Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 18:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೇಸು ಈ ಮಾತುಗಳನ್ನಾಡಿದ ಮೇಲೆ ತನ್ನ ಶಿಷ್ಯರ ಜೊತೆ ಕೆದ್ರೋನ್ ಹಳ್ಳದ ಆಚೆಗೆ ಹೋದನು. ಆತನೂ, ಆತನ ಶಿಷ್ಯರೂ ಅಲ್ಲಿದ್ದ ಒಂದು ತೋಟದೊಳಗೆ ಪ್ರವೇಶಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಯೇಸು ಸ್ವಾಮಿ ಹೀಗೆ ಹೇಳಿದ ಬಳಿಕ ತಮ್ಮ ಶಿಷ್ಯರೊಡನೆ ಹೊರಟು, ಕೆದ್ರೋನ್ ಹಳ್ಳವನ್ನು ದಾಟಿ, ಅಲ್ಲೇ ಇದ್ದ ತೋಟವನ್ನು ಹೊಕ್ಕರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಯೇಸು ಇದನ್ನು ಹೇಳಿದ ಮೇಲೆ ತನ್ನ ಶಿಷ್ಯರ ಸಂಗಡ ಕೆದ್ರೋನ್ ಹಳ್ಳದ ಆಚೆಗೆ ಹೊರಟುಹೋದನು. ಅಲ್ಲಿ ಒಂದು ತೋಟವಿತ್ತು; ಅದರೊಳಕ್ಕೆ ಆತನೂ ಆತನ ಶಿಷ್ಯರೂ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಯೇಸು ಪ್ರಾರ್ಥಿಸಿದ ಮೇಲೆ ತನ್ನ ಶಿಷ್ಯರೊಂದಿಗೆ ಹೊರಟನು. ಅವರು ಕಿದ್ರೋನ್ ಕಣಿವೆಯನ್ನು ದಾಟಿಹೋದರು. ಅದರ ಮತ್ತೊಂದು ಕಡೆಯಲ್ಲಿ ಆಲಿವ್ ಮರಗಳ ತೋಟವಿತ್ತು. ಯೇಸು ಮತ್ತು ಆತನ ಶಿಷ್ಯರು ಅಲ್ಲಿಗೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಯೇಸು ಪ್ರಾರ್ಥನೆಯನ್ನು ಮುಗಿಸಿದ ಮೇಲೆ ತಮ್ಮ ಶಿಷ್ಯರೊಂದಿಗೆ ಕೆದ್ರೋನ್ ಹಳ್ಳದ ಆಚೆಗೆ ಹೋದರು. ಮತ್ತೊಂದು ಕಡೆ ಇರುವ ತೋಟದೊಳಗೆ ಯೇಸು ಮತ್ತು ಅವರ ಶಿಷ್ಯರು ಪ್ರವೇಶಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ಜೆಜುನ್ ಹಿ ಮಾಗ್ನಿ ಸಾಂಗುನ್ ಹೊಲ್ಲ್ಯಾ ತನ್ನಾ, ತೊ ಅಪ್ನಾಚ್ಯಾ ಶಿಸಾಕ್ನಿ ವಾಂಗ್ಡಾ ಘೆವ್ನ್ ಕೆದ್ರೊನ್ ಮನ್ತಲೊ ಕರ್‍ಕೊ ದಾಟುನ್ ಗೆಲೊ, ಥೈ ಎಕ್ ಮ್ಹಳೊ ಹೊತ್ತೊ, ತೆನಿ ತ್ಯಾ ಮಳ್ಯಾತ್ ಗುಸ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 18:1
25 ತಿಳಿವುಗಳ ಹೋಲಿಕೆ  

ಅವರು ಗೆತ್ಸೇಮನೆ ಎಂಬ ಸ್ಥಳಕ್ಕೆ ಬಂದರು. ಆತನು ತನ್ನ ಶಿಷ್ಯರಿಗೆ, “ನಾನು ಪ್ರಾರ್ಥನೆ ಮಾಡುವ ತನಕ, ನೀವು ಇಲ್ಲೇ ಕುಳಿತುಕೊಂಡಿರಿ” ಎಂದು ಹೇಳಿದನು.


ಅನಂತರ ಯೇಸು ತನ್ನ ಶಿಷ್ಯರ ಸಂಗಡ ಗೆತ್ಸೇಮನೆ ಎಂಬ ತೋಟಕ್ಕೆ ಬಂದು ಅವರಿಗೆ, “ಇಲ್ಲೇ ಕುಳಿತುಕೊಳ್ಳಿರಿ, ನಾನು ಅತ್ತ ಹೋಗಿ ಪ್ರಾರ್ಥಿಸುತ್ತೇನೆ” ಎಂದು ಹೇಳಿ,


ಇವರೆಲ್ಲರೂ ಮುಂದೆ ನಡೆಯುವಾಗ ಸುತ್ತಮುತ್ತಲಿನ ಜನರೆಲ್ಲರೂ ಬಹಳವಾಗಿ ಅತ್ತರು. ಅರಸನೂ ಎಲ್ಲಾ ಜನರೂ ಕಿದ್ರೋನ್ ಹಳ್ಳವನ್ನು ದಾಟಿ ಅರಣ್ಯ ಮಾರ್ಗವನ್ನು ಹಿಡಿದರು.


ಮಹಾಯಾಜಕನ ಆಳುಗಳಲ್ಲಿ ಪೇತ್ರನು ಕಿವಿ ಕತ್ತರಿಸಿದವನ ಬಂಧುವಾಗಿದ್ದ ಒಬ್ಬನು, ಪೇತ್ರನಿಗೆ, “ನಾನು ನಿನ್ನನ್ನು ತೋಟದಲ್ಲಿ ಆತನ ಜೊತೆಯಲ್ಲಿ ನೋಡಿದೆನಲ್ಲವೇ?” ಎಂದನು.


ಆದರೂ ನಾನು ತಂದೆಯನ್ನು ಪ್ರೀತಿಸುತ್ತೇನೆಂದು ಲೋಕಕ್ಕೆ ತಿಳಿಯಬೇಕೆಂದು ತಂದೆ ನನಗೆ ಆಜ್ಞಾಪಿಸಿದಂತೆಯೇ ನಾನು ಮಾಡುತ್ತೇನೆ. ಏಳಿರಿ, ನಾವು ಇಲ್ಲಿಂದ ಹೋಗೋಣ” ಎಂದನು.


ಆಗ ಬೂದಿ, ಹೆಣ ಇವುಗಳಿಂದ ಹೊಲಸಾದ ತಗ್ಗೂ ಅಲ್ಲಿಂದ ಕಿದ್ರೋನ್ ಹಳ್ಳ, ಪೂರ್ವದಿಕ್ಕಿನ ಕುದುರೆ ಬಾಗಿಲ ಮೂಲೆ ಇವುಗಳ ವರೆಗಿರುವ ಪ್ರದೇಶವೆಲ್ಲವೂ ಯೆಹೋವನಿಗೆ ಪರಿಶುದ್ಧ ಸ್ಥಾನವಾಗುವವು; ಪಟ್ಟಣವು ಇನ್ನು ಮೇಲೆ ಎಂದಿಗೂ ಕೀಳಲ್ಪಡುವುದಿಲ್ಲ, ಕೆಡವಲ್ಪಡುವುದಿಲ್ಲ” ಎನ್ನುತ್ತಾನೆ.


ಅವರು ಯೆರೂಸಲೇಮಿನಲ್ಲಿದ್ದ ಯಜ್ಞವೇದಿಗಳನ್ನೂ ಎಲ್ಲಾ ಧೂಪವೇದಿಗಳನ್ನೂ ತೆಗೆದುಕೊಂಡು ಹೋಗಿ ಕಿದ್ರೋನ್ ಹಳ್ಳದಲ್ಲಿ ಬಿಸಾಡಿಬಿಟ್ಟರು.


ಅರಸನಾದ ಆಸನ ಅಜ್ಜಿಯಾದ ಮಾಕಳು ಅಶೇರ ದೇವತೆಯ ಒಂದು ಅಸಹ್ಯ ಮೂರ್ತಿಯನ್ನು ಮಾಡಿಸಿಕೊಂಡಿದ್ದಳು. ಆದುದರಿಂದ ಅವನು ಆಕೆಯನ್ನು ರಾಜಮಾತೆಯ ಸ್ಥಾನದಿಂದ ತೆಗೆದುಹಾಕಿದನು. ಅಲ್ಲದೆ ಆ ಮೂರ್ತಿಯನ್ನು ತೆಗೆದು ಕಿದ್ರೋನ್ ಹಳ್ಳದ ಬಳಿಯಲ್ಲಿ ಚೂರು ಚೂರು ಮಾಡಿ ಸುಟ್ಟುಹಾಕಿಸಿದನು.


ಇದಲ್ಲದೆ, ಯೆಹೂದ್ಯರ ಅರಸರು ದೇವಸ್ಥಾನದ ಮಾಳಿಗೆಯ ಮೇಲೆ ಆಹಾಜನ ಉಪ್ಪರಿಗೆಯ ಹತ್ತಿರ ಕಟ್ಟಿಸಿದ್ದ ಯಜ್ಞವೇದಿಗಳನ್ನೂ, ಮನಸ್ಸೆಯು ಯೆಹೋವನ ಆಲಯದ ಎರಡು ಪ್ರಾಕಾರಗಳಲ್ಲಿ ಕಟ್ಟಿಸಿದ ಯಜ್ಞವೇದಿಗಳನ್ನೂ ಕೆಡವಿ ಪುಡಿಪುಡಿ ಮಾಡಿ ಅವುಗಳ ಧೂಳನ್ನು ಕಿದ್ರೋನ್ ಹಳ್ಳದಲ್ಲಿ ಹಾಕಿಸಿದನು.


ಯೆಹೋವನ ಆಲಯದಲ್ಲಿದ್ದ ಅಶೇರ್ ವಿಗ್ರಹಸ್ತಂಭವನ್ನು ತರಿಸಿ ಯೆರೂಸಲೇಮಿನ ಹೊರಗಿರುವ ಕಿದ್ರೋನ್ ಹಳ್ಳಕ್ಕೆ ತೆಗೆದುಕೊಂಡು ಹೋಗಿ ಅಲ್ಲಿ ಅದನ್ನು ಸುಟ್ಟು ಪುಡಿಪುಡಿ ಮಾಡಿಸಿ ಆ ಪುಡಿಯನ್ನು ಸಾಮಾನ್ಯ ಜನರ ಸ್ಮಶಾನದಲ್ಲಿ ಹಾಕಿಬಿಟ್ಟನು.


ಅವನ ತಾಯಿಯಾದ ಮಾಕಳೂ ಅಶೇರ ದೇವತೆಯ ಒಂದು ಅಸಹ್ಯವಾದ ಮೂರ್ತಿಯನ್ನು ಮಾಡಿಸಿದ್ದರಿಂದ ಆಸನು ಆಕೆಯನ್ನು ಗದ್ದುಗೆಯಿಂದ ತಳ್ಳಿ, ಆ ಮೂರ್ತಿಯನ್ನು ಕಡಿದು, ಕಿದ್ರೋನ್ ಹಳ್ಳದ ಹತ್ತಿರ ಸುಟ್ಟು ಹಾಕಿದನು.


ಆದ್ದರಿಂದ ಯೆಹೋವನು ಅವನನ್ನು ಸೃಷ್ಟಿಸಿದ ಮಣ್ಣಿನ ಭೂಮಿಯನ್ನೇ ವ್ಯವಸಾಯ ಮಾಡುವುದಕ್ಕಾಗಿ ಅವನನ್ನು ಏದೆನ್ ತೋಟದಿಂದ ಹೊರಗೆ ಕಳುಹಿಸಿ ಬಿಟ್ಟನು.


ಬಳಿಕ ಅವರು ಒಂದು ಕೀರ್ತನೆ ಹಾಡಿ ಎಣ್ಣೆಮರಗಳ ಗುಡ್ಡಕ್ಕೆ ಹೊರಟು ಹೋದರು.


ಬಳಿಕ ಅವರು ಕೀರ್ತನೆಯನ್ನು ಹಾಡಿದ ಮೇಲೆ ಎಣ್ಣೆಯ ಮರಗಳ ಗುಡ್ಡಕ್ಕೆ ಹೊರಟು ಹೋದರು.


ಯೆಹೋವನಾದ ದೇವರು ಆ ಮನುಷ್ಯನನ್ನು ಕರೆದುಕೊಂಡು ಹೋಗಿ ಏದೆನ್ ತೋಟವನ್ನು ವ್ಯವಸಾಯ ಮಾಡುವುದಕ್ಕೂ ಕಾಯುವುದಕ್ಕೂ ಅದರಲ್ಲಿ ಇರಿಸಿದನು.


ನೀನು ಇದನ್ನು ಬಿಟ್ಟು ಕಿದ್ರೋನ್ ಹಳ್ಳದ ಆಚೆಗೆ ಹೋದೆಯಾದರೆ ಅದೇ ದಿನದಲ್ಲಿ ನಿನಗೆ ಮರಣಶಿಕ್ಷೆಯಾಗುವುದೆಂದು ತಿಳಿದುಕೋ ಮತ್ತು ಆ ರಕ್ತಾಪರಾಧವು ನಿನ್ನ ತಲೆಯ ಮೇಲೆಯೇ ಇರುವುದು” ಎಂದು ಹೇಳಿದನು.


ತರುವಾಯ ಅರಸನು ಮಹಾಯಾಜಕನಾದ ಹಿಲ್ಕೀಯನಿಗೆ, ಅವನ ಕೈಕೆಳಗಿರುವ ಯಾಜಕರ ಮತ್ತು ದ್ವಾರಪಾಲಕರ ಮುಖಾಂತರವಾಗಿ ಬಾಳ್, ಅಶೇರ್ ಎಂಬ ದೇವತೆಗಳಿಗಾಗಿಯೂ, ಆಕಾಶಸೈನ್ಯಗಳಿಗಾಗಿಯೂ, ಉಪಯೋಗಿಸುತ್ತಿದ್ದ ಎಲ್ಲಾ ಸಾಮಾನುಗಳನ್ನು ಯೆಹೋವನ ಆಲಯದಿಂದ ತರಿಸಿ ಯೆರೂಸಲೇಮಿನ ಹೊರಗಿರುವ ಕಿದ್ರೋನ್ ಬಯಲಿನಲ್ಲಿ ಅವುಗಳನ್ನು ಸುಟ್ಟು ಬೂದಿಯನ್ನು ಬೇತೇಲಿಗೆ ಕಳುಹಿಸಿದನು.


ಯಾಜಕರು ಯೆಹೋವನ ಆಲಯವನ್ನು ಶುದ್ಧಮಾಡುವುದಕ್ಕಾಗಿ ಒಳಗೆ ಹೋಗಿ ಪವಿತ್ರಸ್ಥಾನದಲ್ಲಿದ್ದ ಹೊಲಸನ್ನೆಲ್ಲಾ ತಂದು ಪ್ರಾಕಾರದಲ್ಲಿ ಹಾಕಿದರು. ಲೇವಿಯರು ಅದನ್ನು ಕೂಡಿಸಿ ಹೊರಗೆ ಒಯ್ದು ಕಿದ್ರೋನ್ ಹಳ್ಳದಲ್ಲಿ ಹಾಕಿದರು.


ಅದಕಾರಣ ನಾನು ರಾತ್ರಿಯಲ್ಲಿ ಹಳ್ಳದ ಬದಿಯ ಮಾರ್ಗವಾಗಿ ಹೋಗಿ ಗೋಡೆಯನ್ನು ಪರೀಕ್ಷಿಸಿದೆನು. ಆ ಮೇಲೆ ಪುನಃ ತಗ್ಗಿನ ಬಾಗಿಲಿನಿಂದ ಹಿಂತಿರುಗಿ ಮನೆಗೆ ಬಂದೆನು.


ತನ್ನ ಕೈಕಾಲುಗಳನ್ನು ಕಟ್ಟಿಕೊಂಡು; “ಈ ನಡುಕಟ್ಟು ಯಾವನದೋ ಅವನನ್ನು ‘ಯೆಹೂದ್ಯರು ಇದೇ ರೀತಿಯಾಗಿ ಯೆರೂಸಲೇಮಿನಲ್ಲಿ ಕಟ್ಟಿ ಅನ್ಯಜನರ ಕೈಗೆ ಒಪ್ಪಿಸಿ ಕೊಡುವರು, ಎಂದು ಪವಿತ್ರಾತ್ಮನು ಹೇಳುತ್ತಾನೆಂಬುದಾಗಿ’” ಹೇಳಿದನು.


ನೀವು ಅದನ್ನು ಚೂರುಚೂರಾಗಿ ಮುರಿದು, ಅದರ ಮೇಲೆ ಎಣ್ಣೆ ಹೊಯ್ಯಬೇಕು. ಇದು ಧಾನ್ಯನೈವೇದ್ಯವಾಗಿದೆ.


ಏಳಿರಿ, ಹೋಗೋಣ. ಇಗೋ, ನನ್ನನ್ನು ಪಾಪಿಗಳ ಕೈಗೆ ಹಿಡಿದುಕೊಡುವವನು ಸಮೀಪಕ್ಕೆ ಬಂದಿದ್ದಾನೆ ನೋಡಿರಿ” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು