Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 20:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಯೇಸು ಆಕೆಗೆ, “ಮರಿಯಳೇ,” ಎಂದು ಹೇಳಲು, ಆಕೆಯು ಅವನ ಕಡೆಗೆ ತಿರುಗಿ ಇಬ್ರಿಯ ಭಾಷೆಯಲ್ಲಿ ಆತನಿಗೆ, “ರಬ್ಬೂನಿ” ಎಂದಳು. ಹಾಗೆಂದರೆ ಗುರುವೇ ಎಂದರ್ಥ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಆಗ ಯೇಸು, “ಮರಿಯಾ” ಎಂದು ಹೆಸರಿಡಿದು ಕರೆದರು. ಆಕೆ ಹಿಂದಿರುಗಿ ನೋಡಿ, “ರಬ್ಬೂನಿ” ಎಂದಳು. (ಯೆಹೂದ್ಯರ ಭಾಷೆಯಲ್ಲಿ ಹಾಗೆಂದರೆ “ಗುರುದೇವಾ” ಎಂದರ್ಥ).

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಯೇಸು ಆಕೆಗೆ - ಮರಿಯಳೇ, ಎಂದು ಹೇಳಿದನು. ಆಕೆ ತಿರುಗಿಕೊಂಡು ಇಬ್ರಿಯ ಮಾತಿನಲ್ಲಿ - ರಬ್ಬೂನಿ, ಅಂದಳು. (ರಬ್ಬೂನಿ ಅಂದರೆ ಗುರುವೇ ಎಂದು ಅರ್ಥ).

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಯೇಸು ಆಕೆಗೆ, “ಮರಿಯಳೇ” ಎಂದನು. ಮರಿಯಳು ಯೇಸುವಿನ ಕಡೆಗೆ ತಿರುಗಿ, ಯೆಹೂದ್ಯರ ಭಾಷೆಯಲ್ಲಿ “ರಬ್ಬೂನಿ” ಎಂದಳು. (ರಬ್ಬೂನಿ ಎಂದರೆ “ಗುರು”.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಯೇಸು ಆಕೆಗೆ, “ಮರಿಯಳೇ,” ಎಂದು ಹೇಳಲು, ಆಕೆಯು ತಿರುಗಿಕೊಂಡು ಹೀಬ್ರೂ ಭಾಷೆಯಲ್ಲಿ ಅವರಿಗೆ, “ರಬ್ಬೂನಿ!” ಎಂದಳು. ಹಾಗೆಂದರೆ “ಬೋಧಕನೇ” ಎಂದರ್ಥ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

16 ಜೆಜುನ್ ತಿಕಾ,“ಮರಿ” ಮಟ್ಲ್ಯಾನ್. ತನ್ನಾ ತಿ ತೆಚೆಕ್ಡೆ ಪರತ್ಲಿ, ಅನಿ, ಹೆಬ್ರೆವ್ ಬಾಶೆತ್, “ರಬ್ಬೊನಿ” ಮಟ್ಲಿನ್. ಅಶೆ ಮಟ್ಲ್ಯಾರ್ ಗುರುಜಿ ಮನುನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 20:16
26 ತಿಳಿವುಗಳ ಹೋಲಿಕೆ  

ಬಾಗಿಲು ಕಾಯುವವನು ಅವನಿಗೆ ಬಾಗಿಲನ್ನು ತೆರೆಯುತ್ತಾನೆ; ಕುರಿಗಳು ಅವನ ಸ್ವರಕ್ಕೆ ಕಿವಿಗೊಡುತ್ತವೆ. ಅವನು ತನ್ನ ಸ್ವಂತ ಕುರಿಗಳ ಹೆಸರು ಹೇಳಿ ಕರೆದು ಅವುಗಳನ್ನು ಹೊರಗೆ ಬಿಡುತ್ತಾನೆ.


ಯೇಸು ಹಿಂತಿರುಗಿ ತನ್ನನ್ನು ಹಿಂಬಾಲಿಸುತ್ತಿದ್ದ ಅವರನ್ನು ನೋಡಿ, “ನಿಮಗೆ ಏನು ಬೇಕು?” ಎಂದು ಕೇಳಲು ಅವರು, “ರಬ್ಬಿಯೇ, (ಅಂದರೆ ಗುರುವೇ) ನೀನು ವಾಸಿಸುವುದು ಎಲ್ಲಿ?” ಎಂದು ಕೇಳಿದರು.


ಒಂದು ದಿನ ಮಧ್ಯಾಹ್ನ ಸುಮಾರು ಮೂರು ಘಂಟೆಗೆ ಅವನಿಗೆ ಒಂದು ದರ್ಶನ ಉಂಟಾಗಿ ಒಬ್ಬ ದೇವದೂತನು ತನ್ನ ಬಳಿಗೆ ಬಂದು; “ಕೊರ್ನೆಲ್ಯನೇ” ಎಂದು ಕರೆಯುವುದನ್ನು ಅವನು ಪ್ರತ್ಯಕ್ಷವಾಗಿ ಕಂಡನು.


ಅವನು ನೆಲಕ್ಕೆ ಬಿದ್ದನು. ಆಗ, “ಸೌಲನೇ, ಸೌಲನೇ, ನನ್ನನ್ನು ಏಕೆ ಹಿಂಸೆಪಡಿಸುತ್ತೀ?” ಎಂದು ಹೇಳುವ ವಾಣಿಯನ್ನು ಕೇಳಿದನು.


ಮತ್ತು ಸಮುದ್ರದ ಆಚೆಕಡೆಯಲ್ಲಿ ಆತನನ್ನು ಕಂಡು “ಗುರುವೇ, ಯಾವಾಗ ಇಲ್ಲಿಗೆ ಬಂದಿ?” ಎಂದು ಕೇಳಿದರು.


ಈಗಲಾದರೋ, ಯಾಕೋಬನ ವಂಶವೇ, ಇಸ್ರಾಯೇಲ್ ಸಂತಾನವೇ, ನಿನ್ನನ್ನು ಸೃಷ್ಟಿಸಿ ರೂಪಿಸಿದವನಾದ ಯೆಹೋವನು ಹೀಗೆನ್ನುತ್ತಾನೆ, “ಭಯಪಡಬೇಡ, ನಾನು ನಿನ್ನನ್ನು ವಿಮೋಚಿಸಿದೆನಲ್ಲಾ, ನಿನ್ನ ಹೆಸರು ಹಿಡಿದು ಕರೆದೆನಲ್ಲಾ, ನೀನು ನನ್ನವನೇ.


ಆಗ ಯೆಹೋವನ ದೂತನು ಆಕಾಶದೊಳಗಿನಿಂದ, “ಅಬ್ರಹಾಮನೇ, ಅಬ್ರಹಾಮನೇ” ಎಂದು ಅವನನ್ನು ಕರೆದನು. ಅದಕ್ಕೆ ಅಬ್ರಹಾಮನು, “ಇಗೋ, ಇದ್ದೇನೆ” ಎಂದನು.


ತೋಮನು ಆತನಿಗೆ, “ನನ್ನ ಕರ್ತನೇ, ನನ್ನ ದೇವರೇ” ಎಂದು ಹೇಳಿದನು.


ನೀವು ನನ್ನನ್ನು ಗುರುವೆಂದೂ ಮತ್ತು ಕರ್ತನೆಂದೂ ಕರೆಯುತ್ತೀರಿ. ನೀವು ಹೇಳುವುದು ಸರಿ. ಹೌದು, ನಾನು ಅಂಥವನೇ ಆಗಿದ್ದೇನೆ.


ಇದನ್ನು ಹೇಳಿ ಆಕೆ ಹೋಗಿ ತನ್ನ ತಂಗಿಯಾದ ಮರಿಯಳನ್ನು ಗುಪ್ತವಾಗಿ ಕರೆದು, “ಗುರುವು ಬಂದಿದ್ದಾರೆ, ನಿನ್ನನ್ನು ಕರೆಯುತ್ತಿದ್ದಾರೆ” ಎಂದಳು.


ಅಲ್ಲಿ ಕುರಿಬಾಗಿಲು ಎಂಬ ಸ್ಥಳದ ಬಳಿ ಐದು ಮಂಟಪಗಳಿಂದ ಕೂಡಿದ ಒಂದು ಕೊಳವಿದೆ. ಅದನ್ನು ಇಬ್ರಿಯ ಭಾಷೆಯಲ್ಲಿ ಬೇತ್ಸಥಾ ಎಂದು ಕರೆಯುತ್ತಾರೆ.


ಅವನು ರಾತ್ರಿಯಲ್ಲಿ ಯೇಸುವಿನ ಬಳಿಗೆ ಬಂದು ಆತನಿಗೆ, “ಗುರುವೇ, ನೀನು ದೇವರ ಬಳಿಯಿಂದ ಬಂದ ಬೋಧಕನೆಂದು ನಾವು ಬಲ್ಲೆವು. ನೀನು ಮಾಡುವಂಥ ಈ ಸೂಚಕ ಕಾರ್ಯಗಳನ್ನು ದೇವರ ಸಹಾಯವಿಲ್ಲದೆ ಮಾಡುವುದು ಯಾರಿಂದಲೂ ಆಗದು” ಎಂದು ಹೇಳಿದನು.


ಅದಕ್ಕೆ ನತಾನಯೇಲನು, “ಗುರುವೇ, ನೀನು ದೇವಕುಮಾರನು! ನೀನೇ ಇಸ್ರಾಯೇಲಿನ ಅರಸನು” ಎಂದನು.


ಆದರೆ, ಕರ್ತನು ಆಕೆಗೆ, “ಮಾರ್ಥಳೇ, ಮಾರ್ಥಳೇ, ನೀನು ಅನೇಕ ವಿಷಯಗಳಿಗಾಗಿ ಚಿಂತೆಯಲ್ಲಿಯೂ ಗಡಿಬಿಡಿಯಲ್ಲಿಯೂ ಸಿಕ್ಕಿಕೊಂಡಿದ್ದೀ.


ಕೂಡಲೆ ಯೇಸು ಮಾತನಾಡಿ ಅವರಿಗೆ, “ಧೈರ್ಯವಾಗಿರಿ ನಾನೇ ಭಯಪಡಬೇಡಿರಿ” ಎಂದು ಹೇಳಿದನು.


ನಾನು ನಿದ್ರೆಗೊಂಡಿದ್ದರೂ ನನ್ನ ಹೃದಯವು ಎಚ್ಚರಗೊಂಡಿತ್ತು. ಇಗೋ, ಎನ್ನಿನಿಯನು ಕದ ತಟ್ಟಿ, “ಪ್ರಿಯಳೇ, ಕಾಂತಳೇ, ಪಾರಿವಾಳವೇ, ನಿರ್ಮಲೆಯೇ, ಬಾಗಿಲು ತೆಗೆ! ನನ್ನ ತಲೆಯ ಮೇಲೆಲ್ಲಾ ಇಬ್ಬನಿಯು ಬಿದ್ದಿದೆ, ನನ್ನ ಕೂದಲು ರಾತ್ರಿ ಬೀಳುವ ಹನಿಗಳಿಂದ ತುಂಬಿದೆ” ಅಂದನು.


ಅವರನ್ನು ಬಿಟ್ಟ ತುಸು ಹೊತ್ತಿನೊಳಗೆ ನನ್ನ ಪ್ರಾಣಪ್ರಿಯನನ್ನು ಕಂಡುಕೊಂಡು ತಾಯಿಯ ಮನೆಗೆ, ನನ್ನನ್ನು ಹೆತ್ತವಳ ಕೋಣೆಗೆ ಸೇರುವ ತನಕ, ಬಿಡದೆ ಹಿಡಿದುಕೊಂಡೇ ಹೋದೆನು.


ಯೆಹೋವನು ಪ್ರತ್ಯಕ್ಷನಾಗಿ ಮುಂಚಿನಂತೆಯೇ “ಸಮುವೇಲನೇ, ಸಮುವೇಲನೇ” ಅಂದನು. ಸಮುವೇಲನು, “ಅಪ್ಪಣೆಯಾಗಲಿ, ನಿನ್ನ ದಾಸನು ಕೇಳಿಸಿಕೊಳ್ಳುತ್ತಿದ್ದಾನೆ” ಎಂದನು.


ಯೆಹೋವನು ತಿರುಗಿ, “ಸಮುವೇಲನೇ” ಎಂದು ಕರೆದನು. ಸಮುವೇಲನು ಕೂಡಲೆ ಎದ್ದು ಏಲಿಯ ಬಳಿಗೆ ಹೋಗಿ, “ಇಗೋ, ಬಂದಿದ್ದೇನೆ; ನೀನು ನನ್ನನ್ನು ಕರೆದೆಯಲ್ಲಾ” ಅನ್ನಲು ಅವನು, “ನನ್ನ ಮಗನೇ, ನಾನು ನಿನ್ನನ್ನು ಕರೆಯಲಿಲ್ಲಾ, ಹೋಗಿ ಮಲಗಿಕೋ” ಎಂದನು.


ಯೆಹೋವನು ಮೋಶೆಗೆ, “ನಿನಗೆ ನನ್ನ ದಯೆಯು ದೊರಕಿರುವುದರಿಂದಲೂ, ನಾನು ನಿನ್ನ ಹೆಸರನ್ನು ಬಲ್ಲವನಾಗಿರುವುದರಿಂದಲೂ ನಿನಗೋಸ್ಕರ ಈ ಕಾರ್ಯವನ್ನು ಮಾಡುವೆನು” ಎಂದು ಹೇಳಿದನು.


ಅವನು ಅದನ್ನು ನೋಡುವುದಕ್ಕೆ ಹತ್ತಿರ ಬರುವುದನ್ನು ಯೆಹೋವನು ಕಂಡನು. ಆಗ ದೇವರು ಆ ಪೊದೆಯೊಳಗಿಂದ “ಮೋಶೆಯೇ, ಮೋಶೆಯೇ” ಎಂದು ಅವನನ್ನು ಕರೆದನು. ಅದಕ್ಕೆ ಮೋಶೆ, “ಇಗೋ ಇದ್ದೇನೆ” ಅಂದನು.


“ನಾನು ಸ್ವತಃ ನಿಮ್ಮ ಸಂಗಡ ಮಾತನಾಡಿದ್ದೆನಲ್ಲಾ. ಅದಕ್ಕೆ ನೀವೇ ಸಾಕ್ಷಿ. ನನ್ನ ಒಡಹುಟ್ಟಿದವನಾದ ಬೆನ್ಯಾಮೀನನೂ ಸಾಕ್ಷಿ.


ಈ ಸಂಗತಿಗಳು ಆದ ಮೇಲೆ ದೇವರು ಅಬ್ರಹಾಮನನ್ನು ಪರೀಕ್ಷಿಸಿದನು.


ಯೇಸು ಅವನನ್ನು, “ನಾನು ನಿನಗೆ ಏನು ಮಾಡಬೇಕೆಂದು ಕೋರುತ್ತೀ” ಎಂದು ಕೇಳಲು ಆ ಕುರುಡನು, “ಗುರುವೇ, ನನಗೆ ಕಣ್ಣಿನ ದೃಷ್ಟಿ ಬರುವಂತೆ ಮಾಡಬೇಕು” ಅಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು