Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 21:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ತರುವಾಯ ಯೇಸು ತಿಬೇರಿಯ ಸಮುದ್ರದ ಬಳಿಯಲ್ಲಿ ಶಿಷ್ಯರಿಗೆ ಪುನಃ ಕಾಣಿಸಿಕೊಂಡನು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ತರುವಾಯ ಯೇಸು ಸ್ವಾಮಿ ತಮ್ಮ ಶಿಷ್ಯರಿಗೆ ಮತ್ತೊಮ್ಮೆ ತಿಬೇರಿಯ ಸರೋವರದ ಬಳಿ ಕಾಣಿಸಿಕೊಂಡರು. ಅದು ಹೀಗೆ ನಡೆಯಿತು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ತರುವಾಯ ಯೇಸು ತಿಬೇರಿಯ ಸಮುದ್ರದ ಬಳಿಯಲ್ಲಿ ಶಿಷ್ಯರಿಗೆ ತಿರಿಗಿ ತನ್ನನ್ನು ತೋರಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ತರುವಾಯ, ಯೇಸು ತನ್ನ ಶಿಷ್ಯರಿಗೆ ತಿಬೇರಿಯ (ಗಲಿಲಾಯ) ಸರೋವರದ ಬಳಿ ಕಾಣಿಸಿಕೊಂಡನು. ಅದು ಹೀಗೆ ನಡೆಯಿತು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಇವುಗಳಾದ ಮೇಲೆ ಯೇಸು ಗಲಿಲಾಯ ಸರೋವರದ ಬಳಿಯಲ್ಲಿ ಶಿಷ್ಯರಿಗೆ ತಮ್ಮನ್ನು ಪುನಃ ತೋರಿಸಿಕೊಂಡರು. ಅವರು ಈ ರೀತಿಯಾಗಿ ಕಾಣಿಸಿಕೊಂಡರು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ಹೆಚ್ಯಾ ಮಾನಾ ಜೆಜು ತಿಬೆರಿಯಸ್ ಮನ್ತಲ್ಯಾ ಸಮುಂದರಾತ್ ಅನಿ ಎಗ್ದಾ ಶಿಸಾಕ್ನಿ ದಿಸ್ತಾ ತೆ ಅಶೆ ಹೊಲ್ಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 21:1
11 ತಿಳಿವುಗಳ ಹೋಲಿಕೆ  

ತರುವಾಯ ಯೇಸು ಗಲಿಲಾಯದ ಸಮುದ್ರವನ್ನು ದಾಟಿ, ಆಚೆ ದಡಕ್ಕೆ ಹೋದನು. ಅದಕ್ಕೆ ತಿಬೇರಿಯ ಸಮುದ್ರವೆಂತಲೂ ಹೇಳುತ್ತಾರೆ.


ಅಷ್ಟರೊಳಗೆ ತಿಬೇರಿಯಾದಿಂದ ಬೇರೆ ದೋಣಿಗಳು ಹೊರಟು, ಕರ್ತನು ದೇವರಿಗೆ ಕೃತಜ್ಞತೆ ಸಲ್ಲಿಸಿ, ಜನರಿಗೆ ರೊಟ್ಟಿಯನ್ನು ಊಟಮಾಡಿಸಿದ ಸ್ಥಳದ ಸಮೀಪಕ್ಕೆ ಬಂದವು.


ಆದರೆ ಹನ್ನೊಂದು ಮಂದಿ ಶಿಷ್ಯರು ಗಲಿಲಾಯಕ್ಕೆ ಹೋಗಿ, ಯೇಸು ತಮಗೆ ಗೊತ್ತುಮಾಡಿದ್ದ ಬೆಟ್ಟಕ್ಕೆ ಹೋಗಿ ಸೇರಿದರು.


ಮತ್ತು ಬೇಗ ಹೋಗಿ ಆತನ ಶಿಷ್ಯರಿಗೆ, ‘ಆತನು ಸತ್ತವರೊಳಗಿಂದ ಎದ್ದಿದ್ದಾನೆಂದು, ಆತನು ನಿಮಗಿಂತಲೂ ಮೊದಲೇ ಗಲಿಲಾಯಕ್ಕೆ ಹೋಗುತ್ತಾನೆ, ಅಲ್ಲಿ ಆತನನ್ನು ಕಾಣುವಿರಿ’ ಎಂದು ತಿಳಿಸಿರಿ; ನೋಡಿರಿ, ನಾನು ನಿಮಗೆ ಹೇಳಿದ್ದೇನೆ,” ಎಂದು ಹೇಳಿದನು.


“ಆದರೆ ನಾನು ಜೀವಿತನಾಗಿ ಎದ್ದ ಮೇಲೆ ನಿಮಗಿಂತ ಮೊದಲೇ ಗಲಿಲಾಯಕ್ಕೆ ಹೋಗುವೆನು” ಎಂದು ಹೇಳಿದನು.


ಯೇಸು ಸತ್ತವರೊಳಗಿಂದ ಜೀವಿತನಾಗಿ ಎದ್ದ ಮೇಲೆ, ತನ್ನ ಶಿಷ್ಯರಿಗೆ ಕಾಣಿಸಿಕೊಂಡದ್ದು ಇದು ಮೂರನೆಯ ಸಾರಿ.


ಇದಾದ ಮೇಲೆ ಶಿಷ್ಯರಲ್ಲಿ ಇಬ್ಬರು ಊರಿಗೆ ಪ್ರಯಾಣ ಮಾಡುತ್ತಿರುವಾಗ ಆತನು ಅವರಿಗೆ ಬೇರೆ ರೂಪದಲ್ಲಿ ಕಾಣಿಸಿಕೊಂಡನು.


ಆದರೆ ನೀವು ಹೋಗಿ ಆತನ ಶಿಷ್ಯರಿಗೂ ಪೇತ್ರನಿಗೂ ಆತನು ನಿಮಗೆ ಹೇಳಿದಂತೆ ನಿಮಗಿಂತ ಮೊದಲು ಗಲಿಲಾಯಕ್ಕೆ ಹೋಗುತ್ತಾನೆ, ಅಲ್ಲಿ ಆತನನ್ನು ಕಾಣುವಿರಿ ಎಂದು ತಿಳಿಸಿರಿ” ಎಂದು ಹೇಳಿದನು.


ಅನಂತರ ಹನ್ನೊಂದು ಮಂದಿ ಶಿಷ್ಯರು ಊಟಕ್ಕೆ ಕುಳಿತಿದ್ದಾಗ ಆತನು ಅವರಿಗೂ ಕಾಣಿಸಿಕೊಂಡನು. ತಾನು ಜೀವಿತನಾಗಿ ಎದ್ದು ಬಂದ ಮೇಲೆ ತನ್ನನ್ನು ನೋಡಿದವರ ಮಾತನ್ನು ಅವರು ನಂಬಲಿಲ್ಲವಾದ ಕಾರಣ ಆತನು ಅವರ ಅಪನಂಬಿಕೆಗೂ ಅವರ ಮನಸ್ಸಿನ ಕಾಠಿಣ್ಯಕ್ಕೂ ಅವರನ್ನು ಗದರಿಸಿದನು.


ಯೇಸುವು ಬಾಧೆಪಟ್ಟು ಸತ್ತ ನಂತರ ತಾನು ಜೀವಂತನಾಗಿ ಎದ್ದು ಬಂದಿದ್ದೇನೆ ಎಂದು ಅನೇಕ ಸಂಭವಗಳ ಮೂಲಕ ತಾನು ಆರಿಸಿಕೊಂಡಿದ್ದ ಅಪೊಸ್ತಲರಿಗೆ ಸ್ಪಷ್ಟಪಡಿಸಿದನು. ಸತತವಾಗಿ ನಲವತ್ತು ದಿನಗಳ ತನಕ ಅವರಿಗೆ ಕಾಣಿಸಿಕೊಳ್ಳುತ್ತಾ ದೇವರ ರಾಜ್ಯದ ವಿಷಯವನ್ನು ಕುರಿತು ಅವರಿಗೆ ಬೋಧಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು