ಯೋಹಾನ 19:35 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201935 ಅದನ್ನು ಕಂಡವನೇ ಸಾಕ್ಷಿ ಹೇಳಿದ್ದಾನೆ. ಅವನ ಸಾಕ್ಷಿಯು ಸತ್ಯವೇ; ತಾನು ಹೇಳುವುದು ಸತ್ಯವೆಂದು ಅವನು ಬಲ್ಲನು. ನೀವು ಸಹ ನಂಬಬೇಕೆಂದು ಇದನ್ನು ಹೇಳಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)35 ಇದು ಕಣ್ಣಾರೆ ಕಂಡವನ ಹೇಳಿಕೆ. ಈ ಹೇಳಿಕೆ ಸತ್ಯವಾದುದು; ತಾನು ಸತ್ಯವನ್ನೇ ನುಡಿಯುತ್ತಿದ್ದೇನೆಂಬ ಅರಿವು ಅವನಿಗೆ ಇದೆ. ನೀವು ವಿಶ್ವಾಸಿಸಬೇಕೆಂದೇ ಆತನು ಇದನ್ನು ಹೇಳಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)35 ಅದನ್ನು ಕಂಡವನೇ ಸಾಕ್ಷಿ ಹೇಳಿದ್ದಾನೆ, ಅವನ ಸಾಕ್ಷಿ ಸತ್ಯವೇ; ತಾನು ಹೇಳುವದು ಸತ್ಯವೆಂದು ಅವನು ಬಲ್ಲನು; ನೀವು ಸಹ ನಂಬಬೇಕೆಂದು ಇದನ್ನು ಹೇಳಿದ್ದಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್35 (ಇದನ್ನು ಕಂಡವನೇ ಇದರ ಬಗ್ಗೆ ಹೇಳಿದ್ದಾನೆ. ನೀವು ಸಹ ನಂಬಬೇಕೆಂದು ಅವನು ಇದನ್ನು ತಿಳಿಸಿದ್ದಾನೆ. ಅವನು ಹೇಳುವ ಸಂಗತಿಗಳು ಸತ್ಯವಾಗಿವೆ. ತಾನು ಹೇಳುತ್ತಿರುವುದು ಸತ್ಯವೆಂದು ಅವನಿಗೆ ಗೊತ್ತಿದೆ.) ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ35 ಇದನ್ನು ಕಣ್ಣಾರೆ ಕಂಡವನೇ ಸಾಕ್ಷಿ ಕೊಟ್ಟಿದ್ದಾನೆ. ಅವನ ಸಾಕ್ಷಿಯು ಸತ್ಯವಾದದ್ದು, ನೀವು ಸಹ ನಂಬುವಂತೆ ತಾನು ಹೇಳಿರುವುದು ಸತ್ಯವೆಂದು ಅವನು ಬಲ್ಲನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್35 ಜೆ ಕೊನ್ ಹೆ ಬಗಟ್ಲಾ ತ್ಯೆನಿಚ್, ತಿಯಾ ವಿಶ್ವಾಸ್ ಕರುಸಾಟ್ನಿ ಮನುನ್ ಸಾಕ್ಷಿ ದಿಲ್ಯಾನಾಯ್ ಅನಿ ಜೆ ಕಾಯ್ ತೆನಿ ಸಾಂಗ್ಲ್ಯಾನಾಯ್ ತೆ ಖರೆ ಹಾಯ್ ಅನಿ ತೊ ಖರೆ ಬೊಲುಲಾ ಮನುನ್ ತೆಕಾ ಗೊತ್ತ್ ಹಾಯ್. ಅಧ್ಯಾಯವನ್ನು ನೋಡಿ |