ಯೋಹಾನ 17:24 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ತಂದೆಯೇ, ನೀನು ನನಗೆ ಕೊಟ್ಟವರು, ನಾನಿರುವ ಸ್ಥಳದಲ್ಲಿ ನನ್ನೊಂದಿಗೆ ಇದ್ದುಕೊಂಡು, ಜಗದುತ್ಪತ್ತಿಗೂ ಮೊದಲೇ ನೀನು ನನ್ನನ್ನು ಪ್ರೀತಿಸಿ ನನಗೆ ಕೊಟ್ಟಿರುವ ಮಹಿಮೆಯನ್ನು ಇವರು ನೋಡಬೇಕೆಂದು, ನಾನು ಆಶಿಸುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ಪಿತನೇ, ಇವರನ್ನು ನೀವು ನನಗೆ ಕೊಟ್ಟಿರುವಿರಿ. ಜಗತ್ತು ಉಂಟಾಗುವ ಮೊದಲೇ ನೀವು ನನ್ನನ್ನು ಪ್ರೀತಿಸಿ ನನಗಿತ್ತ ಮಹಿಮೆಯನ್ನು ಇವರೂ ಕಾಣುವಂತೆ ನಾನಿದ್ದಲ್ಲಿ ಇವರೂ ಇರಬೇಕೆಂದು ಆಶಿಸುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ತಂದೆಯೇ, ನೀನು ಯಾರನ್ನು ನನಗೆ ಕೊಟ್ಟಿಯೋ ಅವರು ನಾನಿರುವ ಸ್ಥಳದಲ್ಲಿ ನನ್ನ ಕೂಡ ಇದ್ದುಕೊಂಡು ಲೋಕವು ಹುಟ್ಟುವದಕ್ಕಿಂತ ಮುಂಚೆಯೇ ನೀನು ನನ್ನನ್ನು ಪ್ರೀತಿಸಿ ನನಗೆ ಕೊಟ್ಟಿರುವ ಮಹಿಮೆಯನ್ನು ನೋಡಬೇಕೆಂದು ಇಚ್ಫೈಸುತ್ತೇನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 “ತಂದೆಯೇ, ನೀನು ನನಗೆ ಕೊಟ್ಟಿರುವ ಇವರು, ನಾನು ಇರುವಲ್ಲೆಲ್ಲಾ ನನ್ನೊಂದಿಗೆ ಇರಬೇಕೆಂದು ಮತ್ತು ನನ್ನ ಮಹಿಮೆಯನ್ನು ನೋಡಬೇಕೆಂದು ಅಪೇಕ್ಷಿಸುತ್ತೇನೆ. ಈ ಲೋಕವು ಸೃಷ್ಟಿಯಾಗುವುದಕ್ಕಿಂತ ಮೊದಲೇ ನೀನು ನನ್ನನ್ನು ಪ್ರೀತಿಸಿದ್ದರಿಂದ ನೀನೇ ನನಗೆ ಈ ಮಹಿಮೆಯನ್ನು ಕೊಟ್ಟೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 “ತಂದೆಯೇ, ನೀವು ನನಗೆ ಕೊಟ್ಟವರು ನಾನಿರುವಲ್ಲಿಯೇ ನನ್ನೊಂದಿಗೆ ಇದ್ದುಕೊಂಡು ಜಗದುತ್ಪತ್ತಿಗೆ ಮುಂಚೆ ನೀವು ನನ್ನನ್ನು ಪ್ರೀತಿಸಿ ನನಗೆ ಕೊಟ್ಟಿರುವ ಮಹಿಮೆಯನ್ನು ಇವರು ಕಾಣಬೇಕೆಂದು ನಾನು ಅಪೇಕ್ಷಿಸುತ್ತೇನೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್24 ಬಾಬಾ! ತಿಯಾ ತೆಂಕಾ ಮಾಜಾಕ್ಡೆ ದಿಲೆಯ್, ಅನಿ ಮಿಯಾ ಖೈ ರ್‍ಹಾತಾ ಥೈ ತೆನಿಬಿ ಹೊತ್ತೆ ಮಾಕಾ ಪಾಜೆ. ಅಶೆ ಹ್ಯೊ ಜಗ್ ರಚುಚ್ಯಾ ಅದ್ದಿಚ್ ತಿಯಾ ಮಾಜೊ ಪ್ರೆಮ್ ಕರುನ್ ಮಾಕಾ ದಿಲ್ಲಿ ಮಹಿಮಾ ತೆನಿಬಿ ಬಗಿ ಸರ್ಕೆ ಹೊಂವ್ದಿತ್. ಅಧ್ಯಾಯವನ್ನು ನೋಡಿ |