂ ನಾನು ನಿಮಗೆ ಹೇಳಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಇನ್ನು ಮೇಲೆ ನಾನು ನಿಮ್ಮನ್ನು ಆಳುಗಳೆಂದು ಕರೆಯುವುದಿಲ್ಲ. ಏಕೆಂದರೆ ತನ್ನ ಧಣಿಯು ಮಾಡುವಂಥದ್ದು ಆಳಿಗೆ ತಿಳಿಯುವುದಿಲ್ಲ. ಆದರೆ ನಾನು ನಿಮ್ಮನ್ನು ಸ್ನೇಹಿತರೆಂದು ಕರೆದಿದ್ದೇನೆ. ಏಕೆಂದರೆ ನನ್ನ ತಂದೆಯಿಂದ ಕೇಳಿದ್ದನ್ನೆಲ್ಲಾ ನಾನು ನಿಮಗೆ ತಿಳಿಯಪಡಿಸಿದ್ದೇನೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್15 ಅನಿ ಫಿಡೆ ಮಿಯಾ ತುಮ್ಕಾ ಸೆವಕ್ ಮನುನ್ ಬಲ್ವಿನಾ ಕಶ್ಯಾಕ್ ಮಟ್ಲ್ಯಾರ್ ಸೆವಕಾಕ್ ತೆಚೊ ಧನಿ ಕಾಯ್ ಕರ್‍ತಾ ಮನ್ತಲೆ ಗೊತ್ತ್ ರ್‍ಹಾಯ್ನಾ. ಹೆಚ್ಯಾ ಬದ್ಲಾಕ್, ಮಿಯಾ ತುಮ್ಕಾ ದೊಸ್ತಾ ಮನುನ್ ಬಲ್ವುತಾ ಕಶ್ಯಾಕ್ ಮಟ್ಲ್ಯಾರ್ ಮಾಜ್ಯಾ ಬಾಬಾಕ್ನಾ ಆಯ್ಕಲ್ಲೆ ಸಗ್ಳೆ ಮಿಯಾ ತುಮ್ಕಾ ಸಾಂಗಟ್ಲಾ. ಅಧ್ಯಾಯವನ್ನು ನೋಡಿ |