ಯೋಹಾನ 2:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಆತನು ಹಗ್ಗದಿಂದ ಚಾವಟಿ ಮಾಡಿ ಕುರಿ, ದನ ಸಹಿತ ಎಲ್ಲವನ್ನೂ, ದೇವಾಲಯದ ಹೊರಕ್ಕೆ ಅಟ್ಟಿ, ನಾಣ್ಯವಿನಿಮಯ ಮಾಡುವವರ ಮೇಜುಗಳನ್ನು ಉರುಳಿಸಿ, ನಾಣ್ಯಗಳನೆಲ್ಲ ಚೆಲ್ಲಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಅದನ್ನು ಕಂಡ ಯೇಸು, ಹಗ್ಗವನ್ನು ಚಾವಟಿಯಂತೆ ಹೆಣೆದು ಅದರಿಂದ ಅವರನ್ನೆಲ್ಲಾ ದೇವಾಲಯದಿಂದ ಹೊರಗಟ್ಟಿದರು. ದನಕುರಿಗಳನ್ನು ಓಡಿಸಿದರು. ನಾಣ್ಯ ವಿನಿಮಯ ಮಾಡುವವರ ಮೇಜುಗಳನ್ನು ಕೆಡವಿ, ಚಿಲ್ಲರೆ ಹಣವನ್ನು ಚೆಲ್ಲಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಅದರಿಂದ ಕುರಿ ದನ ಸಹಿತ ಎಲ್ಲರನ್ನು ದೇವಾಲಯದ ಹೊರಕ್ಕೆ ಅಟ್ಟಿ ಚಿನಿವಾರರ ರೊಕ್ಕವನ್ನು ಚೆಲ್ಲಿ ಮೇಜುಗಳನ್ನು ಕೆಡವಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಯೇಸು ಹಗ್ಗದ ಕೆಲವು ತುಂಡುಗಳನ್ನು ತೆಗೆದುಕೊಂಡು ಅವುಗಳಿಂದ ಒಂದು ಚಾವಟಿ ಮಾಡಿ ಆ ಜನರನ್ನು ಮತ್ತು ದನಕುರಿಗಳನ್ನು ಬಲವಂತವಾಗಿ ದೇವಾಲಯದಿಂದ ಹೊರಗಟ್ಟಿದನು. ಯೇಸು ಮೇಜುಗಳನ್ನು ಕೆಡವಿ, ಹಣ ವಿನಿಮಯ ಮಾಡುತ್ತಿದ್ದ ಜನರ ಹಣವನ್ನು ಚೆಲ್ಲಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಯೇಸು ಹಗ್ಗಗಳಿಂದ ಕೊರಡೆ ಮಾಡಿ ಕುರಿ, ದನ ಸಹಿತ ಎಲ್ಲರನ್ನೂ ದೇವಾಲಯದ ಹೊರಕ್ಕೆ ಅಟ್ಟಿ, ಹಣ ಬದಲಾಯಿಸುವವರ ನಾಣ್ಯಗಳನ್ನು ಮತ್ತು ಮೇಜುಗಳನ್ನು ಕೆಡವಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್15 ತನ್ನಾ ಜೆಜುನ್ ಬಾರಿಕ್- ಬಾರಿಕ್ ದೊರಿಯಾನಿ ಎಕ್ ಬಾರ್‍ಕೊಲ್ ಕರ್ಲ್ಯಾನ್, ಅನಿ ಸಗ್ಳ್ಯಾ ಜನಾವರಾಕ್ನಿ, ಬಕ್ರ್ಯಾಕ್ನಿ, ಗೊರಾಕ್ನಿ ಭಾಯ್ರ್ ಹಂಬಡ್ಲ್ಯಾನ್, ಪೈಸ್ಯಾಂಚೊ ಯಾವಾರ್ ಕರ್‍ತಲ್ಯಾಂಚಿ ಮೆಜಾ ಪಾಡ್ವುನ್ ಘಾಟ್ಲ್ಯಾನ್ ಅನಿ ತೆಂಚೆ ಪೈಸೆ ಮಾಳ್ಬರ್ ಕರ್ಲ್ಯಾನ್. ಅಧ್ಯಾಯವನ್ನು ನೋಡಿ |