Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 17:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ನೀನು ಸತ್ಯದಿಂದ ಇವರನ್ನು ಪ್ರತಿಷ್ಠೆಪಡಿಸು, ನಿನ್ನ ವಾಕ್ಯವೇ ಸತ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಇವರನ್ನು ಸತ್ಯಸಂಧರನ್ನಾಗಿಸಿ ನಿಮ್ಮ ಸೇವೆಗೆ ಮೀಸಲಾಗಿಡಿ. ನಿಮ್ಮ ಮಾತೇ ಸತ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಇವರನ್ನು ಸತ್ಯದಲ್ಲಿ ಸೇರಿಸಿ ಪ್ರತಿಷ್ಠೆ ಪಡಿಸು; ನಿನ್ನ ವಾಕ್ಯವೇ ಸತ್ಯವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ನಿನ್ನ ಸತ್ಯದ ಮೂಲಕ ನೀನು ಇವರನ್ನು ನಿನ್ನ ಸೇವೆಗೆ ಸಿದ್ಧಪಡಿಸು. ನಿನ್ನ ವಾಕ್ಯವು ಸತ್ಯವಾದದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ನೀವು ಸತ್ಯದಿಂದ ಇವರನ್ನು ಸಮರ್ಪಿಸಿರಿ. ನಿಮ್ಮ ವಾಕ್ಯವೇ ಸತ್ಯವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 ತುಜ್ಯಾ ಖರೆಪಾನಾಕ್ ಲಾಗುನ್ ತೆಂಕಾ ತಿಯಾ ತುಜ್ಯಾಚ್ ಹಾತಿತ್ ಒಪ್ಸುನ್ ಘೆ, ತುಜಿ ಗೊಸ್ಟ್ ಖರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 17:17
23 ತಿಳಿವುಗಳ ಹೋಲಿಕೆ  

ನಾನು ನಿಮಗೆ ಹೇಳಿದ ವಾಕ್ಯದ ದೆಸೆಯಿಂದ ಈಗ ನೀವು ಶುದ್ಧರಾಗಿದ್ದೀರಿ.


ನಿನ್ನ ವಾಕ್ಯದ ಸಾರಾಂಶವು ಸತ್ಯವೇ, ನಿನ್ನ ನೀತಿವಿಧಿಗಳೆಲ್ಲಾ ಯುಗಯುಗಾಂತರಕ್ಕೂ ಇರುವವು. ಷಿನ್.


ಆತನು ಅದನ್ನು ಪಾವನಗೊಳಿಸುವುದಕ್ಕಾಗಿ ತನ್ನನ್ನು ತಾನೇ ಒಪ್ಪಿಸಿಕೊಟ್ಟನು.


ಇವರು ನಿಜವಾಗಿ ಪ್ರತಿಷ್ಠಿರಾಗಬೇಕೆಂದು, ನನ್ನನ್ನು ನಾನೇ ಇವರಿಗೋಸ್ಕರ ಪ್ರತಿಷ್ಠಿಸಿಕೊಂಡಿದ್ದೇನೆ.


ಇದಲ್ಲದೆ ನೀವು ಸತ್ಯವನ್ನು ತಿಳಿದುಕೊಳ್ಳುವಿರಿ ಮತ್ತು ಸತ್ಯವು ನಿಮ್ಮನ್ನು ಬಿಡುಗಡೆ ಮಾಡುವುದು” ಎಂದು ಹೇಳಿದನು.


ಆದಕಾರಣ ಎಲ್ಲಾ ನೀಚತನವನ್ನೂ, ಎಲ್ಲಾ ದುಷ್ಟತನವನ್ನೂ ತೆಗೆದುಹಾಕಿ ಮನಸ್ಸಿನೊಳಗೆ ಬೇರೂರಿರುವ ದೇವರ ವಾಕ್ಯವನ್ನು ನಮ್ರತೆಯಿಂದ ಸ್ವೀಕರಿಸಿರಿ. ಅದು ನಿಮ್ಮ ಆತ್ಮಗಳನ್ನು ರಕ್ಷಿಸುವುದಕ್ಕೆ ಸಾಮರ್ಥ್ಯವುಳ್ಳದ್ದಾಗಿರುತ್ತದೆ.


ಕರ್ತನಿಗೆ ಪ್ರಿಯರಾಗಿರುವ ಸಹೋದರರೇ, ನೀವು ಪವಿತ್ರಾತ್ಮನಿಂದ ಶುದ್ಧೀಕರಿಸಲ್ಪಟ್ಟವರಾಗಿ, ಸತ್ಯದ ಮೇಲೆ ನಂಬಿಕೆಯನ್ನಿಟ್ಟು, ರಕ್ಷಣೆಯನ್ನು ಪಡೆಯುವುದಕ್ಕಾಗಿ ದೇವರು ನಿಮ್ಮನ್ನು ಆದಿಯಿಂದ ಆರಿಸಿಕೊಂಡಿದ್ದರಿಂದ ನಾವು ನಿಮ್ಮ ವಿಷಯದಲ್ಲಿ ಯಾವಾಗಲೂ ದೇವರಿಗೆ ಕೃತಜ್ಞತಾಸ್ತುತಿಮಾಡುವುದಕ್ಕೆ ಬದ್ಧರಾಗಿದ್ದೇವೆ.


ನಿನಗೆ ವಿರುದ್ಧವಾಗಿ ಪಾಪಮಾಡದಂತೆ, ನಿನ್ನ ನುಡಿಗಳನ್ನು ನನ್ನ ಹೃದಯದಲ್ಲಿ ಇಟ್ಟುಕೊಂಡಿದ್ದೇನೆ.


ಆತನಿಂದಲೇ ಕೇಳಿ ಆತನಲ್ಲಿಯೇ ಉಪದೇಶವನ್ನು ಹೊಂದಿದ್ದೀರಲ್ಲಾ.


ಯೌವನಸ್ಥನು ತನ್ನ ನಡತೆಯನ್ನು ಶುದ್ಧಪಡಿಸಿಕೊಳ್ಳುವುದು ಯಾವುದರಿಂದ? ನಿನ್ನ ವಾಕ್ಯವನ್ನು ಗಮನಿಸಿ ನಡೆಯುವುದರಿಂದಲೇ.


ನಿನ್ನ ನಿಯಮಗಳ ಮೂಲಕ ವಿವೇಕಿಯಾದೆನು, ಸುಳ್ಳು ಮಾರ್ಗವನ್ನೆಲ್ಲಾ ನಾನು ದ್ವೇಷಿಸುತ್ತೇನೆ. ನೂನ್.


ಯೆಹೋವನ ಮಾತುಗಳು ಯಥಾರ್ಥವಾದವುಗಳೇ; ಅವು ಏಳು ಸಾರಿ ಪುಟಕ್ಕೆ ಹಾಕಿದ ಚೊಕ್ಕ ಬೆಳ್ಳಿಯೋಪಾದಿಯಲ್ಲಿವೆ.


ಮತ್ತೆ ಕೆಲವರು ವಾಕ್ಯವನ್ನು ಕೇಳಿ ಸುಗುಣವುಳ್ಳ ತಮ್ಮ ಒಳ್ಳೆಯ ಹೃದಯದಲ್ಲಿ ಅದನ್ನು ಸಂಗ್ರಹಿಸಿ ಇಟ್ಟುಕೊಂಡು ತಾಳ್ಮೆಯಿಂದ ಫಲವನ್ನು ಕೊಡುತ್ತಾರೆ. ಇವರೇ ಒಳ್ಳೆಯ ನೆಲದಲ್ಲಿ ಬಿದ್ದ ಬೀಜಗಳು.


ಕರ್ತನೇ, ಯೆಹೋವನೇ! ನಿನ್ನ ಸೇವಕನಿಗೆ ಈ ಶ್ರೇಷ್ಠ ವಾಗ್ದಾನಗಳನ್ನು ಮಾಡಿದ ನೀನು ದೇವರಾಗಿರುತ್ತೀ. ನಿನ್ನ ವಾಕ್ಯವು ಸತ್ಯವಾದದ್ದು.


ನಾವೆಲ್ಲರೂ ಮುಸುಕು ತೆಗೆದಿರುವ ಮುಖದಿಂದ ಕರ್ತನ ಪ್ರಭಾವವನ್ನು ದರ್ಪಣದಲ್ಲಿ ಕಾಣಿಸುತ್ತದೋ ಎಂಬಂತೆ ದೃಷ್ಟಿಸುವವರಾಗಿದ್ದು ನಾವೆಲ್ಲರೂ ಕರ್ತನ ದಾನವಾಗಿರುವ ಆತ್ಮದ ಮಹಿಮೆಯಿಂದ ಅಧಿಕ ಮಹಿಮೆಗೆ ಹೋಗುತ್ತಾ, ಆ ಮಹಿಮೆಯ ಸಾರೂಪ್ಯವುಳ್ಳವರೇ ಆಗುತ್ತೇವೆ. ಇದು ಆತ್ಮನಾಗಿರುವ ಕರ್ತನ ಕಾರ್ಯವೇ ಸರಿ.


ಇದಲ್ಲದೆ ಆತನು ನಮಗೂ, ಅವರಿಗೂ ಏನೂ ಭೇದಮಾಡದೆ ಅವರ ಹೃದಯಗಳನ್ನೂ ನಂಬಿಕೆಯ ಮೂಲಕವಾಗಿ ಶುದ್ಧೀಕರಿಸಿದನು.


ಈ ಸಾಮ್ಯದ ಅರ್ಥವೇನಂದರೆ, ಆ ಬೀಜವೆಂದರೆ ದೇವರ ವಾಕ್ಯ.


ಆದರೂ, ನೀವು ಹಾಗೆ ಮಾಡದೇ ದೇವರಿಂದ ಕೇಳಿದ ಸತ್ಯವನ್ನು ನಿಮಗೆ ಹೇಳಿದವನಾದ ನನ್ನನ್ನು ಕೊಲ್ಲುವುದಕ್ಕೆ ಹುಡುಕುತ್ತಿದ್ದೀರಿ. ಅಬ್ರಹಾಮನು ಹೀಗೆ ಮಾಡಲಿಲ್ಲ.


ನಿನ್ನ ಕಟ್ಟಳೆಗಳು ಸದಾಕಾಲವೂ ನೀತಿಯುಳ್ಳವುಗಳು, ನನಗೆ ವಿವೇಕವನ್ನು ದಯಪಾಲಿಸು, ಆಗ ಬದುಕುವೆನು. ಖೋಫ್.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು