Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 15:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ನೀವು ಲೋಕದವರಾಗಿದ್ದರೆ ಲೋಕವು ನಿಮ್ಮನ್ನು ತನ್ನವರೆಂದು ಪ್ರೀತಿಸುತ್ತಿತ್ತು. ನೀವಾದರೋ ಲೋಕದ ಕಡೆಯವರಲ್ಲ, ನಾನು ನಿಮ್ಮನ್ನು ಆರಿಸಿಕೊಂಡಿದ್ದರಿಂದಲೇ ಲೋಕವು ನಿಮ್ಮನ್ನು ದ್ವೇಷ ಮಾಡುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ನೀವು ಲೋಕದ ಕಡೆಯವರಾಗಿದ್ದರೆ ಲೋಕವು ನಿಮ್ಮನ್ನು ತನ್ನವರೆಂದು ಮಮತೆಯಿಂದ ಕಾಣುತ್ತಿತ್ತು. ನೀವಾದರೋ ಲೋಕದ ಕಡೆಗೆ ಸೇರಿದವರಲ್ಲ. ನಾನು ನಿಮ್ಮನ್ನು ಆರಿಸಿಕೊಂಡಿರುವುದರಿಂದ ನೀವು ಲೋಕದಿಂದ ಬೇರ್ಪಟ್ಟಿದ್ದೀರಿ ಎಂದೇ ಲೋಕಕ್ಕೆ ನಿಮ್ಮ ಮೇಲೆ ದ್ವೇಷವಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ನೀವು ಲೋಕದ ಕಡೆಯವರಾಗಿರುತ್ತಿದ್ದರೆ ಲೋಕವು ನಿಮ್ಮ ಮೇಲೆ ತನ್ನವರೆಂದು ಮಮತೆ ಇಡುತ್ತಿತ್ತು; ಆದರೆ ನೀವು ಲೋಕದ ಕಡೆಯವರಲ್ಲದೆ ಇರುವದರಿಂದಲೂ ನಾನು ನಿಮ್ಮನ್ನು ಲೋಕದೊಳಗಿಂದ ಆರಿಸಿ ತೆಗೆದುಕೊಂಡಿರುವದರಿಂದಲೂ ಲೋಕವು ನಿಮ್ಮ ಮೇಲೆ ದ್ವೇಷ ಮಾಡುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ನೀವು ಈ ಲೋಕಕ್ಕೆ ಸೇರಿದವರಾಗಿದ್ದರೆ, ಈ ಲೋಕವು ತನ್ನ ಸ್ವಂತ ಜನರನ್ನು ಪ್ರೀತಿಸುವಂತೆ ನಿಮ್ಮನ್ನೂ ಪ್ರೀತಿಸುತ್ತಿತ್ತು. ಆದರೆ ನಾನು ನಿಮ್ಮನ್ನು ಈ ಲೋಕದೊಳಗಿಂದ ಆರಿಸಿಕೊಂಡಿದ್ದೇನೆ. ಆದ್ದರಿಂದ ನೀವು ಈ ಲೋಕಕ್ಕೆ ಸೇರಿದವರಲ್ಲ. ಆದಕಾರಣ ಈ ಲೋಕವು ನಿಮ್ಮನ್ನು ದ್ವೇಷಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ನೀವು ಲೋಕದವರಾಗಿದ್ದರೆ ಲೋಕವು ನಿಮ್ಮನ್ನು ಪ್ರೀತಿಸುತ್ತಿತ್ತು. ಆದರೆ ನೀವು ಲೋಕದವರಲ್ಲದೆ ಇರುವುದರಿಂದಲೂ ನಾನು ಲೋಕದೊಳಗಿಂದ ನಿಮ್ಮನ್ನು ಆರಿಸಿಕೊಂಡದ್ದರಿಂದಲೂ ಲೋಕವು ನಿಮ್ಮನ್ನು ದ್ವೇಷಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

19 ತುಮಿ ಜಗಾಕ್ ಸಮಂದ್ ಪಡಲ್ಲೆ ಮನುನ್ ರ್‍ಹಾಲ್ಯಾರ್ ತೊ ತುಮಿ ತೆಚೆಚ್ ಮನುನ್ ತುಮ್ಚೊ ಪ್ರೆಮ್ ಕರಿ ಹೊತ್ತೊ. ಖರೆ ಮಿಯಾ ತುಮ್ಕಾ ಹ್ಯಾ ಜಗಾತ್ನಾ ಎಚುನ್ ಕಾಡ್ಲಾ, ಅನಿ ತುಮಿ ಹ್ಯಾ ಜಗಾಕ್ ಸಮಂದ್ ಪಡಲ್ಲೆ ನ್ಹಯ್ ,ತೆಚೆಸಾಟ್ನಿ ಹ್ಯೊ ಜಗ್ ತುಮ್ಚೊ ದ್ವೆಸ್ ಕರ್‍ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 15:19
19 ತಿಳಿವುಗಳ ಹೋಲಿಕೆ  

ನೀವು ನನ್ನನ್ನು ಆರಿಸಿಕೊಳ್ಳಲಿಲ್ಲ. ನಾನು ನಿಮ್ಮನ್ನು ಆರಿಸಿಕೊಂಡಿದ್ದೇನೆ, ನೀವು ಹೊರಟು ಹೋಗಿ ಫಲಕೊಡಬೇಕೆಂತಲೂ, ಹಾಗೂ ನೀವು ಕೊಡುವ ಫಲವು ಸದಾಕಾಲ ನಿಲ್ಲುವಂಥದ್ದಾಗಬೇಕಂತಲೂ ನಾನು ನಿಮ್ಮನ್ನು ನೇಮಿಸಿದ್ದೇನೆ. ಹೀಗಿರಲಾಗಿ ನೀವು ನನ್ನ ಹೆಸರಿನಲ್ಲಿ ತಂದೆಯನ್ನು ಏನೇನು ಬೇಡಿಕೊಳ್ಳುವಿರೋ, ಅದನ್ನು ಆತನು ನಿಮಗೆ ಕೊಡುವನು.


ಕೆಡುಕುನಾಗಿದ್ದು ತನ್ನ ತಮ್ಮನನ್ನು ಕೊಂದುಹಾಕಿದ ಕಾಯಿನನಂತೆ ನಾವು ಇರಬಾರದು. ಅವನು ಯಾಕೆ ತಮ್ಮನನ್ನು ಕೊಂದು ಹಾಕಿದನು? ತನ್ನ ಕೃತ್ಯಗಳು ಕೆಟ್ಟದ್ದು ಮತ್ತು ತನ್ನ ತಮ್ಮನ ಕೃತ್ಯಗಳು ನೀತಿಯುಳ್ಳವುಗಳೂ ಆಗಿದ್ದುದರಿಂದಲೇ.


“ನಿಮಗೆ ಪ್ರೀತಿ ತೋರಿಸುವವರನ್ನೇ ನೀವು ಪ್ರೀತಿಸಿದರೆ ನಿಮಗೆ ಏನು ಹೊಗಳಿಕೆ ಬಂದೀತು? ಪಾಪಿಷ್ಠರು ಸಹ ತಮಗೆ ಪ್ರೀತಿ ತೋರಿಸುವವರನ್ನು ಪ್ರೀತಿಸುತ್ತಾರಲ್ಲಾ.


ನೀವು ಬಂಡುತನ, ದುರಾಶೆ, ಕುಡುಕತನ, ದುಂದೌತಣ, ಮದ್ಯಪಾನ ಗೋಷ್ಠಿ, ಅಸಹ್ಯವಾದ ವಿಗ್ರಹಾರಾಧನೆ, ಈ ಮೊದಲಾದವುಗಳನ್ನು ನಡಿಸುವುದರಲ್ಲಿಯೂ ಅನ್ಯಜನರಿಗೆ ಇಷ್ಟವಾದ ದುಷ್ಕೃತ್ಯಗಳನ್ನು ಮಾಡುವುದರಲ್ಲಿಯೂ ಕಾಲಕಳೆದದ್ದು ಸಾಕು.


ಆಗ ಘಟಸರ್ಪನು ಸ್ತ್ರೀಯ ಮೇಲೆ ಬಹು ಕೋಪಗೊಂಡು, ಆಕೆಯ ಸಂತಾನದವರಲ್ಲಿ ಉಳಿದವರ ಮೇಲೆ ಅಂದರೆ, ದೇವರ ಆಜ್ಞೆಗಳನ್ನು ಕೈಗೊಂಡು ನಡೆದು ಯೇಸುವಿನ ವಿಷಯವಾದ ಸಾಕ್ಷಿಯನ್ನು ಹೊಂದಿದವರ ಮೇಲೆ ಯುದ್ಧಮಾಡುವುದಕ್ಕೆ ಹೊರಟು,


ಭೂಲೋಕದವರನ್ನೆಲ್ಲಾ ಮರುಳುಗೊಳಿಸಿ ಪಾಪ ಮಾಡಿಸುತ್ತಿದ್ದ ಆ ಮಹಾ ಘಟಸರ್ಪವು ಅಂದರೆ ಪಿಶಾಚನೆಂತಲೂ ಸೈತಾನನೆಂತಲೂ ಹೆಸರುಳ್ಳ ಆ ಪುರಾತನ ಸರ್ಪವನ್ನು ಭೂಮಿಗೆ ತಳ್ಳಲಾಯಿತು. ಅವನ ದೂತರು ಅವನೊಂದಿಗೆ ದೊಬ್ಬಲ್ಪಟ್ಟರು.


ಮತ್ತು ನನ್ನ ಹೆಸರಿನ ನಿಮಿತ್ತ ನಿಮ್ಮನ್ನು ಎಲ್ಲರೂ ದ್ವೇಷಿಸುವರು. ಆದರೆ ಕಡೆಯವರೆಗೂ ತಾಳಿಕೊಳ್ಳುವವನು ರಕ್ಷಣೆಹೊಂದುವನು.


“ಆಗ ನಿಮ್ಮನ್ನು ಕಷ್ಟಸಂಕಟಗಳಿಗೆ ಗುರಿಮಾಡಿ ಕೊಲ್ಲುವರು; ನನ್ನ ಹೆಸರಿನ ನಿಮಿತ್ತ ನಿಮ್ಮನ್ನು ಎಲ್ಲಾ ಜನಾಂಗಗಳವರು ದ್ವೇಷಿಸುವರು.


ಅದಕ್ಕೆ ಯೇಸು “ಹನ್ನೆರಡು ಮಂದಿಯಾದ ನಿಮ್ಮನ್ನು ನಾನು ಆರಿಸಿ ತೆಗೆದುಕೊಂಡೆನಲ್ಲವೇ? ಆದರೂ ನಿಮ್ಮಲ್ಲಿಯೂ ಒಬ್ಬನು ಸೈತಾನನಿದ್ದಾನೆ” ಎಂದನು.


ನಾನು ನಿಮ್ಮೆಲ್ಲರನ್ನು ಕುರಿತು ಈ ಮಾತನ್ನು ಹೇಳಲಿಲ್ಲ. ನಾನು ಆರಿಸಿಕೊಂಡವರೆಲ್ಲರನ್ನು ನಾನು ಬಲ್ಲೆನು. ಆದರೆ ನನ್ನ ಜೊತೆಯಲ್ಲಿ ಊಟಮಾಡುವವನೇ, ನನಗೆ ದ್ರೋಹ ಬಗೆದನು, ಎಂಬ ಶಾಸ್ತ್ರದ ಮಾತು ನೆರವೇರಬೇಕಾಗಿದೆ.


ವ್ಯಭಿಚಾರಿಗಳೇ, ಇಹಲೋಕದ ಗೆಳೆತನವು ದೇವರಿಗೆ ಹಗೆತನವೆಂದು ನಿಮಗೆ ತಿಳಿಯದೋ? ಆದ್ದರಿಂದ ಲೋಕಕ್ಕೆ ಸ್ನೇಹಿತನಾಗಿರಬೇಕೆಂದಿರುವವನು ತನ್ನನ್ನು ದೇವರಿಗೆ ವಿರೋಧಿಯನ್ನಾಗಿ ಮಾಡಿಕೊಳ್ಳುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು