Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 16:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಯೇಸುವು ಇದನ್ನು ಕುರಿತು ತನ್ನನ್ನು ಕೇಳಬೇಕೆಂದಿದ್ದಾರೆಂದು ತಿಳಿದು ಅವರಿಗೆ, “ಸ್ವಲ್ಪ ಕಾಲವಾದ ಮೇಲೆ ನಾನು ನಿಮಗೆ ಕಾಣಿಸುವುದಿಲ್ಲ, ಇನ್ನು ಸ್ವಲ್ಪ ಕಾಲವಾದ ಮೇಲೆ ನನ್ನನ್ನು ನೋಡುವಿರಿ, ಎಂದು ನಾನು ನಿಮಗೆ ಹೇಳಿದ್ದಕ್ಕೆ ನೀವು ನಿಮ್ಮನಿಮ್ಮೊಳಗೆ ವಿಚಾರಿಸಿಕೊಳ್ಳುತ್ತಿದ್ದೀರಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಯೇಸು, ತಮ್ಮಲ್ಲಿ ಅವರು ವಿಚಾರಿಸಬೇಕೆಂದಿದ್ದಾರೆಂದು ತಿಳಿದುಕೊಂಡು, ‘ತುಸುಕಾಲದ ನಂತರ ನೀವು ನನ್ನನ್ನು ಕಾಣಲಾರಿರಿ. ಅನಂತರ ತುಸುಕಾಲ ಕಳೆಯುತ್ತಲೇ ನನ್ನನ್ನು ಪುನಃ ಕಾಣುವಿರಿ’ ಎಂದು ನಾನು ಹೇಳಿದ್ದನ್ನು ಕುರಿತು ನಿಮ್ಮನಿಮ್ಮಲ್ಲಿಯೇ ನೀವು ಚರ್ಚಿಸುತ್ತಿರುವುದೇನು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಯೇಸು ತನ್ನನ್ನು ಕೇಳಬೇಕೆಂದಿದ್ದಾರೆಂದು ತಿಳಿದು ಅವರಿಗೆ - ಸ್ವಲ್ಪಕಾಲವಾದ ಮೇಲೆ ನಾನು ನಿಮಗೆ ಕಾಣುವದಿಲ್ಲ, ಇನ್ನು ಸ್ವಲ್ಪಕಾಲವಾದ ಮೇಲೆ ನನ್ನನ್ನು ನೋಡುವಿರಿ ಎಂದು ನಾನು ಹೇಳಿದ್ದಕ್ಕೆ ನೀವು ನಿಮ್ಮನಿಮ್ಮೊಳಗೆ ವಿಚಾರಿಸಿಕೊಳ್ಳುತ್ತೀರಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಶಿಷ್ಯರು ಇದರ ಬಗ್ಗೆ ತನ್ನನ್ನು ಕೇಳಬೇಕೆಂದಿದ್ದಾರೆ ಎಂಬುದು ಯೇಸುವಿಗೆ ತಿಳಿದಿತ್ತು. ಆದ್ದರಿಂದ ಆತನು, “‘ಸ್ವಲ್ಪಕಾಲವಾದ ಬಳಿಕ ನೀವು ನನ್ನನ್ನು ಕಾಣುವುದಿಲ್ಲ. ಆದರೆ ಅನಂತರ ಸ್ವಲ್ಪಕಾಲವಾದ ಬಳಿಕ ನನ್ನನ್ನು ನೋಡುವಿರಿ’ ಎಂದು ನಾನು ಹೇಳಿದ್ದರ ಅರ್ಥವೇನೆಂದು ನೀವು ಒಬ್ಬರನ್ನೊಬ್ಬರು ಕೇಳುತ್ತಿದ್ದೀರಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಶಿಷ್ಯರು ತಮ್ಮ ಬಗ್ಗೆ ಪ್ರಶ್ನಿಸಬಯಸುತ್ತಿದ್ದಾರೆಂದು ತಿಳಿದು ಯೇಸು, “ಸ್ವಲ್ಪ ಕಾಲವಾದ ಮೇಲೆ ನೀವು ನನ್ನನ್ನು ಕಾಣುವುದಿಲ್ಲ, ‘ಸ್ವಲ್ಪ ಕಾಲವಾದ ಮೇಲೆ ನೀವು ಪುನಃ ನನ್ನನ್ನು ಕಾಣುವಿರಿ ಎಂದು ನಾನು ನಿಮಗೆ ಹೇಳಿದ್ದರ ಕುರಿತಾಗಿ ನೀವು ಒಬ್ಬರಿಗೊಬ್ಬರು ವಿಚಾರಿಸಿಕೊಳ್ಳುತ್ತೀರೋ?’

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

19 ತೆನಿ ತೆಕಾ ಕಾಯ್ಕಿ ಇಚಾರುಚೆ ಮನುನ್ ಹಾತ್ ಮನುನ್ ಜೆಜುಕ್ ಕಳ್ಳೆ, ತನ್ನಾ ತೆನಿ ತೆಂಕಾ, “ಉಲ್ಲ್ಯಾ ಎಳಾನ್ ಮಿಯಾ ಬಗುಕ್ ಗಾವಿನಾ, ಮಾನಾ ಅನಿ ಉಲ್ಲ್ಯಾ ಎಳಾನ್ ಬಗುಕ್ ಗಾವ್ತಾ ಮನ್ತಲ್ಯಾ ವಿಶಯಾತ್ ತುಮಿ ಎಕಾಮೆಕಾತ್ನಿ ಇಚಾರುಲಾಲ್ಯಾಶಿ ಕಾಯ್?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 16:19
18 ತಿಳಿವುಗಳ ಹೋಲಿಕೆ  

ನೀನು ಸಮಸ್ತವನ್ನು ತಿಳಿದವನೆಂದೂ, ನಿನಗೆ ಪ್ರಶ್ನೆ ಮಾಡಬೇಕಾದ ಅಗತ್ಯವಿಲ್ಲವೆಂದೂ ಈಗ ನಮಗೆ ತಿಳಿಯಿತು. ಆದುದರಿಂದ ನಿನ್ನನ್ನು ದೇವರ ಬಳಿಯಿಂದ ಬಂದವನೇ ಎಂದು ನಾವು ನಂಬುತ್ತೇವೆ” ಎಂದರು.


ಇನ್ನು ಸ್ವಲ್ಪ ಕಾಲವಾದ ಮೇಲೆ ನಾನು ನಿಮಗೆ ಕಾಣಿಸುವುದಿಲ್ಲ, ಅನಂತರ ಸ್ವಲ್ಪ ಕಾಲವಾದ ಮೇಲೆ ನೀವು ಪುನಃ ನನ್ನನ್ನು ನೋಡುವಿರಿ” ಎಂದನು.


ಇನ್ನು ಸ್ವಲ್ಪ ಕಾಲವಾದ ಮೇಲೆ ಲೋಕವು ನನ್ನನ್ನು ನೋಡುವುದಿಲ್ಲ, ಆದರೆ ನೀವು ನನ್ನನ್ನು ನೋಡುವಿರಿ. ನಾನು ಜೀವಿಸುವುದರಿಂದ ನೀವು ಜೀವಿಸುವಿರಿ.


ನನ್ನ ಮಕ್ಕಳೇ, ಇನ್ನು ಸ್ವಲ್ಪ ಕಾಲವೇ ನಾನು ನಿಮ್ಮ ಜೊತೆಯಲ್ಲಿ ಇರುತ್ತೇನೆ. ನೀವು ನನ್ನನ್ನು ಹುಡುಕುವಿರಿ ಆದರೆ ‘ನಾನು ಹೋಗುವಲ್ಲಿಗೆ ನೀವು ಬರಲಾರಿರಿ’ ಎಂದು ನಾನು ಯೆಹೂದ್ಯರಿಗೆ ಹೇಳಿದಂತೆಯೇ ನಿಮಗೂ ಈಗ ಹೇಳುತ್ತೇನೆ.


ಆಗ ಯೇಸು ಅವರಿಗೆ “ಇನ್ನು ಸ್ವಲ್ಪಕಾಲ ನಾನು ನಿಮ್ಮೊಂದಿಗಿದ್ದು ಆಮೇಲೆ ನನ್ನನ್ನು ಕಳುಹಿಸಿದಾತನ ಬಳಿಗೆ ಹೊರಟು ಹೋಗುತ್ತೇನೆ.


ಅವಳ ಮಕ್ಕಳನ್ನು ಕೊಲ್ಲುವೆನು. ಆಗ ನಾನು ಮನುಷ್ಯರ ಅಂತರಿಂದ್ರಿಯಗಳನ್ನೂ, ಹೃದಯಗಳನ್ನೂ ಪರೀಕ್ಷಿಸುವವನಾಗಿದ್ದೇನೆಂಬುದು ಎಲ್ಲಾ ಸಭೆಗಳಿಗೆ ಗೊತ್ತಾಗುವುದು. ನಿಮ್ಮಲ್ಲಿ ಪ್ರತಿಯೊಬ್ಬನಿಗೂ ಅವನವನ ಕ್ರಿಯೆಗಳಿಗೆ ತಕ್ಕ ಹಾಗೆ ಪ್ರತಿಫಲವನ್ನು ಕೊಡುವೆನು.


ಆತನ ದೃಷ್ಟಿಗೆ ಮರೆಯಾಗಿರುವ ಒಂದು ಸೃಷ್ಟಿಯೂ ಇಲ್ಲ. ಆತನ ಕಣ್ಣಿಗೆ ಮರೆಯಾದದ್ದು ಒಂದೂ ಇಲ್ಲ ಎಲ್ಲವೂ ನಗ್ನವಾಗಿಯೂ ಬಟ್ಟಬಯಲಾಗಿಯೂ ಇದೆ. ಅಂಥವನಿಗೆ ನಾವು ಲೆಕ್ಕಕೊಡಬೇಕಾಗಿದೆ.


ಯೇಸು ಮೂರನೆಯ ಸಾರಿ, “ಯೋಹಾನನ ಮಗನಾದ ಸೀಮೋನನೇ ನೀನು ನನ್ನ ಮೇಲೆ ಮಮತೆ ಇಟ್ಟಿದ್ದಿಯೋ?” ಎಂದು ಕೇಳಿದನು, ಮೂರನೆಯ ಸಾರಿ ಆತನು, “ನನ್ನ ಮೇಲೆ ಮಮತೆ ಇಟ್ಟಿದ್ದೀಯೋ?” ಎಂದು ತನ್ನನ್ನು ಕೇಳಿದ್ದಕ್ಕೆ ಪೇತ್ರನು ದುಃಖಪಟ್ಟು, “ಕರ್ತನೇ, ನಿನಗೆ ಎಲ್ಲವೂ ತಿಳಿದಿದೆ. ನಾನು ನಿನ್ನ ಮೇಲೆ ಮಮತೆ ಇಟ್ಟೀದ್ದೇನೆಂದು ನಿನಗೆ ತಿಳಿದಿದೆ” ಎಂದನು. ಆಗ ಅವನಿಗೆ ಯೇಸು “ನನ್ನ ಕುರಿಗಳನ್ನು ಮೇಯಿಸು” ಎಂದನು.


ಯೇಸು ಅವರ ಆಲೋಚನೆಗಳನ್ನು ತಿಳಿದು, “ನೀವು ಏಕೆ ನಿಮ್ಮ ಮನಸ್ಸಿನಲ್ಲಿ ದುರಾಲೋಚನೆಯನ್ನು ಮಾಡುತ್ತಿದ್ದೀರಿ?


ಆದುದರಿಂದ ನೀವು ಅವರ ಹಾಗೆ ಆಗಬೇಡಿರಿ. ನೀವು ನಿಮ್ಮ ತಂದೆಯನ್ನು ಬೇಡಿಕೊಳ್ಳುವುದಕ್ಕಿಂತ ಮೊದಲೇ ನಿಮಗೆ ಏನೇನು ಅಗತ್ಯವೆಂಬುದು ಆತನಿಗೆ ತಿಳಿದಿದೆ.


ಆದರೆ ಅವರು ಆ ಮಾತನ್ನು ಗ್ರಹಿಸಲಿಲ್ಲ ಮತ್ತು ಆತನನ್ನು ಕೇಳುವುದಕ್ಕೆ ಭಯಪಟ್ಟರು.


ತನ್ನ ಶಿಷ್ಯರು ಇದಕ್ಕೆ ಗೊಣಗುಟ್ಟುತ್ತಾರೆಂದು ಯೇಸು ತನ್ನಲ್ಲಿ ತಿಳಿದುಕೊಂಡು ಅವರಿಗೆ “ಈ ಮಾತಿನಿಂದ ನಿಮಗೆ ಬೇಸರವಾಯಿತೋ?


“‘ಸ್ವಲ್ಪ ಕಾಲವೆಂದು’ ಈತನು ಹೇಳುವ ಈ ಮಾತೇನು? ಏನು ಮಾತನಾಡುತ್ತಿದ್ದಾನೋ ನಮಗೆ ತಿಳಿಯದು” ಎಂದು ಅಂದುಕೊಳ್ಳುತ್ತಿದ್ದರು.


ಆ ದಿನದಲ್ಲಿ ನೀವು ನನ್ನನ್ನು ಏನೂ ಕೇಳುವುದಿಲ್ಲ. ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ನೀವು ನನ್ನ ಹೆಸರಿನಲ್ಲಿ ತಂದೆಯನ್ನು ಏನು ಕೇಳಿಕೊಂಡರೂ ಅದನ್ನು ಆತನು ನಿಮಗೆ ಕೊಡುವನು.


ಆ ದಿನದಲ್ಲಿ ನೀವು ನನ್ನ ಹೆಸರಿನಲ್ಲಿ ಕೇಳಿಕೊಳ್ಳುವಿರಿ, ನಿಮ್ಮ ಪರವಾಗಿ ನಾನು ತಂದೆಯನ್ನು ಬೇಡಿಕೊಳ್ಳುವೆನೆಂದು ನಾನು ನಿಮಗೆ ಹೇಳುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು