Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 16:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಇನ್ನು ಸ್ವಲ್ಪ ಕಾಲವಾದ ಮೇಲೆ ನಾನು ನಿಮಗೆ ಕಾಣಿಸುವುದಿಲ್ಲ, ಅನಂತರ ಸ್ವಲ್ಪ ಕಾಲವಾದ ಮೇಲೆ ನೀವು ಪುನಃ ನನ್ನನ್ನು ನೋಡುವಿರಿ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 “ತುಸುಕಾಲವಾದ ನಂತರ ನೀವು ನನ್ನನ್ನು ಕಾಣಲಾರಿರಿ. ಅನಂತರ ತುಸುಕಾಲ ಕಳೆಯುತ್ತಲೇ ನನ್ನನ್ನು ಪುನಃ ಕಾಣುವಿರಿ,” ಎಂದರು ಯೇಸು ಸ್ವಾಮಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಸ್ವಲ್ಪಕಾಲವಾದ ಮೇಲೆ ನಾನು ನಿಮಗೆ ಕಾಣುವದಿಲ್ಲ; ಅನಂತರ ಸ್ವಲ್ಪಕಾಲವಾದ ಮೇಲೆ ನನ್ನನ್ನು ನೋಡುವಿರಿ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 “ಸ್ವಲ್ಪಕಾಲವಾದ ಬಳಿಕ ನೀವು ನನ್ನನ್ನು ಕಾಣುವುದಿಲ್ಲ. ಅನಂತರ ಸ್ವಲ್ಪಕಾಲವಾದ ಮೇಲೆ ನೀವು ನನ್ನನ್ನು ಮತ್ತೆ ನೋಡುವಿರಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 “ಸ್ವಲ್ಪ ಕಾಲವಾದ ಮೇಲೆ ನೀವು ನನ್ನನ್ನು ಕಾಣುವುದಿಲ್ಲ. ಅನಂತರ ಸ್ವಲ್ಪ ಕಾಲವಾದ ಮೇಲೆ ನೀವು ಪುನಃ ನನ್ನನ್ನು ಕಾಣುವಿರಿ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

16 “ಅನಿ ಎಕ್ ಉಲ್ಲ್ಯಾ ಎಳಾಚ್ಯಾ ಮಾನಾ ಮಿಯಾ ತುಮ್ಕಾ ಬಗುಕ್ ಗಾವಿನಾ ಮಾನಾ ಅನಿ ಉಲ್ಲ್ಯಾ ಎಳಾನ್ ಮಿಯಾ ತುಮ್ಕಾ ಬಗುಕ್ ಗಾವ್ತಾ” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 16:16
19 ತಿಳಿವುಗಳ ಹೋಲಿಕೆ  

ಆಗ ಯೇಸು ಅವರಿಗೆ “ಇನ್ನು ಸ್ವಲ್ಪಕಾಲ ನಾನು ನಿಮ್ಮೊಂದಿಗಿದ್ದು ಆಮೇಲೆ ನನ್ನನ್ನು ಕಳುಹಿಸಿದಾತನ ಬಳಿಗೆ ಹೊರಟು ಹೋಗುತ್ತೇನೆ.


ಯೇಸುವು ಬಾಧೆಪಟ್ಟು ಸತ್ತ ನಂತರ ತಾನು ಜೀವಂತನಾಗಿ ಎದ್ದು ಬಂದಿದ್ದೇನೆ ಎಂದು ಅನೇಕ ಸಂಭವಗಳ ಮೂಲಕ ತಾನು ಆರಿಸಿಕೊಂಡಿದ್ದ ಅಪೊಸ್ತಲರಿಗೆ ಸ್ಪಷ್ಟಪಡಿಸಿದನು. ಸತತವಾಗಿ ನಲವತ್ತು ದಿನಗಳ ತನಕ ಅವರಿಗೆ ಕಾಣಿಸಿಕೊಳ್ಳುತ್ತಾ ದೇವರ ರಾಜ್ಯದ ವಿಷಯವನ್ನು ಕುರಿತು ಅವರಿಗೆ ಬೋಧಿಸಿದನು.


ನಾನು ತಂದೆಯ ಬಳಿಯಿಂದ ಹೊರಟು ಈ ಲೋಕಕ್ಕೆ ಬಂದಿದ್ದೇನೆ, ಪುನಃ ಈ ಲೋಕವನ್ನು ಬಿಟ್ಟು ತಂದೆಯ ಬಳಿಗೆ ಹೋಗುತ್ತೇನೆ” ಎಂದನು.


ಹಾಗೆಯೇ, ನಿಮಗೂ ಈಗ ದುಃಖವಿದ್ದರೂ ನಾನು ನಿಮ್ಮನ್ನು ತಿರುಗಿ ನೋಡುವೆನು, ಆಗ ನಿಮ್ಮ ಹೃದಯಕ್ಕೆ ಆನಂದವಾಗುವುದು, ಮತ್ತು ನಿಮ್ಮ ಆನಂದವನ್ನು ಯಾರು ನಿಮ್ಮಿಂದ ತೆಗೆದು ಹಾಕಲು ಸಾಧ್ಯವಿಲ್ಲ.


ತಂದೆಯು ತನ್ನ ಕೈಯಲ್ಲಿ ಎಲ್ಲದರ ಮೇಲೆ ಅಧಿಕಾರ ಕೊಟ್ಟಿದ್ದಾನೆಂದೂ, ತಾನು ದೇವರ ಬಳಿಯಿಂದ ಬಂದು, ತಿರುಗಿ ದೇವರ ಬಳಿಗೆ ಹೋಗುತ್ತೇನೆಂದೂ ಯೇಸುವಿಗೆ ತಿಳಿದಿತ್ತು.


“ಆದರೆ ಈಗ ನಾನು ನನ್ನನ್ನು ಕಳುಹಿಸಿಕೊಟ್ಟಾತನ ಬಳಿಗೆ ಹೋಗುತ್ತೇನೆ. ‘ನೀನು ಎಲ್ಲಿಗೆ ಹೋಗುತ್ತಿ?’ ಎಂದು ನಿಮ್ಮಲ್ಲಿ ಒಬ್ಬನಾದರೂ ನನ್ನನ್ನು ಕೇಳುವುದಿಲ್ಲ.


ನನ್ನ ಮಕ್ಕಳೇ, ಇನ್ನು ಸ್ವಲ್ಪ ಕಾಲವೇ ನಾನು ನಿಮ್ಮ ಜೊತೆಯಲ್ಲಿ ಇರುತ್ತೇನೆ. ನೀವು ನನ್ನನ್ನು ಹುಡುಕುವಿರಿ ಆದರೆ ‘ನಾನು ಹೋಗುವಲ್ಲಿಗೆ ನೀವು ಬರಲಾರಿರಿ’ ಎಂದು ನಾನು ಯೆಹೂದ್ಯರಿಗೆ ಹೇಳಿದಂತೆಯೇ ನಿಮಗೂ ಈಗ ಹೇಳುತ್ತೇನೆ.


ಆಗ ಯೇಸು ಅವರಿಗೆ, “ಇನ್ನು ಸ್ವಲ್ಪ ಕಾಲವೇ ಬೆಳಕು ನಿಮ್ಮಲ್ಲಿ ಇರುತ್ತದೆ. ಕತ್ತಲೆಯು ನಿಮ್ಮನ್ನು ಮುಸುಕಿಕೊಳ್ಳದಂತೆ ಬೆಳಕು ಇರುವಾಗಲೇ ನಡೆಯಿರಿ. ಕತ್ತಲಿನಲ್ಲಿ ಒಬ್ಬನು ತಾನು ಎಲ್ಲಿಗೆ ಹೋಗುತ್ತಾನೆಂದು ತಿಳಿಯನು.


ಕರ್ತನಾದ ಯೇಸು ಅವರೊಂದಿಗೆ ಮಾತನಾಡಿದ ಮೇಲೆ ಪರಲೋಕಕ್ಕೆ ಒಯ್ಯಲ್ಪಟ್ಟು ದೇವರ ಬಲಗಡೆಯಲ್ಲಿ ಆಸನಾರೂಢನಾದನು.


“ಆದರೆ ಈಗ ನಾನು ನಿನ್ನ ಬಳಿಗೆ ಬರುತ್ತೇನೆ. ಆದುದರಿಂದ ನನ್ನ ಆನಂದವು ಇವರಲ್ಲಿ ಪರಿಪೂರ್ಣವಾಗಿರುವಂತೆ ನಾನು ಲೋಕದಲ್ಲಿದ್ದು ಈ ಮಾತುಗಳನ್ನಾಡುತ್ತಿದೇನೆ.


ಈಗ ತಂದೆಯೇ, ಲೋಕವು ಸೃಷ್ಟಿಯಾಗುವುದಕ್ಕಿಂತ ಮೊದಲು, ನಿನ್ನ ಬಳಿಯಲ್ಲಿ ನನಗಿದ್ದ ಮಹಿಮೆಯಂತೆಯೇ ನಿನ್ನೊಂದಿಗೆ ನನ್ನನ್ನು ಮಹಿಮೆಪಡಿಸು.


ನಾನು ನನ್ನ ತಂದೆಯ ಬಳಿಗೆ ಹೋಗಿ, ಇನ್ನು ಮೇಲೆ ನಿಮಗೆ ಕಾಣಿಸದೆ ಇರುವುದರಿಂದ ನೀತಿಯ ಕುರಿತಾಗಿಯೂ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು