Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 20:25 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಉಳಿದ ಶಿಷ್ಯರು ಅವನಿಗೆ, “ನಾವು ಕರ್ತನನ್ನು ನೋಡಿದ್ದೇವೆ” ಎಂದು ಹೇಳಿದರು. ಅದಕ್ಕೆ ಅವನು, “ನಾನು ಆತನ ಕೈಗಳಲ್ಲಿ ಮೊಳೆಗಳಿಂದಾದ ಗಾಯವನ್ನು ನೋಡಿ, ಆ ಮೊಳೆಯ ಗಾಯದಲ್ಲಿ ನನ್ನ ಬೆರಳನ್ನು ಇಟ್ಟು ಆತನ ಪಕ್ಕೆಯಲ್ಲಿ ನನ್ನ ಕೈಯನ್ನು ಹಾಕದ ಹೊರತು ನಿಮ್ಮ ಮಾತನ್ನು ನಂಬುವುದೇ ಇಲ್ಲ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಉಳಿದ ಶಿಷ್ಯರು, “ನಾವು ಪ್ರಭುವನ್ನು ನೋಡಿದೆವು,” ಎಂದು ಹೇಳಿದರು. ಅದಕ್ಕೆ ಅವನು, “ಅವರ ಕೈಗಳಲ್ಲಿ ಮೊಳೆಗಳಿಂದಾದ ಗಾಯದ ಕಲೆಯನ್ನು ನಾನು ನೋಡಬೇಕು. ಮೊಳೆಗಳು ಜಡಿದಿದ್ದ ಜಾಗದಲ್ಲಿ ನನ್ನ ಬೆರಳನ್ನಿಡಬೇಕು, ಅವರ ಪಕ್ಕೆಯಲ್ಲಿ ನನ್ನ ಕೈಯನ್ನು ಇಟ್ಟು ನೋಡಬೇಕು. ಆ ಹೊರತು ನಾನು ನಂಬುವುದೇ ಇಲ್ಲ,” ಎಂದುಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಆದದರಿಂದ ಉಳಿದ ಶಿಷ್ಯರು - ನಾವು ಸ್ವಾವಿುಯನ್ನು ನೋಡಿದ್ದೇವೆ ಎಂದು ಅವನಿಗೆ ಹೇಳಿದರು. ಅದಕ್ಕೆ ಅವನು - ನಾನು ಆತನ ಕೈಗಳಲ್ಲಿ ಮೊಳೆಗಳಿಂದಾದ ಗಾಯವನ್ನು ನೋಡಿ ಆ ಮೊಳೆಯ ಗಾಯದಲ್ಲಿ ನನ್ನ ಬೆರಳನ್ನು ಇಟ್ಟು ಆತನ ಪಕ್ಕೆಯಲ್ಲಿ ನನ್ನ ಕೈಯನ್ನು ಹಾಕಿದ ಹೊರತು ನಿಮ್ಮ ಮಾತನ್ನು ನಂಬುವದೇ ಇಲ್ಲ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಉಳಿದ ಶಿಷ್ಯರು ತೋಮನಿಗೆ, “ನಾವು ಪ್ರಭುವನ್ನು ನೋಡಿದೆವು” ಎಂದು ಹೇಳಿದರು. ಆದರೆ ತೋಮನು, “ಆತನ ಕೈಗಳಲ್ಲಿರುವ ಮೊಳೆಯ ಗಾಯದ ಗುರುತುಗಳನ್ನು ನಾನು ನೋಡುವವರೆಗೆ, ಮೊಳೆಗಳನ್ನು ಜಡಿದಿದ್ದ ಸ್ಥಳದಲ್ಲಿ ನನ್ನ ಬೆರಳನ್ನಿಡುವವರೆಗೆ ಮತ್ತು ಆತನ ಪಕ್ಕೆಯಲ್ಲಿ ನನ್ನ ಕೈಯನ್ನು ಇಟ್ಟುನೋಡುವವರೆಗೆ ನಾನು ಅದನ್ನು ನಂಬುವುದಿಲ್ಲ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಉಳಿದ ಶಿಷ್ಯರು ಅವನಿಗೆ, “ನಾವು ಕರ್ತನನ್ನು ಕಂಡಿದ್ದೇವೆ,” ಎಂದು ಹೇಳಿದರು. ಆದರೆ ಅವನು ಅವರಿಗೆ, “ನಾನು ಅವರ ಕೈಗಳಲ್ಲಿ ಮೊಳೆಗಳ ಗುರುತನ್ನು ಕಂಡು, ಅದರಲ್ಲಿ ನನ್ನ ಬೆರಳನ್ನು ಇಟ್ಟು ಅವರ ಪಕ್ಕೆಯಲ್ಲಿ ನನ್ನ ಕೈಯನ್ನು ಹಾಕಿದ ಹೊರತು ನಂಬುವುದೇ ಇಲ್ಲ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

25 ತಸೆಮನುನ್ ಹುರಲ್ಲ್ಯಾ ಶಿಸಾನಿ ತೆಕಾ,“ಅಮಿ ಧನಿಯಾಕ್ ಬಗಟ್ಲಾವ್” ಮನುನ್ ಸಾಂಗಟ್ಲ್ಯಾನಿ. ತನ್ನಾ ಥೊಮಸಾನ್,“ಮಿಯಾ ತ್ಯೆಚ್ಯಾ ಹಾತಾಂಚ್ಯಾ ವರ್ತಿ ಹೊತ್ತಿ ಮೊಳ್ಯಾಂಚಿ ವಳಕ್ ಬಗಟ್ಲ್ಯಾ ಶಿವಾಯ್ ಅನಿ ತ್ಯಾ ಮೊಳ್ಯಾಂಚ್ಯಾ ವಳ್ಕಿಯಾತ್ನಿ ಬೊಟ್ ಘಾಲುನ್ ಅನಿ ತ್ಯೆಚ್ಯಾ ಪಕ್ಡಿತ್ ಹಾತ್ ಘಾಲುನ್ ಬಗಟ್ಲ್ಯಾ ಶಿವಾಯ್ ವಿಶ್ವಾಸ್, ಕರಿನಾ” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 20:25
25 ತಿಳಿವುಗಳ ಹೋಲಿಕೆ  

ಅವರು ಆತನನ್ನು “ಹಾಗಾದರೆ ನಾವು ನೋಡಿ ನಿನ್ನನ್ನು ನಂಬುವಂತೆ ಯಾವ ಸೂಚಕಕಾರ್ಯ ಮಾಡುತ್ತೀ? ನೀನು ಏನುಮಾಡುತ್ತಿ?


“ಆತನು ಬದುಕಿದ್ದಾನೆ ನನಗೆ ಕಾಣಿಸಿಕೊಂಡನು” ಎಂದು ಅವಳು ಹೇಳಿದ ಮಾತನ್ನು ಅವರು ನಂಬಲಿಲ್ಲ.


ನನ್ನ ವಿಶ್ರಾಂತಿಯಲ್ಲಿ ನೀವು ಸೇರುವುದೇ ಇಲ್ಲವೆಂದು ಯಾರನ್ನು ಕುರಿತು ಆತನು ಪ್ರಮಾಣಮಾಡಿದನೂ? ಅವಿಧೇಯರನ್ನು ಕುರಿತಲ್ಲವೇ?


ಸಹೋದರರೇ, ಜೀವಸ್ವರೂಪನಾದ ದೇವರನ್ನು ತ್ಯಜಿಸಿ ಬಿಡುವ ಅಪನಂಬಿಕೆಯುಳ್ಳ ದುಷ್ಟ ಹೃದಯವು ನಿಮ್ಮೊಳಗೆ ಯಾವನಲ್ಲಿಯೂ ಇರದಂತೆ ಜಾಗರೂಕರಾಗಿ ನೋಡಿಕೊಳ್ಳಿರಿ.


ಆಗ ಯೇಸುವಿಗೆ ಪ್ರಿಯನಾಗಿದ್ದ ಶಿಷ್ಯನು ಪೇತ್ರನಿಗೆ, “ಆತನು ಕರ್ತನೇ” ಎಂದು ಹೇಳಿದನು. ಸೀಮೋನ್ ಪೇತ್ರನು ಅದನ್ನು ಕೇಳಿ ತಾನು ತೆಗೆದು ಬಿಟ್ಟಿದ್ದ ತನ್ನ ಮೇಲಂಗಿಯನ್ನು ಸುತ್ತಿಕೊಂಡು ಸಮುದ್ರದೊಳಗೆ ಧುಮುಕಿದನು.


ಇವನು ಮೊದಲು ತನ್ನ ಅಣ್ಣನಾದ ಸೀಮೋನನನ್ನು ಕಂಡು ಅವನಿಗೆ “ನಾವು ಮೆಸ್ಸೀಯನನ್ನು ಕಂಡುಕೊಂಡೆವು” (ಮೆಸ್ಸೀಯನು ಎಂದರೆ ಕ್ರಿಸ್ತನು) ಎಂದು ಹೇಳಿ,


ಯೇಸು ಅವರಿಗೆ, “ಎಲಾ ಬುದ್ಧಿಯಿಲ್ಲದವರೇ, ಪ್ರವಾದಿಗಳು ಹೇಳಿದ್ದೆಲ್ಲವನ್ನು ನಂಬದ ಮಂದ ಹೃದಯವುಳ್ಳವರೇ,


ಅವನು ಇಸ್ರಾಯೇಲಿನ ಅರಸನಲ್ಲವೇ. ಈಗ ಶಿಲುಬೆಯಿಂದ ಇಳಿದು ಬರಲಿ, ಇಳಿದು ಬಂದರೆ ಅವನಲ್ಲಿ ನಂಬಿಕೆಯಿಡುತ್ತೇವೆ ಅಂದರು.


ಇಷ್ಟಾದರೂ ಪುನಃ ಪುನಃ ಪಾಪಮಾಡುತ್ತಾ ಬಂದರು; ಅವರು ಆತನ ಅದ್ಭುತಕೃತ್ಯಗಳನ್ನು ನಂಬದೆ ಹೋದರು.


ನಾನು ಕರೆದಾಗ ಆತನು ನನಗೆ ಕಾಣಿಸಿಕೊಂಡಿದ್ದರೂ, ನನ್ನ ವಿಜ್ಞಾಪನೆಯನ್ನು ಲಾಲಿಸುವನೆಂದು ನಂಬುತ್ತಿರಲಿಲ್ಲ.


ನಾಯಿಗಳು ನನ್ನನ್ನು ಸುತ್ತಿಕೊಂಡಿವೆ; ದುಷ್ಟರ ಗುಂಪು ನನ್ನನ್ನು ಆವರಿಸಿಕೊಂಡಿದೆ. ನನ್ನ ಕೈಕಾಲುಗಳನ್ನು ತಿವಿದಿದ್ದಾರೆ.


ಅವರು ಹೋಗಿ ಉಳಿದ ಶಿಷ್ಯರಿಗೆ ತಿಳಿಸಿದರು. ಆದರೆ ಶಿಷ್ಯರು ಅವರನ್ನೂ ನಂಬಲಿಲ್ಲ.


ಅನಂತರ ಹನ್ನೊಂದು ಮಂದಿ ಶಿಷ್ಯರು ಊಟಕ್ಕೆ ಕುಳಿತಿದ್ದಾಗ ಆತನು ಅವರಿಗೂ ಕಾಣಿಸಿಕೊಂಡನು. ತಾನು ಜೀವಿತನಾಗಿ ಎದ್ದು ಬಂದ ಮೇಲೆ ತನ್ನನ್ನು ನೋಡಿದವರ ಮಾತನ್ನು ಅವರು ನಂಬಲಿಲ್ಲವಾದ ಕಾರಣ ಆತನು ಅವರ ಅಪನಂಬಿಕೆಗೂ ಅವರ ಮನಸ್ಸಿನ ಕಾಠಿಣ್ಯಕ್ಕೂ ಅವರನ್ನು ಗದರಿಸಿದನು.


ಆ ಮೇಲೆ ತೋಮನಿಗೆ, “ನಿನ್ನ ಬೆರಳನ್ನು ಈ ಕಡೆ ಚಾಚಿ ನನ್ನ ಕೈಗಳನ್ನು ಮುಟ್ಟಿ ನೋಡು, ನಿನ್ನ ಕೈ ಚಾಚಿ ನನ್ನ ಪಕ್ಕೆಯಲ್ಲಿ ಹಾಕು. ಅಪನಂಬಿಕೆಯಳ್ಳವನಾಗಿರಬೇಡ, ನಂಬುವವನಾಗು” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು