Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 17:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ನಾನು ಇವರ ಜೊತೆ ಇದ್ದಾಗ ನೀನು ನನಗೆ ಕೊಟ್ಟ ನಿನ್ನ ಹೆಸರಿನಲ್ಲಿ ಇವರನ್ನು ಕಾಪಾಡಿ ಸಂರಕ್ಷಿಸಿದೆನು. ಧರ್ಮಶಾಸ್ತ್ರದ ಮಾತು ನೆರವೇರುವಂತೆ ನಾಶಕ್ಕಾಗಿ ಹುಟ್ಟಿದವನೇ ಹೊರತು ಇವರಲ್ಲಿ ಒಬ್ಬನೂ ನಾಶವಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ನಾನು ಇವರೊಡನೆ ಇದ್ದಾಗ ಇವರನ್ನು ಕಾಪಾಡಿದೆನು. ನೀವಿತ್ತ ಇವರನ್ನು ನಿಮ್ಮ ನಾಮದ ಶಕ್ತಿಯಿಂದ ಸುರಕ್ಷಿತವಾಗಿ ನೋಡಿಕೊಂಡು ಬಂದೆನು. ಪವಿತ್ರಗ್ರಂಥದ ಮಾತು ನೆರವೇರುವಂತೆ ವಿನಾಶಕ್ಕೆ ಗುರಿಯಾಗಬೇಕಿದ್ದ ಒಬ್ಬನನ್ನು ಬಿಟ್ಟರೆ, ಇವರಲ್ಲಿ ಬೇರೆ ಯಾರೂ ನಾಶವಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ನಾನು ಇವರ ಸಂಗಡ ಇದ್ದಾಗ ನೀನು ನನಗೆ ಕೊಟ್ಟಿರುವ ನಿನ್ನ ಹೆಸರಿನಲ್ಲಿ ಇವರನ್ನು ಕಾಯುತ್ತಾ ಬಂದೆನು, ಇವರನ್ನು ಕಾಪಾಡಿದೆನು; ಶಾಸ್ತ್ರದ ಮಾತು ನೆರವೇರುವಂತೆ ನಾಶಕ್ಕೆ ಗುರಿಯಾದ ಆ ಮನುಷ್ಯನೇ ಹೊರತು ಇವರಲ್ಲಿ ಮತ್ತಾರೂ ನಾಶವಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ನಾನು ಇವರೊಂದಿಗೆ ಇದ್ದಾಗ, ನಿನ್ನ ಹೆಸರಿನ ಶಕ್ತಿಯಿಂದ ಇವರನ್ನು ಕಾಯ್ದು ಕಾಪಾಡಿದೆನು. ಪವಿತ್ರ ಗ್ರಂಥದ ಹೇಳಿಕೆಯು ನೆರವೇರುವಂತೆ ಕಳೆದುಹೋಗುವುದಕ್ಕಾಗಿಯೇ ಆರಿಸಲ್ಪಟ್ಟಿದ್ದ (ಯೂದನೆಂಬ) ಒಬ್ಬನೇ ಒಬ್ಬನು ಇವರಲ್ಲಿ ನಾಶವಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ನಾನು ಇವರೊಡನೆ ಇದ್ದಾಗ ನೀವು ನನಗೆ ಕೊಟ್ಟ ನಿಮ್ಮ ಹೆಸರಿನಲ್ಲಿ ಇವರನ್ನು ಕಾಪಾಡಿ ಸಂರಕ್ಷಿಸಿದೆನು. ಪವಿತ್ರ ವಾಕ್ಯವು ನೆರವೇರುವಂತೆ ಆ ನಾಶದ ಮಗನೇ ಹೊರತು ಇವರಲ್ಲಿ ಒಬ್ಬನೂ ನಾಶವಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 ಮಿಯಾ ತೆಂಚ್ಯಾ ವಾಂಗ್ಡಾ ಹೊತ್ತೊ ತನ್ನಾ, ತಿಯಾ ಮಾಕಾ ದಿಲ್ಲ್ಯಾ ತುಜ್ಯಾ ನಾವಾಚ್ಯಾ ಬಳಾನ್ ಮಿಯಾ ತೆಂಕಾ ಸುರಕ್ಷಿತ್ ಥವಲ್ಲೊ. ಅಶೆ ಪವಿತ್ರ್ ಪುಸ್ತಕಾತ್, ಕೊನಾಚೆ ನಿಸಂತಾನ್ ಹೊವ್ಕ್ ಪಾಜೆ ಮನುನ್ ಸಾಂಗಲ್ಲೆ ಹಾಯ್, ತೆ ಪುರಾ ಹೊವ್‍ಸಾಟ್ನಿ ತೆಕಾ ಎಕ್ಲ್ಯಾಕ್ ಸೊಡುನ್ ಹುರಲ್ಲೆ ಕೊನ್ಬಿ ನಾಸ್‍ ಹೊವ್ಕನಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 17:12
17 ತಿಳಿವುಗಳ ಹೋಲಿಕೆ  

ಹೀಗೆ “ನೀನು ನನಗೆ ಕೊಟ್ಟವರಲ್ಲಿ ಒಬ್ಬನನ್ನಾದರೂ ನಾನು ಕಳೆದುಕೊಳ್ಳಲಿಲ್ಲ” ಎಂದು ತಾನೇ ಹೇಳಿದ ಮಾತು ನೆರವೇರಿತು.


ನಾನು ನಿಮ್ಮೆಲ್ಲರನ್ನು ಕುರಿತು ಈ ಮಾತನ್ನು ಹೇಳಲಿಲ್ಲ. ನಾನು ಆರಿಸಿಕೊಂಡವರೆಲ್ಲರನ್ನು ನಾನು ಬಲ್ಲೆನು. ಆದರೆ ನನ್ನ ಜೊತೆಯಲ್ಲಿ ಊಟಮಾಡುವವನೇ, ನನಗೆ ದ್ರೋಹ ಬಗೆದನು, ಎಂಬ ಶಾಸ್ತ್ರದ ಮಾತು ನೆರವೇರಬೇಕಾಗಿದೆ.


ತಂದೆಯು ನನಗೆ ಕೊಡುವಂಥವರೆಲ್ಲರೂ ನನ್ನ ಬಳಿಗೆ ಬರುವರು. ನನ್ನ ಬಳಿಗೆ ಬರುವವನನ್ನು ನಾನು ಎಂದಿಗೂ ತಳ್ಳಿಬಿಡುವುದೇ ಇಲ್ಲ.


ಅವರು ನಮ್ಮಿಂದ ಹೊರಟುಹೋದವರು. ಏಕೆಂದರೆ ಅವರು ನಮ್ಮವರಾಗಿರಲಿಲ್ಲ. ಅವರು ನಮ್ಮವರಾಗಿದ್ದರೆ, ನಮ್ಮ ಜೊತೆಯಲ್ಲೇ ಇರುತ್ತಿದ್ದರು. ಆದರೆ ಅವರು ನಮ್ಮಿಂದ ಹೊರಟುಹೋದುದರಿಂದ ಅವರೆಲ್ಲರೂ ನಮ್ಮವರಲ್ಲವೆಂಬುದು ಸ್ಪಷ್ಟವಾಗಿ ತೋರಿಬಂದಿದೆ.


ಯಾರೂ ಯಾವ ವಿಧದಲ್ಲಿಯೂ ನಿಮ್ಮನ್ನು ಮೋಸಗೊಳಿಸದಂತೆ ನೋಡಿಕೊಳ್ಳಿರಿ, ಯಾಕೆಂದರೆ ಮೊದಲು ನಂಬಿಕೆಯ ಭ್ರಷ್ಟತೆಯುಂಟಾಗಿ ನಾಶನದ ಮಗನಾದ ಅಧರ್ಮ ಪುರುಷನು ಬಯಲಿಗೆ ಬಾರದ ಹೊರತು ಆ ದಿನವು ಬರುವುದಿಲ್ಲ.


“ನಾನು ಆತನಲ್ಲಿ ಭರವಸವಿಡುವೆನು” ಎಂತಲೂ, “ಇಗೋ ನಾನು ಮತ್ತು ದೇವರು ನನಗೆ ದಯಪಾಲಿಸಿರುವ ಮಕ್ಕಳೂ ಇದ್ದೇವೆ” ಎಂದೂ ಹೇಳುತ್ತಾನೆ.


ನಾನು ಯಾರನ್ನು ನಂಬಿದ್ದೆನೋ, ಯಾರು ನನ್ನ ಮನೆಯಲ್ಲಿ ಅನ್ನಪಾನಗಳನ್ನು ತೆಗೆದುಕೊಂಡನೋ, ಅಂತಹ ಆಪ್ತಸ್ನೇಹಿತನು ನನಗೆ ಕಾಲನ್ನು ಅಡ್ಡಗೊಟ್ಟಿದ್ದಾನೆ.


“ಲೋಕದಲ್ಲಿ ನೀನು ನನಗೆ ಕೊಟ್ಟಿರುವ ಮನುಷ್ಯರಿಗೆ ನಾನು ನಿನ್ನ ಹೆಸರನ್ನು ಪ್ರಕಟಪಡಿಸಿದ್ದೇನೆ. ಇವರು ನಿನ್ನವರಾಗಿದ್ದರು ಮತ್ತು ನೀನು ಇವರನ್ನು ನನಗೆ ಕೊಟ್ಟಿದ್ದೀ. ಇವರು ನಿನ್ನ ವಾಕ್ಯಕ್ಕೆ ವಿಧೇಯರಾಗಿದ್ದಾರೆ.


ಈ ಕಾರಣದಿಂದ ದೇವರು ಆತನನ್ನು ಅತ್ಯುನ್ನತ ಸ್ಥಾನಕ್ಕೆ ಏರಿಸಿ, ಎಲ್ಲಾ ಹೆಸರುಗಳಿಗಿಂತ ಶ್ರೇಷ್ಠವಾದ ಹೆಸರನ್ನು ಆತನಿಗೆ ದಯಪಾಲಿಸಿದ್ದಾನೆ.


ಆತನ ಕಣ್ಣುಗಳು ಬೆಂಕಿಯ ಜ್ವಾಲೆಯಂತಿವೆ, ಆತನ ತಲೆಯ ಮೇಲೆ ಅನೇಕ ಕಿರೀಟಗಳುಂಟು, ಆತನಿಗೆ ಒಂದು ಹೆಸರು ಬರೆದುಕೊಡಲ್ಪಟ್ಟಿದೆ, ಅದು ಆತನಿಗೇ ಹೊರತು ಮತ್ತಾರಿಗೂ ತಿಳಿಯದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು