Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 20:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಆಗ ಆಕೆಯು ಸೀಮೋನ್ ಪೇತ್ರನ ಬಳಿಗೂ ಮತ್ತು ಯೇಸುವಿಗೆ ಪ್ರಿಯನಾಗಿದ್ದ ಇನ್ನೊಬ್ಬ ಶಿಷ್ಯನ ಬಳಿಗೂ ಓಡಿಬಂದು ಅವರಿಗೆ, “ಕರ್ತನನ್ನು ಅವರು ಸಮಾಧಿಯೊಳಗಿಂದ ತೆಗೆದುಕೊಂಡು ಹೋಗಿದ್ದಾರೆ; ಅವರು ಆತನನ್ನು ಎಲ್ಲಿಟ್ಟಿದ್ದಾರೋ ನಮಗೆ ಗೊತ್ತಿಲ್ಲವೆಂದು” ಹೇಳಿದಳು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಆಗ ಆಕೆ ಸಿಮೋನ ಪೇತ್ರನ ಮತ್ತು ಯೇಸುವಿಗೆ ಆಪ್ತನಾಗಿದ್ದ ಇನ್ನೊಬ್ಬ ಶಿಷ್ಯನ ಬಳಿಗೆ ಓಡಿಬಂದು, “ಪ್ರಭುವನ್ನು ಸಮಾಧಿಯೊಳಗಿಂದ ತೆಗೆದುಕೊಂಡು ಹೋಗಿಬಿಟ್ಟಿದ್ದಾರೆ; ಅವರನ್ನು ಎಲ್ಲಿ ಇಟ್ಟಿದ್ದಾರೋ ಗೊತ್ತಿಲ್ಲ,” ಎಂದು ಹೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಆಕೆ ಸೀಮೋನ ಪೇತ್ರನ ಬಳಿಗೂ ಯೇಸುವಿಗೆ ಪ್ರಿಯನಾಗಿದ್ದ ಆ ಮತ್ತೊಬ್ಬ ಶಿಷ್ಯನ ಬಳಿಗೂ ಓಡಿ ಬಂದು ಅವರಿಗೆ - ಸ್ವಾವಿುಯನ್ನು ಸಮಾಧಿಯಿಂದ ತೆಗೆದುಕೊಂಡು ಹೋಗಿ ಆತನನ್ನು ಎಲ್ಲಿಟ್ಟಿದ್ದಾರೋ ನಮಗೆ ಗೊತ್ತಿಲ್ಲವೆಂದು ಹೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಸೀಮೋನ್ ಪೇತ್ರನ ಮತ್ತು (ಯೇಸು ಪ್ರೀತಿಸುತ್ತಿದ್ದ) ಮತ್ತೊಬ್ಬ ಶಿಷ್ಯನ ಬಳಿಗೆ ಓಡಿಬಂದು, “ಅವರು ಸಮಾಧಿಯೊಳಗಿಂದ ಪ್ರಭುವನ್ನು ತೆಗೆದುಕೊಂಡಿದ್ದಾರೆ, ಆತನನ್ನು ಎಲ್ಲಿಟ್ಟಿದ್ದಾರೋ ನಮಗೆ ಗೊತ್ತಿಲ್ಲ” ಎಂದು ಹೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಆಗ ಆಕೆಯು ಸೀಮೋನ ಪೇತ್ರನ ಬಳಿಗೂ ಯೇಸು ಪ್ರೀತಿಸಿದ ಇನ್ನೊಬ್ಬ ಶಿಷ್ಯನ ಬಳಿಗೂ ಓಡಿಬಂದು ಅವರಿಗೆ, “ಕರ್ತನನ್ನು ಅವರು ಸಮಾಧಿಯೊಳಗಿಂದ ತೆಗೆದುಕೊಂಡು ಹೋಗಿದ್ದಾರೆ, ಅವರು ಕರ್ತನನ್ನು ಎಲ್ಲಿ ಇಟ್ಟಿದ್ದಾರೋ ನಮಗೆ ಗೊತ್ತಿಲ್ಲ,” ಎಂದು ಹೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ತನ್ನಾ ತಿ ಪಳುನ್ಗೆತ್ ಸಿಮಾವ್ ಪೆದ್ರು, ಅನಿ ತ್ಯಾ ಜೆಜುಚ್ಯಾ ಪ್ರೆಮಾಚ್ಯಾ ಶಿಸಾಕ್ಡೆ ಗೆಲಿ, “ಅನಿ, ತೆನಿ ಧನಿಯಾಕ್ ಸಮಾದಿತ್ನಾ ಕಾಡುನ್ ನ್ಹೆಲ್ಯಾನಾತ್ ತೆನಿ ಖೈ ನ್ಹೆಲ್ಯಾನಾತ್ ಕಾಯ್ಕಿ” ಮನುನ್ ಸಾಂಗ್ಲಿನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 20:2
9 ತಿಳಿವುಗಳ ಹೋಲಿಕೆ  

ಶಿಷ್ಯರೊಳಗೆ ಯೇಸುವಿಗೆ ಪ್ರಿಯನಾಗಿದ್ದ ಒಬ್ಬ ಶಿಷ್ಯನು ಆತನ ಎದೆಗೆ ಒರಗಿಕೊಂಡಿದ್ದನು.


ಅವರು ಆಕೆಗೆ, “ಅಮ್ಮಾ, ನೀನು ಯಾಕೆ ಅಳುತ್ತಿರುವೆ?” ಎಂದು ಕೇಳಲು, ಆಕೆಯು, “ನನ್ನ ಕರ್ತನನ್ನು ಅವರು ತೆಗೆದುಕೊಂಡು ಹೋಗಿದ್ದಾರೆ. ಆತನನ್ನು ಎಲ್ಲಿ ಇಟ್ಟಿದ್ದಾರೋ ನನಗೆ ಗೊತ್ತಿಲ್ಲ” ಎಂದಳು.


ಈ ವಿಷಯವಾಗಿ ಸಾಕ್ಷಿಕೊಟ್ಟು, ಇವುಗಳನ್ನು ಬರೆದ ಶಿಷ್ಯನು ಇವನೇ. ಇವನ ಸಾಕ್ಷಿಯು ಸತ್ಯವೆಂದು ನಾವು ಬಲ್ಲೆವು.


ಆಗ ಯೇಸುವಿಗೆ ಪ್ರಿಯನಾಗಿದ್ದ ಶಿಷ್ಯನು ಪೇತ್ರನಿಗೆ, “ಆತನು ಕರ್ತನೇ” ಎಂದು ಹೇಳಿದನು. ಸೀಮೋನ್ ಪೇತ್ರನು ಅದನ್ನು ಕೇಳಿ ತಾನು ತೆಗೆದು ಬಿಟ್ಟಿದ್ದ ತನ್ನ ಮೇಲಂಗಿಯನ್ನು ಸುತ್ತಿಕೊಂಡು ಸಮುದ್ರದೊಳಗೆ ಧುಮುಕಿದನು.


ಯೇಸು ತನ್ನ ತಾಯಿಯನ್ನೂ ಹತ್ತಿರದಲ್ಲಿ ನಿಂತಿದ್ದ ತನ್ನ ಪ್ರೀತಿಯ ಶಿಷ್ಯನನ್ನೂ ನೋಡಿ ತನ್ನ ತಾಯಿಗೆ, “ಸ್ತ್ರೀಯೇ, ಇಗೋ, ನಿನ್ನ ಮಗನು” ಎಂದು ಹೇಳಿದನು.


ಪೇತ್ರನು ಹಿಂತಿರುಗಿ ನೋಡಿದಾಗ, ಯೇಸುವಿಗೆ ಪ್ರಿಯನಾಗಿದ್ದ ಶಿಷ್ಯನು ಹಿಂದೆ ಬರುವುದನ್ನು ಕಂಡನು. ಆ ಶಿಷ್ಯನು ಊಟದ ಸಮಯದಲ್ಲಿ ಯೇಸುವಿನ ಎದೆಗೆ ಒರಗಿಕೊಂಡು, “ಕರ್ತನೇ, ನಿನ್ನನ್ನು ಹಿಡಿದುಕೊಡುವವನು ಯಾರು?” ಎಂದು ಕೇಳಿದವನೇ.


ಯೇಸು ಆಕೆಗೆ, “ಅಮ್ಮಾ, ನೀನು ಯಾಕೆ ಅಳುತ್ತೀ? ಯಾರನ್ನು ಹುಡುಕುತ್ತೀ?” ಎಂದು ಕೇಳಲು, ಆಕೆ ಆತನನ್ನು ತೋಟಗಾರನೆಂದು ನೆನಸಿ ಆತನಿಗೆ, “ಅಯ್ಯಾ, ನೀನು ಆತನನ್ನು ತೆಗೆದುಕೊಂಡು ಹೋಗಿದ್ದರೆ ಎಲ್ಲಿ ಇಟ್ಟಿದ್ದೀ ಎಂದು ನನಗೆ ಹೇಳು, ನಾನು ಆತನನ್ನು ತೆಗೆದುಕೊಂಡು ಹೋಗುತ್ತೇನೆ” ಎಂದು ಹೇಳಿದಳು.


ಆತನು ಸತ್ತ ಮೇಲೆ ಜೀವದಿಂದೆದ್ದು ಬರಬೇಕೆಂಬುದಾಗಿ ಧರ್ಮಶಾಸ್ತ್ರದಲ್ಲಿ ಬರೆದಿರುವ ಮಾತು ಅವರಿಗೆ ಇನ್ನೂ ತಿಳಿದಿರಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು