Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 19:29 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಆಗ ಅಲ್ಲಿ ಹುಳಿರಸ ತುಂಬಿದ ಪಾತ್ರೆಯಿತ್ತು. ಅವರು ಸ್ಪಂಜನ್ನು ಹುಳಿರಸದಲ್ಲಿ ಅದ್ದಿ ಹಿಸ್ಸೋಪ್ ಗಿಡದ ಕೋಲಿಗೆ ಸಿಕ್ಕಿಸಿ ಆತನ ಬಾಯಿಗೆ ಮುಟ್ಟಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ಬಳಿಯಲ್ಲೇ ಹುಳಿರಸ ತುಂಬಿದ ಪಾತ್ರೆಯೊಂದಿತ್ತು. ಅವರು ಸ್ಪಂಜನ್ನು ಆ ಹುಳಿರಸದಲ್ಲಿ ತೋಯಿಸಿ ಹಿಸೋಪಗಿಡದ ಕೋಲಿಗೆ ಸಿಕ್ಕಿಸಿ, ಯೇಸುವಿನ ಬಾಯಿಗೆ ಮುಟ್ಟಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಅಲ್ಲಿ ಹುಳಿರಸ ತುಂಬಿದ ಗಡಿಗೆ ಇಟ್ಟಿರಲಾಗಿ ಅವರು ಸ್ಪಂಜನ್ನು ಹುಳಿರಸದಿಂದ ತುಂಬಿಸಿ ಹಿಸೋಪ್‍ಗಿಡದ ಕೋಲಿಗೆ ಸಿಕ್ಕಿಸಿ ಆತನ ಬಾಯಿಗೆ ಮುಟ್ಟಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ಅಲ್ಲಿ ಹುಳಿರಸ ತುಂಬಿದ ಪಾತ್ರೆಯೊಂದಿತ್ತು. ಸೈನಿಕರು ಸ್ಪಂಜನ್ನು ಹುಳಿರಸದಲ್ಲಿ ತೋಯಿಸಿ ಹಿಸ್ಸೋಪ್ ಗಿಡದ ಕೋಲಿಗೆ ಸಿಕ್ಕಿಸಿ ಅದನ್ನು ಮೇಲೆತ್ತಿ ಯೇಸುವಿನ ಬಾಯಿಗೆ ಮುಟ್ಟಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಆಗ ಅಲ್ಲಿ ಹುಳಿರಸ ತುಂಬಿದ ಪಾತ್ರೆಯಿತ್ತು. ಅವರು ಹೀರುವ ಪದಾರ್ಥವನ್ನು ಹುಳಿರಸದಲ್ಲಿ ಅದ್ದಿ ಹಿಸ್ಸೋಪ್ ಗಿಡದ ಕೋಲಿಗೆ ಸಿಕ್ಕಿಸಿ ಯೇಸುವಿನ ಬಾಯಿಗೆ ಇಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

29 ಅಂಬೊಟ್ಲಿ ವಾಯ್ನ್ ಭರುನ್ ಥವಲ್ಲೆ ಎಕ್ ಆಯ್ದಾನ್ ಥೈ ಹೊತ್ತೆ, ತಸೆಮನುನ್ ಎಕ್ ಕಾಪುಸ್ ಸರ್ಕೆ ಘೆವ್ನ್ ತ್ಯಾ ಬುರ್ಶ್ಯಾ ವಾಯ್ನಾತ್ ಬುಡ್ವುನ್, ಎಕ್ ಹಿಸ್ಸೊಪಾಚ್ಯಾ ಝಲ್ಲೆಕ್ ಲಾವುನ್ ಜೆಜುಚ್ಯಾ ಹೊಟ್ಟಾಂಚ್ಯಾ ಪತರ್ ವೈರ್ ಉಕ್ಲುನ್ ಹೊಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 19:29
9 ತಿಳಿವುಗಳ ಹೋಲಿಕೆ  

ಆಗ ಶುದ್ಧನಾದವನೊಬ್ಬನು ಆ ನೀರನ್ನು ಹಿಸ್ಸೋಪ್ ಗಿಡದ ಬರಲಿಂದ ಮನುಷ್ಯನು ಸತ್ತ ಆ ಡೇರೆಯ ಮೇಲೆಯೂ, ಅದರಲ್ಲಿದ್ದ ಸಾಮಾನುಗಳ ಮತ್ತು ಮನುಷ್ಯರ ಮೇಲೆಯೂ ಚಿಮಿಕಿಸಬೇಕು. ಹಾಗೆಯೇ ಎಲುಬಾಗಲಿ, ಹತವಾದವನ ಅಥವಾ ಬೇರೆ ಮನುಷ್ಯನ ಶವವಾಗಲಿ, ಸಮಾಧಿಯಾಗಲಿ ಯಾವನಿಗೆ ಸೋಂಕುವುದೋ ಅವನ ಮೇಲೆಯೂ ನೀರನ್ನು ಚಿಮಿಕಿಸಬೇಕು.


ಸಿಪಾಯಿಗಳೂ ಆತನನ್ನು ಪರಿಹಾಸ್ಯ ಮಾಡಿದರು. ಅವರು ಯೇಸುವಿನ ಹತ್ತಿರ ಬಂದು ಹುಳಿಮದ್ಯವನ್ನು ನೀಡಿ,


ಆಗ ಒಬ್ಬನು ಓಡಿಹೋಗಿ ಸ್ಪಂಜಿನಿಂದ ಹುಳಿ ದ್ರಾಕ್ಷಾರಸವನ್ನು ತುಂಬಿ ಕೋಲಿನ ತುದಿಗೆ ಸಿಕ್ಕಿಸಿ, “ಇವನನ್ನು ಶಿಲುಬೆಯಿಂದ ಬಿಡುಗಡೆ ಮಾಡಿ ಇಳಿಸುವುದಕ್ಕೆ ಎಲೀಯನು ಬರುವನೋ, ಏನೋ ಕಾದು ನೋಡೋಣ” ಎಂದು ಹೇಳಿ ಅದನ್ನು ಕುಡಿಯುವುದಕ್ಕೆ ಆತನಿಗೆ ಕೊಟ್ಟನು.


ಕೂಡಲೆ ಅವರಲ್ಲಿ ಒಬ್ಬನು ಓಡಿಹೋಗಿ ಸ್ಪಂಜನ್ನು ತಂದು ಹುಳಿರಸದಿಂದ ತುಂಬಿಸಿ ಕೋಲಿಗೆ ಸಿಕ್ಕಿಸಿ ಆತನಿಗೆ ಕುಡಿಯುವುದಕ್ಕೆ ಕೊಟ್ಟನು.


ಹಿಸ್ಸೋಪ್ ಗಿಡದ ಕಟ್ಟನ್ನು ತೆಗೆದುಕೊಂಡು ಬೋಗುಣಿಯಲ್ಲಿರುವ ರಕ್ತದಲ್ಲಿ ಅದನ್ನು ಅದ್ದಿ ಬಾಗಿಲಿನ ಮೇಲಿನ ಅಡ್ಡಪಟ್ಟಿಗೂ, ಅದರ ಪಕ್ಕದಲ್ಲಿರುವ ಎರಡು ನಿಲುವುಪಟ್ಟಿಗಳಿಗೂ ಹಚ್ಚಬೇಕು. ತರುವಾಯ ನಿಮ್ಮಲ್ಲಿ ಒಬ್ಬರೂ ಬೆಳಗಾಗುವವರೆಗೆ ಮನೆಯ ಬಾಗಿಲನ್ನು ಬಿಟ್ಟು ಹೊರಗೆ ಹೋಗಬಾರದು.


ಹಿಸ್ಸೋಪ್ ಗಿಡದ ಬರಲಿನಿಂದ ನೀರನ್ನು ಚಿಮಕಿಸಿಯೋ ಎಂಬಂತೆ ನನ್ನ ಅಶುದ್ಧತ್ವವನ್ನು ತೆಗೆದುಬಿಡು, ಆಗ ಶುದ್ಧನಾಗುವೆನು; ನನ್ನನ್ನು ತೊಳೆ, ಆಗ ಹಿಮಕ್ಕಿಂತಲೂ ಬೆಳ್ಳಗಾಗುವೆನು.


ಆತನಿಗೆ ಕಹಿ ಬೆರಸಿದ ದ್ರಾಕ್ಷಾರಸವನ್ನು ಕುಡಿಯುವುದಕ್ಕೆ ಕೊಟ್ಟರು; ಆತನು ಅದನ್ನು ರುಚಿ ನೋಡಿ ಕುಡಿಯಲಾರದೆ ಇದ್ದನು.


ಅವನು ಲೆಬನೋನಿನ ದೇವದಾರು ವೃಕ್ಷ ಮೊದಲುಗೊಂಡು ಗೋಡೆಯಲ್ಲಿ ಬೆಳೆಯುವ ಹಿಸ್ಸೋಪ್ ಗಿಡದವರೆಗಿರುವ ಎಲ್ಲಾ ವನಸ್ಪತಿಗಳನ್ನೂ, ಎಲ್ಲಾ ಪಶುಪಕ್ಷಿ, ಜಲಚರಗಳು, ಕ್ರಿಮಿಕೀಟಗಳನ್ನೂ ಕುರಿತು ಪ್ರಸ್ತಾಪಿಸ ಬಲ್ಲವನಾಗಿದ್ದನು.


ಅನಂತರ ಯೇಸು ತಿರುಗಿ ಮಹಾ ಧ್ವನಿಯಿಂದ ಕೂಗಿ ಪ್ರಾಣಬಿಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು