Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 21:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಯೇಸು ಅವರಿಗೆ, “ಬಂದು ಊಟ ಮಾಡಿರಿ” ಎಂದು ಹೇಳಿದನು. ಶಿಷ್ಯರು ಆತನನ್ನು ಕರ್ತನೆಂದು ತಿಳಿದಿದ್ದರಿಂದ “ನೀನು ಯಾರು?” ಎಂದು ಕೇಳುವುದಕ್ಕೆ ಅವರಲ್ಲಿ ಒಬ್ಬರಿಗೂ ಧೈರ್ಯವಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಯೇಸು ಅವರಿಗೆ, “ಬಂದು ಊಟಮಾಡಿ,” ಎಂದು ಅವರನ್ನು ಕರೆದರು. ಅವರು ಪ್ರಭುವೆಂದು ಅರಿತಿದ್ದ ಕಾರಣ ಶಿಷ್ಯರಲ್ಲಿ ಒಬ್ಬನಿಗಾದರೂ, “ನೀವು ಯಾರು?” ಎಂದು ಕೇಳುವಷ್ಟು ಧೈರ್ಯ ಇರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಯೇಸು ಅವರಿಗೆ - ಬಂದು ಊಟಮಾಡಿರಿ ಎಂದು ಹೇಳಿದನು. ಶಿಷ್ಯರು ಆತನನ್ನು ಸ್ವಾವಿುಯವರೆಂದು ತಿಳಿದಿದ್ದರಿಂದ ನೀನಾರೆಂದು ವಿಚಾರಿಸುವದಕ್ಕೆ ಅವರಲ್ಲಿ ಒಬ್ಬರೂ ಧೈರ್ಯಪಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಯೇಸು ಅವರಿಗೆ, “ಬಂದು ಊಟ ಮಾಡಿ” ಎಂದು ಹೇಳಿದನು. ಶಿಷ್ಯರಲ್ಲಿ ಒಬ್ಬರಾದರೂ, “ನೀನು ಯಾರು?” ಎಂದು ಆತನನ್ನು ಕೇಳಲಿಲ್ಲ. ಆತನು ಪ್ರಭುವೆಂದು ಅವರಿಗೆ ತಿಳಿದಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಯೇಸು ಅವರಿಗೆ, “ಬಂದು ಉಪಹಾರ ಮಾಡಿರಿ,” ಎಂದರು; ಅವರು ಸ್ವಾಮಿಯವರೆಂದು ತಿಳಿದಿದ್ದರಿಂದ, “ನೀನು ಯಾರು?” ಎಂದು ಅವರನ್ನು ಕೇಳಲು ಶಿಷ್ಯರಲ್ಲಿ ಒಬ್ಬರಿಗೂ ಧೈರ್ಯವಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 ಜೆಜುನ್ ತೆಂಕಾ,“ಯೆವಾ ಅನಿ ಖಾವಾ” ಮಟ್ಲ್ಯಾನ್, ತೆಕಾ “ತಿಯಾ ಕೊನ್?” ಮನುನ್ ಇಚಾರುಕ್ ಶಿಸಾನಿತ್ಲ್ಯಾ ಕೊನಾಕ್ಬಿ ಧೈರೊ ಹೊವ್ಕ್ ನಾ, ಕಶ್ಯಾಕ್ ಮಟ್ಲ್ಯಾರ್ ತೊ ಧನಿಚ್ ಮನುನ್ ತೆಂಕಾ ಕಳಲ್ಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 21:12
9 ತಿಳಿವುಗಳ ಹೋಲಿಕೆ  

ಆತನು ಎಲ್ಲರಿಗೂ ಪ್ರತ್ಯಕ್ಷನಾಗದೆ, ದೇವರು ಮುಂಚಿತವಾಗಿ ಆರಿಸಿಕೊಂಡಿದ್ದ ಸಾಕ್ಷಿಗಳಾದ ನಮಗೆ ಪ್ರತ್ಯಕ್ಷನಾದನು. ಆತನು ಸತ್ತವರೊಳಗಿಂದ ಜೀವಿತನಾಗಿ ಎದ್ದು ಬಂದ ಮೇಲೆ ನಾವು ಆತನ ಸಂಗಡ ಊಟ ಮಾಡಿದೆವು.


ಯೇಸುವು ಇದನ್ನು ಕುರಿತು ತನ್ನನ್ನು ಕೇಳಬೇಕೆಂದಿದ್ದಾರೆಂದು ತಿಳಿದು ಅವರಿಗೆ, “ಸ್ವಲ್ಪ ಕಾಲವಾದ ಮೇಲೆ ನಾನು ನಿಮಗೆ ಕಾಣಿಸುವುದಿಲ್ಲ, ಇನ್ನು ಸ್ವಲ್ಪ ಕಾಲವಾದ ಮೇಲೆ ನನ್ನನ್ನು ನೋಡುವಿರಿ, ಎಂದು ನಾನು ನಿಮಗೆ ಹೇಳಿದ್ದಕ್ಕೆ ನೀವು ನಿಮ್ಮನಿಮ್ಮೊಳಗೆ ವಿಚಾರಿಸಿಕೊಳ್ಳುತ್ತಿದ್ದೀರಾ?


ಅವರ ಊಟವಾದ ಮೇಲೆ ಯೇಸು ಸೀಮೋನ್ ಪೇತ್ರನಿಗೆ, “ಯೋಹಾನನ ಮಗನಾದ ಸೀಮೋನನೇ, ನೀನು ಇವರಿಗಿಂತ ಹೆಚ್ಚಾಗಿ ನನ್ನನ್ನು ಪ್ರೀತಿಸುತ್ತಿಯೋ?” ಎಂದು ಕೇಳಲು ಅವನು “ಹೌದು, ಕರ್ತನೇ, ನಾನು ನಿನ್ನ ಮೇಲೆ ಮಮತೆ ಇಟ್ಟಿದ್ದೇನೆಂದು ನೀನೇ ಬಲ್ಲೆ” ಎಂದನು. ಆತನು ಅವನಿಗೆ, “ನನ್ನ ಕುರಿಮರಿಗಳನ್ನು ಮೇಯಿಸು” ಎಂದು ಹೇಳಿದನು.


ಆದರೆ ಅವರು ಆ ಮಾತನ್ನು ಗ್ರಹಿಸಲಿಲ್ಲ ಮತ್ತು ಆತನನ್ನು ಕೇಳುವುದಕ್ಕೆ ಭಯಪಟ್ಟರು.


ಅಷ್ಟರೊಳಗೆ ಆತನ ಶಿಷ್ಯರು ಬಂದು ಆತನು ಆ ಸ್ತ್ರೀಯೊಂದಿಗೆ ಮಾತನಾಡುತ್ತಿರುವುದನ್ನು ಕಂಡು ಆಶ್ಚರ್ಯಪಟ್ಟರು. ಆದರೂ, “ನಿನಗೆ ಏನು ಬೇಕು? ಆಕೆಯ ಸಂಗಡ ಯಾಕೆ ಮಾತನಾಡುತ್ತಿರುವೆ?” ಎಂದು ಒಬ್ಬರೂ ಆತನನ್ನು ಕೇಳಲಿಲ್ಲ.


ಅವರು ಈ ಮಾತನ್ನು ಗ್ರಹಿಸಲಿಲ್ಲ. ಅದು ಅವರಿಗೆ ಮರೆಯಾಗಿದ್ದುದರಿಂದ ಅದರ ಅರ್ಥವನ್ನು ಅವರು ತಿಳಿಯದೆ ಹೋದರು. ಆ ಮಾತಿನ ವಿಷಯದಲ್ಲಿ ಅವರು ಆತನನ್ನು ಕೇಳುವುದಕ್ಕೆ ಅಂಜಿದರು.


ಅದಕ್ಕೆ ಉತ್ತರವಾಗಿ ಯಾರೂ ಒಂದು ಮಾತನ್ನಾದರೂ ಆತನಿಗೆ ಹೇಳಲಾರದೆ ಹೋದರು. ಇದಲ್ಲದೆ ಅಂದಿನಿಂದ ಆತನನ್ನು ಪ್ರಶ್ನಿಸಲು ಯಾರೂ ಧೈರ್ಯಪಡಲಿಲ್ಲ.


ಸೀಮೋನ್ ಪೇತ್ರನು ದೋಣಿಯನ್ನು ಹತ್ತಿ ಬಲೆಯನ್ನು ದಡಕ್ಕೆ ಎಳದುಕೊಂಡು ಬಂದನು. ಅದು ನೂರೈವತ್ಮೂರು ದೊಡ್ಡ ಮೀನುಗಳಿಂದ ತುಂಬಿತ್ತು. ಅಷ್ಟು ಮೀನುಗಳು ಇದ್ದರೂ ಬಲೆಯು ಹರಿದಿರಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು