Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 20:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ವಾರದ ಮೊದಲನೆಯ ದಿನದಲ್ಲಿ ಮಗ್ದಲದ ಮರಿಯಳು ಬೆಳಿಗ್ಗೆ ಇನ್ನೂ ಕತ್ತಲೆ ಇರುವಾಗಲೇ ಸಮಾಧಿಯ ಬಳಿಗೆ ಬಂದು ಸಮಾಧಿಯ ಕಲ್ಲು ಅಲ್ಲಿಂದ ಉರುಳಿ ಹೋಗಿರುವುದನ್ನು ಕಂಡಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಅಂದು ಭಾನುವಾರ, ಮುಂಜಾನೆ. ಇನ್ನೂ ಕತ್ತಲಾಗಿತ್ತು. ಮಗ್ದಲದ ಮರಿಯಳು ಸಮಾಧಿಯ ಬಳಿಗೆ ಬಂದಳು. ಸಮಾಧಿಯ ಬಾಗಿಲಿಗೆ ಮುಚ್ಚಲಾಗಿದ್ದ ಕಲ್ಲು ಅಲ್ಲಿಂದ ತೆಗೆದುಹಾಕಿರುವುದನ್ನು ಕಂಡಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ವಾರದ ಮೊದಲನೆಯ ದಿನದಲ್ಲಿ ಮಗ್ದಲದ ಮರಿಯಳು ಮುಂಜಾನೆ ಇನ್ನೂ ಕತ್ತಲೆ ಇರುವಾಗಲೇ ಸಮಾಧಿಯ ಬಳಿಗೆ ಬಂದು ಸಮಾಧಿಯ ಕಲ್ಲು ಅಲ್ಲಿಂದ ತೆಗೆದಿರುವದನ್ನು ಕಂಡಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಭಾನುವಾರದ ಮುಂಜಾನೆ ಮಗ್ದಲದ ಮರಿಯಳು ಯೇಸುವಿನ ದೇಹವಿದ್ದ ಸಮಾಧಿಯ ಬಳಿಗೆ ಬಂದಳು. ಆಗ ಇನ್ನೂ ಕತ್ತಲಿತ್ತು. ಸಮಾಧಿಯ ಬಾಗಿಲಿಗೆ ಮುಚ್ಚಿದ್ದ ದೊಡ್ಡ ಕಲ್ಲು ಅಲ್ಲಿಂದ ತೆಗೆದುಹಾಕಲ್ಪಟ್ಟಿರುವುದನ್ನು ಕಂಡ ಮರಿಯಳು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ವಾರದ ಮೊದಲನೆಯ ದಿನದಲ್ಲಿ ಮುಂಜಾನೆ ಇನ್ನೂ ಕತ್ತಲಿರುವಾಗಲೇ ಮಗ್ದಲದ ಮರಿಯಳು ಸಮಾಧಿಯ ಬಳಿಗೆ ಬಂದು ಸಮಾಧಿಯಿಂದ ಬಂಡೆ ತೆಗೆದು ಹಾಕಿರುವುದನ್ನು ಕಂಡಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ಆಯ್ತಾರ್‍ಚೆ ಸಕ್ಕಾಳಿ ಫಿಡೆ, ಅಜುನ್ ಉಲ್ಲೊ ಕಾಳೊಕ್ ಹೊತ್ತೊ, ತನ್ನಾ ಮರಿ ಮಾಗ್ದೆಲಿನ್ ಸಮಾದಿಕ್ಡೆ ಯೆಲಿ, ಅನಿ ಸಮಾದಿಚ್ಯಾ ದಾರಾರ್ ಲಾವಲ್ಲೊ ಗುಂಡೊ ಕಡೆಕ್ ಸರಕಲ್ಲೊ ತೆನಿ ಬಗಟ್ಲಿನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 20:1
19 ತಿಳಿವುಗಳ ಹೋಲಿಕೆ  

ವಾರದ ಮೊದಲನೆಯ ದಿನ ಬೆಳಿಗ್ಗೆ ಯೇಸು ಜೀವಿತನಾಗಿ ಎದ್ದ ಮೇಲೆ ಮಗ್ದಲದ ಮರಿಯಳಿಗೆ ಮೊದಲು ಕಾಣಿಸಿಕೊಂಡನು. ಆತನು ಆಕೆಯನ್ನು ಏಳು ದೆವ್ವಗಳಿಂದ ಬಿಡಿಸಿದ್ದನು.


ಬಂಡೆಯಲ್ಲಿ ತೋಡಿದ್ದ ಹೊಸ ಸಮಾಧಿಯಲ್ಲಿ ಇಟ್ಟು ಸಮಾಧಿಯ ಬಾಗಿಲಿಗೆ ದೊಡ್ಡ ಕಲ್ಲನ್ನು ಉರುಳಿಸಿ ಹೊರಟುಹೋದನು.


ಯೋಸೇಫನು ನಾರುಮಡಿಯನ್ನು ಕೊಂಡುತಂದು ಯೇಸುವನ್ನು ಶಿಲುಬೆಯಿಂದ ಇಳಿಸಿ ನಾರುಮಡಿಯಲ್ಲಿ ಸುತ್ತಿ ಬಂಡೆಯಲ್ಲಿ ಕೊರೆದಿದ್ದ ಸಮಾಧಿಯಲ್ಲಿಟ್ಟು ಸಮಾಧಿಯ ಬಾಗಿಲಿಗೆ ಕಲ್ಲನ್ನು ಉರುಳಿಸಿದನು.


ಎಂಟು ದಿನಗಳಾದ ಮೇಲೆ ಆತನ ಶಿಷ್ಯರು ಪುನಃ ಒಳಗಿದ್ದಾಗ ತೋಮನೂ ಅವರ ಜೊತೆ ಇದ್ದನು. ಬಾಗಿಲುಗಳು ಮುಚ್ಚಿದ್ದವು ಆಗ ಯೇಸು ಬಂದು ನಡುವೆ ನಿಂತು ನಿಮಗೆ “ಸಮಾಧಾನವಾಗಲಿ ಎಂದನು”


ಯೇಸುವಿನ ಶಿಲುಬೆಯ ಬಳಿಯಲ್ಲಿ ಆತನ ತಾಯಿಯೂ, ಆತನ ತಾಯಿಯ ತಂಗಿಯೂ, ಕ್ಲೋಪನ ಹೆಂಡತಿಯಾದ ಮರಿಯಳೂ, ಮಗ್ದಲದ ಮರಿಯಳೂ ನಿಂತಿದ್ದರು.


ನಾನು ಕರ್ತನ ದಿನದಲ್ಲಿ ದೇವರಾತ್ಮವಶನಾಗಿರಲು, ನನ್ನ ಬೆನ್ನ ಹಿಂದೆ ಮಹಾಶಬ್ದವೊಂದು ಕೇಳಿಸಿತು. ಅದು ತುತ್ತೂರಿಯ ನಾದದಂತಿತ್ತು.


ಆದಕಾರಣ ಮೂರನೆಯ ದಿನದ ತನಕ ಸಮಾಧಿಯನ್ನು ಭದ್ರಮಾಡಿ ಕಾಯುವುದಕ್ಕೆ ಅಪ್ಪಣೆಕೊಡಬೇಕು; ಇಲ್ಲದಿದ್ದರೆ ಅವನ ಶಿಷ್ಯರು ಬಂದು ಅವನನ್ನು ಕದ್ದುಕೊಂಡು ಹೋಗಿ ಸತ್ತವನು ಬದುಕಿ ಬಂದಿದ್ದಾನೆ” ಎಂದು ಹೇಳಾರು; ಆಗ ಮೊದಲನೆಯ ವಂಚನೆಗಿಂತ ಕಡೆಯ ವಂಚನೆಯು ಕೆಡುಕಾದೀತು ಅಂದರು.


ನಿಮ್ಮಲ್ಲಿ ಪ್ರತಿಯೊಬ್ಬನು ತನಗೆ ಬಂದಂಥ ಸಂಪಾದನೆಯಲ್ಲಿ ಸಾಧ್ಯವಾದಷ್ಟನ್ನು ವಾರದ ಮೊದಲನೆಯ ದಿನದಲ್ಲಿ ಸಂಗ್ರಹಿಸಿ ತನ್ನ ಮನೆಯಲ್ಲಿಟ್ಟುಕೊಂಡಿರಬೇಕು. ಇದರಿಂದ ನಾನು ಬಂದಾಗ ಹಣ ಸಂಗ್ರಹಣೆ ಮಾಡುವ ಅಗತ್ಯವಿರುವುದಿಲ್ಲ.


ವಾರದ ಮೊದಲನೆಯ ದಿನದಲ್ಲಿ ನಾವು ರೊಟ್ಟಿ ಮುರಿಯುವ ನಿಯಮಕ್ಕಾಗಿ ಸೇರಿಬಂದಾಗ ಪೌಲನು ಅಲ್ಲಿ ನೆರೆದಂತಹ ವಿಶ್ವಾಸಿಗಳಿಗೆ ಬೋಧನೆಮಾಡಿದನು. ಮರುದಿನ ಹೊರಡಬೇಕೆಂದಿದ್ದ ಪೌಲನು ಅವರಿಗೆ ಬೋಧಿಸುತ್ತಾ ಮಧ್ಯರಾತ್ರಿಯವರೆಗೂ ಉಪನ್ಯಾಸವನ್ನು ನೀಡಿದನು.


ಇವರಲ್ಲಿ ಮಗ್ದಲದ ಮರಿಯಳೂ ಯಾಕೋಬ ಯೋಸೆಯರ ತಾಯಿಯಾದ ಮರಿಯಳೂ ಜೆಬೆದಾಯನ ಮಕ್ಕಳ ತಾಯಿಯೂ ಇದ್ದರು.


ಅವರು ಹೊರಟು ಕಾವಲುಗಾರರನ್ನು ಇರಿಸಿ ಆ ಕಲ್ಲಿಗೆ ಮುದ್ರೆಹಾಕಿ ಸಮಾಧಿಯನ್ನು ಸುಭದ್ರಮಾಡಿದರು.


ಸಬ್ಬತ್ ದಿನ ಆದ ಮೇಲೆ ವಾರದ ಮೊದಲನೆಯ ದಿನ ಬೆಳಗಾಗುತ್ತಿರುವಾಗಲೇ ಮಗ್ದಲದ ಮರಿಯಳೂ ಮತ್ತು ಆ ಬೇರೆ ಮರಿಯಳೂ ಸಮಾಧಿಯನ್ನು ನೋಡಲು ಬಂದರು.


ಇಗೋ, ಮಹಾ ಭೂಕಂಪವುಂಟಾಯಿತು, ಕರ್ತನ ದೂತನು ಆಕಾಶದಿಂದ ಇಳಿದು ಬಂದು ಆ ಕಲ್ಲನ್ನು ಬಾಗಿಲಿನಿಂದ ಉರುಳಿಸಿ ಅದರ ಮೇಲೆ ಕುಳಿತುಕೊಂಡಿದ್ದನು.


ಯೇಸು ತಿರುಗಿ ತನ್ನ ಮನದಲ್ಲಿ ನೊಂದುಕೊಳ್ಳುತ್ತಾ ಸಮಾಧಿಯ ಬಳಿಗೆ ಬಂದನು. ಅದು ಒಂದು ಗವಿಯಾಗಿತ್ತು, ಅದರ ಬಾಯಿಗೆ ಒಂದು ಕಲ್ಲನ್ನು ಮುಚ್ಚಿಡಲಾಗಿತ್ತು.


ಆಗ ಅವರು ಕಲ್ಲನ್ನು ತೆಗೆದು ಹಾಕಿದರು. ಯೇಸು ಕಣ್ಣೆತ್ತಿ ಮೇಲಕ್ಕೆ ನೋಡಿ, “ತಂದೆಯೇ ನೀನು ನನಗೆ ಕಿವಿಗೊಟ್ಟಿದ್ದಕ್ಕಾಗಿ ನಿನಗೆ ಕೃತಜ್ಞತೆಯನ್ನು ಸಲ್ಲಿಸುತ್ತೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು