Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 2:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಪಾರಿವಾಳ ಮಾರುವವರಿಗೆ ಸಿಟ್ಟಿನಿಂದ “ಇವುಗಳನ್ನು ಇಲ್ಲಿಂದ ತೆಗೆದುಕೊಂಡು ಹೋಗಿರಿ. ನನ್ನ ತಂದೆಯ ಮನೆಯನ್ನು ವ್ಯಾಪಾರದ ಸ್ಥಳವನ್ನಾಗಿ ಮಾಡುವುದನ್ನು ನಿಲ್ಲಿಸಿರಿ” ಎಂದು ಗದರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಪಾರಿವಾಳಗಳನ್ನು ಮಾರುತ್ತಿದ್ದವರಿಗೆ, “ಇವನ್ನು ಇಲ್ಲಿಂದ ತೆಗೆದುಕೊಂಡು ಹೊರಡಿ. ನನ್ನ ಪಿತನ ಆಲಯವನ್ನು ಸಂತೆಯನ್ನಾಗಿ ಮಾಡಬೇಡಿ,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಪಾರಿವಾಳ ಮಾರುವವರಿಗೆ - ಇವುಗಳನ್ನು ಇಲ್ಲಿಂದ ತಕ್ಕೊಂಡು ಹೋಗಿರಿ; ನನ್ನ ತಂದೆಯ ಮನೆಯನ್ನು ಸಂತೆ ಮಾಡಬೇಡಿರಿ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಪಾರಿವಾಳಗಳನ್ನು ಮಾರುತ್ತಿದ್ದವರಿಗೆ, “ಇವುಗಳನ್ನು ಹೊರಗೆ ತೆಗೆದುಕೊಂಡು ಹೋಗಿರಿ! ನನ್ನ ತಂದೆಯ ಮನೆಯನ್ನು ವ್ಯಾಪಾರ ಸ್ಥಳವನ್ನಾಗಿ ಮಾಡಬೇಡಿ!” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಯೇಸು ಪಾರಿವಾಳ ಮಾರುವವರಿಗೆ, “ಇವುಗಳನ್ನು ತೆಗೆದುಕೊಂಡು ಹೋಗಿರಿ, ನನ್ನ ತಂದೆಯ ಮನೆಯನ್ನು ವ್ಯಾಪಾರದ ಮನೆಯನ್ನಾಗಿ ಮಾಡಬೇಡಿರಿ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

16 ಅನಿ ಪಾರಿವಾಳಾ ಇಕ್ತಲ್ಯಾಕ್ನಿ, ತೆಂಕಾ ಹಿತ್ನಾ ಭಾಯ್ರ್ ಕಾಡಾ! ಮಾಜ್ಯಾ ಬಾಬಾಚೆ ಘರ್ ಬಾಜಾರ್ ಭರ್‍ತಲೊ ಜಾಗೊ ಕರುನ್ ಥವ್ನಕಾಶಿ! ಮನುನ್ ಸಾಂಗಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 2:16
17 ತಿಳಿವುಗಳ ಹೋಲಿಕೆ  

ಆತನು ಅವರಿಗೆ, “‘ನನ್ನ ಮನೆಯು ಪ್ರಾರ್ಥನಾಲಯವಾಗಿದೆ’ ಎಂದು ಬರೆದಿದೆ; ಆದರೆ ನೀವು ಅದನ್ನು ಕಳ್ಳರ ಗವಿ ಮಾಡುತ್ತಿದ್ದೀರಿ” ಎಂದು ಹೇಳಿದನು.


ನನ್ನ ಹೆಸರುಗೊಂಡಿರುವ ಈ ಆಲಯವು ನಿಮ್ಮ ದೃಷ್ಟಿಯಲ್ಲಿ ಕಳ್ಳರ ಗವಿಯಾಯಿತೋ? ಆಹಾ, ನಾನೇ, ನಾನೇ ಇದನ್ನೆಲ್ಲಾ ನೋಡಿದ್ದೇನೆ” ಎಂಬುದು ಯೆಹೋವನಾದ ನನ್ನ ನುಡಿ.


ಮತ್ತು ಆತನು ಉಪದೇಶಮಾಡಿ, “‘ನನ್ನ ಆಲಯವು ಎಲ್ಲಾ ಜನಾಂಗಗಳಿಗೂ ಪ್ರಾರ್ಥನಾಲಯವೆನಿಸಿಕೊಳ್ಳುವುದು’ ಎಂದು ಬರೆದಿದೆಯಲ್ಲಾ? ಆದರೆ ‘ನೀವು ಅದನ್ನು ಕಳ್ಳರ ಗವಿಯನ್ನಾಗಿ ಮಾಡಿದ್ದೀರಿ’” ಎಂದು ಹೇಳಿದನು.


ಆತನು ಅವರಿಗೆ, “ನೀವು ನನ್ನನ್ನು ಹುಡುಕಿದ್ದೇಕೆ? ನಾನು ನನ್ನ ತಂದೆಯ ಮನೆಯಲ್ಲಿ ಇರಬೇಕಾದವನು ಎಂದು ನಿಮಗೆ ತಿಳಿಯಲಿಲ್ಲವೇ?” ಎಂದು ಕೇಳಿದನು.


ಅವರು ದ್ರವ್ಯಾಶೆಯುಳ್ಳವರಾಗಿ ಕಲ್ಪಿತ ಮಾತುಗಳನ್ನಾಡುತ್ತಾ ನಿಮ್ಮನ್ನು ಮಾರಾಟಮಾಡಿ ಲಾಭವನ್ನು ಸಂಪಾದಿಸಬೇಕೆಂದಿರುವರು. ಧೀರ್ಘಕಾಲದಿಂದ ಅಂಥವರಿಗಿರುವಂಥ ದಂಡನೆಯ ತೀರ್ಪು ತಪ್ಪದೆ ಬರುತ್ತಿರುವುದು. ಅವರಿಗೆ ಬರುವ ನಾಶವು ತೂಕಡಿಸುವುದಿಲ್ಲ.


ಅದಕ್ಕೆ ಯೇಸು ಅವರಿಗೆ, “ನನ್ನ ತಂದೆಯು ಇಂದಿನವರೆಗೂ ಕೆಲಸ ಮಾಡುತ್ತಿದ್ದಾನೆ, ನಾನೂ ಕೆಲಸ ಮಾಡುತ್ತೇನೆ” ಎಂದು ಹೇಳಿದನು.


ಇದಲ್ಲದೆ ಬುದ್ಧಿಗೆಟ್ಟು ಸತ್ಯವಿಹೀನರಾಗಿದ್ದು ದೇವಭಕ್ತಿಯನ್ನು ಲಾಭಸಾಧನವೆಂದೆಣಿಸುವ ಈ ಮನುಷ್ಯರಲ್ಲಿ ನಿತ್ಯವಾದ ಕಚ್ಚಾಟಗಳು ಉಂಟಾಗುತ್ತವೆ.


ಯೇಸು ಆಕೆಗೆ, “ನನ್ನನ್ನು ಮುಟ್ಟಬೇಡ, ಏಕೆಂದರೆ ನಾನು ಇನ್ನೂ ತಂದೆಯ ಬಳಿಗೆ ಏರಿಹೋದವನಲ್ಲ. ಆದರೆ ನೀನು ನನ್ನ ಸಹೋದರರ ಬಳಿಗೆ ಹೋಗಿ ಅವರಿಗೆ, ನನ್ನ ತಂದೆಯೂ, ನಿಮ್ಮ ತಂದೆಯೂ, ನನ್ನ ದೇವರೂ, ನಿಮ್ಮ ದೇವರೂ ಆಗಿರುವಾತನ ಬಳಿಗೆ ನಾನು ಏರಿಹೋಗುತ್ತೇನೆ ಎಂದು ತಿಳಿಸು” ಎಂದನು.


ಅವುಗಳನ್ನು ನನಗೆ ಕೊಟ್ಟ ನನ್ನ ತಂದೆಯು ಎಲ್ಲರಿಗಿಂತ ಮಹೋನ್ನತನು. ಅವುಗಳನ್ನು ನನ್ನ ತಂದೆಯ ಕೈಯಿಂದ ಯಾರೂ ಕಸಿದುಕೊಳ್ಳಲಾರರು.


ಅದಕ್ಕೆ ಯೇಸು; “ನನಗೆ ದೆವ್ವ ಹಿಡಿದಿಲ್ಲ. ನಾನು ನನ್ನ ತಂದೆಯನ್ನು ಗೌರವಿಸುತ್ತೇನೆ, ಆದರೆ ನೀವು ನನಗೆ ಅವಮಾನಪಡಿಸುತ್ತೀದ್ದಿರಿ.


ಬಳಿಕ ಯೇಸು ದೇವಾಲಯದೊಳಗೆ ಹೋಗಿ ಅದರಲ್ಲಿ ಮಾರುವ ಕೊಳ್ಳುವ ಎಲ್ಲರನ್ನೂ ಹೊರಡಿಸಿಬಿಟ್ಟು ಹಣ ವಿನಿಮಯದಾರರ ಮೇಜುಗಳನ್ನೂ ಪಾರಿವಾಳ ಮಾರುವವರ ಕಾಲ್ಮಣೆಗಳನ್ನೂ ಕೆಡವಿಹಾಕಿದನು.


ಆದರೆ ಅವರು ಆಹ್ವಾನವನ್ನು ಅಲಕ್ಷ್ಯಮಾಡಿ, ಒಬ್ಬನು ತನ್ನ ಹೊಲಕ್ಕೆ ಒಬ್ಬನು ತನ್ನ ವ್ಯಾಪಾರಕ್ಕೆ ಹೋಗಿಬಿಟ್ಟರು;


ಆತನು ಹಗ್ಗದಿಂದ ಚಾವಟಿ ಮಾಡಿ ಕುರಿ, ದನ ಸಹಿತ ಎಲ್ಲವನ್ನೂ, ದೇವಾಲಯದ ಹೊರಕ್ಕೆ ಅಟ್ಟಿ, ನಾಣ್ಯವಿನಿಮಯ ಮಾಡುವವರ ಮೇಜುಗಳನ್ನು ಉರುಳಿಸಿ, ನಾಣ್ಯಗಳನೆಲ್ಲ ಚೆಲ್ಲಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು