Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 18:31 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಆಗ ಪಿಲಾತನು ಅವರಿಗೆ, “ನೀವೇ ಆತನನ್ನು ತೆಗೆದುಕೊಂಡು ಹೋಗಿ ನಿಮ್ಮ ಧರ್ಮಶಾಸ್ತ್ರದ ಪ್ರಕಾರ ಆತನಿಗೆ ತೀರ್ಪು ಮಾಡಿರಿ” ಎಂದು ಹೇಳಿದನು. ಅದಕ್ಕೆ ಯೆಹೂದ್ಯರು, “ಮರಣ ದಂಡನೆಯನ್ನು ವಿಧಿಸುವ ಅಧಿಕಾರವು ನಮಗೆ ಇಲ್ಲ” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ಅದಕ್ಕೆ ಪಿಲಾತನು, “ಹಾಗಾದರೆ ನೀವೇ ಕರೆದುಕೊಂಡುಹೋಗಿ, ನಿಮ್ಮ ಧರ್ಮಶಾಸ್ತ್ರದ ಪ್ರಕಾರ ಈತನಿಗೆ ತೀರ್ಪುಕೊಡಿ,” ಎಂದನು. ಯೆಹೂದ್ಯರು, “ಮರಣದಂಡನೆ ವಿಧಿಸುವ ಅಧಿಕಾರ ನಮಗಿಲ್ಲವಲ್ಲಾ,” ಎಂದು ಉತ್ತರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಆಗ ಪಿಲಾತನು ಅವರಿಗೆ - ನೀವೇ ಅವನನ್ನು ತಕ್ಕೊಂಡುಹೋಗಿ ನಿಮ್ಮ ಧರ್ಮಶಾಸ್ತ್ರದ ಪ್ರಕಾರ ಅವನಿಗೆ ತೀರ್ಪುಮಾಡಿರಿ ಎಂದು ಹೇಳಿದನು. ಅದಕ್ಕೆ ಯೆಹೂದ್ಯರು - ಮರಣ ದಂಡನೆಯನ್ನು ವಿಧಿಸುವ ಅಧಿಕಾರವು ನಮಗಿಲ್ಲ ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ಪಿಲಾತನು ಯೆಹೂದ್ಯರಿಗೆ, “ಯೆಹೂದ್ಯರಾದ ನೀವೇ ಇವನನ್ನು ಕರೆದುಕೊಂಡು ಹೋಗಿ ನಿಮ್ಮ ಧರ್ಮಶಾಸ್ತ್ರದ ಪ್ರಕಾರ ತೀರ್ಪುಮಾಡಿ” ಎಂದು ಹೇಳಿದನು. ಯೆಹೂದ್ಯರು, “ಆದರೆ ಒಬ್ಬನಿಗೆ ಮರಣದಂಡನೆ ವಿಧಿಸಲು ನಿನ್ನ ಕಾನೂನು ನಮಗೆ ಅವಕಾಶ ಕೊಡುವುದಿಲ್ಲ” ಎಂದು ಉತ್ತರಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ಆಗ ಪಿಲಾತನು ಅವರಿಗೆ, “ನೀವೇ ಆತನನ್ನು ತೆಗೆದುಕೊಂಡುಹೋಗಿ ನಿಮ್ಮ ನಿಯಮದ ಪ್ರಕಾರ ಆತನಿಗೆ ತೀರ್ಪು ಮಾಡಿರಿ,” ಎಂದನು. ಅದಕ್ಕೆ ಯೆಹೂದ್ಯರು ಅವನಿಗೆ, “ಮರಣದಂಡನೆ ವಿಧಿಸುವ ಅಧಿಕಾರ ನಮಗೆ ಇಲ್ಲ,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

31 ತನ್ನಾ ಪಿಲಾತಾನ್ ತೆಂಕಾ, “ತಸೆ ಜಾಲ್ಯಾರ್ ತುಮಿಚ್ ತೆಕಾ ಘೆವ್ನ್ ಜಾವಾ, ಅನಿ ತುಮ್ಚ್ಯಾ ಖಾಯ್ದ್ಯಾ ಪರ್‍ಕಾರ್ ಕಾಯ್ ಕರ್‍ತಲೆ ಹಾಯ್ ತೆ ಕರಾ” ಮಟ್ಲ್ಯಾನ್ ತನ್ನಾ ತೆನಿ, “ಕೊನಾಕ್ಬಿ ಮರ್‍ನಾಚಿ ಶಿಕ್ಷಾ ದಿವ್ಕ್ ಅಮ್ಕಾ ಪರ್‍ವಾನ್ಗಿ ನಾ” ಮಟ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 18:31
8 ತಿಳಿವುಗಳ ಹೋಲಿಕೆ  

ಅದಕ್ಕೆ ಅವರು, “ಅವನನ್ನು ಕೊಲ್ಲಿಸು, ಕೊಲ್ಲಿಸು, ಶಿಲುಬೆಗೆ ಹಾಕಿಸು” ಎಂದು ಕೂಗಿದರು. ಅದಕ್ಕೆ ಪಿಲಾತನು, “ನಿಮ್ಮ ಅರಸನನ್ನು ಶಿಲುಬೆಗೆ ಹಾಕಿಸಲೋ?” ಎಂದು ಹೇಳಿದಕ್ಕೆ, ಮುಖ್ಯಯಾಜಕರು, “ಕೈಸರನೇ, ಹೊರತು ನಮಗೆ ಬೇರೆ ಅರಸನಿಲ್ಲ” ಎಂದು ಉತ್ತರ ಕೊಟ್ಟರು.


ರಾಜದಂಡವನ್ನು ಹಿಡಿಯತಕ್ಕವನು ಶಿಲೋವಿನಿಂದ ಬರುವ ತನಕ ಆ ದಂಡವು ಯೆಹೂದನ ಕೈಯಿಂದ ತಪ್ಪುವುದಿಲ್ಲ. ಮುದ್ರೆ ಕೋಲು ಅವನ ಪಾದಗಳ ಬಳಿಯಿಂದ ಕದಲುವುದಿಲ್ಲ. ಅನ್ಯಜನಾಂಗಗಳೂ ಅವನಿಗೆ ವಿಧೇಯರಾಗಿರುವರು.


ಯೆಹೂದ್ಯರು ಅವನಿಗೆ, “ಈತನು ದುಷ್ಕರ್ಮಿಯಲ್ಲದಿದ್ದರೆ ನಾವು ಈತನನ್ನು ನಿನಗೆ ಒಪ್ಪಿಸಿ ಕೊಡುತ್ತಿರಲಿಲ್ಲ” ಎಂದು ಉತ್ತರಕೊಟ್ಟರು.


ಇದರಿಂದ ಯೇಸು ತಾನು ಎಂಥಾ ಮರಣವನ್ನು ಹೊಂದುವನೆಂದು ಸೂಚಿಸಿ ಹೇಳಿದ ಮಾತು ನೆರವೇರಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು