Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 15:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ನನ್ನಲ್ಲಿದ್ದು ಫಲಕೊಡದಿರುವ ಪ್ರತಿಯೊಂದು ಕೊಂಬೆಯನ್ನು ಆತನು ಕತ್ತರಿಸಿಹಾಕುತ್ತಾನೆ. ಫಲ ಕೊಡುವ ಪ್ರತಿಯೊಂದು ಕೊಂಬೆಯು ಹೆಚ್ಚು ಫಲ ಕೊಡುವ ಹಾಗೆ ಅದನ್ನು ಕತ್ತರಿಸಿ ಶುದ್ಧಮಾಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ನನ್ನಲ್ಲಿದ್ದೂ ಫಲಕೊಡದ ಕವಲುಬಳ್ಳಿಗಳನ್ನೆಲ್ಲಾ ಅವರು ಕತ್ತರಿಸಿಹಾಕುವರು. ಫಲಕೊಡುವ ಕವಲುಬಳ್ಳಿಗಳು ಮತ್ತಷ್ಟು ಫಲಕೊಡುವಂತೆ ಅವನ್ನು ಸವರಿ ಶುದ್ಧಗೊಳಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ನನ್ನಲ್ಲಿದ್ದು ಫಲಕೊಡದಿರುವ ಪ್ರತಿಯೊಂದು ಕೊಂಬೆಯನ್ನು ಆತನು ತೆಗೆದುಹಾಕುತ್ತಾನೆ; ಫಲಕೊಡುವ ಪ್ರತಿಯೊಂದು ಕೊಂಬೆಯು ಹೆಚ್ಚು ಫಲಕೊಡುವ ಹಾಗೆ ಅದನ್ನು ಶುದ್ಧಿಮಾಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಫಲಕೊಡದಿರುವ ಪ್ರತಿಯೊಂದು ಕವಲನ್ನು ಆತನು ಕತ್ತರಿಸಿಹಾಕುವನು. ಫಲಕೊಡುವ ಕವಲು ಇನ್ನೂ ಹೆಚ್ಚು ಫಲಕೊಡುವಂತೆ ಅದನ್ನು ಶುದ್ಧಗೊಳಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ನನ್ನಲ್ಲಿದ್ದು ಫಲವನ್ನು ಕೊಡದ ಪ್ರತಿಯೊಂದು ಕವಲುಬಳ್ಳಿಯನ್ನು ತಂದೆ ಮೇಲಕ್ಕೆ ಎತ್ತಿಡುವರು. ಆದರೆ ಫಲಕೊಡುವ ಪ್ರತಿಯೊಂದು ಕವಲುಬಳ್ಳಿಯು ಹೆಚ್ಚು ಫಲಕೊಡುವಂತೆ ಅದನ್ನು ಕತ್ತರಿಸಿ ಶುದ್ಧ ಮಾಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ತೊ ಮಾಕಾ ಲಾಗುನ್ ಹೊತ್ತ್ಯಾ ಫಳಾ ದಿ ನಸಲ್ಲ್ಯಾ ಫಾಟೆ ತೊಡ್ತಾ ಅನಿ ಫಳ್ ದಿತಲ್ಯಾ ಫಾಟೆ ಅನಿ ಉಲ್ಲೆ ಫಳ್ ದಿವಸಾಟ್ನಿ ಮನುನ್ ಮಾಳ್ ಕರ್‍ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 15:2
42 ತಿಳಿವುಗಳ ಹೋಲಿಕೆ  

ಈಗಾಗಲೇ ಮರಗಳ ಬೇರಿಗೆ ಕೊಡಲಿ ಹಾಕಿದೆ; ಆದ್ದರಿಂದ ಒಳ್ಳೆಯ ಫಲವನ್ನು ಕೊಡದ ಪ್ರತಿಯೊಂದು ಮರವನ್ನು ಕಡಿದು ಬೆಂಕಿಯಲ್ಲಿ ಹಾಕುವರು.


ಅದಕ್ಕೆ ಆತನು “ಪರಲೋಕದ ನನ್ನ ತಂದೆಯು ನೆಡದೆ ಇರುವ ಗಿಡಗಳನ್ನೆಲ್ಲಾ ಬೇರುಸಹಿತ ಕಿತ್ತುಹಾಕಲಾಗುವುದು.


ನಾನು ಯಾರಾರನ್ನು ಪ್ರೀತಿಸುತ್ತೇನೋ ಅವರನ್ನು ಗದರಿಸುತ್ತೇನೆ ಮತ್ತು ಶಿಕ್ಷಿಸುತ್ತೇನೆ. ಆದ್ದರಿಂದ ನೀನು ಜಾಗರೂಕನಾಗಿರು. ಮಾನಸಾಂತರ ಹೊಂದಿ ದೇವರ ಕಡೆಗೆ ತಿರಿಗಿಕೋ.


ನೀವು ಬಹಳ ಫಲಕೊಡುವುದರಿಂದಲೇ ನನ್ನ ತಂದೆಗೆ ಮಹಿಮೆ ಉಂಟಾಗುವುದು ಮತ್ತು ನೀವು ನನ್ನ ಶಿಷ್ಯರಾಗುವಿರಿ.


ಏಕೆಂದರೆ ಇದ್ದವನಿಗೆ ಕೊಡಲ್ಪಡುವುದು ಅವನಿಗೆ ಇನ್ನೂ ಹೆಚ್ಚು ಸಮೃದ್ಧಿಯಾಗುವುದು ಇಲ್ಲದವನ ಕಡೆಯಿಂದ ಇದ್ದದ್ದೂ ತೆಗೆಯಲ್ಪಡುವುದು.


ಹೊಟ್ಟನು ತೂರುವ ಮೊರವನ್ನು ಆತನು ಕೈಯಲ್ಲಿ ಹಿಡಿದಿದ್ದಾನೆ; ತನ್ನ ಕಣದಲ್ಲಿಯ ರಾಶಿಯನ್ನು ತೂರಿ ಹಸನು ಮಾಡಿ ತನ್ನ ಗೋದಿಯನ್ನು ಕಣಜದಲ್ಲಿ ತುಂಬಿಕೊಂಡು ಹೊಟ್ಟನ್ನು ಆರದ ಬೆಂಕಿಯಲ್ಲಿ ಸುಟ್ಟು ಬಿಡುವನು” ಎಂದು ಹೇಳಿದನು.


ದಾರಿಯಲ್ಲಿ ಒಂದು ಅಂಜೂರದ ಮರವನ್ನು ಕಂಡು ಅದರ ಹತ್ತಿರಕ್ಕೆ ಹೋಗಿ ಅದರಲ್ಲಿ ಬರೀ ಎಲೆಗಳು ಮಾತ್ರ ಇರುವುದನ್ನು ಕಂಡು ಅದಕ್ಕೆ, “ಇನ್ನು ಮೇಲೆ ನಿನ್ನಲ್ಲಿ ಎಂದೆಂದಿಗೂ ಫಲವು ಫಲಿಸದೆ ಹೋಗಲಿ” ಎಂದು ಹೇಳಿದನು. ಆ ಕ್ಷಣವೇ ಆ ಅಂಜೂರದ ಮರವು ಒಣಗಿಹೋಯಿತು.


ಹೀಗಾದರೂ ಶಿಷ್ಟನು ತನ್ನ ಮಾರ್ಗವನ್ನೇ ಹಿಡಿದು ನಡೆಯುವನು, ಶುದ್ಧಹಸ್ತನು ಬಲಗೊಳ್ಳುತ್ತಲೇ ಇರುವನು.


ನಿಮ್ಮಲ್ಲಿ ಯಾವನೂ ದೇವರ ಕೃಪೆಯಿಂದ ತಪ್ಪಿ ಹಿಂಜಾರಿ ಹೋಗದಂತೆಯೂ, ಯಾವ ಕಹಿಯಾದ ಬೇರೂ ನಿಮ್ಮಲ್ಲಿ ಚಿಗುರಿ ಅಸಮಾಧಾನವನ್ನು ಹುಟ್ಟಿಸಿ ಅನೇಕರನ್ನು ಮಲಿನಪಡಿಸದಂತೆ ನೋಡಿಕೊಳ್ಳಿರಿ.


ನೀವು ನನ್ನನ್ನು ಆರಿಸಿಕೊಳ್ಳಲಿಲ್ಲ. ನಾನು ನಿಮ್ಮನ್ನು ಆರಿಸಿಕೊಂಡಿದ್ದೇನೆ, ನೀವು ಹೊರಟು ಹೋಗಿ ಫಲಕೊಡಬೇಕೆಂತಲೂ, ಹಾಗೂ ನೀವು ಕೊಡುವ ಫಲವು ಸದಾಕಾಲ ನಿಲ್ಲುವಂಥದ್ದಾಗಬೇಕಂತಲೂ ನಾನು ನಿಮ್ಮನ್ನು ನೇಮಿಸಿದ್ದೇನೆ. ಹೀಗಿರಲಾಗಿ ನೀವು ನನ್ನ ಹೆಸರಿನಲ್ಲಿ ತಂದೆಯನ್ನು ಏನೇನು ಬೇಡಿಕೊಳ್ಳುವಿರೋ, ಅದನ್ನು ಆತನು ನಿಮಗೆ ಕೊಡುವನು.


ಕೆಲವರು ವಾಕ್ಯವನ್ನು ಕೇಳಿದಾಗಲೇ ಅದನ್ನು ಸಂತೋಷದಿಂದ ಅಂಗೀಕರಿಸುತ್ತಾರೆ; ಇವರಿಗೆ ಬೇರಿಲ್ಲದ ಕಾರಣ ಸ್ವಲ್ಪಕಾಲ ಮಾತ್ರವೇ ನಂಬಿಕೊಂಡಿದ್ದು ಶೋಧನೆಯ ಕಾಲದಲ್ಲಿ ಬಿದ್ದು ಹೋಗುತ್ತಾರೆ. ಇವರೇ ಬಂಡೆಯ ಮೇಲೆ ಬೀಳಲ್ಪಟ್ಟ ಬೀಜಗಳು.


ಬೆಳ್ಳಿಯನ್ನು ಶೋಧಿಸುವ ಅಕ್ಕಸಾಲಿಗನಂತೆ ಕುಳಿತು ಲೇವಿ ವಂಶದವರನ್ನು ಶೋಧಿಸಿ ಬೆಳ್ಳಿಬಂಗಾರಗಳನ್ನೋ ಎಂಬಂತೆ ಶುದ್ಧೀಕರಿಸುವನು; ಅವರು ಸದ್ಧರ್ಮಿಗಳಾಗಿ ಯೆಹೋವನಿಗೆ ನೈವೇದ್ಯಗಳನ್ನು ತಂದೊಪ್ಪಿಸುವರು.


ಅವರು ನಮ್ಮಿಂದ ಹೊರಟುಹೋದವರು. ಏಕೆಂದರೆ ಅವರು ನಮ್ಮವರಾಗಿರಲಿಲ್ಲ. ಅವರು ನಮ್ಮವರಾಗಿದ್ದರೆ, ನಮ್ಮ ಜೊತೆಯಲ್ಲೇ ಇರುತ್ತಿದ್ದರು. ಆದರೆ ಅವರು ನಮ್ಮಿಂದ ಹೊರಟುಹೋದುದರಿಂದ ಅವರೆಲ್ಲರೂ ನಮ್ಮವರಲ್ಲವೆಂಬುದು ಸ್ಪಷ್ಟವಾಗಿ ತೋರಿಬಂದಿದೆ.


ಆತನು ನಮ್ಮನ್ನು ಸಕಲ ಅಧರ್ಮಗಳಿಂದ ಬಿಡುಗಡೆಮಾಡುವುದಕ್ಕೂ ಸತ್ಕ್ರಿಯೆಗಳಲ್ಲಿ ಆಸಕ್ತರಾದ ಸ್ವಕೀಯಜನರನ್ನು ತನಗಾಗಿ ಬೇರ್ಪಡಿಸಿ ಶುದ್ಧೀಕರಣ ಮಾಡುವುದಕ್ಕಾಗಿಯೂ ನಮಗೋಸ್ಕರ ತನ್ನನ್ನು ಒಪ್ಪಿಸಿಕೊಟ್ಟನು.


ನಾನು ಮನುಷ್ಯರ ಭಾಷೆಗಳನ್ನೂ, ದೇವದೂತರ ಭಾಷೆಗಳನ್ನೂ ಮಾತನಾಡುವವನಾದರೂ ಪ್ರೀತಿಯಿಲ್ಲದವನಾಗಿದ್ದರೆ ನಾದಕೊಡುವ ಕಂಚಿನ ಜಾಗಟೆ, ಗಣಗಣಿಸುವ ಘಂಟೆ ಆಗಿದ್ದೇನೆ.


ಇದಲ್ಲದೆ ದೇವರ ಸಂಕಲ್ಪದ ಮೇರೆಗೆ ಕರೆಯಲ್ಪಟ್ಟು ಆತನನ್ನು ಪ್ರೀತಿಸುವವರ ಹಿತಕ್ಕಾಗಿ ಎಲ್ಲಾ ಕಾರ್ಯಗಳು ಒಳ್ಳೆಯದಕ್ಕಾಗಿಯೇ ಆಗುವುದೆಂದು ನಮಗೆ ತಿಳಿದಿದೆ.


ನಾನು ಇವರ ಜೊತೆ ಇದ್ದಾಗ ನೀನು ನನಗೆ ಕೊಟ್ಟ ನಿನ್ನ ಹೆಸರಿನಲ್ಲಿ ಇವರನ್ನು ಕಾಪಾಡಿ ಸಂರಕ್ಷಿಸಿದೆನು. ಧರ್ಮಶಾಸ್ತ್ರದ ಮಾತು ನೆರವೇರುವಂತೆ ನಾಶಕ್ಕಾಗಿ ಹುಟ್ಟಿದವನೇ ಹೊರತು ಇವರಲ್ಲಿ ಒಬ್ಬನೂ ನಾಶವಾಗಲಿಲ್ಲ.


ನೀತಿವಂತರ ಮಾರ್ಗವು ಮಧ್ಯಾಹ್ನದ ವರೆಗೂ ಹೆಚ್ಚುತ್ತಾ ಬರುವ ಬೆಳಗಿನ ಬೆಳಕಿನಂತಿದೆ.


ಆತನು ಮತ್ತೊಂದು ಸಾಮ್ಯವನ್ನು ಅವರಿಗೆ ಹೇಳಿದನು. ಅದೇನೆಂದರೆ, “ಪರಲೋಕ ರಾಜ್ಯವು ಹುಳಿಹಿಟ್ಟಿಗೆ ಹೋಲಿಕೆಯಾಗಿದೆ. ಅದನ್ನು ಒಬ್ಬ ಸ್ತ್ರೀ ತೆಗೆದುಕೊಂಡು ಮೂರು ಸೇರು ಹಿಟ್ಟಿನಲ್ಲಿ ಕಲಸಿಡಲು ಆ ಹಿಟ್ಟೆಲ್ಲಾ ಹುಳಿಯಾಯಿತು.”


ಯೆಹೋವನನ್ನು ತಿಳಿದುಕೊಳ್ಳೋಣ, ನಿರಂತರವಾಗಿ ಹುಡುಕಿ ತಿಳಿದುಕೊಳ್ಳೋಣ, ಆತನ ಆಗಮನವು ಉದಯದಂತೆ ನಿಶ್ಚಯ; ಆತನು ಮುಂಗಾರಿನಂತೆಯೂ, ಭೂಮಿಯನ್ನು ತಂಪುಮಾಡುವ ಹಿಂಗಾರಿನಂತೆಯೂ ನಮಗೆ ಸಿಕ್ಕುವನು” ಅಂದುಕೊಂಡು ನನ್ನನ್ನು ಮೊರೆಹೋಗುವರು.


ದೀನರು ಯೆಹೋವನಲ್ಲಿ ಹೆಚ್ಚಾಗಿ ಆನಂದಿಸುವರು, ಬಡವರು ಇಸ್ರಾಯೇಲರ ಸದಮಲಸ್ವಾಮಿಯಲ್ಲಿ ಉಲ್ಲಾಸಿಸುವರು.


ಹೀಗಿರಲು ಯಾಕೋಬ್ಯರು ಯಜ್ಞವೇದಿಯ ಕಲ್ಲುಗಳನ್ನೆಲ್ಲಾ ಸುಣ್ಣದಂತೆ ಪುಡಿ ಪುಡಿ ಮಾಡಿ, ಅಶೇರವೆಂಬ ವಿಗ್ರಹಸ್ತಂಭಗಳನ್ನೂ, ಸೂರ್ಯಸ್ತಂಭಗಳನ್ನೂ ಪ್ರತಿಷ್ಠಿಸದೆ ನಾಶಮಾಡಿ ಅದೇ ಅವರ ಅಧರ್ಮಕ್ಕೆ ಪ್ರಾಯಶ್ಚಿತ್ತವಾಗುವಂತೆ ಮಾಡಿದನು ಮತ್ತು ಅವರ ಪಾಪ ಪರಿಹಾರಕ್ಕೆ ಗುರುತಾದ ಪೂರ್ಣಫಲವೂ ಇದಾಗಿದೆ.


ಮುಪ್ಪಿನಲ್ಲಿಯೂ ಫಲಿಸುವರು; ಪುಷ್ಟಿಯಾಗಿದ್ದು ಶೋಭಿಸುವರು.


ಜ್ಞಾನಿಗಳಲ್ಲಿಯೂ ಕೆಲವರು ಅಂತ್ಯಕಾಲದವರೆಗೆ ಬೀಳುತ್ತಿರುವರು. ಆದುದರಿಂದ ಜನರು ಶೋಧಿಸಲ್ಪಟ್ಟು, ಶುದ್ಧಿಹೊಂದಿ ಶುಭ್ರರಾಗುವರು. ಅಂತ್ಯವು ನಿಶ್ಚಿತಕಾಲದಲ್ಲೇ ಆಗುವುದು.


ಒಳ್ಳೆಯ ಫಲವನ್ನು ಕೊಡದ ಎಲ್ಲಾ ಮರಗಳನ್ನು ಕಡಿದು ಬೆಂಕಿಯಲ್ಲಿ ಹಾಕುತ್ತಾರೆ.


ಇದ್ದವರಿಗೆ ಇನ್ನೂ ಹೆಚ್ಚಾಗಿ ಕೊಡಲ್ಪಡುವುದು, ಅವರಿಗೆ ಇನ್ನೂ ಹೆಚ್ಚಾಗುವುದು; ಇಲ್ಲದವನ ಕಡೆಯಿಂದ ಇದ್ದದ್ದೂ ತೆಗೆಯಲ್ಪಡುವುದು.


ಮತ್ತೆ ಕೆಲವರು ವಾಕ್ಯವನ್ನು ಕೇಳಿ ಕೈಕೊಂಡು ಮೂವತ್ತರಷ್ಟಾಗಲಿ ಅರವತ್ತರಷ್ಟಾಗಲಿ ನೂರರಷ್ಟಾಗಲಿ ಫಲವನ್ನು ಕೊಡುತ್ತಾರೆ; ಇವರೇ ಒಳ್ಳೆಯ ನೆಲದಲ್ಲಿ ಬಿದ್ದ ಬೀಜವಾಗಿರುವವರು” ಅಂದನು.


“ನಾನೇ ನಿಜವಾದ ದ್ರಾಕ್ಷಿಬಳ್ಳಿ, ನನ್ನ ತಂದೆ ತೋಟಗಾರನು.


ನಾನು ನಿಮಗೆ ಹೇಳಿದ ವಾಕ್ಯದ ದೆಸೆಯಿಂದ ಈಗ ನೀವು ಶುದ್ಧರಾಗಿದ್ದೀರಿ.


ಯಾವನು ನನ್ನಲ್ಲಿ ನೆಲೆಗೊಂಡಿರುವುದಿಲ್ಲವೋ ಅವನು ಹೊರಕ್ಕೆ ಬಿಸಾಡಲ್ಪಟ್ಟ ಕೊಂಬೆಯಂತೆ ಒಣಗಿಹೋಗುವನು. ಅಂಥ ಕೊಂಬೆಗಳನ್ನು ಕೂಡಿಸಿ ಬೆಂಕಿಯಲ್ಲಿ ಹಾಕುವರು. ಅವು ಸುಟ್ಟು ಹೋಗುತ್ತವೆ.


ಆದರೆ ಕೆಲವು ಕೊಂಬೆಗಳನ್ನು ಮುರಿದುಹಾಕಿ ಕಾಡೆಣ್ಣೆ ಮರದಂತಿರುವ ನಿನ್ನನ್ನು ಅವುಗಳ ಜಾಗದಲ್ಲಿ ಕಸಿಮಾಡಿರಲಾಗಿ ಊರೆಣ್ಣೇಮರದ ರಸವತ್ತಾದ ಬೇರಿನಲ್ಲಿ ಅದು ಪಾಲುಹೊಂದಿದ್ದರೂ ಆ ಕೊಂಬೆಗಳನ್ನು ಕಡೆಗಣಿಸಿ ನಿನ್ನನ್ನು ಅಂಟಿಸಿದ ಮೇಲೆ ನೀನು ಕೊಂಬೆಯ ಕುರಿತು ಹೆಚ್ಚಿಸಿಕೊಳ್ಳಬೇಡ.


ಆದ್ದರಿಂದ ದೇವರ ದಯೆಯನ್ನೂ, ದಂಡನೆಯನ್ನು ನೋಡು; ಬಿದ್ದವರಿಗೆ ದಂಡನೆಯನ್ನೂ, ನೀನು ದೇವರ ದಯೆಯನ್ನು ಆಶ್ರಯಿಸಿಕೊಂಡೇ ಇದ್ದರೆ ಆತನ ದಯೆಯನ್ನು ಹೊಂದುವಿ. ಇಲ್ಲವಾದರೆ ನಿನ್ನನ್ನೂ ಕಡಿದುಹಾಕುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು