Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 15:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ನೀವು ನನ್ನನ್ನು ಆರಿಸಿಕೊಳ್ಳಲಿಲ್ಲ. ನಾನು ನಿಮ್ಮನ್ನು ಆರಿಸಿಕೊಂಡಿದ್ದೇನೆ, ನೀವು ಹೊರಟು ಹೋಗಿ ಫಲಕೊಡಬೇಕೆಂತಲೂ, ಹಾಗೂ ನೀವು ಕೊಡುವ ಫಲವು ಸದಾಕಾಲ ನಿಲ್ಲುವಂಥದ್ದಾಗಬೇಕಂತಲೂ ನಾನು ನಿಮ್ಮನ್ನು ನೇಮಿಸಿದ್ದೇನೆ. ಹೀಗಿರಲಾಗಿ ನೀವು ನನ್ನ ಹೆಸರಿನಲ್ಲಿ ತಂದೆಯನ್ನು ಏನೇನು ಬೇಡಿಕೊಳ್ಳುವಿರೋ, ಅದನ್ನು ಆತನು ನಿಮಗೆ ಕೊಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ನೀವು ನನ್ನನ್ನು ಆರಿಸಿಕೊಳ್ಳಲಿಲ್ಲ, ನಾನೇ ನಿಮ್ಮನ್ನು ಆರಿಸಿಕೊಂಡಿದ್ದೇನೆ. ನೀವು ಲೋಕಕ್ಕೆ ಹೋಗಬೇಕು, ಸಫಲರಾಗಬೇಕು; ಆ ಫಲ ಶಾಶ್ವತವಾಗಿರಬೇಕೆಂದೇ ನಿಮ್ಮನ್ನು ನೇಮಿಸಿದ್ದೇನೆ. ಹೀಗಿರಲಾಗಿ ನೀವು ನನ್ನ ಹೆಸರಿನಲ್ಲಿ ಪಿತನಿಂದ ಏನು ಕೇಳಿದರೂ ನಿಮಗೆ ಅದು ಸಿಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ನೀವು ನನ್ನನ್ನು ಆರಿಸಿ ತೆಗೆದುಕೊಂಡಿಲ್ಲ; ನಾನು ನಿಮ್ಮನ್ನು ಆರಿಸಿ ತೆಗೆದುಕೊಂಡೆನು. ನೀವು ಹೊರಟುಹೋಗಿ ಫಲಕೊಡುವವರಾಗಬೇಕೆಂತಲೂ ನೀವು ಕೊಡುವ ಫಲವು ನಿಲ್ಲುವಂಥದಾಗಬೇಕೆಂತಲೂ ನಿಮ್ಮನ್ನು ನೇವಿುಸಿದ್ದೇನೆ. ಹೀಗಿರಲಾಗಿ ನನ್ನ ಹೆಸರಿನಲ್ಲಿ ತಂದೆಯನ್ನು ಏನೇನು ಬೇಡಿಕೊಳ್ಳುವಿರೋ ಅದನ್ನು ಆತನು ನಿಮಗೆ ಕೊಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 “ನೀವು ನನ್ನನ್ನು ಆರಿಸಿಕೊಳ್ಳಲಿಲ್ಲ; ನಾನು ನಿಮ್ಮನ್ನು ಆರಿಸಿಕೊಂಡೆನು. ನೀವು ಹೊರಟುಹೋಗಿ ಫಲಕೊಡಬೇಕು. ಇದೇ ನಾನು ನಿಮಗೆ ಕೊಟ್ಟಿರುವ ಕೆಲಸ. ಈ ಫಲವು ನಿಮ್ಮ ಜೀವನದಲ್ಲಿ ಶಾಶ್ವತವಾಗಿರಲಿ ಎಂಬುದೇ ನನ್ನ ಬಯಕೆ. ಹೀಗಿರಲಾಗಿ, ನೀವು ನನ್ನ ಹೆಸರಿನಲ್ಲಿ ಏನು ಕೇಳಿಕೊಂಡರೂ ತಂದೆಯು ಅದನ್ನು ನಿಮಗೆ ಕೊಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ನೀವು ನನ್ನನ್ನು ಆರಿಸಿಕೊಳ್ಳಲಿಲ್ಲ. ನಾನೇ ನಿಮ್ಮನ್ನು ಆರಿಸಿಕೊಂಡಿದ್ದೇನೆ. ನೀವು ಹೋಗಿ ಫಲಕೊಡುವಂತೆಯೂ ನಿಮ್ಮ ಫಲವು ಸ್ಥಿರವಾಗಿರುವಂತೆಯೂ ನಾನು ನಿಮ್ಮನ್ನು ನೇಮಿಸಿದ್ದೇನೆ. ಹೀಗೆ ನೀವು ನನ್ನ ಹೆಸರಿನಲ್ಲಿ ತಂದೆಯನ್ನು ಏನು ಕೇಳಿಕೊಂಡರೂ ಅವರು ನಿಮಗೆ ಕೊಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

16 ತುಮಿ ಮಾಕಾ ಎಚುನ್ ಕಾಡುಕ್ನ್ಯಾಶಿ, ಮಿಯಾ ತುಮ್ಕಾ ಎಚುನ್ ಕಾಡ್ಲಾ ಅನಿ ಜಾಸ್ತಿಚಿ ಫಳಾ ದಿವ್ ಸಾಟ್ನಿ ಮನುನ್ ನೆಮ್ಲಾ, ಹುರ್‍ತಲಿ ಫಳಾ ದಿವ್‍ಸಾಟ್ನಿ ನೆಮ್ಲಾ. ಅಶೆಚ್ ಮಾಜ್ಯಾ ನಾವಾನ್ ಬಾಬಾಕ್ಡೆನ್ ತುಮಿ ಮಾಗ್ತ್ಯಾಶಿ ತೆ ಸಗ್ಳೆ ತೊ ತುಮ್ಕಾ ದಿತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 15:16
57 ತಿಳಿವುಗಳ ಹೋಲಿಕೆ  

ನೀವು ಲೋಕದವರಾಗಿದ್ದರೆ ಲೋಕವು ನಿಮ್ಮನ್ನು ತನ್ನವರೆಂದು ಪ್ರೀತಿಸುತ್ತಿತ್ತು. ನೀವಾದರೋ ಲೋಕದ ಕಡೆಯವರಲ್ಲ, ನಾನು ನಿಮ್ಮನ್ನು ಆರಿಸಿಕೊಂಡಿದ್ದರಿಂದಲೇ ಲೋಕವು ನಿಮ್ಮನ್ನು ದ್ವೇಷ ಮಾಡುತ್ತದೆ.


ನಾವಾದರೋ ದೇವರ ಕಲಾಕೃತಿಯಾಗಿದ್ದೇವೆ, ದೇವರು ಮೊದಲೇ ನಮಗಾಗಿ ಸಂಕಲ್ಪಿಸಿದ್ದ ಸತ್ಕಾರ್ಯಗಳನ್ನು ಮಾಡುವವರಾಗಿ ಬದುಕಬೇಕೆಂದು ಯೇಸು ಕ್ರಿಸ್ತನಲ್ಲಿ ಸೃಷ್ಟಿಸಲ್ಪಟ್ಟಿದ್ದೇವೆ.


ಬೆಳಗಾದ ಮೇಲೆ ಆತನು ತನ್ನ ಶಿಷ್ಯರನ್ನು ಹತ್ತಿರಕ್ಕೆ ಕರೆದು ಅವರಲ್ಲಿ ಹನ್ನೆರಡು ಮಂದಿಯನ್ನು ಆರಿಸಿಕೊಂಡು ಅವರಿಗೆ ಅಪೊಸ್ತಲರೆಂದು ಹೆಸರಿಟ್ಟನು.


ಆದರೆ ನಾನು ನನ್ನ ತಾಯಿಯ ಗರ್ಭದಲ್ಲಿದ್ದಾಗಲೇ ನನ್ನನ್ನು ಪ್ರತ್ಯೇಕಿಸಿ, ತನ್ನ ಕೃಪೆಯಿಂದ ಕರೆದ ದೇವರು,


ದೇವರು ಮೊದಲು ನಮ್ಮನ್ನು ಪ್ರೀತಿಸಿದ್ದರಿಂದಲೇ ನಾವು ಆತನನ್ನು ಪ್ರೀತಿಸುತ್ತೇವೆ.


“ಆಗ ಅವನು; ‘ನಮ್ಮ ಪೂರ್ವಿಕರ ದೇವರು, ತನ್ನ ಚಿತ್ತವನ್ನು ನೀನು ತಿಳಿದುಕೊಳ್ಳುವುದಕ್ಕೂ, ಆ ನೀತಿವಂತನನ್ನು ನೋಡುವುದಕ್ಕೂ, ಆತನ ಬಾಯಿಂದ ಬಂದ ಮಾತನ್ನು ಕೇಳುವುದಕ್ಕೂ ನಿನ್ನನ್ನು ನೇಮಿಸಿದ್ದಾನೆ.


ನೀನು ಅನೇಕ ಸಾಕ್ಷಿಗಳ ಮುಂದೆ ನನ್ನಿಂದ ಕೇಳಿದ ಉಪದೇಶವನ್ನು ಇತರರಿಗೆ ಬೋಧಿಸಲು ಶಕ್ತರಾದ, ನಂಬಿಗಸ್ತರಾದ ಜನರಿಗೆ ಅದನ್ನು ಒಪ್ಪಿಸಿಕೊಡು.


ನಾನು ನಿಮ್ಮೆಲ್ಲರನ್ನು ಕುರಿತು ಈ ಮಾತನ್ನು ಹೇಳಲಿಲ್ಲ. ನಾನು ಆರಿಸಿಕೊಂಡವರೆಲ್ಲರನ್ನು ನಾನು ಬಲ್ಲೆನು. ಆದರೆ ನನ್ನ ಜೊತೆಯಲ್ಲಿ ಊಟಮಾಡುವವನೇ, ನನಗೆ ದ್ರೋಹ ಬಗೆದನು, ಎಂಬ ಶಾಸ್ತ್ರದ ಮಾತು ನೆರವೇರಬೇಕಾಗಿದೆ.


ಅದಕ್ಕೆ ಯೇಸು “ಹನ್ನೆರಡು ಮಂದಿಯಾದ ನಿಮ್ಮನ್ನು ನಾನು ಆರಿಸಿ ತೆಗೆದುಕೊಂಡೆನಲ್ಲವೇ? ಆದರೂ ನಿಮ್ಮಲ್ಲಿಯೂ ಒಬ್ಬನು ಸೈತಾನನಿದ್ದಾನೆ” ಎಂದನು.


ಆದರೆ ಕ್ರಿಸ್ತನನ್ನು ಕರ್ತನೆಂದು ನಿಮ್ಮ ಹೃದಯಗಳಲ್ಲಿ ಪ್ರತಿಷ್ಠಿಸಿರಿ. ನಿಮ್ಮಲ್ಲಿರುವ ನಿರೀಕ್ಷೆಗೆ ಆಧಾರವೆನೆಂದು ಕೇಳುವವರೆಲ್ಲರಿಗೂ ಉತ್ತರ ಹೇಳುವುದಕ್ಕೆ ಯಾವಾಗಲೂ ಸಿದ್ಧರಾಗಿರಿ. ಆದರೆ ಅದನ್ನು ಸಾತ್ವಿಕತ್ವದಿಂದಲೂ ಮತ್ತು ಗೌರವದಿಂದಲೂ ಹೇಳಿರಿ.


ದೇವರೇ, ನಾನು ನರೆಯ ಮುದುಕನಾದಾಗಲೂ ಕೈಬಿಡಬೇಡ; ಆಗ ಮುಂದಿನ ತಲೆಯವರಿಗೆ ನಿನ್ನ ಭುಜಬಲವನ್ನು ಸಾರುವೆನು, ತಲತಲಾಂತರದವರಿಗೆಲ್ಲಾ ನಿನ್ನ ಪ್ರತಾಪವನ್ನು ಪ್ರಕಟಿಸುವೆನು.


ನಾವು ದೇವರನ್ನು ಪ್ರೀತಿಸಿಲ್ಲ, ಆದರೂ ಆತನು ನಮ್ಮನ್ನು ಪ್ರೀತಿಸಿ ನಮ್ಮ ಪಾಪಗಳಿಗೆ ಪ್ರಾಯಶ್ಚಿತ್ತ ಬಲಿಯಾಗಿ ತನ್ನ ಮಗನನ್ನು ಕಳುಹಿಸಿಕೊಟ್ಟಿದ್ದರಲ್ಲಿಯೇ ಆತನ ನಿಜವಾದ ಪ್ರೀತಿಯು ತೋರಿಬರುತ್ತದೆ.


ಧರ್ಮಾತ್ಮನ ಫಲ ಜೀವವೃಕ್ಷ, ಜ್ಞಾನಿಯು ಆತ್ಮಗಳನ್ನು ಆಕರ್ಷಿಸುವನು.


“ಕರ್ತನೇ, ಎಲ್ಲರ ಹೃದಯವನ್ನು ಬಲ್ಲಾತನೇ, ಯೂದನು ಅಪೊಸ್ತಲತನವೆಂಬ ಈ ಸೇವಾಸ್ಥಾನದಿಂದ ಭ್ರಷ್ಟನಾಗಿ ತಾನು ಹೋಗ ತಕ್ಕ ಸ್ಥಳಕ್ಕೆ ಹೋಗಿರುವುದರಿಂದ ಆ ಸ್ಥಾನವನ್ನು ಹೊಂದುವುದಕ್ಕೆ ಈ ಇಬ್ಬರಲ್ಲಿ ನೀನು ಆರಿಸಿ ಕೊಂಡವನನ್ನು ತೋರಿಸಿಕೊಡು” ಎಂದು ಪ್ರಾರ್ಥಿಸಿದರು.


ಮುಂದಿನ ಕಾಲದಲ್ಲಿ ಯಾಕೋಬು ಬೇರೂರುವುದು, ಇಸ್ರಾಯೇಲು ಹೂಬಿಟ್ಟು ಚಿಗುರುವುದು, ಆ ವೃಕ್ಷವು ಭೂಮಂಡಲವನ್ನೆಲ್ಲಾ ಫಲದಿಂದ ತುಂಬಿಸುವುದು.”


ಈ ಮೊದಲು ಬರೆದದ್ದೆಲ್ಲಾ ನಮ್ಮನ್ನು ಉಪದೇಶಿಸುವುದಕ್ಕಾಗಿ ಬರೆಯಲ್ಪಟ್ಟಿತು. ನಾವು ಓದಿ ಸ್ಥಿರಚಿತ್ತವನ್ನೂ, ಆದರಣೆಯನ್ನೂ ಹೊಂದಿ ರಕ್ಷಣೆಯ ನಿರೀಕ್ಷೆಯುಳ್ಳವರಾಗಿರುವಂತೆ ಆ ಶಾಸ್ತ್ರಗಳು ಬರೆಯಲ್ಪಟ್ಟವು.


ಕರ್ತನು ಅವನಿಗೆ, “ನೀನು ಹೋಗು; ಆ ಮನುಷ್ಯನು ಅನ್ಯಜನರಿಗೂ, ಅರಸುಗಳಿಗೂ, ಇಸ್ರಾಯೇಲ್ಯರಿಗೂ ನನ್ನ ಹೆಸರನ್ನು ತಿಳಿಸುವುದಕ್ಕಾಗಿ ನಾನು ಆರಿಸಿಕೊಂಡ ಸಾಧನವಾಗಿದ್ದಾನೆ.


ನೀವು ನಂಬಿಕೊಂಡು ಪ್ರಾರ್ಥನೆಯಲ್ಲಿ ಏನೇನು ಬೇಡಿಕೊಳ್ಳುವಿರೋ ಅದನ್ನೆಲ್ಲಾ ಹೊಂದುವಿರಿ” ಅಂದನು.


ಜನರು ವಂಶ ಪಾರಂಪರ್ಯವಾಗಿ ನಿನ್ನ ಕೃತ್ಯಗಳನ್ನು ಹೊಗಳುವರು, ನಿನ್ನ ಮಹತ್ಕಾರ್ಯಗಳನ್ನು ವರ್ಣಿಸುವರು.


ಆ ಸುವಾರ್ತೆಗೋಸ್ಕರ ನಾನು ಪ್ರಚಾರಕನಾಗಿಯೂ, ಅಪೊಸ್ತಲನಾಗಿಯೂ ಮತ್ತು ಬೋಧಕನಾಗಿಯೂ ನೇಮಿಸಲ್ಪಟ್ಟೆನು.


ಅವರಿಗೆ ಸಂಭವಿಸಿದ ಈ ಸಂಗತಿಗಳು ನಿದರ್ಶನರೂಪವಾಗಿವೆ. ಮತ್ತು ಯುಗಾಂತ್ಯಕ್ಕೆ ಬಂದಿರುವವರಾದ ನಮಗೆ ಇದು ಎಚ್ಚರಿಕೆಯ ಮಾತುಗಳಾಗಿ ಬರೆದಿವೆ.


ಉತ್ತಮವಾದ ಬಳಕೆಗೆ ಒಂದು ಪಾತ್ರೆಯನ್ನೂ, ಹೀನವಾದ ಬಳಕೆಗೆ ಮತ್ತೊಂದು ಪಾತ್ರೆಯನ್ನೂ ಒಂದೇ ಮಣ್ಣಿನ ಮುದ್ದೆಯಿಂದ ಮಾಡುವುದಕ್ಕೆ ಕುಂಬಾರನಿಗೆ ಮಣ್ಣಿನ ಮೇಲೆ ಅಧಿಕಾರವಿಲ್ಲವೋ?


ಸಮಾಧಾನವನ್ನು ಉಂಟುಮಾಡುವವರು ಸಮಾಧಾನವೆಂಬ ಬೀಜವನ್ನು ಬಿತ್ತಿ ನೀತಿಯೆಂಬ ಫಲವನ್ನು ಕೊಯ್ಯುವರು.


ನಂಬಿಕೆಯಿಂದಲೇ ಹೇಬೆಲನು ಕಾಯಿನನ ಯಜ್ಞಕ್ಕಿಂತ ಶ್ರೇಷ್ಠ ಯಜ್ಞವನ್ನು ದೇವರಿಗೆ ಸಮರ್ಪಿಸಿದನು. ಇದರ ಮೂಲಕ ಅವನು ನೀತಿವಂತನೆಂದು ಸಾಕ್ಷಿ ಹೊಂದಿದನು. ದೇವರು ಅವನ ಕಾಣಿಕೆಗಳನ್ನು ಕುರಿತು ಪ್ರಶಂಸಿಸಿದನು. ಅವನು ಸತ್ತುಹೋಗಿದ್ದರೂ, ಅವನ ನಂಬಿಕೆಯ ಮೂಲಕ ಇನ್ನೂ ಮಾತನಾಡುವವನಾಗಿದ್ದಾನೆ.


ಕ್ರೇತ್ ದ್ವೀಪದಲ್ಲಿ ಇನ್ನೂ ಕ್ರಮಕ್ಕೆ ಬಾರದಿರುವ ಕಾರ್ಯಗಳನ್ನು ಕ್ರಮಪಡಿಸಿ, ಪಟ್ಟಣ ಪಟ್ಟಣಗಳಲ್ಲಿ ಹಿರಿಯರನ್ನು ನೇಮಿಸಬೇಕೆಂದು ನಾನು ನಿನಗೆ ಅಪ್ಪಣೆಕೊಟ್ಟು ನಿನ್ನನ್ನು ಅಲ್ಲಿ ಬಿಟ್ಟು ಬಂದೆ.


ನೀವು ಸತ್ಯದಲ್ಲಿ ದೇವರ ಕೃಪೆಯನ್ನು ಕೇಳಿ ತಿಳಿದುಕೊಂಡ ದಿನದಿಂದ ನಿಮ್ಮ ಬಳಿಗೆ ಬಂದ ಆ ಸುವಾರ್ತೆಯು ನಿಮ್ಮಲ್ಲಿ ಫಲಕೊಟ್ಟಂತೆ ಲೋಕದಲ್ಲೆಲ್ಲಾ ಫಲಕೊಟ್ಟು ವೃದ್ಧಿಯಾಗುತ್ತಿದೆ.


ಆತನು ವಂಶಕ್ರಮದಿಂದ ದಾವೀದನ ಸಂತಾನದಲ್ಲಿ ಹುಟ್ಟಿದವನೂ ಪವಿತ್ರವಾದ ಆತ್ಮನ ಶಕ್ತಿಗನುಸಾರವಾಗಿ ಸತ್ತಮೇಲೆ ಜೀವಿತನಾಗಿ ಎದ್ದು ಬಂದು ದೇವಕುಮಾರನೆಂದು ನಿರ್ಣಯಿಸಲ್ಪಟ್ಟವನೂ ಆಗಿದ್ದಾನೆ.


ಆತನು ಎಲ್ಲರಿಗೂ ಪ್ರತ್ಯಕ್ಷನಾಗದೆ, ದೇವರು ಮುಂಚಿತವಾಗಿ ಆರಿಸಿಕೊಂಡಿದ್ದ ಸಾಕ್ಷಿಗಳಾದ ನಮಗೆ ಪ್ರತ್ಯಕ್ಷನಾದನು. ಆತನು ಸತ್ತವರೊಳಗಿಂದ ಜೀವಿತನಾಗಿ ಎದ್ದು ಬಂದ ಮೇಲೆ ನಾವು ಆತನ ಸಂಗಡ ಊಟ ಮಾಡಿದೆವು.


ಆ ಸಾಕ್ಷಿಯನ್ನು ಪ್ರಸಿದ್ಧಿಪಡಿಸುವುದಕ್ಕಾಗಿಯೇ ನಾನು ಸಂದೇಶಕನಾಗಿಯೂ, ಅಪೊಸ್ತಲನಾಗಿಯೂ, ನಂಬಿಕೆಯಿಂದಲೂ ಸತ್ಯದಿಂದಲೂ ಅನ್ಯಜನರಿಗೆ ಬೋಧಿಸುವವನಾಗಿಯೂ ನೇಮಿಸಲ್ಪಟ್ಟಿದ್ದೇನೆ. ನಾನು ಸುಳ್ಳಾಡದೇ ಸತ್ಯವನ್ನೇ ಹೇಳುತ್ತೇನೆ.


ಆಕಾಶದ ಕೆಳಗಿರುವ ಸರ್ವ ಸೃಷ್ಟಿಗೂ ಸಾರಲ್ಪಟ್ಟಂತಹ ಮತ್ತು ನೀವು ಕೇಳಿದಂತಹ ಸುವಾರ್ತೆಯಿಂದ ಉಂಟಾದ ನಿರೀಕ್ಷೆಯಿಂದ ಕದಲಿಹೋಗದಂತೆ ನಂಬಿಕೆಯಲ್ಲಿ ದೃಢವಾಗಿರಿ ಮತ್ತು ನೆಲೆಗೊಂಡಿರಿ. ಇದೇ ಸುವಾರ್ತೆಗೆ ಪೌಲನೆಂಬ ನಾನು ಸೇವಕನಾಗಿದ್ದೇನೆ.


ಯೆಹೋವನ ವರವಾದ ಇಬ್ಬನಿಯೂ ಮತ್ತು ಹುಲ್ಲನ್ನು ಬೆಳೆಯಿಸುವ ಹದಮಳೆಗಳೂ ಮಾನವರ ಪ್ರಯತ್ನವಿಲ್ಲದೆ ಹೇಗೆ ಸಮೃದ್ಧಿಯಾಗಿ ಬೆಳೆಯುವವು, ಮಾನವರ ನೆರವನ್ನು ನಿರೀಕ್ಷಿಸದೆ ಹೇಗೆ ಹಿತಕರವಾಗಿರುವವೋ, ಹಾಗೆಯೇ ಯಾಕೋಬಿನ ಜನಶೇಷವು ಬಹು ಜನಾಂಗಗಳ ಮಧ್ಯದಲ್ಲಿ ಹಿತಕರವಾಗಿರುವುದು.


ಅವನಿಂದ ಬಲಿಷ್ಠವಾದ ಮಹಾ ಜನಾಂಗವು ಹುಟ್ಟಬೇಕಲ್ಲಾ; ಅವನ ಮೂಲಕ ಭೂಮಿಯ ಎಲ್ಲಾ ಜನಾಂಗಗಳಿಗೂ ಆಶೀರ್ವಾದ ಉಂಟಾಗುವುದಲ್ಲಾ;


ಪ್ರಿಯರೇ, ನನ್ನ ಕೆಲಸವು ಇತರ ಅನ್ಯಜನಗಳಲ್ಲಿ ಸಫಲವಾದಂತೆ ನಿಮ್ಮಲ್ಲಿಯೂ ಸಫಲವಾದೀತೆಂದು ನಿಮ್ಮ ಬಳಿಗೆ ಬರುವುದಕ್ಕೆ ಅನೇಕಾವರ್ತಿ ಮನಸ್ಸು ಮಾಡಿಕೊಂಡಿದ್ದಾಗ್ಯೂ ಇಂದಿನವರೆಗೂ ಅಡ್ಡಿಯಾಯಿತೆಂಬುದು ನೀವು ತಿಳಿದಿರಬೇಕೆಂಬುದು ನನ್ನ ಅಪೇಕ್ಷೆ.


ಆದರೆ ಪವಿತ್ರಾತ್ಮನು ನಿಮ್ಮ ಮೇಲೆ ಬರಲು ನೀವು ಶಕ್ತಿಯನ್ನು ಹೊಂದಿದವರಾಗಿ ಯೆರೂಸಲೇಮಿನಲ್ಲಿಯೂ, ಯೂದಾಯದ ಎಲ್ಲಾ ಸ್ಥಳದಲ್ಲಿಯು, ಸಮಾರ್ಯ ಸೀಮೆಗಳಲ್ಲಿಯೂ, ಭೂಲೋಕದ ಕಟ್ಟಕಡೆಯವರೆಗೂ ನನಗೆ ಸಾಕ್ಷಿಗಳಾಗಿರುವಿರಿ” ಅಂದನು.


“ಬೇಡಿಕೊಳ್ಳಿರಿ, ನಿಮಗೆ ದೊರೆಯುವುದು; ಹುಡುಕಿರಿ, ನಿಮಗೆ ಸಿಕ್ಕುವುದು; ತಟ್ಟಿರಿ, ನಿಮಗೆ ತೆರೆಯುವುದು;


ನಾನು ದ್ರಾಕ್ಷಿಬಳ್ಳಿ, ನೀವು ಕೊಂಬೆಗಳು; ಒಬ್ಬನು ನನ್ನಲ್ಲಿಯೂ ನಾನು ಅವನಲ್ಲಿಯೂ ನೆಲೆಗೊಂಡಿದ್ದರೆ ಅವನು ಬಹಳ ಫಲ ಕೊಡುವನು. ನೀವು ನನ್ನನ್ನು ಬಿಟ್ಟು ಏನೂ ಮಾಡಲಾರಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು