Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 20:21 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಯೇಸು ಅವರಿಗೆ, “ನಿಮಗೆ ಸಮಾಧಾನವಾಗಲಿ” ಎಂದು ಪುನಃ ಹೇಳಿ, “ತಂದೆಯು ನನ್ನನ್ನು ಕಳುಹಿಸಿಕೊಟ್ಟ ಹಾಗೆಯೇ ನಾನೂ ನಿಮ್ಮನ್ನು ಕಳುಹಿಸಿಕೊಡುತ್ತೇನೆ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಯೇಸು ಪುನಃ, “ನಿಮಗೆ ಶಾಂತಿ, ಪಿತನು ನನ್ನನ್ನು ಕಳುಹಿಸಿದಂತೆಯೇ ನಾನೂ ನಿಮ್ಮನ್ನು ಕಳುಹಿಸುತ್ತೇನೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಯೇಸು ಅವರಿಗೆ - ನಿಮಗೆ ಸಮಾಧಾನವಾಗಲಿ ಎಂದು ತಿರಿಗಿ ಹೇಳಿ - ತಂದೆ ನನ್ನನ್ನು ಕಳುಹಿಸಿಕೊಟ್ಟ ಹಾಗೆಯೇ ನಾನೂ ನಿಮ್ಮನ್ನು ಕಳುಹಿಸಿಕೊಡುತ್ತೇನೆ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಬಳಿಕ ಯೇಸು ಮತ್ತೆ, “ಶಾಂತಿಯು ನಿಮ್ಮೊಂದಿಗಿರಲಿ! ತಂದೆಯು ನನ್ನನ್ನು ಕಳುಹಿಸಿದನು. ಅದೇ ರೀತಿಯಲ್ಲಿ, ಈಗ ನಾನೂ ನಿಮ್ಮನ್ನು ಕಳುಹಿಸುತ್ತೇನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಯೇಸು ತಿರುಗಿ ಅವರಿಗೆ, “ನಿಮಗೆ ಸಮಾಧಾನವಾಗಲಿ, ತಂದೆಯು ನನ್ನನ್ನು ಕಳುಹಿಸಿದಂತೆಯೇ ನಾನು ನಿಮ್ಮನ್ನು ಕಳುಹಿಸಿಕೊಡುತ್ತೇನೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

21 ಅನಿ ಎಗ್ದಾ ಜೆಜುನ್ ತೆಂಕಾ, “ಶಾಂತಿ ತುಮ್ಚ್ಯಾ ವಾಂಗ್ಡಾ ರ್‍ಹಾಂವ್ದಿತ್, ಮಾಜ್ಯಾ ಬಾಬಾನ್ ಮಾಕಾ ಧಾಡುನ್ ದಿಲ್ಲ್ಯಾ ಸರ್ಕೆ ಮಿಯಾಬಿ ತುಮ್ಕಾ ಧಾಡುನ್ ದಿತಾ” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 20:21
20 ತಿಳಿವುಗಳ ಹೋಲಿಕೆ  

ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ; ನಾನು ಕಳುಹಿಸಿದಾತನನ್ನು ಸ್ವೀಕರಿಸುವವನು ನನ್ನನ್ನು ಸ್ವೀಕರಿಸುತ್ತಾನೆ; ನನ್ನನ್ನು ಸ್ವೀಕರಿಸುವವನು ನನ್ನನ್ನು ಕಳುಹಿಸಿದಾತನನ್ನೇ ಸ್ವೀಕರಿಸುತ್ತಾನೆ.”


ದೇವರು ತನ್ನ ಮಗನ ಮುಖಾಂತರ ಲೋಕಕ್ಕೆ ರಕ್ಷಣೆಯಾಗಬೇಕೆಂದು ಆತನನ್ನು ಕಳುಹಿಸಿಕೊಟ್ಟನೇ ಹೊರತು ಅಪರಾಧಿಯೆಂದು ಖಂಡಿಸಲಿಕ್ಕೆ ಕಳುಹಿಸಲಿಲ್ಲ.


ಆದರೆ ಪವಿತ್ರಾತ್ಮನು ನಿಮ್ಮ ಮೇಲೆ ಬರಲು ನೀವು ಶಕ್ತಿಯನ್ನು ಹೊಂದಿದವರಾಗಿ ಯೆರೂಸಲೇಮಿನಲ್ಲಿಯೂ, ಯೂದಾಯದ ಎಲ್ಲಾ ಸ್ಥಳದಲ್ಲಿಯು, ಸಮಾರ್ಯ ಸೀಮೆಗಳಲ್ಲಿಯೂ, ಭೂಲೋಕದ ಕಟ್ಟಕಡೆಯವರೆಗೂ ನನಗೆ ಸಾಕ್ಷಿಗಳಾಗಿರುವಿರಿ” ಅಂದನು.


ನೀನು ಅನೇಕ ಸಾಕ್ಷಿಗಳ ಮುಂದೆ ನನ್ನಿಂದ ಕೇಳಿದ ಉಪದೇಶವನ್ನು ಇತರರಿಗೆ ಬೋಧಿಸಲು ಶಕ್ತರಾದ, ನಂಬಿಗಸ್ತರಾದ ಜನರಿಗೆ ಅದನ್ನು ಒಪ್ಪಿಸಿಕೊಡು.


“ನಿಮ್ಮನ್ನು ಸ್ವೀಕರಿಸುವವನು ನನ್ನನ್ನು ಸ್ವೀಕರಿಸುವವನಾಗಿದ್ದಾನೆ; ನನ್ನನ್ನು ಸ್ವೀಕರಿಸುವವನು ನನ್ನನ್ನು ಕಳುಹಿಸಿಕೊಟ್ಟಾತನನ್ನೇ ಸ್ವೀಕರಿಸುವವನಾಗಿದ್ದಾನೆ.


“ನೋಡಿರಿ, ತೋಳಗಳ ನಡುವೆ ಕುರಿಗಳನ್ನು ಕಳುಹಿಸುವಂತೆ ನಾನು ನಿಮ್ಮನ್ನು ಕಳುಹಿಸಿಕೊಡುತ್ತಿದ್ದೇನೆ. ಆದುದರಿಂದ ಸರ್ಪಗಳಂತೆ ಜಾಣರೂ ಪಾರಿವಾಳಗಳಂತೆ ನಿಷ್ಕಪಟಿಗಳೂ ಆಗಿರಿ.


“ನಾನು ನನ್ನ ಸಮಾಧಾನವನ್ನು ನಿಮಗೆ ಕೊಟ್ಟು ಹೋಗುತ್ತಿದ್ದೇನೆ. ನನ್ನಲ್ಲಿರುವಂಥ ಸಮಾಧಾನವನ್ನು ನಾನು ನಿಮಗೆ ಕೊಡುತ್ತೇನೆ. ಲೋಕವು ಕೊಡುವಂತೆ ನಾನು ನಿಮಗೆ ಕೊಡುವುದಿಲ್ಲ. ನಿಮ್ಮ ಹೃದಯವು ಕಳವಳಗೊಳ್ಳದಿರಲಿ, ಹೆದರದಿರಲಿ.


ಆದ್ದರಿಂದ ಪರಿಶುದ್ಧರಾದ ಸಹೋದರರೇ, ಪರಲೋಕದ ಕರೆಯುವಿಕೆಗೆ ಪಾಲುಗಾರರಾಗಿರುವವರೇ, ನಾವು ಒಪ್ಪಿಕೊಂಡಿರುವ ಅಪೊಸ್ತಲನೂ ಮತ್ತು ಮಹಾಯಾಜಕನೂ ಆಗಿರುವ ಯೇಸುವನ್ನು ಗಮನವಿಟ್ಟು ಯೋಚಿಸಿರಿ.


ಅದೇ ದಿನ ಎಂದರೆ ವಾರದ ಮೊದಲನೆಯ ದಿನದ ಸಂಜೆಯಲ್ಲಿ ಶಿಷ್ಯರು ಯೆಹೂದ್ಯರ ಭಯದಿಂದ ತಾವು ಇದ್ದ ಮನೆಯ ಬಾಗಿಲುಗಳನ್ನು ಮುಚ್ಚಿಕೊಂಡಿರಲು, ಆಗ ಯೇಸು ಬಂದು ಅವರ ನಡುವೆ ನಿಂತು, “ನಿಮಗೆ ಸಮಾಧಾನವಾಗಲಿ” ಎಂದನು.


ಅವರು ಈ ಸಂಗತಿಗಳನ್ನು ಕುರಿತು ಮಾತನಾಡುತ್ತಿರುವಾಗ ಯೇಸುವೇ ಅವರ ನಡುವೆ ನಿಂತು, “ನಿಮಗೆ ಸಮಾಧಾನವಾಗಲಿ” ಎಂದು ಅವರಿಗೆ ಹೇಳಿದನು.


ಆತನು ಇದನ್ನು ಹೇಳಿ ಅವರ ಮೇಲೆ ಉಸಿರೂದಿ ಅವರಿಗೆ, “ನೀವು ಪವಿತ್ರಾತ್ಮನನ್ನು ಪಡೆದುಕೊಳ್ಳಿರಿ.


ಎಂಟು ದಿನಗಳಾದ ಮೇಲೆ ಆತನ ಶಿಷ್ಯರು ಪುನಃ ಒಳಗಿದ್ದಾಗ ತೋಮನೂ ಅವರ ಜೊತೆ ಇದ್ದನು. ಬಾಗಿಲುಗಳು ಮುಚ್ಚಿದ್ದವು ಆಗ ಯೇಸು ಬಂದು ನಡುವೆ ನಿಂತು ನಿಮಗೆ “ಸಮಾಧಾನವಾಗಲಿ ಎಂದನು”


ಆತನು ಸ್ವರ್ಗಾರೋಹಣವಾದ ದಿನದವರೆಗೆ ಆತನು ಮಾಡಿದ ಎಲ್ಲಾ ಕಾರ್ಯಗಳನ್ನೂ, ಉಪದೇಶಿಸಿದ ಎಲ್ಲಾ ಬೋಧನೆಗಳನ್ನೂ ಬರೆದಿದ್ದೇನೆ.


ನಾನು ಬೇಗನೆ ಬಂದು ನಿನ್ನನ್ನು ನೋಡುವೆನೆಂದು ನಿರೀಕ್ಷಿಸುತ್ತೇನೆ. ಆಗ ನಾವು ಮುಖಾ ಮುಖಿಯಾಗಿ ಮಾತನಾಡೋಣ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು