Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 19:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ತರುವಾಯ ಪಿಲಾತನು ಪುನಃ ಹೊರಗೆ ಹೋಗಿ ಯೆಹೂದ್ಯರಿಗೆ, “ನನಗೆ ಅವನಲ್ಲಿ ಯಾವ ಅಪರಾಧವೂ ಕಾಣಿಸಲಿಲ್ಲವೆಂಬುದು ನಿಮಗೆ ತಿಳಿಯುವಂತೆ ಅವನನ್ನು ನಿಮ್ಮ ಬಳಿಗೆ ತರುತ್ತೇನೆ ನೋಡಿರಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಪಿಲಾತನು ಮತ್ತೆ ಹೊರಗೆ ಬಂದು ಯೆಹೂದ್ಯರಿಗೆ, “ನೋಡಿ, ನಾನು ಇವನನ್ನು ನಿಮ್ಮ ಮುಂದೆ ತರುತ್ತಿದ್ದೇನೆ. ನನಗೆ ಇವನಲ್ಲಿ ಯಾವ ಅಪರಾಧವೂ ಕಾಣಿಸುತ್ತಿಲ್ಲ ಎಂಬುದು ನಿಮಗೆ ತಿಳಿದಿರಲಿ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ತರುವಾಯ ಪಿಲಾತನು ತಿರಿಗಿ ಹೊರಗೆ ಬಂದು ಯೆಹೂದ್ಯರಿಗೆ - ನನಗೆ ಅವನಲ್ಲಿ ಯಾವ ಅಪರಾಧವೂ ಕಾಣಿಸಲಿಲ್ಲವೆಂಬದು ನಿಮಗೆ ತಿಳಿಯುವಂತೆ ಅವನನ್ನು ನಿಮ್ಮ ಬಳಿಗೆ ಹೊರಗೆ ತರುತ್ತೇನೆ, ನೋಡಿರಿ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಪಿಲಾತನು ಮತ್ತೆ ಹೊರಗೆ ಬಂದು, ಯೆಹೂದ್ಯರಿಗೆ, “ನೋಡಿ! ನಾನು ಯೇಸುವನ್ನು ನಿಮ್ಮ ಬಳಿಗೆ ತರುತ್ತಿದ್ದೇನೆ. ನನಗೆ ಆತನಲ್ಲಿ ಯಾವ ಅಪರಾಧವೂ ಕಾಣಲಿಲ್ಲ ಎಂಬುದು ನಿಮಗೆ ತಿಳಿದಿರಲಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಆಗ ಪಿಲಾತನು ತಿರುಗಿ ಹೊರಗೆ ಹೋಗಿ ಯೆಹೂದ್ಯರ ಗುಂಪಿಗೆ, “ಇಗೋ, ನಾನು ಆತನಲ್ಲಿ ಯಾವ ಅಪರಾಧವನ್ನೂ ಕಾಣಲಿಲ್ಲವೆಂದು ನೀವು ತಿಳಿದುಕೊಳ್ಳುವಂತೆ ಆತನನ್ನು ನಿಮ್ಮ ಬಳಿಗೆ ತರುತ್ತೇನೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ಪಿಲಾತ್ ಅನಿ ಎಗ್ದಾ ಭಾಯ್ರ್ ಲೊಕಾಂಚ್ಯಾ ತಾಂಡ್ಯಾಕ್ಡೆ ಗೆಲೊ, ಅನಿ, “ಬಗಾ! ಮಾಕಾ ತೆಕಾ ಶಿಕ್ಷಾ ದಿ ಸರ್ಕೆ ಕಸ್ಲಿಬಿ ಚುಕ್ ಗಾವುಕ್ನಾ ಮನುನ್ ದಾಕ್ವುಸಾಟ್ನಿ ಮಿಯಾ ತೆಕಾ ತುಮ್ಚ್ಯಾ ಇದ್ರಾಕ್ ಹಾನುಲಾ” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 19:4
16 ತಿಳಿವುಗಳ ಹೋಲಿಕೆ  

ಮುಖ್ಯಯಾಜಕರೂ ಮತ್ತು ಕಾವಲುಗಾರರು ಆತನನ್ನು ಕಾಣುತ್ತಲೇ, “ಶಿಲುಬೆಗೆ ಹಾಕಿಸು, ಶಿಲುಬೆಗೆ ಹಾಕಿಸು” ಎಂದು ಕೂಗಿದರು. ಪಿಲಾತನು ಅವರಿಗೆ, “ಬೇಕಾದರೆ ನೀವೇ ಅವನನ್ನು ತೆಗೆದುಕೊಂಡು ಹೋಗಿ ಶಿಲುಬೆಗೆ ಹಾಕಿರಿ, ನನಗೆ ಆತನಲ್ಲಿ ಯಾವ ಅಪರಾಧವೂ ಕಾಣಿಸಲಿಲ್ಲ” ಎಂದನು.


ಪಿಲಾತನು, “ಸತ್ಯ ಎಂದರೇನು?” ಎಂದನು. ಇದನ್ನು ಹೇಳಿ ಪಿಲಾತನು ಪುನಃ ಯೆಹೂದ್ಯರ ಬಳಿ ಹೊರಗೆ ಬಂದು, “ನನಗೆ ಈತನಲ್ಲಿ ಯಾವ ಅಪರಾಧವೂ ಕಾಣುತ್ತಿಲ್ಲ.


ಪಿಲಾತನು ಮುಖ್ಯಯಾಜಕರಿಗೂ, ಜನರ ಗುಂಪಿಗೂ, “ಈ ಮನುಷ್ಯನಲ್ಲಿ ನನಗೆ ಯಾವ ಅಪರಾಧವೂ ಕಾಣಿಸುತ್ತಿಲ್ಲವೆಂದು” ಹೇಳಿದನು.


ಶತಾಧಿಪತಿಯು ನಡೆದ ಸಂಗತಿಯನ್ನು ನೋಡಿ, “ಈ ಮನುಷ್ಯನು ನಿಜವಾಗಲೂ ನೀತಿವಂತನೇ” ಆಗಿದ್ದನು ಎಂದು ದೇವರನ್ನು ಕೊಂಡಾಡಿದನು.


ಪಾಪಗಳನ್ನು ನಿವಾರಣೆ ಮಾಡುವುದಕ್ಕಾಗಿ ಕ್ರಿಸ್ತನು ಪ್ರತ್ಯಕ್ಷನಾದನೆಂಬುದು ಮತ್ತು ಆತನಲ್ಲಿ ಪಾಪವಿಲ್ಲವೆಂಬುದು ನಿಮಗೆ ಗೊತ್ತು.


ಕ್ರಿಸ್ತನು ಸಹ ನೀತಿವಂತನಾಗಿದ್ದು ಅನೀತಿವಂತರಿಗೋಸ್ಕರ ಪ್ರಾಣ ಕೊಟ್ಟು ನಮ್ಮನ್ನು ದೇವರ ಬಳಿಗೆ ಸೇರಿಸುವುದಕ್ಕಾಗಿ ಒಂದೇ ಸಾರಿ ಪಾಪನಿವಾರಣೆಗೋಸ್ಕರ ಬಾಧೆಪಟ್ಟು ಸತ್ತನು. ಆತನು ಶರೀರಸಂಬಂಧವಾಗಿ ಕೊಲ್ಲಲ್ಪಟ್ಟು, ಆತ್ಮ ಸಂಬಂಧವಾಗಿ ತಿರುಗಿ ಬದುಕುವವನಾದನು.


ಆತನು ಯಾವ ಪಾಪವನ್ನೂ ಮಾಡಲಿಲ್ಲ, ಆತನ ಬಾಯಲ್ಲಿ ಯಾವ ವಂಚನೆಯೂ ಸಿಕ್ಕಲಿಲ್ಲ.


ಯೇಸು ಕ್ರಿಸ್ತನೆಂಬ ನಿಷ್ಕಳಂಕವೂ, ನಿರ್ಮಲವೂ ಆದ ಕುರಿಮರಿಯ ಅಮೂಲ್ಯವಾದ ರಕ್ತದಿಂದಲೇ ಎಂದು ನೀವು ಬಲ್ಲಿರಲ್ಲವೇ.


ಪಾಪವನ್ನೇ ಅರಿಯದ ಕ್ರಿಸ್ತ ಯೇಸುವನ್ನು ದೇವರು ನಮಗೋಸ್ಕರ ಪಾಪಸ್ವರೂಪಿಯನ್ನಾಗಿಸಿದರು. ಕ್ರಿಸ್ತ ಯೇಸುವಿನಲ್ಲಿ ನಾವು ನೀತಿವಂತರಾಗಬೇಕೆಂದು ದೇವರು ಹೀಗೆ ಮಾಡಿದರು.


ನಾವಂತೂ ನ್ಯಾಯವಾಗಿ ದಂಡನೆಯಲ್ಲಿದ್ದೇವೆ, ನಾವು ಮಾಡಿದ್ದಕ್ಕೆ ತಕ್ಕ ಪ್ರತಿಫಲವನ್ನು ಹೊಂದುತ್ತೇವೆ. ಈತನಾದರೋ ಅಂತಹದ್ದೇನನ್ನೂ ಮಾಡಲಿಲ್ಲ” ಎಂದು ಹೇಳಿ,


ಶತಾಧಿಪತಿಯು ಮತ್ತು ಅವನ ಸಂಗಡ ಯೇಸುವನ್ನು ಕಾಯುತ್ತಿದ್ದವರು ಭೂಕಂಪವನ್ನೂ, ನಡೆದ ಸಂಗತಿಗಳನ್ನೂ ನೋಡಿ ಬಹಳ ಹೆದರಿಕೊಂಡು, “ನಿಜವಾಗಿ ಈತನು ದೇವಕುಮಾರನಾಗಿದ್ದನು” ಅಂದರು.


ಆಗ ಪಿಲಾತನು ತನ್ನ ಯತ್ನ ನಡೆಯುವುದಿಲ್ಲ ಗದ್ದಲ ಮಾತ್ರ ಹೆಚ್ಚಾಗುತ್ತದೆ ಎಂದು ತಿಳಿದು ನೀರನ್ನು ತೆಗೆದುಕೊಂಡು ಜನರ ಮುಂದೆ ಕೈ ತೊಳೆದುಕೊಂಡು, “ಈ ನೀತಿವಂತನನ್ನು ಕೊಲ್ಲಿಸುವುದರಲ್ಲಿ ನಾನು ನಿರಪರಾಧಿ, ನೀವೇ ನೋಡಿಕೊಳ್ಳಿರಿ” ಎನ್ನಲು


ಇದಲ್ಲದೆ ಅವನು ನ್ಯಾಯಾಸನದಲ್ಲಿ ಕುಳಿತಿರುವಾಗ ಅವನ ಹೆಂಡತಿಯು, “ನೀನು ಆ ನೀತಿವಂತನ ಗೊಡವೆಗೆ ಹೋಗಬೇಡ; ಅವನ ದೆಸೆಯಿಂದ ಈ ಹೊತ್ತು ಕನಸಿನಲ್ಲಿ ಬಹಳ ತೊಂದರೆ ಪಟ್ಟೆನು” ಎಂದು ಅವನ ಬಳಿಗೆ ಸಂದೇಶ ಹೇಳಿಕಳುಹಿಸಿದಳು.


“ನಿರಪರಾಧಿಯನ್ನು ಮರಣಕ್ಕೆ ಒಪ್ಪಿಸಿಕೊಟ್ಟು ನಾನು ಪಾಪ ಮಾಡಿದ್ದೇನೆ” ಅಂದನು. ಅದಕ್ಕವರು, “ಅದು ನಮಗೇನು? ನೀನೇ ನೋಡಿಕೋ” ಅಂದರು.


ಇಂಥವನೇ ನಮಗೆ ಬೇಕಾಗಿರುವ ಮಹಾಯಾಜಕನು, ಈತನು ಪರಿಶುದ್ಧನೂ, ನಿರ್ದೋಷಿಯೂ, ನಿಷ್ಕಳಂಕನೂ, ಪಾಪಿಗಳಲ್ಲಿ ಸೇರದೆ ಪ್ರತ್ಯೇಕವಾಗಿರುವವನು, ಆಕಾಶಮಂಡಲಗಳಿಗಿಂತ ಉನ್ನತದಲ್ಲಿರುವವನೂ ಆಗಿರುವನು.


ಆಗ ಪಿಲಾತನು ಪುನಃ ಅರಮನೆಯೊಳಗೆ ಹೋಗಿ ಯೇಸುವನ್ನು ಕರೆದು ಆತನಿಗೆ, “ನೀನು ಯೆಹೂದ್ಯರ ಅರಸನೋ?” ಎಂದು ಕೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು