Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 20:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಯೇಸು ಆಕೆಗೆ, “ನನ್ನನ್ನು ಮುಟ್ಟಬೇಡ, ಏಕೆಂದರೆ ನಾನು ಇನ್ನೂ ತಂದೆಯ ಬಳಿಗೆ ಏರಿಹೋದವನಲ್ಲ. ಆದರೆ ನೀನು ನನ್ನ ಸಹೋದರರ ಬಳಿಗೆ ಹೋಗಿ ಅವರಿಗೆ, ನನ್ನ ತಂದೆಯೂ, ನಿಮ್ಮ ತಂದೆಯೂ, ನನ್ನ ದೇವರೂ, ನಿಮ್ಮ ದೇವರೂ ಆಗಿರುವಾತನ ಬಳಿಗೆ ನಾನು ಏರಿಹೋಗುತ್ತೇನೆ ಎಂದು ತಿಳಿಸು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಯೇಸು ಆಕೆಗೆ, “ನನ್ನನ್ನು ಹಿಡಿದುಕೊಂಡಿರಬೇಡ, ನಾನು ಇನ್ನೂ ಪಿತನ ಬಳಿಗೆ ಏರಿಹೋಗಿಲ್ಲ. ನೀನು ನನ್ನ ಸಹೋದರರ ಬಳಿಗೆ ಹೋಗಿ ನನ್ನ ಪಿತನೂ ನಿಮ್ಮ ಪಿತನೂ ನನ್ನ ದೇವರೂ ನಿಮ್ಮ ದೇವರೂ ಆಗಿರುವಾತನಲ್ಲಿಗೆ ನಾನು ಏರಿಹೋಗುತ್ತೇನೆಂದು ತಿಳಿಸು,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಯೇಸು ಆಕೆಗೆ - ನನ್ನನ್ನು ಹಿಡಿಯಬೇಡ; ಯಾಕಂದರೆ ನಾನು ಇನ್ನೂ ತಂದೆಯ ಬಳಿಗೆ ಏರಿಹೋದವನಲ್ಲ. ನೀನು ನನ್ನ ಸಹೋದರರ ಬಳಿಗೆ ಹೋಗಿ - ನಾನು ನನ್ನ ತಂದೆಯೂ ನಿಮ್ಮ ತಂದೆಯೂ ನನ್ನ ದೇವರೂ ನಿಮ್ಮ ದೇವರೂ ಆಗಿರುವಾತನ ಬಳಿಗೆ ಏರಿಹೋಗುತ್ತೇನೆ ಎಂದು ಅವರಿಗೆ ಹೇಳು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಯೇಸು ಆಕೆಗೆ, “ನನ್ನನ್ನು ಮುಟ್ಟಬೇಡ. ನಾನು ತಂದೆಯ ಬಳಿಗೆ ಇನ್ನೂ ಹಿಂತಿರುಗಿ ಹೋಗಿಲ್ಲ. ಆದರೆ ನೀನು ನನ್ನ ಸಹೋದರರ (ಶಿಷ್ಯರ) ಬಳಿಗೆ ಹೋಗಿ, ‘ನನ್ನ ತಂದೆಯೂ ನಿಮ್ಮ ತಂದೆಯೂ ನನ್ನ ದೇವರೂ ನಿಮ್ಮ ದೇವರೂ ಆಗಿರುವಾತನ ಬಳಿಗೆ ನಾನು ಹಿಂತಿರುಗಿ ಹೋಗುತ್ತಿದ್ದೇನೆ’ ಎಂಬುದಾಗಿ ಹೇಳು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಯೇಸು ಆಕೆಗೆ, “ನನ್ನನ್ನು ಹಿಡಿಯಬೇಡ, ಏಕೆಂದರೆ ನಾನು ಇನ್ನೂ ತಂದೆಯ ಬಳಿಗೆ ಹೋಗಲಿಲ್ಲ. ಆದರೆ ನೀನು ನನ್ನ ಸಹೋದರರ ಬಳಿಗೆ ಹೋಗಿ ಅವರಿಗೆ, ‘ನನ್ನ ತಂದೆಯೂ ನಿಮ್ಮ ತಂದೆಯೂ ನನ್ನ ದೇವರೂ ನಿಮ್ಮ ದೇವರೂ ಆಗಿರುವ ತಂದೆಯ ಬಳಿಗೆ ನಾನು ಹೋಗುತ್ತೇನೆ’ ಎಂದು ತಿಳಿಸು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 ತನ್ನಾ ಜೆಜುನ್ ತಿಕಾ, “ಮಾಕಾ ಧರುನ್ ಘೆವ್ನ್ ರಾವ್ನಕ್ಕೊ, ಮಿಯಾ ಅಜುನ್ ಮಾಜ್ಯಾ ಬಾಬಾಕ್ಡೆ ಫಾಟಿ ಪರ್ತುನ್ ಜಾವ್ಕ್ ನಾ, ಖರೆ ಜಾ ಅನಿ ಮಾಜ್ಯಾ ಭಾವಾಕ್ನಿ ಮಿಯಾ ಮಾಜ್ಯಾ ಬಾಬಾ ಅನಿ ತುಮ್ಚ್ಯಾ ಬಾಬಾಕ್ಡೆ, ಮಾಜ್ಯಾ ದೆವಾ ಅನಿ ತುಮ್ಚ್ಯಾ ದೆವಾಕ್ಡೆ ಪರ್ತುನ್ ಜಾವ್ಕ್ ಲಾಗ್ಲಾ ಮನುನ್ ಸಾಂಗ್” ಮನುನ್ ಸಾಂಗಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 20:17
48 ತಿಳಿವುಗಳ ಹೋಲಿಕೆ  

ನಾನು ತಂದೆಯ ಬಳಿಯಿಂದ ಹೊರಟು ಈ ಲೋಕಕ್ಕೆ ಬಂದಿದ್ದೇನೆ, ಪುನಃ ಈ ಲೋಕವನ್ನು ಬಿಟ್ಟು ತಂದೆಯ ಬಳಿಗೆ ಹೋಗುತ್ತೇನೆ” ಎಂದನು.


ನಮ್ಮ ಕರ್ತನಾದ ಯೇಸು ಕ್ರಿಸ್ತನ ತಂದೆಯೂ ದೇವರೂ ಆಗಿರುವಾತನಿಗೆ ಸ್ತೋತ್ರವಾಗಲಿ. ಆತನು ಯೇಸು ಕ್ರಿಸ್ತನನ್ನು ಸತ್ತವರೊಳಗಿಂದ ಎಬ್ಬಿಸಿದ್ದರಲ್ಲಿ, ತನ್ನ ಮಹಾ ಕರುಣಾನುಸಾರವಾಗಿ ನಮ್ಮನ್ನು ತಿರುಗಿ ಜೀವಿಸುವಂತೆ ಮಾಡಿ ಜೀವಕರವಾದ ನಿರೀಕ್ಷೆಯನ್ನು ನಮ್ಮಲ್ಲಿ ಹುಟ್ಟಿಸಿ,


ಹಾಗೆ ನೀವೆಲ್ಲರೂ ಕ್ರಿಸ್ತ ಯೇಸುವಿನಲ್ಲಿಟ್ಟಿರುವ ನಂಬಿಕೆಯ ಮೂಲಕ ದೇವರ ಮಕ್ಕಳಾಗಿದ್ದೀರಿ.


ಇನ್ನು ಮೇಲೆ ನಾನು ಲೋಕದಲ್ಲಿ ಇರುವುದಿಲ್ಲ, ಇವರಾದರೋ ಲೋಕದಲ್ಲಿ ಇರುತ್ತಾರೆ. ನಾನು ನಿನ್ನ ಬಳಿಗೆ ಬರುತ್ತೇನೆ. ಪರಿಶುದ್ಧನಾದ ತಂದೆಯೇ, ನಾವು ಒಂದಾಗಿರುವ ಹಾಗೆ ಇವರೂ ಒಂದಾಗಿರಬೇಕೆಂದು, ನೀನು ನನಗೆ ಕೊಟ್ಟ ನಿನ್ನ ಹೆಸರಿನಲ್ಲಿ ಇವರನ್ನು ಕಾಪಾಡು.


ಪ್ರಿಯರೇ, ನಾವು ಈಗ ದೇವರ ಮಕ್ಕಳಾಗಿದ್ದೇವೆ. ಮುಂದೆ ನಾವು ಎಂಥವರಾಗಿರುತ್ತೆವೋ ಎಂಬುದು ಇನ್ನೂ ತಿಳಿದಿಲ್ಲ. ಆದರೆ ಕ್ರಿಸ್ತನು ಪ್ರತ್ಯಕ್ಷನಾಗುವಾಗ ನಾವು ಆತನ ಹಾಗಿರುವೆವೆಂದು ಬಲ್ಲೆವು. ಏಕೆಂದರೆ ಆತನಿರುವ ಪ್ರಕಾರವೇ ಆತನನ್ನು ನೋಡುವೆವು.


ಯೇಸು ಅವನಿಗೆ, “ನಾನೇ ಮಾರ್ಗವೂ, ಸತ್ಯವೂ ಮತ್ತು ಜೀವವೂ ಆಗಿದ್ದೇನೆ. ನನ್ನ ಮೂಲಕವಲ್ಲದೆ ಯಾರೂ ತಂದೆಯ ಬಳಿಗೆ ಬರಲಾರರು.


ಕರ್ತನಾದ ಯೇಸು ಅವರೊಂದಿಗೆ ಮಾತನಾಡಿದ ಮೇಲೆ ಪರಲೋಕಕ್ಕೆ ಒಯ್ಯಲ್ಪಟ್ಟು ದೇವರ ಬಲಗಡೆಯಲ್ಲಿ ಆಸನಾರೂಢನಾದನು.


ನೀನು ಜಯಿಸಿದ ಬಹು ಜನರನ್ನು ಸೆರೆಹಿಡಿದುಕೊಂಡು ಹೋಗಿ, ನಿನಗೆ ದ್ರೋಹಿಗಳಾದ ಮನುಷ್ಯರಿಂದಲೇ ಕಪ್ಪಗಳನ್ನು ಸಂಗ್ರಹಿಸಿ, ದೇವನಾದ ಯಾಹುವು ಅಲ್ಲೇ ವಾಸಿಸುವಂತೆ, ಉನ್ನತಸ್ಥಾನಕ್ಕೆ ಏರಿದ್ದೀ.


ಇದಲ್ಲದೆ ಸಿಂಹಾಸನದೊಳಗಿಂದ ಬಂದ ಮಹಾಧ್ವನಿಯು ನನಗೆ ಕೇಳಿಸಿತು. ಅದು, “ಇಗೋ ದೇವರ ನಿವಾಸವು ಮನುಷ್ಯರೊಂದಿಗೆ ಇದೆ. ಆತನು ಅವರೊಡನೆ ವಾಸಮಾಡುವನು. ಅವರು ಆತನಿಗೆ ಪ್ರಜೆಗಳಾಗಿರುವರು. ದೇವರು ತಾನೇ ಅವರ ಸಂಗಡ ಇರುವನು ಮತ್ತು ಅವರ ದೇವರಾಗಿರುವನು.


ಇದಲ್ಲದೆ, “ನಾನು ನಿಮ್ಮನ್ನು ಸ್ವೀಕರಿಸಿಕೊಂಡು ನಿಮಗೆ ತಂದೆಯಾಗಿರುವೆನು; ನೀವು ನನಗೆ ಕುಮಾರ, ಕುಮಾರಿಯರು ಆಗಿರುವಿರೆಂದು” ಸರ್ವಶಕ್ತನಾದ ಕರ್ತನು ಹೇಳುತ್ತಾನೆ.


ದೇವರು ಯಾರನ್ನು ತಮ್ಮವರೆಂದು ಮೊದಲೇ ಆರಿಸಿಕೊಂಡನೋ ಅವರನ್ನು ತನ್ನ ಮಗನ ಅನುರೂಪಿಗಳಾಗುವಂತೆ ಆಗಲೇ ನೇಮಿಸಿದನು.


ನೀತಿಸ್ವರೂಪನಾದ ತಂದೆಯೇ, ಲೋಕವು ನಿನ್ನನ್ನು ತಿಳಿಯಲಿಲ್ಲ, ಆದರೆ ನಾನು ನಿನ್ನನ್ನು ತಿಳಿದಿದ್ದೇನೆ ಮತ್ತು ಇವರು ನೀನೇ ನನ್ನನ್ನು ಕಳುಹಿಸಿದ್ದೀ ಎಂದು ತಿಳಿದಿದ್ದಾರೆ.


ಮತ್ತು ಬೇಗ ಹೋಗಿ ಆತನ ಶಿಷ್ಯರಿಗೆ, ‘ಆತನು ಸತ್ತವರೊಳಗಿಂದ ಎದ್ದಿದ್ದಾನೆಂದು, ಆತನು ನಿಮಗಿಂತಲೂ ಮೊದಲೇ ಗಲಿಲಾಯಕ್ಕೆ ಹೋಗುತ್ತಾನೆ, ಅಲ್ಲಿ ಆತನನ್ನು ಕಾಣುವಿರಿ’ ಎಂದು ತಿಳಿಸಿರಿ; ನೋಡಿರಿ, ನಾನು ನಿಮಗೆ ಹೇಳಿದ್ದೇನೆ,” ಎಂದು ಹೇಳಿದನು.


ಪರಲೋಕದಲ್ಲಿರುವ ನನ್ನ ತಂದೆಯ ಚಿತ್ತವನ್ನು ಮಾಡುವವನೇ ನನ್ನ ಸಹೋದರನೂ ಸಹೋದರಿಯೂ ತಾಯಿಯೂ ಆಗಿದ್ದಾರೆ” ಅಂದನು.


ಜಯ ಹೊಂದುವವನು ಇವುಗಳಿಗೆ ಬಾಧ್ಯನಾಗುವನು. ನಾನು ಅವನಿಗೆ ದೇವರಾಗಿರುವೆನು. ಅವನು ನನಗೆ ಮಗನಾಗಿರುವನು.


‘ಆ ದಿನಗಳ ತರುವಾಯ ನಾನು ಇಸ್ರಾಯೇಲ್ ವಂಶದವರೊಂದಿಗೆ ಮಾಡಿಕೊಳ್ಳುವ ಒಡಂಬಡಿಕೆಯು’ ಹೀಗಿರುವುದು, ‘ನಾನು ನನ್ನ ಆಜ್ಞೆಗಳನ್ನು ಅವರ ಮನಸ್ಸಿನಲ್ಲಿ ಇಡುವೆನು. ನಾನು ಅವರ ಹೃದಯಗಳ ಮೇಲೆ ಅವುಗಳನ್ನು ಬರೆಯುವೆನು. ನಾನು ಅವರಿಗೆ ದೇವರಾಗಿರುವೆನು. ಅವರು ನನ್ನ ಜನರಾಗಿರುವರು.


ಆ ಮೇಲೆ ತೋಮನಿಗೆ, “ನಿನ್ನ ಬೆರಳನ್ನು ಈ ಕಡೆ ಚಾಚಿ ನನ್ನ ಕೈಗಳನ್ನು ಮುಟ್ಟಿ ನೋಡು, ನಿನ್ನ ಕೈ ಚಾಚಿ ನನ್ನ ಪಕ್ಕೆಯಲ್ಲಿ ಹಾಕು. ಅಪನಂಬಿಕೆಯಳ್ಳವನಾಗಿರಬೇಡ, ನಂಬುವವನಾಗು” ಎಂದು ಹೇಳಿದನು.


ಈಗ ತಂದೆಯೇ, ಲೋಕವು ಸೃಷ್ಟಿಯಾಗುವುದಕ್ಕಿಂತ ಮೊದಲು, ನಿನ್ನ ಬಳಿಯಲ್ಲಿ ನನಗಿದ್ದ ಮಹಿಮೆಯಂತೆಯೇ ನಿನ್ನೊಂದಿಗೆ ನನ್ನನ್ನು ಮಹಿಮೆಪಡಿಸು.


ನಾನು ಹೋಗಿ ಪುನಃ ನಿಮ್ಮ ಬಳಿಗೆ ಬರುತ್ತೇನೆ ಎಂದು ನಿಮಗೆ ಹೇಳಿದ್ದನ್ನು ಕೇಳಿದ್ದೀರಿ. ನೀವು ನನ್ನನ್ನು ಪ್ರೀತಿಸುವವರಾಗಿದ್ದರೆ ನಾನು ತಂದೆಯ ಬಳಿಗೆ ಹೋಗುತ್ತೇನೆಂದು ಹೇಳಿದ್ದಕ್ಕೆ ಸಂತೋಷಪಡುತ್ತಿದ್ದೀರಿ, ಏಕೆಂದರೆ ತಂದೆಯು ನನಗಿಂತಲೂ ದೊಡ್ಡವನು.


ನನ್ನ ತಂದೆಯ ಮನೆಯಲ್ಲಿ ಅನೇಕ ವಾಸಸ್ಥಾನಗಳಿವೆ, ಇಲ್ಲದಿದ್ದರೆ ನಾನು ನಿಮಗೆ ಹೇಳುತ್ತಿದ್ದೆನು. ನಾನು ನಿಮಗಾಗಿ ಸ್ಥಳವನ್ನು ಸಿದ್ಧಮಾಡುವುದಕ್ಕೆ ಹೋಗುತ್ತೇನಲ್ಲಾ!


ತಂದೆಯು ತನ್ನ ಕೈಯಲ್ಲಿ ಎಲ್ಲದರ ಮೇಲೆ ಅಧಿಕಾರ ಕೊಟ್ಟಿದ್ದಾನೆಂದೂ, ತಾನು ದೇವರ ಬಳಿಯಿಂದ ಬಂದು, ತಿರುಗಿ ದೇವರ ಬಳಿಗೆ ಹೋಗುತ್ತೇನೆಂದೂ ಯೇಸುವಿಗೆ ತಿಳಿದಿತ್ತು.


ಪಸ್ಕಹಬ್ಬದ ಹಿಂದಿನ ದಿನ ಯೇಸು, ತಾನು ಈ ಲೋಕವನ್ನು ಬಿಟ್ಟು ತಂದೆಯ ಬಳಿಗೆ ಹೋಗಬೇಕಾದ ತನ್ನ ಗಳಿಗೆ ಬಂದಿತೆಂದು ತಿಳಿದುಕೊಂಡು, ಈ ಲೋಕದಲ್ಲಿರುವ ತನ್ನವರನ್ನು ಪ್ರೀತಿಸಿ, ಅವರನ್ನು ಕೊನೆಯವರೆಗೂ ಪ್ರೀತಿಸುತ್ತಾ ಬಂದನು.


ಆಗ ಯೇಸು ಅವರಿಗೆ “ಇನ್ನು ಸ್ವಲ್ಪಕಾಲ ನಾನು ನಿಮ್ಮೊಂದಿಗಿದ್ದು ಆಮೇಲೆ ನನ್ನನ್ನು ಕಳುಹಿಸಿದಾತನ ಬಳಿಗೆ ಹೊರಟು ಹೋಗುತ್ತೇನೆ.


ನೋಡಿರಿ, ನೀವು ಹೋಗುವಾಗ ಹಣದ ಚೀಲವನ್ನಾಗಲಿ, ಪ್ರವಾಸದ ಚೀಲವನ್ನಾಗಲಿ, ಕಾಲಿಗೆ ಕೆರಗಳನ್ನಾಗಲಿ ತೆಗೆದುಕೊಂಡು ಹೋಗಬೇಡಿರಿ. ದಾರಿಯಲ್ಲಿ ಯಾರಿಗೂ ವಂದಿಸಬೇಡಿರಿ.


ಹೌದು, ನನ್ನ ವಾಸಸ್ಥಾನವು ಅವರ ಮಧ್ಯದಲ್ಲಿರುವುದು; ನಾನು ಅವರಿಗೆ ದೇವರಾಗಿರುವೆನು. ಅವರು ನನಗೆ ಪ್ರಜೆಯಾಗಿರುವರು.


ನಾನು ನಿಮ್ಮ ಪೂರ್ವಿಕರಿಗೆ ಅನುಗ್ರಹಿಸಿದ ದೇಶದಲ್ಲಿ ನೀವು ವಾಸಿಸುವಿರಿ. ನೀವು ನನಗೆ ಪ್ರಜೆಯಾಗಿರುವಿರಿ, ನಾನು ನಿಮಗೆ ದೇವರಾಗಿರುವೆನು.


ಅವರು ನನಗೆ ಜನರಾಗಿರುವರು, ನಾನು ಅವರಿಗೆ ದೇವರಾಗಿರುವೆನು.


ಆ ದಿನಗಳು ಬಂದಮೇಲೆ ನಾನು ಇಸ್ರಾಯೇಲ್ ವಂಶದವರೊಂದಿಗೆ ಮಾಡಿಕೊಳ್ಳುವ ಒಡಂಬಡಿಕೆಯು ಹೀಗಿರುವುದು. ನನ್ನ ಧರ್ಮೋಪದೇಶವನ್ನು ಅವರ ಅಂತರಂಗದಲ್ಲಿ ಇಡುವೆನು, ಅವರ ಹೃದಯದೊಳಗೆ ಅದನ್ನು ಬರೆಯುವೆನು, ನಾನು ಅವರಿಗೆ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು ಎಂದು ಯೆಹೋವನು ಹೇಳುತ್ತಾನೆ.


ಅವನು ನನಗೆ, ‘ನನ್ನ ತಂದೆಯೂ, ದೇವರೂ, ಆಶ್ರಯದುರ್ಗವೂ ನೀನೇ’ ಎಂದು ಹೇಳುವನು.


ಅನಂತರ ಅವರು, “ಇದು ಶುಭವಾರ್ತೆಯ ದಿನವಾಗಿದೆ. ನಾವು ಇದನ್ನು ಪ್ರಕಟಿಸದಿರುವುದು ಒಳ್ಳೇಯದಲ್ಲ. ಬೆಳಗಾಗುವವರೆಗೆ ತಡಮಾಡಿದರೆ ಶಿಕ್ಷೆಗೆ ಪಾತ್ರರಾದೇವು. ಆದುದರಿಂದ ಹೋಗಿ ಅರಸನಿಗೆ ಈ ಸಂಗತಿ ತಿಳಿಸೋಣ” ಎಂದು ಮಾತನಾಡಿಕೊಂಡು ಅಲ್ಲಿಂದ ಹೊರಟರು.


ಅದಕ್ಕೆ ಉತ್ತರವಾಗಿ ಅರಸನು, ‘ಈ ನನ್ನ ಸಹೋದರರಲ್ಲಿ ಕೇವಲ ಅಲ್ಪನಾದವನೊಬ್ಬನಿಗೆ ಏನೇನು ಮಾಡಿದಿರೋ ಅದನ್ನು ನನಗೂ ಮಾಡಿದ ಹಾಗಾಯಿತು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ’ ಅನ್ನುವನು.


ಆಗ ನೀವು ನಿಮ್ಮ ಮುಂದಣ ಸಂತತಿಯವರಿಗೆ, ದೇವರು ಇಂಥವನು; ಆತನು ಯುಗಯುಗಾಂತರಗಳಲ್ಲಿಯೂ ನಮ್ಮ ದೇವರು, ನಿರಂತರವೂ ನಮ್ಮನ್ನು ನಡೆಸುವವನಾಗಿದ್ದಾನೆ ಎಂದು ತಿಳಿಸುವಿರಿ.


ದೇವರೇ, ನನ್ನ ದೇವರೇ, ಆಗ ನಾನು ನಿನ್ನ ಯಜ್ಞವೇದಿಯ ಬಳಿಗೆ, ನನ್ನ ಆನಂದನಿಧಿಯಾಗಿರುವ ನಿನ್ನ ಹತ್ತಿರಕ್ಕೆ ಸೇರಿ, ಕಿನ್ನರಿಯನ್ನು ನುಡಿಸುತ್ತಾ ನಿನ್ನನ್ನು ಕೊಂಡಾಡುವೆನು.


ನಿನ್ನ ನಾಮ ಮಹಿಮೆಯನ್ನು ನನ್ನ ಸಹೋದರರಿಗೆ ತಿಳಿಸುವೆನು; ಸಭಾಮಧ್ಯದಲ್ಲಿ ನಿನ್ನನ್ನು ಸ್ತುತಿಸುವೆನು.


ಆಗ ಎಲೀಷನು ಗೇಹಜಿಗೆ, “ನೀನು ನಡುಕಟ್ಟಿಕೊಂಡು, ನನ್ನ ಕೋಲನ್ನು ತೆಗೆದುಕೊಂಡು ಹೋಗಿ ಹುಡುಗನ ಮುಖದ ಮೇಲಿಡು, ಹೋಗುವಾಗ ದಾರಿಯಲ್ಲಿ ಯಾರನ್ನೂ ವಂದಿಸಬೇಡ, ಯಾರ ಅವರ ವಂದನೆಯನ್ನು ಸ್ವೀಕರಿಸಬೇಡ” ಎಂದು ಹೇಳಿ ಕಳುಹಿಸಿದನು.


ಆದರೆ ಅವರು ಪರಲೋಕವೆಂಬ ಉತ್ತಮ ದೇಶವನ್ನು ಹಾರೈಸುವವರು. ಆದ್ದರಿಂದ ದೇವರು ಅವರ ದೇವರೇ ಎನ್ನಿಸಿಕೊಳ್ಳುವುದಕ್ಕೆ ನಾಚಿಕೆಗೊಳ್ಳದೇ, ಅವರಿಗೋಸ್ಕರ ಪಟ್ಟಣವನ್ನು ಸಿದ್ಧಮಾಡಿದ್ದಾನೆ.


ನೀನಂತು ಹೆದರಬೇಡ, ನಾನೇ ನಿನ್ನೊಂದಿಗಿದ್ದೇನೆ, ದಿಗ್ಭ್ರಮೆಗೊಳ್ಳದಿರು, ನಾನೇ ನಿನ್ನ ದೇವರು. ನಾನು ನಿನ್ನನ್ನು ಬಲಪಡಿಸುತ್ತೇನೆ. ಹೌದು, ನಿನಗೆ ಸಹಾಯಮಾಡುತ್ತೇನೆ. ನನ್ನ ಧರ್ಮದ ಬಲಗೈಯನ್ನು ನಿನಗೆ ಆಧಾರಮಾಡುತ್ತೇನೆ.


ಆದರೆ ಸತ್ತವರು ಬದುಕಿ ಬರುತ್ತಾರೆಂಬುದನ್ನು ಕುರಿತು ಹೇಳಬೇಕಾದರೆ ‘ನಾನು ಅಬ್ರಹಾಮನ ದೇವರು, ಇಸಾಕನ ದೇವರು, ಯಾಕೋಬನ ದೇವರು ಆಗಿದ್ದೇನೆ ಎಂದು ಪೊದೆಯಲ್ಲಿ ದೇವರು ಮೋಶೆಯ ಸಂಗಡ ಮಾತನಾಡಿದನೆಂದು ನೀವು ಮೋಶೆಯ ಗ್ರಂಥದಲ್ಲಿ ಓದಲಿಲ್ಲವೋ?’


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು