Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 17:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಒಬ್ಬನೇ ಸತ್ಯ ದೇವರಾಗಿರುವ ನಿನ್ನನ್ನೂ ಮತ್ತು ನೀನು ಕಳುಹಿಸಿಕೊಟ್ಟ ಯೇಸು ಕ್ರಿಸ್ತನನ್ನೂ ತಿಳಿಯುವುದೇ ನಿತ್ಯಜೀವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಏಕೈಕ ನಿಜದೇವರಾದ ನಿಮ್ಮನ್ನೂ ನೀವು ಕಳುಹಿಸಿಕೊಟ್ಟ ಯೇಸು ಕ್ರಿಸ್ತನನ್ನೂ ಅರಿತುಕೊಳ್ಳುವುದೇ ನಿತ್ಯಜೀವ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಒಬ್ಬನೇ ಸತ್ಯದೇವರಾಗಿರುವ ನಿನ್ನನ್ನೂ ನೀನು ಕಳುಹಿಸಿಕೊಟ್ಟ ಯೇಸು ಕ್ರಿಸ್ತನನ್ನೂ ತಿಳಿಯುವದೇ ನಿತ್ಯಜೀವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಒಬ್ಬನೇ ಸತ್ಯದೇವರಾಗಿರುವ ನಿನ್ನನ್ನು ಮತ್ತು ನೀನು ಕಳುಹಿಸಿದ ಯೇಸು ಕ್ರಿಸ್ತನನ್ನು ತಿಳಿದುಕೊಳ್ಳುವುದೇ ನಿತ್ಯಜೀವ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಏಕೈಕ ಸತ್ಯ ದೇವರಾಗಿರುವ ನಿಮ್ಮನ್ನೂ ನೀವು ಕಳುಹಿಸಿಕೊಟ್ಟ ಯೇಸು ಕ್ರಿಸ್ತನನ್ನೂ ತಿಳಿಯುವುದೇ ನಿತ್ಯಜೀವ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ಕನ್ನಾಚ್ ಮರಾನ್‍ನಸಲ್ಲೆ ಜಿವನ್ ಮಟ್ಲ್ಯಾರ್ ತುಕಾ ಎಕ್ಲ್ಯಾಚ್ ಖರ್‍ಯಾ ದೆವಾಕ್ ವಳಕ್ತಲೆ ಅನಿ ತಿಯಾ ಧಾಡುನ್ ದಿಲ್ಲ್ಯಾ ಜೆಜು ಕ್ರಿಸ್ತಾಕ್ ವಳಕ್ತಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 17:3
52 ತಿಳಿವುಗಳ ಹೋಲಿಕೆ  

ದೇವರ ಮಗನು ಈ ಲೋಕಕ್ಕೆ ಬಂದು ನಾವು ಸತ್ಯವಾಗಿರುವಾತನನ್ನು ಅರಿತುಕೊಳ್ಳುವ ಹಾಗೆ ನಮಗೆ ವಿವೇಕವನ್ನು ಕೊಟ್ಟಿದ್ದಾನೆಂಬುದು ನಮಗೆ ಗೊತ್ತಿದೆ, ಮತ್ತು ನಾವು ದೇವರ ಮಗನಾದ ಯೇಸುಕ್ರಿಸ್ತನಲ್ಲಿ ಇರುವವರಾಗಿ ಸತ್ಯದೇವರಾಗಿರುವಾತನಲ್ಲಿದ್ದೇವೆ. ಈ ಕ್ರಿಸ್ತನೇ ಸತ್ಯದೇವರೂ, ನಿತ್ಯಜೀವವೂ ಆಗಿದ್ದಾನೆ.


ನೀತಿಸ್ವರೂಪನಾದ ತಂದೆಯೇ, ಲೋಕವು ನಿನ್ನನ್ನು ತಿಳಿಯಲಿಲ್ಲ, ಆದರೆ ನಾನು ನಿನ್ನನ್ನು ತಿಳಿದಿದ್ದೇನೆ ಮತ್ತು ಇವರು ನೀನೇ ನನ್ನನ್ನು ಕಳುಹಿಸಿದ್ದೀ ಎಂದು ತಿಳಿದಿದ್ದಾರೆ.


ದೇವರು ತನ್ನ ಮಗನ ಮುಖಾಂತರ ಲೋಕಕ್ಕೆ ರಕ್ಷಣೆಯಾಗಬೇಕೆಂದು ಆತನನ್ನು ಕಳುಹಿಸಿಕೊಟ್ಟನೇ ಹೊರತು ಅಪರಾಧಿಯೆಂದು ಖಂಡಿಸಲಿಕ್ಕೆ ಕಳುಹಿಸಲಿಲ್ಲ.


ಯೆಹೋವನನ್ನು ತಿಳಿದುಕೊಳ್ಳೋಣ, ನಿರಂತರವಾಗಿ ಹುಡುಕಿ ತಿಳಿದುಕೊಳ್ಳೋಣ, ಆತನ ಆಗಮನವು ಉದಯದಂತೆ ನಿಶ್ಚಯ; ಆತನು ಮುಂಗಾರಿನಂತೆಯೂ, ಭೂಮಿಯನ್ನು ತಂಪುಮಾಡುವ ಹಿಂಗಾರಿನಂತೆಯೂ ನಮಗೆ ಸಿಕ್ಕುವನು” ಅಂದುಕೊಂಡು ನನ್ನನ್ನು ಮೊರೆಹೋಗುವರು.


ನಾವಂತೂ ದೇವರಿಗೆ ಸಂಬಂಧಪಟ್ಟವರಾಗಿದ್ದೇವೆ. ದೇವರನ್ನು ಬಲ್ಲವರು ನಮ್ಮ ಮಾತನ್ನು ಕೇಳುತ್ತಾರೆ. ದೇವರಿಗೆ ಸಂಬಂಧಪಡದವರು ನಮ್ಮ ಮಾತನ್ನು ಕೇಳುವುದಿಲ್ಲ. ಇದರಿಂದಲೇ ಸತ್ಯವನ್ನು ಬೋಧಿಸುವ ಆತ್ಮ ಯಾವುದು ಮತ್ತು ಸುಳ್ಳನ್ನು ಬೋಧಿಸುವ ಆತ್ಮ ಯಾವುದು ಎಂದು ನಾವು ತಿಳಿದುಕೊಳ್ಳುತ್ತೇವೆ.


ನನ್ನ ಮಗನಾದ ಸೊಲೊಮೋನನೇ, ನೀನಂತೂ ನಿನ್ನ ತಂದೆಯ ದೇವರನ್ನು ಅರಿತುಕೊಂಡು ಸಂಪೂರ್ಣಹೃದಯದಿಂದಲೂ, ಮನಸ್ಸಂತೋಷದಿಂದಲೂ ಆತನನ್ನೇ ಸೇವಿಸು. ಯೆಹೋವನು ಎಲ್ಲಾ ಹೃದಯಗಳನ್ನು ವಿಚಾರಿಸುವವನೂ, ಎಲ್ಲಾ ಮನಸ್ಸಂಕಲ್ಪಗಳನ್ನು ಬಲ್ಲವನೂ ಆಗಿರುತ್ತಾನಲ್ಲಾ. ನೀನು ಆತನನ್ನು ಹುಡುಕುವುದಾದರೆ ಆತನು ನಿನಗೆ ಸಿಕ್ಕುವನು. ಆತನನ್ನು ಕಡೆಗಣಿಸಿದರೆ ಆತನು ನಿನ್ನನ್ನು ಶಾಶ್ವತವಾಗಿ ತಳ್ಳಿಬಿಡುವನು.


ನಾನು ಇವರಲ್ಲಿಯೂ ನೀನು ನನ್ನಲ್ಲಿಯೂ ಇರುವಂತೆ ಇವರೂ ಐಕ್ಯತೆಯಲ್ಲಿ ಪರಿಪೂರ್ಣರಾಗಿರಲಿ. ಹೀಗೆ ನೀನು ನನ್ನನ್ನು ಕಳುಹಿಸಿದ್ದೀ, ಎಂದೂ ಮತ್ತು ನೀನು ನನ್ನನ್ನು ಪ್ರೀತಿಸಿದಂತೆ, ಇವರನ್ನೂ ನೀನು ಪ್ರೀತಿಸುತ್ತೀ ಎಂದು ಲೋಕವು ತಿಳಿದುಕೊಳ್ಳುವುದು.


ಕರ್ತನಾದ ಯೆಹೋವನ ಆತ್ಮವು ನನ್ನ ಮೇಲೆ ಇದೆ, ಆತನು ನನ್ನನ್ನು ಬಡವರಿಗೆ ಶುಭವರ್ತಮಾನವನ್ನು ಸಾರುವುದಕ್ಕೆ ಅಭಿಷೇಕಿಸಿದನು; ಮನಮುರಿದವರನ್ನು ಕಟ್ಟಿ ವಾಸಿಮಾಡುವುದಕ್ಕೂ, ಸೆರೆಯವರಿಗೆ ಬಿಡುಗಡೆಯಾಗುವುದನ್ನು, ಬಂದಿಗಳಿಗೆ ಕದ ತೆರೆಯುವುದನ್ನು ಪ್ರಸಿದ್ಧಿಪಡಿಸುವುದಕ್ಕೂ,


ತಂದೆಯೇ, ನೀನು ನನ್ನಲ್ಲಿಯೂ ನಾನು ನಿನ್ನಲ್ಲಿಯೂ ಇರುವ ಹಾಗೆಯೇ ಅವರು ಸಹ ಒಂದಾಗಿರಬೇಕೆಂತಲೂ ಬೇಡಿಕೊಳ್ಳುತ್ತೇನೆ. ನೀನು ನನ್ನನ್ನು ಕಳುಹಿಸಿದ್ದೀ ಎಂದು ಲೋಕವು ನಂಬುವುದಕ್ಕಾಗಿ, ಅವರೆಲ್ಲರೂ ನಮ್ಮಲ್ಲಿ ಒಂದಾಗಿರಲಿ ಎಂದು ನಿನ್ನನ್ನು ಕೇಳಿಕೊಳ್ಳುತ್ತೇನೆ.


ಹೇಗೆಂದರೆ ದೇವರು ಯಾರನ್ನು ಕಳುಹಿಸಿದ್ದಾನೋ ಆತನಿಗೆ ಆತ್ಮ ವರವನ್ನು ಅಳತೆಮಾಡದೆ ಧಾರಾಳವಾಗಿ ಅನುಗ್ರಹಿಸುವುದರಿಂದ ಆತನು ದೇವರ ಮಾತುಗಳನ್ನೇ ಆಡುತ್ತಾನೆ.


ಯಾಕೆಂದರೆ “ಕತ್ತಲೆಯೊಳಗಿನಿಂದ ಬೆಳಕು ಪ್ರಕಾಶಿಸಲಿ” ಎಂದು ಹೇಳಿದ ದೇವರು ತಾನೇ ಯೇಸು ಕ್ರಿಸ್ತನ ಮುಖದಲ್ಲಿ ತೋರುವ ದೇವಮಹಿಮೆಯ ಜ್ಞಾನವೆಂಬ ಪ್ರಕಾಶವು ಅನೇಕರಿಗೆ ಉಂಟಾಗುವುದಕ್ಕಾಗಿ ನಮ್ಮ ಹೃದಯಗಳಲ್ಲಿ ಪ್ರಕಾಶಿಸಿದನು.


ಆಗ ನಮ್ಮ ಕರ್ತನಾದ ಯೇಸುವು ದೇವರನ್ನರಿಯದವರಿಗೂ ತನ್ನ ಸುವಾರ್ತೆಗೆ ವಿಧೇಯರಾಗದವರಿಗೂ ಪ್ರತಿಕಾರ ಮಾಡುವನು.


ಹೇಗೆಂದರೆ, ನೀನು ನನಗೆ ಕೊಟ್ಟ ಮಾತುಗಳನ್ನು ನಾನು ಇವರಿಗೆ ಕೊಟ್ಟಿದ್ದೇನೆ. ಇವರು ಆ ಮಾತುಗಳನ್ನು ಸ್ವೀಕರಿಸಿದ್ದಾರೆ ಮತ್ತು ನಾನು ನಿನ್ನ ಬಳಿಯಿಂದ ಬಂದವನೆಂದು ಇವರು ನಿಜವಾಗಿ ತಿಳಿದು, ನೀನೇ ನನ್ನನ್ನು ಕಳುಹಿಸಿದ್ದೀ ಎಂದು ನಂಬಿದ್ದಾರೆ.


ಆದರೆ ಆ ಸಹಾಯಕನು, ಅಂದರೆ ನನ್ನ ಹೆಸರಿನಲ್ಲಿ ತಂದೆಯು ಕಳುಹಿಸಿಕೊಡುವ ಪವಿತ್ರಾತ್ಮನೇ ನಿಮಗೆ ಎಲ್ಲವನ್ನು ಉಪದೇಶಿಸಿ ನಾನು ನಿಮಗೆ ಹೇಳಿದ್ದನೆಲ್ಲಾ ನಿಮ್ಮ ನೆನಪಿಗೆ ತಂದುಕೊಡುವನು.


ಅವರು, “ನಿನ್ನ ತಂದೆ ಎಲ್ಲಿದ್ದಾನೆ?” ಎಂದರು. ಅದಕ್ಕೆ ಯೇಸು, “ನೀವು ನನ್ನನ್ನೂ ತಿಳಿದಿಲ್ಲ ಹಾಗೂ ನನ್ನ ತಂದೆಯನ್ನೂ ತಿಳಿದಿಲ್ಲ. ನೀವು ನನ್ನನ್ನು ತಿಳಿದಿದ್ದರೆ ನನ್ನ ತಂದೆಯನ್ನೂ ಸಹ ತಿಳಿದಿರುವಿರಿ” ಎಂದು ಉತ್ತರ ಕೊಟ್ಟನು.


ಗಂಭೀರವಾಗಿ ಯೋಚಿಸಿರಿ! ನೀತಿವಂತರಾಗಿ ಎಚ್ಚರದಿಂದಿರಿ. ಪಾಪಮಾಡಬೇಡಿರಿ. ಕೆಲವರಿಗೆ ದೇವರ ಕುರಿತಾಗಿ ಜ್ಞಾನವೇ ಇಲ್ಲ; ನಿಮಗೆ ನಾಚಿಕೆ ಆಗಲೆಂದೇ ಇದನ್ನು ಹೇಳುತ್ತಿದ್ದೇನೆ.


ತನ್ನ ಆತ್ಮವು ಅನುಭವಿಸಿದ ಶ್ರಮೆಯ ಫಲವನ್ನು ಕಂಡು ತೃಪ್ತನಾಗುವನು; ಧರ್ಮಾತ್ಮನಾದ ನನ್ನ ಸೇವಕನು ತನ್ನ ಜ್ಞಾನದ ಮೂಲಕ ಬಹು ಜನರನ್ನು ಧರ್ಮಮಾರ್ಗಕ್ಕೆ ತರುವನು; ಅವರ ಅಪರಾಧಗಳನ್ನು ಹೊತ್ತುಕೊಂಡು ಹೋಗುವನು.


ನಾವು ನಿಮ್ಮಲ್ಲಿಗೆ ಬಂದಾಗ ನೀವು ನಮ್ಮನ್ನು ಹೇಗೆ ಸ್ವಾಗತಿಸಿದಿರಿ; ನೀವು ವಿಗ್ರಹಗಳನ್ನು ತೊರೆದು ದೇವರ ಕಡೆಗೆ ತಿರುಗಿಕೊಂಡು ಜೀವಸ್ವರೂಪನಾದ ಸತ್ಯ ದೇವರನ್ನು ಸೇವಿಸುವವರಾಗಿದ್ದೀರಿ


ಯೆಹೋವನಾದರೋ ಸತ್ಯದೇವರು; ಆತನು ಚೈತನ್ಯಸ್ವರೂಪನಾದ ದೇವನೂ ಮತ್ತು ಶಾಶ್ವತ ರಾಜನೂ ಆಗಿದ್ದಾನೆ. ಆತನ ಕೋಪಕ್ಕೆ ಭೂಲೋಕವು ನಡುಗುತ್ತದೆ, ಜನಾಂಗಗಳು ಆತನ ರೋಷವನ್ನು ತಾಳಲಾರವು.


ನನ್ನ ಬಳಿಗೆ ಬಂದು ಇದನ್ನು ಕೇಳಿರಿ, ಆದಿಯಿಂದಲೂ ನಾನು ಗುಟ್ಟಾಗಿ ಮಾತನಾಡಲಿಲ್ಲ, ಭೂಮಿಯು ಉಂಟಾದಂದಿನಿಂದ ನಾನು ಅಲ್ಲಿ ಇದ್ದೇನೆ. ಈಗ ಯೆಹೋವನೆಂಬ ದೇವರು ತನ್ನ ಆತ್ಮದೊಡನೆ ನನ್ನನ್ನು ಕಳುಹಿಸಿದ್ದಾನೆ.


ಯೆಹೋವನೇ, ನಿನ್ನ ನಾಮಮಹಿಮೆಯನ್ನು ಬಲ್ಲವರು ನಿನ್ನಲ್ಲಿ ಭರವಸವಿಡುವರು; ಏಕೆಂದರೆ ನಿನ್ನ ಮೊರೆಹೋಗುವವರನ್ನು ನೀನು ಕೈಬಿಡುವವನಲ್ಲ.


ತಂದೆಯು ಪ್ರತಿಷ್ಠೆಮಾಡಿ ಲೋಕಕ್ಕೆ ಕಳುಹಿಸಿಕೊಟ್ಟವನಾದ ‘ನಾನು ದೇವರ ಮಗನಾಗಿದ್ದೇನೆಂದು’ ಹೇಳಿದ್ದಕ್ಕೆ ‘ನೀನು ದೇವದೂಷಣೆ ಮಾಡುತ್ತೀ ಎಂದು ನೀವು ನನಗೆ ಹೇಳುತ್ತಿರಲ್ಲಾ?’


ಆದರೆ ನಾನು ಆತನನ್ನು ಬಲ್ಲೆನು ಏಕೆಂದರೆ, ನಾನು ಆತನ ಕಡೆಯಿಂದ ಬಂದವನು ಮತ್ತು ಆತನೇ ನನ್ನನ್ನು ಕಳುಹಿಸಿದನು” ಎಂದು ಕೂಗಿ ಹೇಳಿದನು.


ಜೀವವುಳ್ಳ ತಂದೆಯು ನನ್ನನ್ನು ಅಧಿಕಾರದೊಂದಿಗೆ ಕಳುಹಿಸಿಕೊಟ್ಟಿದ್ದಾನೆ. ನಾನು ತಂದೆಯ ನಿಮಿತ್ತವಾಗಿ ಜೀವಿಸುತ್ತೇನೆ, ಅದರಂತೆ ನನ್ನನ್ನು ತಿನ್ನುವವನೂ ನನ್ನ ನಿಮಿತ್ತವಾಗಿಯೇ ಜೀವಿಸುವನು.


ಆಗ ಇಸ್ರಾಯೇಲರಿಗೆ ಬಹುಕಾಲದಿಂದ ಸತ್ಯವಾದ ದೇವರೂ, ಬೋಧಿಸುವ ಯಾಜಕರೂ ಹಾಗೂ ಧರ್ಮಶಾಸ್ತ್ರವೂ ಇರಲಿಲ್ಲ.


ಒಬ್ಬನೇ ದೇವರಿಂದ ಬರುವ ಮಹಿಮೆಯನ್ನು ಅಪೇಕ್ಷಿಸದೇ ನಿಮ್ಮ ನಿಮ್ಮೊಳಗೇ ಪ್ರಶಂಸೆಯನ್ನು ಸ್ವೀಕರಿಸುವವರಾದ ನೀವು ಅದನ್ನು ನಂಬಲು ಹೇಗೆ ಸಾಧ್ಯ?


ನೀನು ನನಗೆ ಯಾವಾಗಲೂ ಕಿವಿಗೊಡುತ್ತೀ ಎಂದು ನನಗೆ ತಿಳಿದೇ ಇದೆ. ಆದರೂ ನೀನೇ ನನ್ನನ್ನು ಕಳುಹಿಸಿಕೊಟ್ಟಿರುವಿ ಎಂದು ಸುತ್ತಲೂ ನಿಂತಿರುವ ಈ ಜನರು ನಂಬುವಂತೆ ಅವರಿಗೋಸ್ಕರ ಈ ಮಾತುಗಳನ್ನಾಡಿದ್ದೇನೆ” ಎಂದು ಹೇಳಿದನು.


ಅವರಿಗೆ, “ಯಾವನಾದರೂ ನನ್ನ ಹೆಸರಿನಲ್ಲಿ ಈ ಚಿಕ್ಕ ಮಗುವನ್ನು ಸೇರಿಸಿಕೊಂಡರೆ ನನ್ನನ್ನು ಸೇರಿಸಿಕೊಂಡ ಹಾಗಾಯಿತು ಮತ್ತು ಯಾವನಾದರೂ ನನ್ನನ್ನು ಸೇರಿಸಿಕೊಂಡರೆ ನನ್ನನ್ನು ಕಳುಹಿಸಿಕೊಟ್ಟಾತನನ್ನೇ ಸೇರಿಸಿಕೊಂಡ ಹಾಗಾಯಿತು, ಏಕೆಂದರೆ ನಿಮ್ಮೆಲ್ಲರಲ್ಲಿ ಯಾವನು ಚಿಕ್ಕವನೋ ಅವನೇ ದೊಡ್ಡವನು” ಎಂದು ಹೇಳಿದನು.


“ಯಾರಾದರೂ ನನ್ನ ಹೆಸರಿನಲ್ಲಿ ಇಂಥ ಚಿಕ್ಕ ಮಕ್ಕಳಲ್ಲಿ ಒಂದನ್ನು ಸೇರಿಸಿಕೊಂಡರೆ ನನ್ನನ್ನು ಸೇರಿಸಿಕೊಂಡ ಹಾಗಾಯಿತು; ಮತ್ತು ಯಾರಾದರೂ ನನ್ನನ್ನು ಸೇರಿಸಿಕೊಂಡರೆ ನನ್ನನ್ನು ಮಾತ್ರವಲ್ಲ, ನನ್ನನ್ನು ಕಳುಹಿಸಿಕೊಟ್ಟಾತನನ್ನೇ ಸೇರಿಸಿಕೊಂಡ ಹಾಗಾಯಿತು” ಎಂದು ಹೇಳಿದನು.


ಆದ್ದರಿಂದ ವಿಗ್ರಹಗಳಿಗೆ ಅರ್ಪಿಸಿದ ಆಹಾರಪದಾರ್ಥಗಳನ್ನು ತಿನ್ನುವುದರ ವಿಷಯದಲ್ಲಿ, “ಜಗತ್ತಿನಲ್ಲಿ ವಿಗ್ರಹವು ಏನೂ ಅಲ್ಲವೆಂದು” ನಮಗೆ ತಿಳಿದಿದೆ ಮತ್ತು “ಒಬ್ಬ ದೇವರಿದ್ದಾನೆ ಹೊರತು ಬೇರೆ ದೇವರಿಲ್ಲವೆಂದೂ” ಬಲ್ಲೆವು.


ಯಾವನು ನನ್ನನ್ನು ಹೊಂದುತ್ತಾನೋ ಅವನು ಜೀವವನ್ನು ಹೊಂದುತ್ತಾನೆ; ಅವನು ಯೆಹೋವನ ದಯೆಗೆ ಗುರಿಯಾಗುವನು.


ನೀನು ನನ್ನನ್ನು ಲೋಕಕ್ಕೆ ಕಳುಹಿಸಿದಂತೆಯೇ, ನಾನು ಸಹ ಇವರನ್ನು ಲೋಕಕ್ಕೆ ಕಳುಹಿಸಿದ್ದೇನೆ.


ಇಷ್ಟೇ ಅಲ್ಲದೆ, ನನ್ನ ಕರ್ತನಾದ ಕ್ರಿಸ್ತಯೇಸುವನ್ನರಿಯುವುದೇ ಅತಿ ಶ್ರೇಷ್ಠವಾದದ್ದೆಂದು ತಿಳಿದು ನಾನು ಎಲ್ಲವನ್ನು ನಷ್ಟವೆಂದೆಣಿಸುತ್ತೇನೆ. ಆತನ ನಿಮಿತ್ತ ನಾನು ಎಲ್ಲವನ್ನೂ ಕಳೆದುಕೊಂಡು ಅವುಗಳನ್ನು ಕಸವೆಂದೆಣಿಸುತ್ತೇನೆ.


ಆತನನ್ನೂ ಆತನ ಪುನರುತ್ಥಾನದಲ್ಲಿರುವ ಶಕ್ತಿಯನ್ನೂ, ಆತನ ಬಾಧೆಗಳಲ್ಲಿ ಪಾಲುಗಾರನಾಗಿರುವ ಪದವಿಯನ್ನೂ ತಿಳಿದುಕೊಂಡು ಆತನ ಮರಣದ ವಿಷಯದಲ್ಲಿ ಆತನಂತೆ ರೂಪಾಂತರಗೊಳ್ಳಬೇಕೆಂಬುದೇ ನನ್ನ ಬಯಕೆಯಾಗಿದೆ.


ಆದ್ದರಿಂದ ಪರಿಶುದ್ಧರಾದ ಸಹೋದರರೇ, ಪರಲೋಕದ ಕರೆಯುವಿಕೆಗೆ ಪಾಲುಗಾರರಾಗಿರುವವರೇ, ನಾವು ಒಪ್ಪಿಕೊಂಡಿರುವ ಅಪೊಸ್ತಲನೂ ಮತ್ತು ಮಹಾಯಾಜಕನೂ ಆಗಿರುವ ಯೇಸುವನ್ನು ಗಮನವಿಟ್ಟು ಯೋಚಿಸಿರಿ.


ದೇವರನ್ನು ಕುರಿತಾಗಿಯೂ, ನಮ್ಮ ಕರ್ತನಾದ ಯೇಸು ಕ್ರಿಸ್ತನ ವಿಷಯವಾಗಿಯೂ ಇರುವ ಪರಿಜ್ಞಾನದಲ್ಲಿ ನಿಮಗೆ ಕೃಪೆಯೂ, ಶಾಂತಿಯೂ ಹೆಚ್ಚುಹೆಚ್ಚಾಗಿ ದೊರೆಯಲಿ.


ನಮ್ಮನ್ನು ತನ್ನ ಮಹಿಮೆಯಿಂದಲೂ, ಗುಣಾತಿಶಯದಿಂದಲೂ ಕರೆದ ದೇವರ ವಿಷಯವಾಗಿ ಯೇಸುವಿನ ದಿವ್ಯಶಕ್ತಿಯು ನಮಗೆ ದೈವಿಕ ಪರಿಜ್ಞಾನವನ್ನು ಕೊಟ್ಟಿರುವುದರ ಮೂಲಕ ಜೀವಕ್ಕೂ, ಭಕ್ತಿಗೂ ಬೇಕಾದದ್ದೆಲ್ಲವನ್ನೂ ದಾನಮಾಡಲಾಗಿದೆಯೆಂದು ನಾವು ಬಲ್ಲೆವು.


ಇವು ನಿಮ್ಮಲ್ಲಿದ್ದು ಬೆಳೆದು ಬಂದರೆ, ನಮ್ಮ ಕರ್ತನಾದ ಯೇಸು ಕ್ರಿಸ್ತನ ಕುರಿತಾದ ಪರಿಜ್ಞಾನದಲ್ಲಿ ನೀವು ನಿರುತ್ಸಾಹಿಗಳೂ, ನಿಷ್ಪ್ರಯೋಜಕರೂ ಆಗದಂತೆ ಮಾಡುತ್ತವೆ.


ಆ ಜೀವವು ಪ್ರತ್ಯಕ್ಷವಾಯಿತು. ತಂದೆಯ ಬಳಿಯಲ್ಲಿದ್ದು ನಮಗೆ ಪ್ರತ್ಯಕ್ಷವಾದಂಥ ಆ ನಿತ್ಯಜೀವವನ್ನು ನಾವು ಕಂಡು ಅದನ್ನು ಕುರಿತು ಸಾಕ್ಷಿ ಹೇಳಿ ಅದನ್ನು ನಿಮಗೆ ತಿಳಿಯಪಡಿಸುತ್ತಿದ್ದೇವೆ.


ನಮಗಿರುವ ಅನ್ಯೋನ್ಯತೆಯಲ್ಲಿ ನೀವೂ ಸೇರಬೇಕೆಂದು ನಾವು ಕಂಡು ಕೇಳಿದ್ದನ್ನು ನಿಮಗೆ ಪ್ರಚುರಪಡಿಸುತ್ತೇವೆ. ನಮಗಿರುವ ಅನ್ಯೋನ್ಯತೆಯು ತಂದೆಯ ಸಂಗಡಲೂ ಆತನ ಮಗನಾದ ಯೇಸು ಕ್ರಿಸ್ತನ ಸಂಗಡಲೂ ಇರುವಂಥದ್ದಾಗಿದೆ.


ಯಾರು ದೇವರ ಮಗನನ್ನು ಅಲ್ಲಗಳೆಯುವನೋ ಅವನು ದೇವರಿಗೆ ಸೇರಿದವನಲ್ಲ. ಯಾರು ಮಗನನ್ನು ಒಪ್ಪಿಕೊಳ್ಳುವನೋ ಅವನು ತಂದೆಯಾದ ದೇವರಿಗೆ ಸೇರಿದವನಾಗಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು