Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 17:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಈಗ ತಂದೆಯೇ, ಲೋಕವು ಸೃಷ್ಟಿಯಾಗುವುದಕ್ಕಿಂತ ಮೊದಲು, ನಿನ್ನ ಬಳಿಯಲ್ಲಿ ನನಗಿದ್ದ ಮಹಿಮೆಯಂತೆಯೇ ನಿನ್ನೊಂದಿಗೆ ನನ್ನನ್ನು ಮಹಿಮೆಪಡಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಪಿತನೇ, ಜಗತ್ತು ಉಂಟಾಗುವ ಮೊದಲೇ ನಿಮ್ಮೊಡನೆ ನನಗಿದ್ದ ಅದೇ ಮಹಿಮೆಯನ್ನು ಕೊಟ್ಟು ನನ್ನನ್ನು ಈಗ ನಿಮ್ಮ ಸನ್ನಿಧಿಯಲ್ಲಿ ಮಹಿಮೆಪಡಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಈಗ ತಂದೆಯೇ, ನೀನು ನಿನ್ನ ಬಳಿಯಲ್ಲಿ ನನ್ನನ್ನು ಮಹಿಮೆಪಡಿಸು; ಲೋಕ ಉಂಟಾಗುವದಕ್ಕಿಂತ ಮುಂಚೆ ನಿನ್ನ ಬಳಿಯಲ್ಲಿ ನನಗಿದ್ದ ಮಹಿಮೆಯಿಂದಲೇ ನನ್ನನ್ನು ಮಹಿಮೆಪಡಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಈಗ, ತಂದೆಯೇ, ನೀನು ನಿನ್ನ ಸನ್ನಿಧಿಯಲ್ಲಿ ನನ್ನನ್ನು ಮಹಿಮೆಪಡಿಸು. ಈ ಲೋಕವು ಸೃಷ್ಟಿಯಾಗುವುದಕ್ಕಿಂತ ಮೊದಲು ನಾನು ನಿನ್ನೊಂದಿಗೆ ಹೊಂದಿದ್ದ ಮಹಿಮೆಯನ್ನು ನನಗೆ ಕೊಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ತಂದೆಯೇ, ಲೋಕವು ಉಂಟಾಗುವದಕ್ಕಿಂತ ಮುಂಚೆ ನಿಮ್ಮೊಡನೆ ನನಗಿದ್ದ ಮಹಿಮೆಯಿಂದ ಈಗ ನೀವು ನನ್ನನ್ನು ಮಹಿಮೆಪಡಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ಬಾಬಾ! ಹ್ಯೊ ಜಗ್ ರಚುಚ್ಯಾ ಅದ್ದಿ ಮಿಯಾ ತುಜ್ಯಾ ವಾಂಗ್ಡಾ ಹೊತ್ತ್ಯಾ ತನ್ನಾ ಮಾಕಾ ಹೊತ್ತಿ, ತಿಚ್ ಮಹಿಮಾ ತಿಯಾ ಮಾಕಾ ಅತ್ತಾ ತುಜ್ಯಾ ಇದ್ರಾಕ್ ದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 17:5
20 ತಿಳಿವುಗಳ ಹೋಲಿಕೆ  

ಆತನು ಜಗದುತ್ಪತ್ತಿಗೆ ಮೊದಲೇ ನೇಮಿಸಲ್ಪಟ್ಟವನಾಗಿದ್ದು ಈ ಅಂತ್ಯಕಾಲಗಳಲ್ಲಿ ನಿಮಗಾಗಿ ಪ್ರತ್ಯಕ್ಷನಾದನು.


ನಾನೂ ಮತ್ತು ನನ್ನ ತಂದೆಯೂ ಒಂದಾಗಿದ್ದೇವೆ” ಎಂದನು.


ಆತನು ದೇವಸ್ವರೂಪನಾಗಿದ್ದರೂ, ದೇವರಿಗೆ ಸರಿಸಮಾನನಾಗಿರುವನೆಂಬ ಅಮೂಲ್ಯ ಪದವಿಯನ್ನು ಬಿಡಲೊಲ್ಲೆನು ಎಂದೆಣಿಸದೆ,


“ಕರ್ತನೇ ಆದಿಯಲ್ಲಿ ನೀನು ಭೂಮಿಗೆ ಅಸ್ತಿವಾರವನ್ನು ಹಾಕಿದ್ದೀ. ಆಕಾಶವು ನಿನ್ನ ಕೈಕೆಲಸವಾಗಿದೆ,


ಈತನು ದೇವರ ಮಹಿಮೆಯ ಪ್ರಕಾಶವೂ, ಆತನ ವ್ಯಕ್ತಿತ್ವದ ಪ್ರತಿರೂಪವೂ, ತನ್ನ ಶಕ್ತಿಯುಳ್ಳ ವಾಕ್ಯದಿಂದ ಸಮಸ್ತಕ್ಕೆ ಆಧಾರವೂ ಆಗಿದ್ದು ತಾನೇ ನಮ್ಮ ಪಾಪಗಳನ್ನು ಶುದ್ಧಿಮಾಡಿ, ಉನ್ನತದಲ್ಲಿರುವ ಮಹೋನ್ನತನಾದ ದೇವರ ಬಲಗಡೆಯಲ್ಲಿ ಕುಳಿತುಕೊಂಡನು.


ತಂದೆಯೇ, ನೀನು ನನಗೆ ಕೊಟ್ಟವರು, ನಾನಿರುವ ಸ್ಥಳದಲ್ಲಿ ನನ್ನೊಂದಿಗೆ ಇದ್ದುಕೊಂಡು, ಜಗದುತ್ಪತ್ತಿಗೂ ಮೊದಲೇ ನೀನು ನನ್ನನ್ನು ಪ್ರೀತಿಸಿ ನನಗೆ ಕೊಟ್ಟಿರುವ ಮಹಿಮೆಯನ್ನು ಇವರು ನೋಡಬೇಕೆಂದು, ನಾನು ಆಶಿಸುತ್ತೇನೆ.


ಯೇಸು, “ನಿಮಗೆ ನಾನು ನಿಜನಿಜವಾಗಿ ಹೇಳುತ್ತೇನೆ; ಅಬ್ರಹಾಮನು ಹುಟ್ಟುವುದಕ್ಕಿಂತ ಮುಂಚಿನಿಂದಲೂ ನಾನು ಇದ್ದೇನೆ” ಎಂದನು.


ದೇವರನ್ನು ಯಾರೂ ಎಂದೂ ನೋಡಿಲ್ಲ. ತಂದೆಯ ಹೃದಯದಲ್ಲಿರುವ ಏಕಪುತ್ರನೂ ಸ್ವತಃ ದೇವರೂ ಆಗಿರುವಾತನೇ, ತಂದೆಯನ್ನು ತಿಳಿಯಪಡಿಸಿದ್ದಾನೆ.


ಯೇಸು ಅವನಿಗೆ, “ಫಿಲಿಪ್ಪನೇ, ನಾನು ಇಷ್ಟು ಕಾಲ ನಿಮ್ಮ ಜೊತೆಯಲ್ಲಿಯೇ ಇದ್ದರೂ ಇನ್ನೂ ನೀನು ನನ್ನನ್ನು ತಿಳಿಯಲಿಲ್ಲವೇ! ನನ್ನನ್ನು ನೋಡಿದವನು ತಂದೆಯನ್ನು ನೋಡಿದ್ದಾನೆ, ಮತ್ತು ನಮಗೆ ತಂದೆಯನ್ನು ತೋರಿಸು ಎಂದು ನೀನು ಹೇಳುವುದಾದರು ಹೇಗೆ?


ಆಗ ಅರಸನು ತನ್ನ ಬಲಗಡೆಯಲ್ಲಿರುವವರಿಗೆ, ‘ನನ್ನ ತಂದೆಯ ಆಶೀರ್ವಾದ ಹೊಂದಿದವರೇ ಬನ್ನಿರಿ, ಲೋಕಾದಿಯಿಂದ ನಿಮಗೋಸ್ಕರ ಸಿದ್ಧಮಾಡಿದ ರಾಜ್ಯವನ್ನು ಸ್ವತ್ತಾಗಿ ಪಡೆದುಕೊಳ್ಳಿರಿ.


ಪರಲೋಕದಿಂದ ಇಳಿದು ಬಂದವನೇ, ಅಂದರೆ, ಮನುಷ್ಯಕುಮಾರನೇ ಹೊರತು ಮತ್ತಾರು ಪರಲೋಕಕ್ಕೆ ಏರಿ ಹೋದವರಿಲ್ಲ.


ನಾನು ಜಯಹೊಂದಿ ನನ್ನ ತಂದೆಯೊಡನೆ ಸಿಂಹಾಸನದಲ್ಲಿ ಕುಳಿತುಕೊಂಡ ಹಾಗೆಯೇ ಜಯಶಾಲಿಯಾದವನಿಗೆ ನನ್ನೊಡನೆ ಸಿಂಹಾಸನದಲ್ಲಿ ಕುಳಿತುಕೊಳ್ಳುವ ಹಕ್ಕನ್ನು ನಾನು ಕೊಡುತ್ತೇನೆ.


ಜಗದುತ್ಪತ್ತಿಗೆ ಮೊದಲೇ ಕೊಯ್ಯಲ್ಪಟ್ಟ ಕುರಿಮರಿಯಾದಾತನ ಬಳಿಯಲ್ಲಿರುವ ಜೀವಬಾಧ್ಯರ ಪುಸ್ತಕದಲ್ಲಿ ಯಾರಾರ ಹೆಸರುಗಳು ಬರೆದಿರುವುದಿಲ್ಲವೋ ಆ ಭೂನಿವಾಸಿಗಳೆಲ್ಲರೂ ಅದಕ್ಕೆ ಆರಾಧನೆ ಮಾಡುವರು.


ಆ ಜೀವವು ಪ್ರತ್ಯಕ್ಷವಾಯಿತು. ತಂದೆಯ ಬಳಿಯಲ್ಲಿದ್ದು ನಮಗೆ ಪ್ರತ್ಯಕ್ಷವಾದಂಥ ಆ ನಿತ್ಯಜೀವವನ್ನು ನಾವು ಕಂಡು ಅದನ್ನು ಕುರಿತು ಸಾಕ್ಷಿ ಹೇಳಿ ಅದನ್ನು ನಿಮಗೆ ತಿಳಿಯಪಡಿಸುತ್ತಿದ್ದೇವೆ.


ಯೇಸು ಈ ಮಾತುಗಳನ್ನು ಹೇಳಿದ ಮೇಲೆ ಆಕಾಶದ ಕಡೆಗೆ ಕಣ್ಣೆತ್ತಿ ನೋಡಿ ಹೇಳಿದ್ದೇನೆಂದರೆ, “ತಂದೆಯೇ, ಸಮಯ ಬಂದಿದೆ; ಮಗನು ನಿನ್ನನ್ನು ಮಹಿಮೆಪಡಿಸುವುದಕೊಸ್ಕರ ನಿನ್ನ ಮಗನನ್ನು ಮಹಿಮೆಪಡಿಸು.


ಆತನನ್ನು ಸತ್ತವರೊಳಗಿಂದ ಎಬ್ಬಿಸಿ ಆತನಿಗೆ ಮಹಿಮೆಯನ್ನು ಕೊಟ್ಟ ದೇವರಲ್ಲಿ ನೀವು ಆತನ ಮೂಲಕ ನಂಬಿಕೆಯಿಟ್ಟವರಾಗಿದ್ದೀರಷ್ಟೆ. ಹೀಗಿರಲಾಗಿ ನಿಮ್ಮ ನಂಬಿಕೆಯೂ ನಿರೀಕ್ಷೆಯೂ ದೇವರಲ್ಲಿಯೇ ನೆಲೆಗೊಂಡಿವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು