ಯೋಹಾನ 18:36 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201936 ಯೇಸು, “ನನ್ನ ರಾಜ್ಯವು ಈ ಲೋಕದ್ದಲ್ಲ. ನನ್ನ ರಾಜ್ಯವು ಈ ಲೋಕದ್ದಾಗಿದ್ದರೆ ನಾನು ಯೆಹೂದ್ಯರ ಕೈಗೆ ಒಪ್ಪಿಸಲ್ಪಡದಂತೆ ನನ್ನ ಸೇವಕರು ನನ್ನ ಪರವಾಗಿ ಹೋರಾಡುತ್ತಿದ್ದರು, ಆದರೆ ನನ್ನ ರಾಜ್ಯವು ಇಲ್ಲಿಯದಲ್ಲ” ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)36 ಅದಕ್ಕೆ ಯೇಸು, “ನನ್ನ ಸಾಮ್ರಾಜ್ಯ ಈ ಲೋಕದ್ದಲ್ಲ, ನನ್ನ ಸಾಮ್ರಾಜ್ಯ ಈ ಲೋಕದ್ದಾಗಿದ್ದರೆ, ಯೆಹೂದ್ಯರ ಕೈಗೆ ನಾನು ಬೀಳದಂತೆ ನನ್ನ ಅನುಯಾಯಿಗಳು ಕಾದಾಡುತ್ತಿದ್ದರು. ನಿಜವಾಗಿಯೂ ನನ್ನ ಸಾಮ್ರಾಜ್ಯ ಇಹಲೋಕದ್ದಲ್ಲ,” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)36 ಯೇಸು - ನನ್ನ ರಾಜ್ಯವು ಈ ಲೋಕದ್ದಲ್ಲ; ನನ್ನ ರಾಜ್ಯವು ಈ ಲೋಕದ್ದಾಗಿದ್ದರೆ ನಾನು ಯೆಹೂದ್ಯರ ಕೈಯಲ್ಲಿ ಬೀಳದಂತೆ ನನ್ನ ಪರಿವಾರದವರು ಕಾದಾಡುತ್ತಿದ್ದರು; ಆದರೆ ನನ್ನ ರಾಜ್ಯವು ಇಲ್ಲಿಯದಲ್ಲವೆಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್36 ಯೇಸು, “ನನ್ನ ರಾಜ್ಯವು ಈ ಲೋಕಕ್ಕೆ ಸೇರಿದ್ದಲ್ಲ. ಅದು ಈ ಲೋಕಕ್ಕೆ ಸೇರಿದ್ದಾಗಿದ್ದರೆ, ಯೆಹೂದ್ಯರ ಕೈಗೆ ನಾನು ಸಿಗದಂತೆ ನನ್ನ ಸೇವಕರು ಹೋರಾಡುತ್ತಿದ್ದರು. ಆದರೆ ನನ್ನ ರಾಜ್ಯವು ಮತ್ತೊಂದು ಸ್ಥಳದ್ದು” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ36 ಯೇಸು, “ನನ್ನ ರಾಜ್ಯವು ಈ ಲೋಕದ್ದಲ್ಲ, ನನ್ನ ರಾಜ್ಯವು ಈ ಲೋಕದ್ದಾಗಿದ್ದರೆ ನನ್ನನ್ನು ಯೆಹೂದ್ಯರಿಗೆ ಒಪ್ಪಿಸದಂತೆ ನನ್ನ ಸೇವಕರು ಹೋರಾಡುತ್ತಿದ್ದರು; ಆದರೆ ಈಗ ನನ್ನ ರಾಜ್ಯವು ಇಲ್ಲಿಯದಲ್ಲ,” ಎಂದು ಉತ್ತರಕೊಟ್ಟರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್36 ತನ್ನಾ ಜೆಜುನ್, “ಮಾಜೊ ರಾಜ್ ಹ್ಯಾ ಜಗಾಕ್ ಸಮಂದ್ ಪಡಲ್ಲೊ ನ್ಹಯ್! ಮಾಜೊ ರಾಜ್ ಹ್ಯಾ ಜಗಾಚೊ ರ್‍ಹಾಯ್ ಹೊತ್ತೊ ತರ್, ಜುದೆವ್ ಅದಿಕಾರ್‍ಯಾಂಚ್ಯಾ ತಾಬೆತ್ ಮಿಯಾ ಗಾವಿನಸಿ ಸರ್ಕೆ ಮಾಜೆ ವಾಂಗ್ಡಿ ಮಾರಾಮಾರಿ ಕರಿ ಹೊತ್ತಿ . ಮಾಜೊ ರಾಜ್ ಹ್ಯಾ ಜಗಾಕ್ ಸಮಂದ್ ಪಡಲ್ಲೊ ನ್ಹಯ್!” ಮಟ್ಲ್ಯಾನ್. ಅಧ್ಯಾಯವನ್ನು ನೋಡಿ |